• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?

By ನಾಗನೂರಮಠ ಎಸ್.ಎಸ್.
|

ನಮ್ಮ ಹಿಂದೂ ಧರ್ಮದಲ್ಲಿ ಮುಖ್ಯವಾದ ಕೆಲಸ-ಕಾರ್ಯಗಳಿಗೆ ಮತ್ತು ಹಬ್ಬಗಳಾಚರಣೆಗೆ ಮುಹೂರ್ತ ನೋಡುವ ಸಂಪ್ರದಾಯ ಹಿಂದಿನಿಂದ ನಡೆದುಕೊಂಡ ಪದ್ಧತಿ. ನಮ್ಮವರು ಇಂದಿಗೂ ಹಬ್ಬ, ಮದುವೆ, ಗೃಹಪ್ರವೇಶ, ಮುಂಜಿವೆ ಮುಂತಾದ ಶುಭಕಾರ್ಯಗಳಿಗೆ ಮುಹೂರ್ತ ನೋಡುತ್ತಾರೆ. ಅಷ್ಟೇ ಏಕೆ, ರಾಜಕಾರಣಿಗಳು ಒಂದು ಹೆಜ್ಜೆ ಇಡಬೇಕೆಂದರೂ ಮುಹೂರ್ತ ನೋಡುತ್ತಾರೆ!

ಯಾವ ದೇವರು? ಯಾವ ಶನಿ? ಯಾವ ನಕ್ಷತ್ರ? ಎನ್ನುವ ನಾಸ್ತಿಕರೂ ಸಹ ಮನೆಯ ಹಿರಿಯರ ಮಾತು ಕೇಳಿಕೊಂಡು ತೆಪ್ಪಗೆ ಉತ್ತಮ ಮುಹೂರ್ತದಲ್ಲೇ ಮದುವೆ ಮತ್ತು ಗೃಹಪ್ರವೇಶ ಮಾಡಿಕೊಳ್ಳುತ್ತಾರೆ. ಆದರೆ ಹೊರಗೆ ತಮ್ಮಷ್ಟಕ್ಕೆ ತಾವೇ "ಹಿಂದೂ ಧರ್ಮಾಚರಣೆ ವಿರೋಧಿ"ಗಳು ಎಂದು ಬಿಂಬಿಸಿಕೊಳ್ಳುವ ಮೂಢರು ನಮ್ಮ ಪದ್ಧತಿಗಳನ್ನು ಮೂಢನಂಬಿಕೆ ಎಂದು ಬೊಬ್ಬೆ ಹಾಕುತ್ತಿರುತ್ತಾರೆ.

ಇಂಥಹವರು ಮೊದಲೇ ಬರೆದಿಡಬೇಕು "ನಾನು ಸತ್ತಾಗ ಯಾವುದೇ ಪೂಜೆ ಮಾಡುವ ಹಾಗಿಲ್ಲ ಮತ್ತು ಯಾವುದೇ ತಿಥಿ ಕೂಡ ಮಾಡುವ ಹಾಗಿಲ್ಲ" ಎಂದು. ಏಕೆಂದರೆ ವ್ಯಕ್ತಿ ಸತ್ತಾಗ ಸಮಯ ಮತ್ತು ನಕ್ಷತ್ರ ನೋಡಿಕೊಂಡೇ ತಿಥಿ ಮಾಡುವ ಪದ್ಧತಿ ನಮ್ಮಲ್ಲಿದೆ ಎಂಬುದು ಗೊತ್ತಿರದ ಪೆದ್ದರಿವರು.

