Gajkesari Rajyoga 2023: ಗಜಕೇಸರಿ ರಾಜಯೋಗದಿಂದ ಈ ರಾಶಿಯವರಿಗೆ ಸಾಲಾದ ಸಮಸ್ಯೆಯಿಂದ ಮುಕ್ತಿ!
ಗ್ರಹಗಳು ಕಾಲ ಕಾಲಕ್ಕೆ ರಾಶಿಯನ್ನು ಬದಲಾಯಿಸುತ್ತವೆ. ಗ್ರಹಗಳು ಸಂಚಾರಿಸುವಾಗ ಒಂದು ರಾಶಿಯಿಂದ ಮತ್ತೊಂದು ರಾಶಿಯಲ್ಲಿ ಸಾಗುತ್ತವೆ. ಹೀಗೆ ರಾಶಿಯನ್ನು ಬದಲಾಯಿಸುವಾಗ ಅದರ ಪರಿಣಾಮ ಎಲ್ಲಾ ರಾಶಿಗಳ ಮೇಲೂ ಕಂಡು ಬರುತ್ತದೆ. ಕೆಲವೊಮ್ಮೆ ಗ್ರಹಗಳ ಸಂಯೋಗವು ಶುಭ ಅಥವಾ ಅಶುಭ ಯೋಗಗಳನ್ನು ಉಂಟುಮಾಡುತ್ತದೆ. ಈ ಯೋಗಗಳು ಮಾನವ ಜೀವನದ ಮೇಲೆ ಪ್ರಭಾವ ಬೀರುತ್ತವೆ.
ನವಗ್ರಹಗಳಲ್ಲಿ ಗುರು ಶುಭ ಗ್ರಹ ಎಂದು ಪರಿಗಣಿಸಲಾಗಿದೆ. ಈ ಗುರು ಗ್ರಹ ಸದ್ಯ ಮೇಷ ರಾಶಿಯಲ್ಲಿ ಸಂಚರಿಸುತ್ತಿದೆ. ಇದೇ ಸಮಯದಲ್ಲಿ ನವೆಂಬರ್ 24ರಂದು ಸಂಜೆ 04 ಗಂಟೆಗೆ ಚಂದ್ರನು ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ನವೆಂಬರ್ 26 ರವರೆಗೆ ಈ ರಾಶಿಯಲ್ಲಿ ಚಂದ್ರ ಇರಲಿದ್ದು ನಂತರ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ.
ಗುರು ಈಗಾಗಲೇ ಮೇಷ ರಾಶಿಯಲ್ಲಿ ಸಂಚರಿಸುತ್ತಿರುವುದರಿಂದ ಹೀಗೆ ಚಂದ್ರ ಮತ್ತು ಗುರುವಿನ ಸಂಯೋಜನೆಯು ಪ್ರಬಲವಾದ ಗಜಕೇಸರಿ ರಾಜಯೋಗವನ್ನು ಸೃಷ್ಟಿಸುತ್ತದೆ. ಈ ಯೋಗದ ಪ್ರಭಾವವನ್ನು ಎಲ್ಲಾ ರಾಶಿಗಳಲ್ಲಿ ಕಾಣಬಹುದಾದರೂ ಕೆಲವು ರಾಶಿಯವರು ಈ ಯೋಗದಿಂದ ಸಾಕಷ್ಟು ಸಂಪತ್ತನ್ನು ಗಳಿಸುತ್ತಾರೆ. ಅಲ್ಲದೆ ಪ್ರಮುಖ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ಈಗ ಆ ಅದೃಷ್ಟದ ರಾಶಿಗಳು ಯಾರೆಂದು ನೋಡೋಣ.

ಮೇಷ ರಾಶಿ
ಈ ಗಜಕೇಸರಿ ರಾಜಯೋಗ ಮೇಷ ರಾಶಿಯವರ ಮೊದಲ ಮನೆಯಲ್ಲಿ ರಚನೆಯಾಗುವುದರಿಂದ ಈ ಜಾತಕರು ಅತ್ಯುತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಈ ಯೋಗದ ಅವಧಿಯಲ್ಲಿ ದೀರ್ಘಕಾಲ ಬಾಕಿ ಇರುವ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಮೌಲ್ಯ ಮತ್ತು ಗೌರವ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಸಮಯ ಇದಾಗಿರುತ್ತದೆ. ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ದೊರೆಯಲಿದೆ. ಮೇಷ ರಾಶಿಯವರು ಸಾಲದ ಬಾಧೆಯಿಂದ ಮುಕ್ತರಾಗುತ್ತಾರೆ. ಕುಟುಂಬ ಸದಸ್ಯರೊಂದಿಗೆ ಸಂತೋಷದಿಂದ ಸಮಯ ಕಳೆಯಲು ಅವಕಾಶವಿರುತ್ತದೆ.

ಕರ್ಕಾಟಕ ರಾಶಿ
ಕರ್ಕಾಟಕ ರಾಶಿಯ 10ನೇ ಮನೆಯಲ್ಲಿ ಗಜಕೇಸರಿ ರಾಜಯೋಗ ರಚನೆಯಾಗಲಿದೆ. ಇದು ಈ ಕರ್ಕಾಟಕ ರಾಶಿಯವರಿಗೆ ಉತ್ತಮ ಆರ್ಥಿಕ ಲಾಭವನ್ನು ತರುತ್ತದೆ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಮಕ್ಕಳಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಕೆಲವರಿಗೆ ಮನೆ ಅಥವಾ ಕಾರು ಖರೀದಿಸುವ ತಮ್ಮ ಇಚ್ಛೆಗಳು ಪೂರೈಸಿಕೊಳ್ಳಲು ಅವಕಾಶಗಳು ಸಿಗುತ್ತವೆ. ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವ ಅವಕಾಶವನ್ನು ಪಡೆಯುತ್ತಾರೆ. ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ದೊರೆಯುವ ಸಾಧ್ಯತೆ ಇದೆ. ಜೊತೆಗೆ ಈ ಅವಧಿಯಲ್ಲಿ ಉದ್ಯೋಗಿಗಳು ಉತ್ತಮ ಹಣದ ಹರಿವನ್ನು ಪಡೆಯಬಹುದು.

ಕುಂಭ ರಾಶಿ
ಕುಂಭ ರಾಶಿಯ 3ನೇ ಮನೆಯಲ್ಲಿ ಗಜಕೇಸರಿ ರಾಜಯೋಗ ರೂಪುಗೊಳ್ಳಲಿದೆ. ಹೀಗಾಗಿ ಈ ರಾಶಿಯವರು ವೃತ್ತಿಯಲ್ಲಿ ಪ್ರಗತಿ ಕಾಣುತ್ತಾರೆ. ಆಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನೀವು ದೀರ್ಘಕಾಲದಿಂದ ಸಾಲದ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಯೋಗದ ಅವಧಿಯಲ್ಲಿ ನೀವು ಅದರಿಂದ ಪಾರಾಗಬಹುದು. ಜೊತೆಗೆ ನೀವು ಬಹಳಷ್ಟು ಹಣವನ್ನು ಉಳಿಸಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಯಶಸ್ಸು ನಿಮಗೆ ಸಿಗಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. ಕೆಲಸ ಮಾಡುವವರು ತಮ್ಮ ಕೆಲಸದಲ್ಲಿ ಯಶಸ್ವಿಯಾಗುತ್ತಾರೆ.
(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಅನುಷ್ಠಾನಗೊಳಿಸುವ ಮೊದಲು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ.)












Click it and Unblock the Notifications