Daily Horoscope May 12: ದಿನ ಭವಿಷ್ಯ: ಉದ್ಯೋಗದಲ್ಲಿ ಬಡ್ತಿ ಯೋಗ, ಹಣಕಾಸಿನಲ್ಲಿ ಲಾಭದ ಸೂಚನೆ, 12 ರಾಶಿಗಳ ಭವಿಷ್ಯ ಇಲ್ಲಿದೆ

Daily Horoscope May 12: ಮೇ 12ರ ಮಂಗಳವಾರ ಕೆಲ ರಾಶಿಗಳಿಗೆ ಆರ್ಥಿಕ ಲಾಭ, ಉದ್ಯೋಗದಲ್ಲಿ ಹೊಸ ಅವಕಾಶಗಳು ಹಾಗೂ ಕುಟುಂಬ ಜೀವನದಲ್ಲಿ ಸಂತೋಷವನ್ನು ತಂದುಕೊಡಲಿದೆ. ಮತ್ತೊಂದೆಡೆ ಕೆಲವು ರಾಶಿಯವರು ಆರೋಗ್ಯ, ಖರ್ಚು ಹಾಗೂ ಕೆಲಸದ ಒತ್ತಡದ ವಿಚಾರದಲ್ಲಿ ಎಚ್ಚರಿಕೆಯಿಂದಿರಬೇಕಾಗಿದೆ. ನಿಮ್ಮ ರಾಶಿಗೆ ಇಂದಿನ ದಿನ ಹೇಗಿರಲಿದೆ? ಉದ್ಯೋಗ, ವ್ಯವಹಾರ, ಹಣಕಾಸು, ಆರೋಗ್ಯ ಮತ್ತು ಕುಟುಂಬ ಜೀವನದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ದ್ವಾದಶ ರಾಶಿಗಳ ಗೋಚರ ಫಲ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ. ಇದು ವೈದಿಕ ಜ್ಯೋತಿಷ್ಯ ಕ್ರಮದಲ್ಲಿ ಲೆಕ್ಕ ಹಾಕಿ ಬರೆದೆರುವಂತಹ ದಿನ ಭವಿಷ್ಯವಾಗಿದೆ. 12 ರಾಶಿಗಳಿಗೆ ಇಂದಿನ ಸಂಪೂರ್ಣ ಭವಿಷ್ಯ, ಫಲಾಫಲ ಮಾಹಿತಿ ನೋಡೋಣ.

Daily Horoscope May 12

ಮೇಷ ರಾಶಿ

ಕೆಲಸದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ಆದಾಯದ ಹೊಸ ಮೂಲಗಳು ಹುಟ್ಟಿಕೊಳ್ಳುವುದು. ಹೂಡಿಕೆಯಿಂದ ಸೀಮಿತ ಲಾಭವಾಗುವುದು. ವೈಯಕ್ತಿಕ ಸಮಸ್ಯೆ ಬಗೆಹರಿಯುತ್ತದೆ.

ವೃಷಭ ರಾಶಿ

ಆದಾಯ ಸ್ಥಿರವಾಗಿರುತ್ತದೆ ಆದರೆ ವೆಚ್ಚಗಳು ಹೆಚ್ಚಾಗುತ್ತವೆ. ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವಾಹನಗಳಲ್ಲಿ ಸಂಚರಿಸುವ ವೇಳೆ ಜಾಗರೂಕರಾಗಿರಬೇಕು.

ಮಿಥುನ ರಾಶಿ

ಕೆಲಸದಲ್ಲಿ ಸ್ಥಾನಮಾನ ಹೆಚ್ಚಾಗುವ ಸಾಧ್ಯತೆ ಇದೆ. ಆದಾಯ ಹೆಚ್ಚಾಗಲಿದೆ. ವೃತ್ತಿ ಮತ್ತು ವ್ಯವಹಾರದಲ್ಲಿನ ಅಡೆತಡೆಗಳು ನಿವಾರಣೆಯಾಗುವುದು. ಹೊಸ ಜವಾಬ್ದಾರಿ ಸಿಗುವುದು. ವೈಯಕ್ತಿಕ ಸಮಸ್ಯೆಗಳಿಗೂ ಪರಿಹಾರ ಸಿಗುವುದು. ಆದಾಯ ಹೆಚ್ಚಾಗುವ ಸಾಧ್ಯತೆ ಇದೆ.

ಕರ್ಕಾಟಕ ರಾಶಿ

ಆಸ್ತಿ ವಿವಾದಗಳು ಬಗೆಹರಿಯುವುದು. ಹಣಕಾಸಿನ ಸಮಸ್ಯೆಯೂ ನೀಗುವುದು. ಅವಿವಾಹಿತರಿಗೆ ಸಂಬಂಧ ಕೂಡಿ ಬರುವುದು. ಆಧ್ಯಾತ್ಮಿಕದತ್ತ ಒಲವು ಹೆಚ್ಚಾಗುವುದು. ಆರೋಗ್ಯವು ತುಂಬಾ ಅನುಕೂಲಕರವಾಗಿರುತ್ತದೆ.

