ಮಾರ್ಗಶಿರ ಮಾಸದ ವಾರದ ಪಂಚಾಂಗ: ಡಿ. 27ರಿಂದ ಜ. 2
ಮಾರ್ಗಶಿರ ಮಾಸದ ಡಿಸೆಂಬರ್ 27ರಿಂದ ಜನವರಿ 02ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಡಿ.27. ರವಿವಾರ : ಪುನರ್ವಸು ನಕ್ಷತ್ರ. ಸೀರೆ ಕಾರ್ಯಕ್ರಮ ಮತ್ತು ವ್ಯವಸಾಯದ ಜಾನುವಾರುಗಳ ವ್ಯವಹಾರಕ್ಕೆ ಶುಭ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಡಿ.28. ಸೋಮವಾರ : ಪುಷ್ಯ. ಸಂಕಷ್ಟಿ. ಹೊಸಮನೆ ಬಾಗಿಲು ಕೂಡಿಸಲು ಶುಭ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಡಿ.29. ಮಂಗಳವಾರ : ಆಶ್ಲೇಷಾ. ದೂರ ಪ್ರಯಾಣದಿಂದ ಯಶಸ್ಸು. [ನಾಗಗಳಂತೆ ವ್ಯಕ್ತಿತ್ವವಿರುವ ಆಶ್ಲೇಷಾ ನಕ್ಷತ್ರದವರು]
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಡಿ.30. ಬುಧವಾರ : ಮಘಾ. ವ್ಯವಸಾಯದ ಕೆಲಸಗಳಿಗೆ ಶುಭ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಡಿ.31. ಗುರುವಾರ : ಪೂರ್ವಾಫಾಲ್ಗುಣಿ. 2015ರ ಕೊನೆಯ ದಿನ. ಬ್ಯಾಂಕ್ ರಜೆ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜನವರಿ 1. ಶುಕ್ರವಾರ : ಉತ್ತರಾಫಾಲ್ಗುಣಿ. 2016 ಹೊಸ ವರ್ಷಾರಂಭ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜನೇವರಿ 2. ಶನಿವಾರ : ಹಸ್ತಾ. ದೂರ ಪ್ರಯಾಣದಿಂದ ನಷ್ಟ. ['ಅಭಯಹಸ್ತ' ನೀಡುವ ಹಸ್ತಾ ನಕ್ಷತ್ರದವರು]
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ, ಬುಧವಾರ, ಶುಕ್ರವಾರ, ಶನಿವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಎಲ್ಲ ಕೆಲಸ ಕಾರ್ಯ ಮಾಡಿಕೊಳ್ಳುವುದು ಉತ್ತಮ.
ಈ ವಾರದ ಗ್ರಹಗತಿ : ಕರ್ಕ : ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಸಿಂಹ : ಗುರು. ಕನ್ಯಾ : ರಾಹು. ತುಲಾ : ಮಂಗಳ. ವೃಶ್ಚಿಕ: ನೀಚಶನಿ+ಶುಕ್ರ. ಧನುಸ್ಸು: ರವಿ. ಮಕರ : ಬುಧ. ಮೀನ: ಕೇತು.












Click it and Unblock the Notifications