ಮಾಘ ಮಾಸ ವಾರದ ಪಂಚಾಂಗ: ಫೆ.1 ರಿಂದ 7
ಮಾಘ ಮಾಸದ ಫೆ.1ರಿಂದ 7ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ.

ಫೆ.1.ರವಿವಾರ : ಆರಿದ್ರಾ ನಕ್ಷತ್ರ. ಮೂರ್ತಿ ಪ್ರಾಣಪ್ರತಿಷ್ಠಾಪನೆಗೆ ಶುಭಕರ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಫೆ.2.ಸೋಮವಾರ : ಪುನರ್ವಸು. ಆಸ್ತಿಯ ವ್ಯವಹಾರಕ್ಕೆ ಶುಭಕರ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಫೆ.3.ಮಂಗಳವಾರ : ಪುಷ್ಯ. ಭಾರತ ಹುಣ್ಣಿಮೆ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಫೆ.4.ಬುಧವಾರ : ಆಶ್ಲೇಷಾ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಫೆ.5.ಗುರುವಾರ : ಮಘಾ. ಮುಖ್ಯವಾದ ವ್ಯವಹಾರದ ಮಾತುಕತೆಗೆ ಉತ್ತಮ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಫೆ.6.ಶುಕ್ರವಾರ : ಪೂರ್ವಾಫಾಲ್ಗುಣಿ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಫೆ.7.ಶನಿವಾರ : ಉತ್ತರಾಫಾಲ್ಗುಣಿ. ಸಂಕಷ್ಟಿ. ವಾಹನ ಖರೀದಿಗೆ ಉತ್ತಮ ದಿನ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಸೋಮವಾರ, ಗುರುವಾರ, ಶನಿವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಸೋಮವಾರ, ಮಂಗಳವಾರ.
ಈ ವಾರ ಹೊಸಮನೆಗೆ ಸಂಬಂಧಪಟ್ಟಂತೆ ಎಲ್ಲ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಬಹುದು.
ಈ ವಾರದ ಗ್ರಹಗತಿ : ಮಿಥುನ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಕರ್ಕ: ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮಕರ: ರವಿ+ಬುಧ. ಕುಂಭ: ಕುಜ+ಶುಕ್ರ. ಮೀನ: ಸ್ವಕ್ಷೇತ್ರದಲ್ಲಿ ಕೇತು.












Click it and Unblock the Notifications