Powerful Vastu Plants: ಮನೆಗೆ ಪಾಸಿಟಿವ್ ಎನರ್ಜಿ ಬೇಕಾ? ಈ ಸಸ್ಯಗಳನ್ನು ಇಡಿ, ಜೀವನವೇ ಬದಲಾಗುತ್ತದೆ
ಮನೆ ನಿರ್ಮಾಣದ ನಂತರ ನಾವು ಅದರ ಒಳಾಂಗಣ ವಿನ್ಯಾಸ ಮತ್ತು ವಾತಾವರಣವು ಕುಟುಂಬದ ಜೀವನದ ಮೇಲೆ ಮಹತ್ವದ ಪ್ರಭಾವ ಬೀರುತ್ತದೆ. ವಾಸ್ತು ಶಾಸ್ತ್ರದ ಕೆಲವು ತತ್ವಗಳನ್ನು ಪಾಲಿಸುವುದು ಕುಟುಂಬದ ಸಂತೋಷ ಮತ್ತು ಸಮೃದ್ಧಿಗೆ ಮುಖ್ಯವೆಂದು ನಂಬಲಾಗಿದೆ. ಮನೆಗೆ ಧನಾತ್ಮಕ ಶಕ್ತಿ ಬರಲು ಸಸ್ಯಗಳ ಪಾತ್ರವೂ ಬಹು ಮುಖ್ಯವಾಗಿದೆ.
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೆಲವು ವಿಶೇಷ ಸಸ್ಯಗಳನ್ನು ಬೆಳೆಸುವುದರಿಂದ ಆರ್ಥಿಕ ಅಭಿವೃದ್ಧಿ ಮತ್ತು ಮಾನಸಿಕ ಶಾಂತಿ ದೊರೆಯುತ್ತದೆ. ದಾಸವಾಳ, ನಿಂಬೆ, ಅಶೋಕ, ಮನಿ ಪ್ಲಾಂಟ್, ತುಳಸಿ ಹಾಗೂ ಗುಲಾಬಿ ಸಸ್ಯಗಳು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇವು ಮನೆಗೆ ಪಾಸಿಟಿವ್ ಎನರ್ಜಿ ತರಲು ಸಹಕಾರಿಯಾಗುತ್ತವೆ.

ತುಳಸಿ ಸಸ್ಯವನ್ನು ಅತ್ಯಂತ ಪವಿತ್ರವೆಂದು ಹೇಳಲಾಗುತ್ತದೆ. ಇದನ್ನು ಪೂರ್ವ, ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ನೆಟ್ಟರೆ ಆರ್ಥಿಕ ಸ್ಥಿರತೆಯು ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಅದೇ ರೀತಿ ಮನಿ ಪ್ಲಾಂಟ್ ಸಸ್ಯವು ಹಣಕಾಸಿನ ಬೆಳವಣಿಗೆಗೆ ಸಹಾಯಕವಾಗುತ್ತದೆ.
ಅಶೋಕ ಮರವನ್ನು ಪೂರ್ವ ಅಥವಾ ಉತ್ತರ ದಿಕ್ಕಿನಲ್ಲಿ ನೆಟ್ಟರೆ ಮನೆಯಲ್ಲಿನ ಕಲಹಗಳು ಕಡಿಮೆಯಾಗುತ್ತವೆ. ನಿಂಬೆ ಗಿಡವು ವಾಸ್ತು ದೋಷಗಳನ್ನು ಕಡಿಮೆ ಮಾಡುತ್ತದೆ ಮತ್ತು ಕೆಟ್ಟ ದೃಷ್ಟಿಯಿಂದ ರಕ್ಷಣೆ ನೀಡುತ್ತವೆ.
ಲಕ್ಕಿ ಬಿದಿರು ಸಸ್ಯವನ್ನು ಅದೃಷ್ಟ, ಸಮೃದ್ಧಿ ಮತ್ತು ಉತ್ತಮ ಆರೋಗ್ಯದ ಸಂಕೇತವಾಗಿ ಪರಿಗಣಿಸಲ್ಪಡುತ್ತದೆ. ಪೂರ್ವ ಅಥವಾ ಆಗ್ನೇಯ ದಿಕ್ಕಿನಲ್ಲಿ ಇಡುವುದು ಉತ್ತಮ. ಇದು ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಮನೆಗೆ ಧನಾತ್ಮಕ ಶಕ್ತಿ ತರಲು ಸಹಾಯ ಮಾಡುತ್ತದೆ. ದಾಸವಾಳ, ಗುಲಾಬಿ ಮತ್ತು ಮಲ್ಲಿಗೆ ಹೂವುಗಳು ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗುತ್ತವೆ.
