ವೈಶಾಖ ಮಾಸದ ವಾರದ ಪಂಚಾಂಗ : ಮೇ 3ರಿಂದ 9
ವೈಶಾಖ ಮಾಸದ ಮೇ 3ರಿಂದ 9ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

ಮೇ.03. ರವಿವಾರ : ಚಿತ್ತಾ ನಕ್ಷತ್ರ. ಹೊಸ ವಸ್ತು ಮತ್ತು ಬಟ್ಟೆ ಬರೆ ಕೊಳ್ಳಲು ಶುಭದಿನ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಮೇ.04. ಸೋಮವಾರ : ಸ್ವಾತಿ. ಆಗಿ ಹುಣ್ಣಿಮೆ. ಬುದ್ಧ ಪೂರ್ಣಿಮೆ. ದೂರ ಪ್ರಯಾಣದಿಂದ ಗೌರವ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಮೇ.05. ಮಂಗಳವಾರ : ವಿಶಾಖಾ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಮೇ.06. ಬುಧವಾರ : ಅನುರಾಧಾ. ಅಮೃತಸಿದ್ಧಿ ಯೋಗ. ದೂರ ಪ್ರಯಾಣದಿಂದ ಲಾಭ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಮೇ.07. ಗುರುವಾರ : ಜ್ಯೇಷ್ಠಾ. ಸಂಕಷ್ಟಿ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಮೇ.08. ಶುಕ್ರವಾರ : ಮೂಲಾ. ಆಯುರ್ವೇದಿಕ ಮತ್ತು ಇತರೆ ಔಷಧಿ ಸಿದ್ಧಪಡಿಸಿಕೊಳ್ಳಲು ಶುಭದಿನ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಮೇ.09. ಶನಿವಾರ : ಪೂರ್ವಾಷಾಢಾ. ಎರಡನೇ ಶನಿವಾರ. ದೂರ ಪ್ರಯಾಣದಿಂದ ಏಳ್ಗೆ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರ, ಶನಿವಾರ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.
ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಉತ್ತಮ.
ಈ ವಾರದ ಗ್ರಹಗತಿ : ಮೇಷ: ರವಿ. ವೃಷಭ: ಬುಧ+ಮಂಗಳ. ಮಿಥುನ: ಶುಕ್ರ. ಕರ್ಕ: ಗುರು ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ+ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮೀನ: ಕೇತು.












Click it and Unblock the Notifications