ಶ್ರಾವಣ ಮಾಸದ ವಾರದ ಪಂಚಾಂಗ : ಆಗಸ್ಟ್ 23ರಿಂದ 29
ಶ್ರಾವಣ ಮಾಸದ ಆಗಸ್ಟ್ 23ರಿಂದ 29ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]
ಆಗಸ್ಟ್ 23, ರವಿವಾರ : ಅನುರಾಧಾ ನಕ್ಷತ್ರ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಆ.24. ಸೋಮವಾರ : ಜ್ಯೇಷ್ಠಾ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಆ.25. ಮಂಗಳವಾರ : ಮೂಲಾ. ಮಂಗಳಗೌರಿ ವೃತ. ದೂರ ಪ್ರಯಾಣದಿಂದ ಶುಭ. [ಶ್ರಾವಣ, ಭಾದ್ರಪದ, ಕಾರ್ತಿಕ : ರಜಾದಿನಗಳ ಪಟ್ಟಿ]
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಆ.26. ಬುಧವಾರ : ಪೂರ್ವಾಷಾಢಾ. ಏಕಾದಶಿ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಆ.27. ಗುರುವಾರ : ಉತ್ತರಾಷಾಢಾ. ಆಫೀಸಿನಲ್ಲಿ ಮುಖ್ಯವಾದ ಕೆಲಸಕ್ಕೆ ಮುಖ್ಯಸ್ಥರನ್ನು ಭೇಟಿಯಾಗಲು ಸೂಕ್ತ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಆ.28. ಶುಕ್ರವಾರ : ಶ್ರವಣಾ. ಶುಕ್ರಗೌರಿ, ವರಮಹಾಲಕ್ಷ್ಮೀ ವೃತ. ಕಚೇರಿಯಲ್ಲಿ ಮುಖ್ಯವಾದ ವಿಷಯಗಳನ್ನು ಮಾತನಾಡಲು ಮತ್ತು ಬಟ್ಟೆ ಖರೀದಿಗೆ ಸೂಕ್ತ ದಿನ. ದೂರ ಪ್ರಯಾಣದಿಂದ ಹಾನಿ. [ಶ್ರೀ ವರಮಹಾಲಕ್ಷ್ಮಿ ಪೂಜಾವಿಧಾನ]
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಆಗಸ್ಟ್ 29, ಶನಿವಾರ : ಧನಿಷ್ಠಾ. ನೂಲ ಹುಣ್ಣಿಮೆ, ರಾಖಿ ಹಬ್ಬ. ರಾಷ್ಟ್ರ ಕ್ರೀಡೆಯ ದಿನ. ದೂರ ಪ್ರಯಾಣದಿಂದ ಯಶಸ್ಸು.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಯಾವುದೂ ಇಲ್ಲ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.
ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಉತ್ತಮ.
ಈ ವಾರದ ಗ್ರಹಗತಿ : ಕರ್ಕ: ಶುಕ್ರ+ಮಂಗಳ. ಸಿಂಹ: ಸೂರ್ಯ+ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು+ಬುಧ ವೃಶ್ಚಿಕ: ನೀಚಶನಿ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮೀನ: ಕೇತು.