ಮಾಘ ಮಾಸದ ವಾರದ ಪಂಚಾಂಗ: ಮಾರ್ಚ್ 6ರಿಂದ 12
ಮಾಘ ಮಾಸದ ಮಾರ್ಚ್ 06ರಿಂದ ಮಾರ್ಚ್ 12ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಮಾ.06. ರವಿವಾರ : ಶ್ರವಣಾ ನಕ್ಷತ್ರ. ನೂತನ ವಾಹನ, ದವಸ ಧಾನ್ಯ ಖರೀದಿಗೆ ಹಾಗೂ ಕೃಷಿ ಚಟುವಟಿಕೆ ಆರಂಭಿಸಲು ಶುಭದಿನ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಮಾ.07. ಸೋಮವಾರ : ಧನಿಷ್ಠಾ. ಸರಕಾರಿ ರಜೆ. ಮಹಾಶಿವರಾತ್ರಿ. ದೂರ ಪ್ರಯಾಣದಿಂದ ಶುಭಫಲ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಮಾ.08. ಮಂಗಳವಾರ : ಶತತಾರಾ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಮಾ.09. ಬುಧವಾರ : ಪೂರ್ವಾಭಾದ್ರಪದ. ಶಿವರಾತ್ರಿ ಅಮವಾಸ್ಯೆ. (8 ರ ಮುಂಜಾನೆ 10-34 ಕ್ಕೆ ಆರಂಭ. 9ರ ಮುಂಜಾನೆ 7-25ಕ್ಕೆ ಅಮವಾಸ್ಯೆ ಮುಕ್ತಾಯ). ಖಗ್ರಾಸ ಸೂರ್ಯಗ್ರಹಣ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಮಾ.10. ಗುರುವಾರ : ಉತ್ತರಾಭಾದ್ರಪದ. ಫಾಲ್ಗುಣ ಮಾಸ ಶುಕ್ಲ ಪಕ್ಷ ಆರಂಭ. ಗ್ರಹಣ ಕರಿದಿನ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಮಾ.11. ಶುಕ್ರವಾರ : ರೇವತಿ. ಎಲ್ಲ ಕೆಲಸ ಕಾರ್ಯಗಳನ್ನು ಆರಂಭಿಸಲು ಶುಭದಿನ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಮಾ.12. ಶನಿವಾರ : ಅಶ್ವಿನಿ. ಎರಡನೇ ಶನಿವಾರ. ಹೊಸ ಕೆಲಸಕ್ಕೆ ಸೇರಲು, ವಹಿವಾಟು ಮಾಡಲು ಉತ್ತಮ ದಿನ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ರವಿವಾರ, ಗುರುವಾರ, ಶುಕ್ರವಾರ, ಶನಿವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳಬಾರದು.
ಈ ವಾರದ ಗ್ರಹಗತಿ : ಸಿಂಹ : ಗುರು+ರಾಹು. ವೃಶ್ಚಿಕ: ನೀಚಶನಿ+ಮಂಗಳ. ಮಕರ: ಶುಕ್ರ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಕುಂಭ: ರವಿ+ಕೇತು+ಬುಧ.












Click it and Unblock the Notifications