Diwali Horoscope 2023: ದೀಪಾವಳಿಗೆ ದ್ವಾದಶಿ ರಾಶಿಗಳ ಜೀವನ ಹೇಗಿರುತ್ತೆ?
ಈ ವರ್ಷ ದೀಪಾವಳಿ ನವೆಂಬರ್ 12 ರಂದು ಬರುತ್ತದೆ. ಈ ದೀಪಾವಳಿಯ ದಿನದಂದು ಸಮೃದ್ಧಿಗಾಗಿ ಲಕ್ಷ್ಮಿ ಪೂಜೆಗಳನ್ನು ಮಾಡಲಾಗುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವರ್ಷದ ದೀಪಾವಳಿ ಹಬ್ಬ ಕೆಲವು ರಾಶಿಯವರಿಗೆ ತುಂಬಾ ಅನುಕೂಲಕರವಾಗಿದ್ದು ಜೀವನವನ್ನು ಉತ್ತೇಜಿಸುತ್ತದೆ. ಇದಕ್ಕೆ ಮುಖ್ಯ ಕಾರಣ ಗ್ರಹಗಳ ಸ್ಥಾನಗಳು.
ದೀಪಾವಳಿಗೂ ಮುನ್ನವೇ ರಾಹು, ಕೇತು, ಶನಿ ಗ್ರಹಗಳ ಸ್ಥಾನಗಳಲ್ಲಿ ಬದಲಾವಣೆಗಳಾಗಿವೆ. ರಾಹು, ಕೇತು ಮತ್ತು ಶನಿ ಮೂರು ಗ್ರಹಗಳು ಒಬ್ಬರ ಜೀವನದ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತವೆ. ಮತ್ತು ಈ ಮೂರು ಗ್ರಹಗಳನ್ನು ದುಷ್ಟ ಮತ್ತು ಕ್ರೂರ ಗ್ರಹಗಳೆಂದು ಪರಿಗಣಿಸಲಾಗುತ್ತದೆ.
ವಾಸ್ತವದಲ್ಲಿ ಈ ಗ್ರಹಗಳು ಒಬ್ಬರ ಕಾರ್ಯಗಳಿಗೆ ಅನುಗುಣವಾಗಿ ಫಲಿತಾಂಶಗಳನ್ನು ನೀಡುತ್ತವೆ. ಈಗ ನಾವು ಮೇಷ ರಾಶಿಯಿಂದ ಮೀನದವರೆಗಿನ ಎಲ್ಲಾ 12 ರಾಶಿಯವರಿಗೆ ದೀಪಾವಳಿ ಜಾತಕ ಹೇಗಿದೆ ಅನ್ನೋದನ್ನು ನೋಡೋಣ.

ಮೇಷ ರಾಶಿ
ರಾಹು ಈಗಾಗಲೇ ಮೇಷ ರಾಶಿಯಿಂದ ಮೀನ ರಾಶಿಗೆ ತೆರಳಿದ್ದಾನೆ. ಮತ್ತು ಶನಿಯು ಸಹ ಅವನತಿಯನ್ನು ಪೂರ್ಣಗೊಳಿಸಿದ್ದಾನೆ. ಹೀಗಾಗಿ ಈ ರಾಶಿಚಕ್ರದವರು ದೀಪಾವಳಿಯಿಂದ ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯಲಿದ್ದಾರೆ. ಎಲ್ಲಾ ಕೆಲಸಗಳು ಸಕಾರಾತ್ಮಕ ಫಲಿತಾಂಶಗಳನ್ನು ತರುತ್ತವೆ. ಜೀವನದಲ್ಲಿ ಮುನ್ನಡೆಯುವ ಹಾದಿಗಳು ತೆರೆದುಕೊಳ್ಳುತ್ತವೆ.

