ಅಧಿಕಾಷಾಢ ಮಾಸದ ಪಂಚಾಂಗ : ಜೂನ್ 21ರಿಂದ 27

ಜ್ಯೇಷ್ಠ-ಅಧಿಕಾಷಾಢ ಮಾಸದ ಜೂ. 21ರಿಂದ 27ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Jyeshtha-Ashada masa - June 21 to 28 : Rahu Kala, Gulika Kala, Yamaganda Kala

ಜೂ.21. ರವಿವಾರ : ಆಶ್ಲೇಷಾ ನಕ್ಷತ್ರ. ವಿಶ್ವ ಯೋಗ ದಿನಾಚರಣೆ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಜೂ.22. ಸೋಮವಾರ : ಮಘಾ. ಆರಿದ್ರ ಮಳೆ ಆರಂಭ. ವಾಹನಗಳ ಬಿಡಿಭಾಗಗಳ ಖರೀದಿಗೆ ಉತ್ತಮ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಜೂ.23. ಮಂಗಳವಾರ : ಪೂರ್ವಾಫಾಲ್ಗುಣಿ. ದೂರ ಪ್ರಯಾಣದಿಂದ ಅಶುಭ. [ಸೋಂಬೇರಿಗಳು ಪೂರ್ವ ಫಾಲ್ಗುಣಿ ನಕ್ಷತ್ರದವರು]

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಜೂ.24. ಬುಧವಾರ : ಉತ್ತರಾಫಾಲ್ಗುಣಿ. ಚಿಕಿತ್ಸೆ ಆರಂಭಿಸಲು ಸೂಕ್ತ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಜೂ.25. ಗುರುವಾರ : ಹಸ್ತಾ. ಸಸಿ ನೆಡಲು ಸೂಕ್ತ. ದೂರ ಪ್ರಯಾಣದಿಂದ ಅಸುಖ. ['ಅಭಯಹಸ್ತ' ನೀಡುವ ಹಸ್ತಾ ನಕ್ಷತ್ರದವರು]

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಜೂ.26. ಶುಕ್ರವಾರ : ಚಿತ್ತಾ. ಮಾದಕ ವಸ್ತು ಸೇವನೆ ನಿಷೇದ ದಿನ. ಸಂಗೀತ ಕಲಾವಿದರಿಗೆ ಮೊದಲ ಕಾರ್ಯಕ್ರಮ ಕೊಡಲು ಸೂಕ್ತ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಜೂ.27. ಶನಿವಾರ : ಸ್ವಾತಿ. ಜಾಗತಿಕ ಮಧುಮೇಹ ದಿನ. ಕಚೇರಿಗೆ ಬೇಕಾಗುವ ಸಾಮಗ್ರಿ ಖರೀದಿಸಲು ಸೂಕ್ತ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.

ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಲೇಸು.

ಈ ವಾರದ ಗ್ರಹಗತಿ : ವೃಷಭ: ಬುಧ. ಮಿಥುನ: ಮಂಗಳ+ಸೂರ್ಯ. ಸಿಂಹ: ಗುರು+ಶುಕ್ರ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮೀನ: ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+