ಪುಷ್ಯ ಮಾಸದ ವಾರದ ಪಂಚಾಂಗ: ಜನವರಿ 24ರಿಂದ 30
ಪುಷ್ಯ ಮಾಸದ ಜನವರಿ 24ರಿಂದ 30ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಜ.24. ರವಿವಾರ : ಪುಷ್ಯ ನಕ್ಷತ್ರ. ಬನದ ಹುಣ್ಣಿಮೆ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಜ.25. ಸೋಮವಾರ : ಆಶ್ಲೇಷ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜ.26. ಮಂಗಳವಾರ : ಮಘಾ. ಪ್ರಜಾರಾಜ್ಯೋತ್ಸವ. ಸರಕಾರಿ ರಜೆ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜ.27. ಬುಧವಾರ : ಪೂರ್ವಾಫಾಲ್ಗುಣಿ. ಸಂಕಷ್ಟಿ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜ.28. ಗುರುವಾರ : ಉತ್ತರಾಫಾಲ್ಗುಣಿ. ದೂರ ಪ್ರಯಾಣದಿಂದ ಶುಭಫಲ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜ.29. ಶುಕ್ರವಾರ : ಹಸ್ತಾ. ದೂರ ಪ್ರಯಾಣದಿಂದ ಸಂತೋಷ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜ.30. ಶನಿವಾರ : ಹಸ್ತಾ. ದೂರ ಪ್ರಯಾಣದಿಂದ ಹಾನಿ. ಗಾಂಧಿ ಪುಣ್ಯತಿಥಿ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ. ಈ ವಾರ ಹೊಸಮನೆಗೆ ಸಂಬಂಧಪಟ್ಟ ಯಾವುದೇ ಕೆಲಸ ಕಾರ್ಯ ಮಾಡಿಕೊಳ್ಳದೇ ಇರುವುದು ಉತ್ತಮ.
ಈ ವಾರದ ಗ್ರಹಗತಿ : ಕರ್ಕ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಸಿಂಹ : ಗುರು+ರಾಹು. ತುಲಾ : ಮಂಗಳ. ವೃಶ್ಚಿಕ: ನೀಚಶನಿ. ಧನುಸ್ಸು: ಬುಧ+ಶುಕ್ರ. ಮಕರ : ರವಿ. ಕುಂಭ: ಕೇತು.











Click it and Unblock the Notifications