ಮಾಘ ಮಾಸ ವಾರದ ಪಂಚಾಂಗ: ಫೆ.8 ರಿಂದ 14

ಮಾಘ ಮಾಸದ ಫೆ.8ರಿಂದ 14ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ.

Magha masa - February 8 to 14 : Rahu Kala, Gulika Kala, Yamaganda Kala

ಫೆ.8. ರವಿವಾರ : ಉತ್ತರಾಫಾಲ್ಗುಣಿ ನಕ್ಷತ್ರ. ಹೊಸ ವ್ಯವಹಾರ ಪ್ರಾರಂಭಿಸಲು ಶುಭ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಫೆ.9. ಸೋಮವಾರ : ಹಸ್ತಾ. ಯಂತ್ರದಿಂದ ಉತ್ಪನ್ನ ಮಾಡಲು ಶುಭ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಫೆ.10. ಮಂಗಳವಾರ : ಚಿತ್ತಾ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಫೆ.11. ಬುಧವಾರ : ಸ್ವಾತಿ. ಹೊಸ ಕೆಲಸ ಮತ್ತು ಉದ್ಯೋಗಕ್ಕೆ ಶುಭ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಫೆ.12. ಗುರುವಾರ : ವಿಶಾಖಾ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಫೆ.13. ಶುಕ್ರವಾರ : ಅನುರಾಧಾ. ಕಚೇರಿಯ ಕೆಲಸಕ್ಕೆ ಉತ್ತಮ. ವಧು ನಿಶ್ಚಯಕ್ಕೆ ಶುಭಕರ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಫೆ.14. ಶನಿವಾರ : ಜ್ಯೇಷ್ಠಾ. ಎರಡನೇ ಶನಿವಾರ. ಪ್ರೇಮಿಗಳ ದಿನ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ರವಿವಾರದಿಂದ ಶುಕ್ರವಾರದವರೆಗೆ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.

ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳಬಾರದು.

ಈ ವಾರದ ಗ್ರಹಗತಿ : ಕರ್ಕ: ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ವೃಶ್ಚಿಕ: ನೀಚಶನಿ. ಮಕರ: ರವಿ+ಬುಧ. ಕುಂಭ: ಕುಜ+ಶುಕ್ರ. ಮೀನ: ಸ್ವಕ್ಷೇತ್ರದಲ್ಲಿ ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+