ಇರಲಿ, " "--" ತಡವಿ ಲಕ್ಷಣ ಕಳಕೊಂಡ್ರಂತೆ" ಎಂದೆನ್ನಿಸಿಕೊಳ್ಳುವ ಬದಲು ವಿಷಯಕ್ಕೆ ಬರೋಣ. ನಾವು ರಾಹುಕಾಲ, ಗುಳಿಕಕಾಲ ಮತ್ತು ಯಮಗಂಡಕಾಲ ಎನ್ನುವುದನ್ನು ಕೇಳಿದ್ದೇವೆ. ಆದರೆ ಆ ಕಾಲಗಳ ಮಹತ್ವ ಇಂದಿಗೂ ಎಷ್ಟೋ ಜನರಿಗೆ ಗೊತ್ತಿಲ್ಲ. ಗೊತ್ತಿದ್ದವರು ಹೇಳುವುದಿಲ್ಲ. ಹೇಳಿದರೆ ಎಲ್ಲಿ ನಮ್ಮನ್ನು ಅಪಹಾಸ್ಯ ಮಾಡುತ್ತಾರೋ ಎಂಬ ಭಯ ಅವರಿಗಿರಬಹುದು!

ಕಾಲಗಳ ಮಹತ್ವ ಗೊತ್ತಿದ್ದವರು ಜೀವನದಲ್ಲಿ ಯಶಸ್ಸಿನ ಮೆಟ್ಟಿಲು ಏರುತ್ತಲೇ ಹೋಗುತ್ತಿರುತ್ತಾರೆ. ಇವರ ಯಶಸ್ಸನ್ನು ನೋಡಿ ಕೆಲವರು "ಇವನಿಗೇನೂ ಬರೋದೇ ಇಲ್ಲ! ಆದರೂ ಇವನೆಂಗೆ ಇಷ್ಟೆತ್ತರಕ್ಕೇರಿದ" ಎಂದು ಹುಬ್ಬೇರಿಸಿಕೊಂಡು ಹೊಟ್ಟೆಕಿಚ್ಚು ಪಡುತ್ತ ಚಡಪಡಿಸುತ್ತಿರುತ್ತಾರೆ.

ಆದರೆ, ಸಮಯ ನೋಡಿಕೊಂಡು ಆರಂಭಿಸಿದ ಕೆಲಸ ಕಾರ್ಯಗಳು ಯಶಸ್ಸಾಗುತ್ತವೆ ಎಂಬ ಗುಟ್ಟು ಬಹಳಷ್ಟು ಜನರಿಗೆ ಗೊತ್ತಿಲ್ಲ. ಗೊತ್ತಿದ್ದು ಗೊತ್ತಿದ್ದು ಅವರು ನಿಷ್ಕಾಳಜಿ ಮಾಡುತ್ತಿರಬಹುದು ಎನ್ನಬಹುದು ಅಷ್ಟೇ. [ಯಾರಿಗೆ ಕಾಡಲಿದ್ದಾನೆ ಶನಿದೇವ?]

ರಾಹು ಕಾಲ

ಸಾಮಾನ್ಯವಾಗಿ ರಾಹುಕಾಲವು ವಾರದ ಒಂದೊಂದು ದಿನ ಒಂದೇ ಸಮಯದಲ್ಲಿರುತ್ತದೆ. ಪ್ರತಿ ರವಿವಾರ ಸಂಜೆ 4-30 ರಿಂದ 6ರವರೆಗೆ ರಾಹುಕಾಲವಿರುತ್ತದೆ. ಇದು ಬದಲಾಗುವುದಿಲ್ಲ. ಯಾವುದೇ ರವಿವಾರವಿರಲಿ ರಾಹುಕಾಲ ಮಾತ್ರ ಈ ಸಮಯದಲ್ಲಿಯೇ ಇರುತ್ತದೆ. ಈ ತರಹ ವಾರದ ಉಳಿದ ದಿನಗಳ ರಾಹುಕಾಲ ಬದಲಾಗುತ್ತಿರುತ್ತದೆ. ಇದನ್ನು ಬೇಕಿದ್ದವರು ಹಿಂದೂ ಕ್ಯಾಲೆಂಡರ್ ನೋಡಿಕೊಳ್ಳಬಹುದು.