ಸಿಂಹ ರಾಶಿ

ಹಣಕಾಸಿನ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಆರ್ಥಿಕ ಅಗತ್ಯಗಳು ಹೆಚ್ಚಾಗಬಹುದು. ಉದ್ಯೋಗಗಳಲ್ಲಿ ಸ್ಥಾನಮಾನ ಹೆಚ್ಚಾಗುವ ಸಾಧ್ಯತೆ ಇದೆ. ಕುಟುಂಬ ಜೀವನದಲ್ಲಿ ಸಂತೋಷ ಹೆಚ್ಚಾಗುವುದು. ಆರೋಗ್ಯ ಉತ್ತಮವಾಗಿರುವುದು.

ಕನ್ಯಾ ರಾಶಿ

ವೃತ್ತಿ ಮತ್ತು ವ್ಯವಹಾರದಲ್ಲಿ ಸಣ್ಣಪುಟ್ಟ ಬದಲಾವಣೆಗಳು ಆಗುತ್ತವೆ. ಆರೋಗ್ಯ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ. ಕುಟುಂಬ ಜೀವನವು ತುಂಬಾ ತೃಪ್ತಿಕರವಾಗಿರುತ್ತದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ತುಲಾ ರಾಶಿ

ಆರ್ಥಿಕ ಪರಿಸ್ಥಿತಿ ನಿರೀಕ್ಷೆಗಿಂತ ಉತ್ತಮವಾಗಿರುತ್ತದೆ. ಆಸ್ತಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ಕೇಳುವಿರಿ. ವ್ಯವಹಾರದಲ್ಲಿ ಲಾಭವಾಗುವುದು. ಆರೋಗ್ಯವು ಉತ್ತಮವಾಗಿರುತ್ತದೆ.

ವೃಶ್ಚಿಕ ರಾಶಿ

ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚಿನ ಕೆಲಸದ ಹೊರೆ ಇರುತ್ತದೆ. ಉದ್ಯೋಗ ಮತ್ತು ವಿವಾಹ ಪ್ರಯತ್ನಗಳಿಗೆ ಸಂಬಂಧಿಸಿದಂತೆ ಶುಭ ಸುದ್ದಿ ಕೇಳುವಿರಿ. ಆರ್ಥಿಕ ಸಮಸ್ಯೆಗಳು ಕಡಿಮೆಯಾಗುತ್ತವೆ. ಆದಾಯ ಮತ್ತು ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇರುವುದಿಲ್ಲ.

ಧನು ರಾಶಿ

ವೃತ್ತಿ ವ್ಯವಹಾರದಲ್ಲಿ ಹೊಸ ಮೈಲಿಗಲ್ಲು ಸಾಧಿಸುವಿರಿ. ಆದಾಯ ಗಮನಾರ್ಹವಾಗಿ ಹೆಚ್ಚಾಗುವುದು. ಬಾಕಿ ಇರುವ ಕೆಲಸಗಳು ಸಹ ಪೂರ್ಣಗೊಳ್ಳುತ್ತವೆ. ವೈಯಕ್ತಿಕ ಸಮಸ್ಯೆಗಳು ಕಡಿಮೆಯಾಗುತ್ತವೆ. ಕುಟುಂಬ ಜೀವನವು ಸಂತೋಷದಿಂದ ಕೂಡಿರುವುದು.

ಮಕರ ರಾಶಿ

ವೃತ್ತಿ ಮತ್ತು ವ್ಯವಹಾರದಲ್ಲಿ ಕೆಲಸದ ಹೊರೆ ಮತ್ತು ಒತ್ತಡ ಹೆಚ್ಚಾಗುವುದು. ಆದಾಯ ಉತ್ತಮವಾಗಿರುವುದು. ಕುಟುಂಬ ಜೀವನವು ಸಂತೋಷದಿಂದ ಕೂಡಿರುತ್ತದೆ. ಆರ್ಥಿಕ ಸಮಸ್ಯೆಗಳು ಬಗೆಹರಿಯುತ್ತವೆ. ಆದಾಯ ಸ್ಥಿರವಾಗಿರುತ್ತದೆ.

ಕುಂಭ ರಾಶಿ

ಆದಾಯ ಹೆಚ್ಚಿಸಿಕೊಳ್ಳುವ ಪ್ರಯತ್ನಗಳಲ್ಲಿ ಯಶಸ್ಸು ಸಿಗುವುದು. ಕೆಲವು ವಿಚಾರಗಳು ಮತ್ತು ನಿರ್ಧಾರಗಳು ಫಲ ನೀಡುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಬಡ್ತಿ ಸಿಗುವ ಸಾಧ್ಯತೆ ಇದೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ

ಮೀನ ರಾಶಿ

ಸಣ್ಣಪುಟ್ಟ ಅನಾರೋಗ್ಯ ಸಮಸ್ಯೆ ಬಾಧಿಸಬಹುದು. ಪ್ರಮುಖ ಆರ್ಥಿಕ ಒತ್ತಡಗಳಿಂದ ಮುಕ್ತರಾಗುವಿರಿ. ಇತರರ ವೈಯಕ್ತಿಕ ವಿಷಯಗಳಲ್ಲಿ ಮಧ್ಯಪ್ರವೇಶಿಸದಿರುವುದೇ ಜಾಣತನ. ಬೇರೆಯವರ ಸಮಸ್ಯೆ ಬಗೆಹರಿಸಲು ಹೋಗಿ ನೀವು ತೊಂದರೆಗೆ ಸಿಲುಕುವಿರಿ.

(ಬರಹ: ರಂಜಿತಾ ಆರ್.ಕೆ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+