ಜ್ಯೇಷ್ಠ ಮಾಸದ ವಾರದ ಪಂಚಾಂಗ : ಮೇ 31ರಿಂದ ಜೂ 6
ಜ್ಯೇಷ್ಠ ಮಾಸದ ಮೇ 31ರಿಂದ ಜೂನ್ 6ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಮೇ.31. ರವಿವಾರ : ಸ್ವಾತಿ ನಕ್ಷತ್ರ. ವೈದ್ಯಕೀಯಕ್ಕೆ ಸಂಬಂಧಪಟ್ಟ ಚಿಕಿತ್ಸೆಗೆ ಮತ್ತು ಸಂಗೀತ ಸಲಕರಣೆ ಖರೀದಿಗೆ ಅತ್ಯುತ್ತಮ. ದೂರ ಪ್ರಯಾಣದಿಂದ ನಷ್ಟ. [ಹಾರ್ಮೋನಿಕಾ ಕಿಂಗ್ ಅನೂಪ್ ಗೋಪಾಲ್ ಸಿಂಗ್!]
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಜೂನ್.1. ಸೋಮವಾರ : ವಿಶಾಖಾ. ದೂರ ಪ್ರಯಾಣದಿಂದ ಶುಭಕರ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜೂ.2. ಮಂಗಳವಾರ : ಅನುರಾಧಾ. ಕಾರ ಹುಣ್ಣಿಮೆ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜೂ.3. ಬುಧವಾರ : ಜ್ಯೇಷ್ಠಾ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜೂ.4. ಗುರುವಾರ : ಮೂಲಾ. ಬೋರವೆಲ್ ಕೊರೆಯಿಸಲು ಶುಭಕರ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜೂ.5. ಶುಕ್ರವಾರ : ಪೂರ್ವಾಷಾಢಾ. ಸಂಕಷ್ಟಿ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜೂ.6. ಶನಿವಾರ : ಉತ್ತರಾಷಾಢಾ. ವ್ಯವಸಾಯಕ್ಕೆ ಸಂಬಂಧಪಟ್ಟ ಕಾಯಕಗಳಿಗೆ ಉತ್ತಮ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಮಂಗಳವಾರ, ಗುರುವಾರ, ಶನಿವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.
ಈ ವಾರ ಹೊಸಮನೆಗೆ ಸಂಬಂಧಪಟ್ಟ ತಾರಸಿ ಕೆಲಸ ಬಿಟ್ಟು ಬೇರೆ ಕಾರ್ಯ ಮಾಡಿಕೊಳ್ಳದಿರುವುದು ಉತ್ತಮ.
ಈ ವಾರದ ಗ್ರಹಗತಿ : ವೃಷಭ: ರವಿ+ಬುಧ+ಮಂಗಳ. ಮಿಥುನ: ಶುಕ್ರ. ಕರ್ಕ: ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ತುಲಾ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ವೃಶ್ಚಿಕ: ನೀಚಶನಿ. ಮೀನ: ಕೇತು.












Click it and Unblock the Notifications