ವೃಷಭ ರಾಶಿ
ವೃಷಭ ರಾಶಿಯವರಿಗೆ ದೀಪಾವಳಿಯು ಶುಭಕರವಾಗಿರುತ್ತದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಆದರೆ ಕಠಿಣ ಪರಿಶ್ರಮದಿಂದ ಮಾತ್ರ ನೀವು ವೃತ್ತಿ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಕಾಣಬಹುದು. ಮುಖ್ಯವಾಗಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು.

ಮಿಥುನ ರಾಶಿ
ದೀಪಾವಳಿ ಹಬ್ಬವು ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಉತ್ತಮವಾಗಿರುತ್ತದೆ. ಆದಾಗ್ಯೂ ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಹೆಚ್ಚು ಜಾಗರೂಕರಾಗಿರಿ. ಅದರ ಹೊರತಾಗಿ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸುವುದು ಸೂಕ್ತ.

ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯವರು ದೀಪಾವಳಿ ಹಬ್ಬದಂದು ಶನಿ ದೇವರ ವಿಶೇಷ ಆಶೀರ್ವಾದವನ್ನು ಪಡೆಯುತ್ತಾರೆ. ಇದು ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ. ಈ ದೀಪಾವಳಿಯು ದುಡಿಯುವ ಜನರಿಗೆ ಹೆಚ್ಚಿನ ಪ್ರಯೋಜನಗಳನ್ನು ನೀಡುತ್ತದೆ. ವ್ಯಾಪಾರಸ್ಥರು ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುವರು.

ಸಿಂಹ ರಾಶಿ
ದೀಪಾವಳಿ ಹಬ್ಬವು ಸಿಂಹ ರಾಶಿಯವರಿಗೆ ವೃತ್ತಿಪರವಾಗಿ ಉತ್ತಮವಾಗಿರುತ್ತದೆ. ಸಂಬಂಧಗಳು ಮತ್ತು ಆರೋಗ್ಯದಲ್ಲಿ ಹೆಚ್ಚು ಜಾಗರೂಕರಾಗಿರಿ. ವಿಶೇಷವಾಗಿ ಹಣದ ವಿಷಯಗಳಲ್ಲಿ ಹೆಚ್ಚು ಜಾಗರೂಕರಾಗಿರಲು ಸಲಹೆ ನೀಡಲಾಗುತ್ತದೆ. ಇಲ್ಲದಿದ್ದರೆ ನೀವು ಹಣದ ನಷ್ಟವನ್ನು ಎದುರಿಸಬೇಕಾಗುತ್ತದೆ.

ಕನ್ಯಾ ರಾಶಿ
ದೀಪಾವಳಿಯಂದು ಶನಿ ಮತ್ತು ಬುಧದ ಅನುಗ್ರಹದಿಂದ ಕನ್ಯಾ ರಾಶಿಯ ಸ್ಥಳೀಯರಿಗೆ ಪ್ರಗತಿಯ ಮಾರ್ಗಗಳು ತೆರೆಯಲ್ಪಡುತ್ತವೆ. ದುಡಿಯುವ ಜನರು ತಮ್ಮ ಕೆಲಸದಲ್ಲಿ ಉತ್ತಮ ಪ್ರಗತಿಯನ್ನು ಕಾಣುತ್ತಾರೆ. ವ್ಯಾಪಾರಸ್ಥರು ಉತ್ತಮ ಲಾಭವನ್ನು ಪಡೆಯಬಹುದು.

ತುಲಾ ರಾಶಿ
ತುಲಾ ರಾಶಿಯವರು ಈ ದೀಪಾವಳಿಯಲ್ಲಿ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗುತ್ತಾರೆ. ಆದರೆ ಧನ ನಷ್ಟವಾಗುವ ಸಂಭವವಿರುವುದರಿಂದ ಹಣದ ವಿಚಾರದಲ್ಲಿ ಎಚ್ಚರಿಕೆ ವಹಿಸುವುದು ಸೂಕ್ತ. ಅದೇ ಸಮಯದಲ್ಲಿ ಸಂಬಂಧಗಳ ಬಗ್ಗೆ ಜಾಗರೂಕರಾಗಿರಬೇಕು.

