ವೈಶಾಖ-ಜ್ಯೇಷ್ಠ ಮಾಸದ ಪಂಚಾಂಗ: ಮೇ 17ರಿಂದ 23
ವೈಶಾಖ-ಜ್ಯೇಷ್ಠ ಮಾಸದ ಮೇ 17ರಿಂದ 23ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಮೇ.17. ರವಿವಾರ : ಭರಣಿ ನಕ್ಷತ್ರ. ದೂರ ಪ್ರಯಾಣದಿಂದ ಅಪಾಯ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಮೇ.18. ಸೋಮವಾರ : ಕೃತ್ತಿಕಾ. ಶನೈಶ್ಚರ ಜಯಂತಿ. ಬಾದಮಿ ಅಮವಾಸ್ಯೆ. (ರವಿವಾರ ಮಧ್ಯಾಹ್ನ 12 ಕ್ಕೆ ಅಮವಾಸ್ಯೆ ಆರಂಭ.ಸೋಮವಾರ ಬೆಳಗಿನ 9-43 ಕ್ಕೆ ಅಮವಾಸ್ಯೆ ಮುಕ್ತಾಯ). ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಮೇ.19. ಮಂಗಳವಾರ : ರೋಹಿಣಿ. ಜ್ಯೇಷ್ಠ ಮಾಸ ಆರಂಭ. ಆಫೀಸಿನಲ್ಲಿ ಮುಖ್ಯವಾದ ವಿಷಯ ಮಾತನಾಡಲು ಅತ್ಯುತ್ತಮ. ದೂರ ಪ್ರಯಾಣದಿಂದ ಕೆಲಸದಲ್ಲಿ ಯಶಸ್ಸು.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಮೇ.20. ಬುಧವಾರ : ಮೃಗಶಿರಾ. ನೂತನ ವ್ಯವಹಾರ ಮತ್ತು ಬಿಜಿನೆಸ್ ಆರಂಭಿಸಿದರೆ ಶುಭ. ದೂರ ಪ್ರಯಾಣದಿಂದ ಶುಭಕರ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಮೇ.21. ಗುರುವಾರ : ಆರಿದ್ರಾ. ದೂರ ಪ್ರಯಾಣದಿಂದ ನಷ್ಟ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಮೇ.22. ಶುಕ್ರವಾರ : ಪುನರ್ವಸು. ಬಟ್ಟೆ ಖರೀದಿಗೆ ಮತ್ತು ಹೊಸ ಉಪಕರಣಗಳ ಬಳಕೆಗೆ ಸೂಕ್ತವಾದ ದಿನ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಮೇ.23. ಶನಿವಾರ : ಪುಷ್ಯ. ಹೊಲ-ಮನೆ ಕೆಲಸಗಳಿಗೆ ಉತ್ತಮ. ದೂರ ಪ್ರಯಾಣದಿಂದ ನೆಮ್ಮದಿ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ಬುಧವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.
ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಉತ್ತಮ.
ಈ ವಾರದ ಗ್ರಹಗತಿ : ವೃಷಭ: ರವಿ+ಬುಧ+ಮಂಗಳ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮಿಥುನ: ಶುಕ್ರ. ಕರ್ಕ: ಗುರು ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮೀನ: ಕೇತು.












Click it and Unblock the Notifications