ರಾಹುಕಾಲಕ್ಕೆ "ವಿಷಘಳಿಗೆ" ಎಂದು ಕೂಡ ಕರೆಯುತ್ತಾರೆ. ಈ ಸಮಯದಲ್ಲಿ ಮುಖ್ಯವಾದ ಕೆಲಸಗಳಿಗೆ ಹೊರಡದಿರುವುದು ಸೂಕ್ತ. ಏಕೆಂದರೆ ಯಾವ ಉದ್ದೇಶ ಇಟ್ಟುಕೊಂಡು ನಾವು ಈ ವೇಳೆಯಲ್ಲಿ ಹೊರಟಿರುತ್ತೇವೆಯೋ ಅದು ಯಶಸ್ಸಾಗುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೇ ಬಂದಿದೆ. ರಾಹುಕಾಲದಲ್ಲೇನಾದರೂ ಹೋದಿರೆನ್ನಿ, ಆಗಬೇಕಾದ ಕೆಲಸ ಲೇಟಾಗುತ್ತದೆ ಅಥವಾ ಏನಾದರೂ ಅಡೆತಡೆ ಬರುತ್ತದೆ ಇಲ್ಲವೇ ಆಗೋದೇ ಇಲ್ಲ. ಈ ಸಮಯದಲ್ಲಿ ಹಣದ ವ್ಯವಹಾರ ಮಾಡುವುದು ಕೂಡ ಸೂಕ್ತವಲ್ಲ. ಉದಾಹರಣೆಗೆ ಖರೀದಿ, ಸಾಲ ಕೊಡುವುದು-ಪಡೆಯುವುದು, ಮತ್ತಿತರೆ. ಇನ್ನು ಕೆಲವೊಂದು ಮಹತ್ವದ ಮಾತುಕತೆಗಳನ್ನು ಕೂಡ ರಾಹುಕಾಲದಲ್ಲಿ ಮಾಡದಿರುವುದು ಸೂಕ್ತ. ಏಕೆಂದರೆ ಮಾತುಕತೆಯಲ್ಲಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದಿಲ್ಲ.

ಪ್ರತಿನಿತ್ಯ ಕೇವಲ ಒಂದೂವರೆ ಗಂಟೆಗಳಷ್ಟಿರುವ ರಾಹುಕಾಲವು, ರಾಹುದೋಷ ನಿವಾರಣಾ ಪೂಜೆಗೆ ಮತ್ತು ಮಾತೆ ದುರ್ಗಾದೇವಿಯ ಆರಾಧನೆಗೆ ತುಂಬಾ ಸೂಕ್ತ ಎಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ.

ಆದರೆ, ರಾಹುಕಾಲ ನಮಗೆ ಲಾಭವನ್ನೂ ತರುತ್ತದೆ. ಹೇಗೆಂದರೆ ನಮಗೇನಾದರೂ ಕೆಲಸ ಆಗದಿರುವ ಹಾಗೆ ಮಾಡಬೇಕೆಂದರೆ, ತೊಂದರೆಗಳಿಂದ ನಮಗೆ ಖುಷಿಯಾಗಬೇಕೆಂದರೆ ರಾಹುಕಾಲವನ್ನು ಆಯ್ಕೆ ಮಾಡಿಕೊಳ್ಳಬೇಕು! ಬೇಕಿದ್ದವರು ಪರೀಕ್ಷಿಸಿಕೊಳ್ಳಬಹುದು. ಅಲ್ಲಾ ಸಾಮೀ, "ಕತ್ತೆ ದುಡಿದಂಗೆ ದುಡೀತೀವಿ, ಹೆಬ್ಬಾವ್ ಮಲಗಿದಂಗೆ ಮಲಗ್ತೀವಿ" ಅಷ್ಟೇ ಗೊತ್ತು ನಮ್ಗೆ ಎನ್ನುವವರಿಗೆ ""--" ಗೇನೂ ಗೊತ್ತು ಕಸ್ತೂರಿ ಪರಿಮಳ" ಎಂದುಕೊಂಡು ಮುಗುಳ್ನಗೆ ಬೀರುತ್ತಾರೆ ಸಾಮೇರು.

ಗುಳಿಕ ಕಾಲ

ಗುಳಿಕ ಕಾಲವೂ ಕೂಡ ಪ್ರತಿನಿತ್ಯ ವಾರದಲ್ಲೊಂದೊಂದು ದಿನ ಒಂದೂವರೆ ಗಂಟೆಗಳಷ್ಟಿರುತ್ತದೆ. ರವಿವಾರ ಮಧ್ಯಾಹ್ನ 3 ರಿಂದ 4-30ರವರೆಗೆ ಗುಳಿಕ ಕಾಲ. ಆದರೆ, ಉಳಿದ ದಿನ ಬೇರೆ ಬೇರೆ ಸಮಯದಲ್ಲಿರುತ್ತದೆ ಎಂಬುದು ಗಮನದಲ್ಲಿರಿಸಿಕೊಂಡಿರಬೇಕು. ಈ ಗುಳಿಕ ಕಾಲದ ವಿಶೇಷವೇನೆಂದರೆ ಈ ಸಮಯದಲ್ಲಿ ಮಾಡಿದ ಕೆಲಸ ಕಾರ್ಯಗಳು ಪುನಃ ಮರುಕಳಿಸುತ್ತವೆ ಎಂಬ ನಂಬಿಕೆ ಹಿಂದಿನಿಂದ ಬಂದಿದೆ.

ಈ ಸಮಯದಲ್ಲಿಯೇ ಸಾಮಾನ್ಯವಾಗಿ ಗೃಹಪ್ರವೇಶ, ಹೊಸ ವಾಹನ ಮತ್ತು ಬಂಗಾರ ಖರೀದಿ ಮಾಡುತ್ತಾರೆ. ಏಕೆಂದರೆ ಇದರಿಂದ ಮತ್ತೆ ಹೊಸ ಮನೆ ಗೃಹಪ್ರವೇಶ ಮತ್ತು ವಾಹನ, ಬಂಗಾರ ಖರೀದಿ ಯೋಗ ಬರುತ್ತದೆ ಎಂಬ ನಂಬಿಕೆ.

ಆದರೆ, ಗುಳಿಕ ಕಾಲದಲ್ಲಿ ಮೃತ ವ್ಯಕ್ತಿಯ ಶರೀರವನ್ನು ಮನೆಯಿಂದ ಮಸಣಕ್ಕೆ ತೆಗೆದುಕೊಂಡು ಹೋಗುವ ಹಾಗಿಲ್ಲ. ಹಾಗೂ ಅಂತ್ಯಕ್ರಿಯೆ ನಡೆಸುವ ಹಾಗಿಲ್ಲ. ಇದಕ್ಕರ್ಥ ನಿಮಗೆ ಗೊತ್ತಾಗಿರಬಹುದು. ಗೊತ್ತಾಗದವರಿಗೆ ಗುಳಿಕ ಕಾಲದಲ್ಲಿ ಮಾಡಿದ ಕೆಲಸ-ಕಾರ್ಯಗಳು ಮರುಕಳಿಸುತ್ತವೆ ಎಂಬುದನ್ನು ನೆನಪಿಸಬೇಕಾಗುತ್ತದೆ.

ಗುಳಿಕ ಕಾಲದ ಇನ್ನೊಂದು ಮಜವಾದ ವಿಷಯವೆಂದರೆ, ಮದುವೆಯ ಮುಹೂರ್ತವನ್ನು ಈ ಸಮಯದಲ್ಲಿ ಮಾಡುವುದಿಲ್ಲ. ಏಕೆಂದರೆ, ಮದುವೆ ಎಂಬುದು ಜೀವನದಲ್ಲಿ ಒಂದೇ ಬಾರಿ ಬರುವುದು. ಗುಳಿಕ ಕಾಲದಲ್ಲಿ ಮಾಡಿದರೆ? ಅರ್ಥವಾಗಿರಬಹುದು ಆಸ್ತಿಕರಿಗೆ!

ಯಮಗಂಡ ಕಾಲ

ಯಮಗಂಡ ಕಾಲವೂ ಪ್ರತಿನಿತ್ಯ ಒಂದೂವರೆ ಗಂಟೆಗಳಷ್ಟಿರುತ್ತದೆ. ರವಿವಾರ ಮಧ್ಯಾಹ್ನ 12 ರಿಂದ 1-30 ರವರೆಗೆ. ಉಳಿದ ದಿನಗಳು ಬೇರೆ ಬೇರೆ ಸಮಯದಲ್ಲಿರುತ್ತದೆ. ಇದು ಯಾವುದೇ ಕೆಲಸಗಳನ್ನು ಅಂತ್ಯಗೊಳಿಸಬೇಕೆಂದರೆ ಉತ್ತಮ ಸಮಯ. ಈ ಸಮಯಕ್ಕೆ "ಸಾವಿನ ಸಮಯ" ಎಂದೂ ಕೂಡ ಕರೆಯುತ್ತಾರೆ. ಈ ಸಮಯದಲ್ಲಿ ಮೃತ ಶರೀರದ ಅಂತ್ಯಕ್ರಿಯೆ, ತಿಥಿಯಾಚರಣೆ, ಶೋಕಾಚರಣೆ ಮಾಡಲಾಗುತ್ತದೆ. ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡುವ ಹಾಗಿಲ್ಲ. ಮಾಡಿದಿರೆನ್ನಿ. ಆ ಕೆಲಸಕ್ಕೆ "ಎಳ್ಳು ನೀರು ಬಿಟ್ಟಂಗೆ!"

ಈ ಸಮಯದಲ್ಲಿ ಯಾವುದೇ ಮಾತುಕತೆ, ಹಣದ ವ್ಯವಹಾರ, ಖರೀದಿ ಮಾಡುವ ಹಾಗಿಲ್ಲ. ಮಾಡಲು ಹೋದರೆ ಅದು ಯಶಸ್ಸೂ ಆಗಲ್ಲ, ಅಲ್ಲದೇ ಅದೇ ಕೊನೆಯೂ ಕೂಡ ಆಗುತ್ತದೆ. ಮುಂದೆ ಆ ಯೋಗವೂ ಬರುವುದಿಲ್ಲ ಎಂಬುದನ್ನು ಮನದಲ್ಲಿಟ್ಟುಕೊಳ್ಳಬೇಕು.

ಅಲ್ಲದೇ ಉಲ್ಲಾಸ, ಉತ್ಸಾಹ ಕಳೆದುಕೊಂಡು ಬೇಸರಪಟ್ಟುಕೊಳ್ಳಬೇಕಾಗುತ್ತದೆ. ಆದ್ದರಿಂದ ಯಮಗಂಡ ಕಾಲದಲ್ಲಿ ಮುಖ್ಯವಾದ ಕೆಲಸಕ್ಕೆ ಹೋಗುವುದನ್ನು ಮತ್ತು ಮಾತುಕತೆಗಳನ್ನು ತಪ್ಪಿಸಬೇಕು. ಯಾವುದೇ ವಿಷಯವನ್ನಾಗಲಿ ಅದಕ್ಕೊಂದು ಅಂತ್ಯ ಹಾಡಬೇಕೆಂದರೆ ಯಮಗಂಡ ಕಾಲ ಸೂಕ್ತ!

ಈ ಕಾಲವನ್ನೆಲ್ಲಾ ನೋಡುತ್ತಾ ಹೋದರೆ ಜಗತ್ತೇ ಕೆಲವೊಮ್ಮೆ ಸ್ತಬ್ದವಾಗುತ್ತದೆ ಎನ್ನುವವರಿಗೆ, "ವಿನಾಶಕಾಲೇ ವಿಪರೀತ ಬುದ್ಧಿ" ಎಂದು "ತುಂಬಿ ಬಂದವರಿಗೆ" ಏನ್ ಹೇಳಬೇಕು? ಕೆಲ ದುರಂತ ಮತ್ತು ಅಪಘಾತ ಆಗಿರುವ ಸಮಯ ಮತ್ತು ಅವರು ಮನೆ ಬಿಟ್ಟ ಸಮಯವನ್ನು ಪರಿಶೀಲಿಸಿದರೆ ಗೊತ್ತಾಗುತ್ತದೆ ಎನ್ನುತ್ತಾರೆ ಸಾಮೇರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Significance of Rahu Kala, Gulika Kala and Yamaganda Kala in Hinduism? Astrologer SS Naganurthmath explains the importance of these and impact of human life and why these should be followed for our benefit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more