ಮಾಘ ಮಾಸದ ವಾರದ ಪಂಚಾಂಗ : ಫೆಬ್ರವರಿ 21ರಿಂದ 27
ಮಾಘ ಮಾಸದ ಫೆಬ್ರವರಿ 21ರಿಂದ 27ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಫೆ.21. ರವಿವಾರ : ಆಶ್ಲೇಷಾ ನಕ್ಷತ್ರ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಫೆ.22. ಸೋಮವಾರ : ಮಘಾ. ಭಾರತ ಹುಣ್ಣಿಮೆ. ದೂರ ಪ್ರಯಾಣದಿಂದ ನಷ್ಟ. ['ಸಿಂಹಾ'ಸನದ ಅದೃಷ್ಟವಿರುವ ಮಘಾ ನಕ್ಷತ್ರ!]
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಫೆ.23. ಮಂಗಳವಾರ : ಮಘಾ, ಕೃಷ್ಣ ಪಕ್ಷ ಆರಂಭ. ದೂರ ಪ್ರಯಾಣದಿಂದ ದುಃಖ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಫೆ.24. ಬುಧವಾರ : ಪೂರ್ವಾಫಾಲ್ಗುಣಿ. ದೂರ ಪ್ರಯಾಣದಿಂದ ಯಶಸ್ಸು. [ಸೋಂಬೇರಿಗಳು ಪೂರ್ವ ಫಾಲ್ಗುಣಿ ನಕ್ಷತ್ರದವರು]
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಫೆ.25. ಗುರುವಾರ : ಉತ್ತರಾಫಾಲ್ಗುಣಿ. ದೂರ ಪ್ರಯಾಣದಿಂದ ಲಾಭ. [ಸರ್ಕಾರಿ ಉದ್ಯೋಗ ಭಾಗ್ಯ ಉತ್ತರಫಾಲ್ಗುಣಿ ನಕ್ಷತ್ರಕ್ಕೆ!]
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಫೆ.26. ಶುಕ್ರವಾರ : ಹಸ್ತಾ. ಸಂಕಷ್ಟಿ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಫೆ.27. ಶನಿವಾರ : ಚಿತ್ತಾ. ದೂರ ಪ್ರಯಾಣದಿಂದ ಅನಿಷ್ಟ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.
ಈ ವಾರದ ಗ್ರಹಗತಿ : ಕರ್ಕ:ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಸಿಂಹ : ಗುರು+ರಾಹು. ವೃಶ್ಚಿಕ: ನೀಚಶನಿ+ಮಂಗಳ. ಮಕರ : ಬುಧ+ ಶುಕ್ರ. ಕುಂಭ: ಕೇತು+ ರವಿ












Click it and Unblock the Notifications