ವೃಶ್ಚಿಕ ರಾಶಿ
ಈ ದೀಪಾವಳಿಯಲ್ಲಿ ವೃಶ್ಚಿಕ ರಾಶಿಯವರಿಗೆ ನೆಮ್ಮದಿ ಸಿಗುತ್ತದೆ. ಆದರೆ ಕುಟುಂಬ ಸದಸ್ಯರೊಂದಿಗೆ ಸಂಬಂಧ ಹದಗೆಡುವ ಸಾಧ್ಯತೆ ಇರುವುದರಿಂದ ಕುಟುಂಬ ಸದಸ್ಯರ ಭಾವನೆಗಳನ್ನು ಅರಿತು ನಡೆದುಕೊಳ್ಳಬೇಕು ಎಂದು ಸಲಹೆ ನೀಡಲಾಗುತ್ತದೆ.

ಧನು ರಾಶಿ
ಧನು ರಾಶಿಯವರು ಈ ದೀಪಾವಳಿಯಲ್ಲಿ ಗುರು ಭಗವಾನರ ಅನುಗ್ರಹದಿಂದ ಒಳ್ಳೆಯ ಹೆಸರು ಮತ್ತು ಖ್ಯಾತಿಯನ್ನು ಪಡೆಯುತ್ತಾರೆ. ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಉತ್ತಮ ಲಾಭ ದೊರೆಯಲಿದೆ.

ಮಕರ ರಾಶಿ
ಮಕರ ರಾಶಿಯವರು ಶನಿ ಮತ್ತು ಬುಧ ಗ್ರಹಗಳ ಅನುಗ್ರಹದಿಂದ ದೀಪಾವಳಿಯಿಂದ ಉತ್ತಮ ಜೀವನವನ್ನು ನಡೆಸುತ್ತಾರೆ. ಅವರು ಸಾಮಾನ್ಯಕ್ಕಿಂತ ಆರ್ಥಿಕ ಸ್ಥಿತಿಯಲ್ಲಿ ಉತ್ತಮ ಪ್ರಗತಿಯನ್ನು ಕಾಣುತ್ತಾರೆ. ಮುಖ್ಯವಾಗಿ ಹೆಸರು, ಕೀರ್ತಿ, ಪ್ರತಿಷ್ಠೆ ಇತ್ಯಾದಿ ದೀಪಾವಳಿಯಿಂದ ಹೆಚ್ಚುತ್ತದೆ.

ಕುಂಭ ರಾಶಿ
ಕುಂಭ ರಾಶಿಯವರಿಗೆ ಈ ದೀಪಾವಳಿಯಲ್ಲಿ ಕೆಲಸದಲ್ಲಿ ಬಡ್ತಿ ದೊರೆಯುವ ಸಾಧ್ಯತೆ ಇದೆ. ಕೆಲವರು ದೊಡ್ಡ ಕೆಲಸಗಳನ್ನು ಮಾಡುವರು. ಶನಿ ದೇವರು ಮತ್ತು ಲಕ್ಷ್ಮಿ ದೇವಿಯ ಕೃಪೆಯಿಂದ, ದೀಪಾವಳಿಯಿಂದು ಕುಂಭ ರಾಶಿಯವರ ಜೀವನ ಸಮೃದ್ಧವಾಗಿರುತ್ತದೆ.

ಮೀನ ರಾಶಿ
ಮೀನ ರಾಶಿಯವರು ಈ ದೀಪಾವಳಿಯಲ್ಲಿ ಶನಿ ಮತ್ತು ಗುರುವಿನ ಆಶೀರ್ವಾದದಿಂದ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಕೆಲಸದ ಸ್ಥಳದಲ್ಲಿ ಗೌರವ ಮತ್ತು ಖ್ಯಾತಿಯನ್ನು ಪಡೆಯುತ್ತಾರೆ. ಹಣಕಾಸಿನ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ.
(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಅನುಷ್ಠಾನಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ.)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications