• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Daily Horoscope: ಜ 22, ಶುಕ್ರವಾರ ದ್ವಾದಶ ರಾಶಿ ಭವಿಷ್ಯ

ಭವಿಷ್ಯ ನುಡಿಯುವುದು ಆ ಭಗವಂತನ ಅನುಗ್ರಹ. ದಿನ ಬೆಳಗಾಗೆದ್ದು ಭಗವಂತನ ನೆನೆದು ನಿತ್ಯದ ಕಾಯಕದಲ್ಲಿ ತೊಡಗಿಕೊಳ್ಳುವ ಮುನ್ನ ಈ ಭವಿಷ್ಯವನ್ನೊಮ್ಮೆ ನೋಡಿಕೊಳ್ಳಿ. ಇಲ್ಲಿ ಹೇಳುವ ಎಚ್ಚರಿಕೆಯ ಮಾತುಗಳನ್ನೊಮ್ಮೆ ಗಮನದಲ್ಲಿ ಇಟ್ಟುಕೊಳ್ಳಿ. ಸಾಧ್ಯವಾದಷ್ಟೂ ಸಲಹೆಗಳನ್ನು ಅನುಸರಿಸಿ. ಜೀವನದಲ್ಲಿ ಸಮಸ್ಯೆಗಳು ಬಂದು ಹೋಗುವ ನೆಂಟರಂತೆ.

ಆದರೆ, ನಾವು ಮಾಡುವ ಪಾಪ- ಕರ್ಮಗಳು. ತಂದೆ- ತಂದೆ ಮೂಲಕ ನಮಗೆ ಬರುವ ರಕ್ತದ ಗುಣದಂತೆ. ಒಳ್ಳೆ ಕರ್ಮಕ್ಕೆ ಉತ್ತಮ ಫಲ- ಆರೋಗ್ಯ. ಕೆಟ್ಟ ಕರ್ಮಕ್ಕೆ- ಕೆಟ್ಟ ಫಲ, ಸಮಸ್ಯೆ. ಆದರೆ ಅದನ್ನು ಕೂಡ ನಾವು ಹೇಗೆ ವೈದ್ಯರಲ್ಲಿಗೆ ಹೋಗಿ, ಆರೋಗ್ಯವನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಳ್ಳುತ್ತೀವೋ ಹಾಗೇ ಜೋಪಾನ ಮಾಡಬಹುದು.

ಕಷ್ಟಕಾರ್ಪಣ್ಯದಿಂದ ಮುಕ್ತಿ ಹೊಂದಲು ದಾರಿ ದೀಪ:

ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಕೇಂದ್ರ

ತುಳುನಾಡಿನ ಕರಾವಳಿಯ ದೈವಶಕ್ತಿ ಜ್ಯೋತಿಷ್ಯರು

ಸ್ತ್ರೀ-ಪುರುಷ ಪ್ರೇಮವಿಚಾರ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ,

ಅತ್ತೆ-ಸೊಸೆ ಕಿರಿಕಿರಿ, ವಶೀಕರಣ, ಸಂತಾನಯೋಗ, ಇತ್ಯಾದಿ ಸಮಸ್ಯೆಗಳಿಗೆ,

ಅಷ್ಟಮಂಗಳ ಪ್ರಶ್ನೆ, ತಾಂಬೂಲ ಪ್ರಶ್ನೆ, ಜಾತಕ ವಿಶ್ಲೇಷಣೆ ಮಾಡಿ ನಿಮ್ಮ

ಇಷ್ಟಾರ್ಥ ಕಾರ್ಯಗಳಿಗೆ 5 ದಿನದಲ್ಲಿ ಪರಿಹಾರ ಶತಸಿದ್ದ.

ಮನೆಯ ವಿಳಾಸ: ನಂ.86, ಸಂಪಿಗೆ ರಸ್ತೆ, ಮಲ್ಲೇಶ್ವರಂ ಮೊ: 9945515555

 ಮೇಷ ರಾಶಿ

ಮೇಷ ರಾಶಿ

ವೈದ್ಯಕೀಯ ವೃತ್ತಿಯಲ್ಲಿ ಇರುವವರು ಅವಮಾನಗಳನ್ನು ಎದುರಿಸುವ ಸಾಧ್ಯತೆ ಇದೆ. ಶೈಕ್ಷಣಿಕ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಸಿಗಲಿದೆ. ಗ್ಯಾಜೆಟ್ ಗಳ ಖರೀದಿಗಾಗಿ ಹೆಚ್ಚಿನ ಹಣ ಖರ್ಚು ಮಾಡಲಿದ್ದೀರಿ. ಆದರೆ ಅದರಿಂದ ಸಮಾಧಾನ ಆಗುವುದಿಲ್ಲ.

 ವೃಷಭ ರಾಶಿ

ವೃಷಭ ರಾಶಿ

ನಿಮ್ಮಿಂದ ಇತರರಿಗೆ ವಿಪರೀತ ನಿರೀಕ್ಷೆ ಹೆಚ್ಚಾಗಲಿದೆ. ಇದನ್ನು ನಿರ್ವಹಿಸಲು ಒತ್ತಡಕ್ಕೆ ಸಿಲುಕಿಕೊಳ್ಳಲಿದ್ದೀರಿ. ನಿಮ್ಮ ಬಳಿಯಲ್ಲಿ ಇರುವ ಹಣದ ಮೂಲಕ ಗುರಿಯನ್ನು ತಲುಪುವುದು ಕಷ್ಟ ಎಂಬ ಸಂಗತಿ ತಿಳಿದುಬರುತ್ತದೆ. ಸ್ತ್ರೀಯರ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು.

 ಮಿಥುನ ರಾಶಿ

ಮಿಥುನ ರಾಶಿ

ವಸ್ತ್ರಾಭರಣಗಳ ಖರೀದಿಗಾಗಿ ಸಾಲ ಮಾಡುವ ಸಾಧ್ಯತೆ ಇದೆ. ನಿಮ್ಮಲ್ಲಿ ಕೆಲವರು ಕ್ರೆಡಿಟ್ ಕಾರ್ಡ್ ಮೂಲಕ ವಿಪರೀತ ಹಣವನ್ನು ಬಳಸಿಕೊಳ್ಳಲಿದ್ದೀರಿ. ಕಂಡಿದ್ದೆಲ್ಲವನ್ನೂ ಖರೀದಿ ಮಾಡಬೇಕು ಎಂಬ ಮನೋಭಾವ ಸರಿಯಲ್ಲ. ರಾಜಕೀಯ ರಂಗದಲ್ಲಿ ಇರುವವರಿಗೆ ರಾಜೀ- ಸಂಧಾನ ಅನಿವಾರ್ಯ ಆಗಲಿದೆ.

 ಕರ್ಕಾಟಕ ರಾಶಿ

ಕರ್ಕಾಟಕ ರಾಶಿ

ವ್ಯಾಪಾರ- ವ್ಯವಹಾರ ಮಾಡುತ್ತಿರುವವರಿಗೆ ಲಾಭದ ಪ್ರಮಾಣದಲ್ಲಿ ಹೆಚ್ಚಳ ಆಗಲಿದೆ. ವಿಸ್ತರಣೆ ಮಾಡುವ ಸಲುವಾಗಿ ಸಾಲ ಮಾಡುವ ಸಾಧ್ಯತೆ ಇದೆ. ಸಂಬಂಧ ಸುಧಾರಿಸುವ ಸಲುವಾಗಿ ಹೆಚ್ಚಿನ ಸಮಯವನ್ನು ಮೀಸಲಿಡಲಿದ್ದೀರಿ. ವಿದೇಶಗಳಲ್ಲಿ ಉದ್ಯೋಗ ಮಾಡುತ್ತಿರುವವರು ಬದಲಾವಣೆ ಮಾಡಲು ಆಲೋಚಿಸಲಿದ್ದೀರಿ.

 ಸಿಂಹ ರಾಶಿ

ಸಿಂಹ ರಾಶಿ

ಸರ್ಕಾರಿ ಕೆಲಸದಲ್ಲಿ ಇರುವವರಿಗೆ ಮಹತ್ತರವಾದ ಜವಾಬ್ದಾರಿ ಹೆಗಲೇರುವ ಸಾಧ್ಯತೆ ಇದೆ. ಜ್ಯೋತಿಷಿಗಳು, ಅಧ್ಯಾತ್ಮ ಚಿಂತಕರಿಗೆ ಸಾಮಾಜಿಕ ಮನ್ನಣೆ ದೊರೆಯುತ್ತದೆ. ಸಜ್ಜನರ ಜತೆಗೆ ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ.

 ಕನ್ಯಾ ರಾಶಿ

ಕನ್ಯಾ ರಾಶಿ

ಮನೆಯ ಸಲುವಾಗಿ ಗೃಹಾಲಂಕಾರ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ. ಸಂಗಾತಿಯ ಜತೆಗೆ ಅತಿ ಮುಖ್ಯವಾದ ವಿಷಯಗಳನ್ನು ಚರ್ಚೆ ಮಾಡಲಿದ್ದೀರಿ. ವಾಹನಗಳನ್ನು ಚಲಾಯಿಸುವಾಗ ಏಕಾಗ್ರತೆಯಿಂದ ಇರಬೇಕು. ಬೆಂಕಿಯ ಮುಂದೆ ಕೆಲಸ ಮಾಡುವಾಗ ಎಚ್ಚರಿಕೆಯಿಂದ ಇರಿ.

 ತುಲಾ ರಾಶಿ

ತುಲಾ ರಾಶಿ

ಏನನ್ನೂ ನಿರ್ಧಾರಿತ ಧ್ವನಿಯಲ್ಲಿ ಹೇಳಲಾಗದ ಸಂದಿಗ್ಧ ಸ್ಥಿತಿ ನಿಮ್ಮದಾಗಿರುತ್ತದೆ. ಒಮ್ಮೆಲೆ ಹಲವರು ನಿಮ್ಮ ತೀರ್ಮಾನವನ್ನು ಪ್ರಶ್ನಿಸುತ್ತಿದ್ದರೂ ಗಟ್ಟಿಯಾಗಿ ನಿಲ್ಲುವಂಥ ಮನೋಬಲ ಅಗತ್ಯ ಇದೆ. ಸಣ್ಣ- ಪುಟ್ಟ ಹಿನ್ನಡೆಗಳಿಂದ ಕುಗ್ಗದಿರಿ. ಸಂಗಾತಿಯ ಬಗ್ಗೆ ಅನುಮಾನದ ಮಾತುಗಳನ್ನಾಡಿ ಸಣ್ಣವರಾಗಬೇಡಿ.

 ವೃಶ್ಚಿಕ ರಾಶಿ

ವೃಶ್ಚಿಕ ರಾಶಿ

ಸಂಗಾತಿ ಜತೆಗೆ ಉತ್ತಮ ಸಮಯ ಕಳೆಯಲಿದ್ದೀರಿ. ಪ್ರೇಮಿಗಳು ಮನೆಯಲ್ಲಿ ಮದುವೆ ಪ್ರಸ್ತಾವ ಮಾಡುವ ಸಾಧ್ಯತೆ ಇದೆ. ಇನ್ನು ಸಂತಾನ ಅಪೇಕ್ಷಿತರು ಶುಭ ಸುದ್ದಿ ಕೇಳುವ ಯೋಗ ಇದೆ. ವಾಹನ, ಸೈಟು ಖರೀದಿಗಾಗಿ ಹಣವನ್ನು ಖರ್ಚು ಮಾಡಲಿದ್ದೀರಿ. ಸ್ನೇಹಿತರು- ಸಂಬಂಧಿಕರ ನೆರವು ಸಿಗಲಿದೆ.

 ಧನಸ್ಸು ರಾಶಿ

ಧನಸ್ಸು ರಾಶಿ

ದಿಢೀರನೇ ಮುಂದೇನು ಎಂಬ ಪ್ರಶ್ನೆ ನಿಮ್ಮೆದುರು ಕಾಡುತ್ತದೆ. ಕ್ರಿಯೇಟಿವ್ ಕ್ಷೇತ್ರದಲ್ಲಿ ಇರುವವರಿಗೆ ಹೊಣೆಯು ಹೆಚ್ಚಾಗುತ್ತದೆ. ಇದನ್ನು ನಿರ್ವಹಿಸುವುದಕ್ಕೆ ಸಾಧ್ಯವೇ ಎಂಬ ಅನುಮಾನ ಮೂಡುತ್ತದೆ. ಸಣ್ಣಪುಟ್ಟ ವಿಚಾರಗಳಿಗೂ ಸಿಟ್ಟು ಬರುವಂತೆ ಆಗುತ್ತದೆ. ಸಾಧ್ಯವಾದಷ್ಟೂ ತಾಳ್ಮೆಯಿಂದ ಇರಬೇಕು.