ಆದರೆ ವಾಸ್ತು ಪ್ರಕಾರ ಕೆಲವು ಸಸ್ಯಗಳನ್ನು ಮನೆಯಲ್ಲಿ ಬೆಳೆಸಬಾರದು. ಮುಳ್ಳಿನ ಸಸ್ಯಗಳು ಮತ್ತು ಹಾಲಿನ ರಸ ಹೊರಹೊಮ್ಮಿಸುವ ಸಸ್ಯಗಳು ನಕಾರಾತ್ಮಕ ಶಕ್ತಿಯನ್ನು ಸೆಳೆಯುತ್ತವೆ ಎಂದು ನಂಬಲಾಗಿದೆ. ಆದ್ದರಿಂದ ಇವುಗಳನ್ನು ಬೆಳಸದೆ ಇರುವುದು ಉತ್ತಮ.
ಸಸ್ಯಗಳನ್ನು ದಿಕ್ಕಿನ ಪ್ರಕಾರವೂ ನೆಡುವುದು ಪ್ರಮುಖವಾದ ವಿಷಯ ಆಗಿದೆ. ಪೂರ್ವ ಮತ್ತು ಉತ್ತರ ಭಾಗಗಳಲ್ಲಿ ಸಣ್ಣ ಸಸ್ಯಗಳನ್ನು ಮತ್ತು ದಕ್ಷಿಣ, ಪಶ್ಚಿಮ ಭಾಗಗಳಲ್ಲಿ ದೊಡ್ಡ ಮರಗಳನ್ನು ಬೆಳೆಸುವುದು ಒಳ್ಳೆಯದು ಎಂದು ವಾಸ್ತು ತಜ್ಞರು ಸೂಚಿಸುತ್ತಾರೆ.
ಒಟ್ಟಿನಲ್ಲಿ ವಾಸ್ತು ಶಾಸ್ತ್ರದ ಪ್ರಕಾರ ಹೇಳುವುದಾದರೆ, ಸರಿಯಾದ ಸಸ್ಯಗಳನ್ನು ಸರಿಯಾದ ದಿಕ್ಕಿನಲ್ಲಿ ಬೆಳೆಸುವುದರಿಂದ ಮನೆಗೆ ಸಕಾರಾತ್ಮಕ ಶಕ್ತಿ, ಆರೋಗ್ಯ ಮತ್ತು ಸಂಪತ್ತು ಹೆಚ್ಚುತ್ತದೆ ಎಂದು ವಾಸ್ತು ತಜ್ಞರು ಅಭಿಪ್ರಾಯಪಡುತ್ತಾರೆ.
-
ಬೆಳಿಗ್ಗೆ ನಿಂಬೆ ಹಣ್ಣಿನ ರಸ ಕುಡಿಯುತ್ತಿದ್ದೀರಾ? ಲಾಭಗಳ ಜೊತೆ ಈ ಅಪಾಯಗಳೂ ಇವೆ -
ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ದೇವರ ಕೋಣೆ ಪ್ರತ್ಯೇಕವಾಗಿರಬೇಕಾ? ಇಲ್ಲಿದೆ ಸ್ಪಷ್ಟನೆ -
ನಿಮ್ಮ ಮನೆಯ ಸೀಲಿಂಗ್ ಫ್ಯಾನ್ನಲ್ಲಿ ಧೂಳು ತುಂಬಿದೆಯೇ? ನಿಮಿಷಗಳಲ್ಲಿ ಸ್ವಚ್ಛಗೊಳಿಸಲು ಇಲ್ಲಿವೆ 'ಸೀಕ್ರೆಟ್' ಟಿಪ್ಸ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ














Click it and Unblock the Notifications