ಮಾರ್ಗಶಿರ ಮಾಸದ ವಾರದ ಪಂಚಾಂಗ : ಡಿ.13ರಿಂದ 19

ಮಾರ್ಗಶಿರ ಮಾಸದ ಡಿಸೆಂಬರ್ 13ರಿಂದ 19ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Margashira masa - Dec 13 to 19 : Rahu Kala, Gulika Kala, Yamaganda Kala

ಡಿ.13. ರವಿವಾರ : ಪೂರ್ವಾಷಾಢಾ ನಕ್ಷತ್ರ. ರಾಷ್ಟ್ರ ಬುದ್ಧಿಮಾಂದ್ಯರ ದಿನ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಡಿ.14. ಸೋಮವಾರ : ಉತ್ತರಾಷಾಢಾ. ಮನೆಯಲ್ಲಿ ಅಥವಾ ದೇವಾಲಯದಲ್ಲಿ ಮೂರ್ತಿ ಸ್ಥಾಪಿಸಲು ಸೂಕ್ತ ದಿನ. ದೂರ ಪ್ರಯಾಣದಿಂದ ಹಾನಿ.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಡಿ.15. ಮಂಗಳವಾರ : ಶ್ರವಣಾ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಡಿ.16. ಬುಧವಾರ : ಧನಿಷ್ಠಾ. ಧನುರ್ಮಾಸ ಆರಂಭ. ವಾಹನ ಖರೀದಿಸಲು ಮತ್ತು ಔಷಧ ಸೇವನೆ ಆರಂಭಿಸಲು ಸೂಕ್ತ. ದೂರ ಪ್ರಯಾಣದಿಂದ ಸಂತೋಷ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಡಿ.17. ಗುರುವಾರ : ಶತತಾರಾ. ದೂರ ಪ್ರಯಾಣದಿಂದ ರೋಗ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಡಿ.18. ಶುಕ್ರವಾರ : ಪೂರ್ವಾಭಾದ್ರಪದ. ಅಲ್ಪಸಂಖ್ಯಾತರ ಹಕ್ಕುಗಳ ದಿನ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಡಿ.19.ಶನಿವಾರ : ಉತ್ತರಾಭಾದ್ರಪದ. ಮನೆಯಲ್ಲಿ ಹೆಚ್ಚಿನ ಪ್ರಮಾಣದ ರೇಷನ್ ಖರೀದಿಸಲು ಸೂಕ್ತ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ಸೋಮವಾರ, ಮಂಗಳವಾರ, ಬುಧವಾರ, ಶನಿವಾರ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಉತ್ತಮ.

ಈ ವಾರದ ಗ್ರಹಗತಿ : ಸಿಂಹ : ಗುರು. ಕನ್ಯಾ : ರಾಹು+ಮಂಗಳ. ತುಲಾ :ಶುಕ್ರ. ವೃಶ್ಚಿಕ: ನೀಚಶನಿ+ರವಿ. ಧನುಸ್ಸು: ಬುಧ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮೀನ : ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+