 ಮಕರ ರಾಶಿ

ಮಕರ ರಾಶಿ

ನಿಮ್ಮ ಮೂಲಕ ಇತರರಿಗೆ ಸಹಾಯ ಆಗಲಿದೆ. ಕೆಲಸ ಕೊಡಿಸುವುದು ಅಥವಾ ಹಣಕಾಸಿನ ನೆರವು ದೊರಕಿಸುವ ಸಾಧ್ಯತೆ ಇದೆ. ಆಪ್ತರ ಜತೆಗಿನ ಮಾತುಕತೆಯಿಂದ ಮಾನಸಿಕ ನೆಮ್ಮದಿ ದೊರೆಯಲಿದೆ. ಸ್ವಾದಿಷ್ಟವಾದ ಊಟ- ತಿಂಡಿ ಸವಿಯುವ ಯೋಗ ಇದೆ. ಸೈಟು- ಮನೆ ಖರೀದಿಗೆ ಮನಸ್ಸು ಮಾಡಲಿದ್ದೀರಿ.

 ಕುಂಭ ರಾಶಿ

ಕುಂಭ ರಾಶಿ

ಯಾವುದೇ ಕೆಲಸವನ್ನು ಸಣ್ಣದು ಅಥವಾ ಅದರಿಂದ ಬರುವ ಆದಾಯ ಕಡಿಮೆ ಎಂದು ನಿರ್ಲಕ್ಷ್ಯ ಮಾಡದಿರಿ. ತುಂಬ ಸಣ್ಣ ಕೆಲಸಗಳ ಮೂಲಕವೇ ನಿಮ್ಮ ಪ್ರಭಾವ ಹೆಚ್ಚಿಸುವಂಥ ದಿನ ಇದು. ಈ ಹಿಂದಿನ ಶ್ರಮವನ್ನು ಗುರುತಿಸಿ, ಮಹತ್ತರವಾದ ಜವಾಬ್ದಾರಿಯನ್ನು ನಿಮಗೆ ವಹಿಸಲಾಗುತ್ತದೆ.

 ಮೀನ ರಾಶಿ

ಮೀನ ರಾಶಿ

ಹೂಡಿಕೆ ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ಸ್ನೇಹಿತರ ಜತೆಗೆ ಗಂಭೀರವಾದ ಚರ್ಚೆ ಮಾಡಲಿದ್ದೀರಿ. ಇತರರು ತಮ್ಮಿಂದ ಸಾಧ್ಯವಿಲ್ಲ ಎಂದು ಕೈ ಬಿಟ್ಟ ಕೆಲಸವನ್ನು ನೀವು ಯಶಸ್ವಿಯಾಗಿ ಮಾಡಿ ಮುಗಿಸಲಿದ್ದೀರಿ. ಆದರೆ ಅದಕ್ಕಾಗಿ ಅಗತ್ಯಕ್ಕಿಂತ ಹೆಚ್ಚಿನ ಪ್ರಯತ್ನವನ್ನು ಹಾಕಬೇಕಾಗುತ್ತದೆ.

ಕಷ್ಟಕಾರ್ಪಣ್ಯದಿಂದ ಮುಕ್ತಿ ಹೊಂದಲು ದಾರಿ ದೀಪ:

ಸದ್ಗುರು ಶ್ರೀ ಸಾಯಿ ಜ್ಯೋತಿಷ್ಯ ಕೇಂದ್ರ

ತುಳುನಾಡಿನ ಕರಾವಳಿಯ ದೈವಶಕ್ತಿ ಜ್ಯೋತಿಷ್ಯರು

ಸ್ತ್ರೀ-ಪುರುಷ ಪ್ರೇಮವಿಚಾರ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ,

ಅತ್ತೆ-ಸೊಸೆ ಕಿರಿಕಿರಿ, ವಶೀಕರಣ, ಸಂತಾನಯೋಗ, ಇತ್ಯಾದಿ ಸಮಸ್ಯೆಗಳಿಗೆ,

ಅಷ್ಟಮಂಗಳ ಪ್ರಶ್ನೆ, ತಾಂಬೂಲ ಪ್ರಶ್ನೆ, ಜಾತಕ ವಿಶ್ಲೇಷಣೆ ಮಾಡಿ ನಿಮ್ಮ

ಇಷ್ಟಾರ್ಥ ಕಾರ್ಯಗಳಿಗೆ 5 ದಿನದಲ್ಲಿ ಪರಿಹಾರ ಶತಸಿದ್ದ.

ಮನೆಯ ವಿಳಾಸ: ನಂ.86, ಸಂಪಿಗೆ ರಸ್ತೆ, ಮಲ್ಲೇಶ್ವರಂ ಮೊ: 9945515555

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X