ಜ್ಯೇಷ್ಠ ಮಾಸದ ವಾರದ ಪಂಚಾಂಗ: ಜೂನ್ 7 ರಿಂದ 13
ಜ್ಯೇಷ್ಠ ಮಾಸದ ಜೂ. 7ರಿಂದ 13ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಜೂ.7. ರವಿವಾರ : ಶ್ರವಣಾ ನಕ್ಷತ್ರ. ಹೊಸ ಬಟ್ಟೆ ಮತ್ತು ಬಂಗಾರದ ದಾಗೀನು ಕೊಳ್ಳಲು ಮತ್ತು ವೈದ್ಯಕೀಯ ಚಿಕಿತ್ಸೆಗೆ ಶುಭ. ದೂರ ಪ್ರಯಾಣಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಜೂ.8. ಸೋಮವಾರ : ಧನಿಷ್ಠಾ. ಕಚೇರಿಯಲ್ಲಿನ ಮುಖ್ಯಸ್ಥರೊಂದಿಗೆ ಮುಖ್ಯ ವಿಷಯ ಚರ್ಚಿಸಲು ಉತ್ತಮ ದಿನ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜೂ.9. ಮಂಗಳವಾರ : ಶತತಾರಾ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜೂ.10. ಬುಧವಾರ : ಪೂರ್ವಾಭಾದ್ರಪದ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜೂ.11. ಗುರುವಾರ : ಉತ್ತರಾಭಾದ್ರಪದ. ರೇಷನ್ ಹಾಕಿಸಲು ಮತ್ತು ಬಟ್ಟೆಗಳನ್ನು ನವೀಕರಣಗೊಳಿಸಿಕೊಳ್ಳಲು ಶುಭ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜೂ.12. ಶುಕ್ರವಾರ : ರೇವತಿ. ಏಕಾದಶಿ. ಅಮೃತ ಸಿದ್ಧಿಯೋಗವಿರುವುದರಿಂದ ಎಲ್ಲ ಕೆಲಸ-ಕಾರ್ಯಗಳಿಗೂ ಶುಭಕರ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜೂ.13. ಶನಿವಾರ : ಅಶ್ವಿನಿ. 2ನೇ ಶನಿವಾರ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ, ಬುಧವಾರ, ಗುರುವಾರ, ಶನಿವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.
ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲವೇ ಕೆಲಸ ಕಾರ್ಯ ಮಾಡಿಕೊಳ್ಳುವುದು ಉತ್ತಮ.
ಈ ವಾರದ ಗ್ರಹಗತಿ : ವೃಷಭ: ರವಿ+ಬುಧ+ಮಂಗಳ. ಕರ್ಕ: ಗುರು+ಶುಕ್ರ. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮಕರ : ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮೀನ: ಕೇತು.












Click it and Unblock the Notifications