ಭವಿಷ್ಯ: ಜಾತಕ ಎಷ್ಟೇ ತಿರುವಿ ಹಾಕಿದರೂ ಇವರೇ ಮುಂದಿನ ಸಿಎಂ
ಕರ್ನಾಟಕ ವಿಧಾನಸಭೆಗೆ ಚುನಾವಣೆಗೆ ಮುಗಿದಿದೆ, ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಒಂದೋ ಸಮ್ಮಿಶ್ರ ಸರಕಾರ ಅಥವಾ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಸ್ವಾಭಾವಿಕವಾಗಿ ಇದನ್ನೆಲ್ಲಾ ನಾವು ನಂಬುವುದಿಲ್ಲ, ನಮ್ಮದೇ ಸರಕಾರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾರಿಗೆ ಮುಂದಿನ ಗದ್ದುಗೆ, ಯಾರು ಮುಖ್ಯಮಂತ್ರಿಯಾಗುತ್ತಾರೆ ಎನ್ನುವುದರ ಬಗ್ಗೆ ಹಲವರು ಜಾತಕಫಲದ ಮೂಲಕ ಹೇಳಿದ್ದಾರೆ. ಉತ್ತರ ಭಾರತ ಮೂಲದ ಖ್ಯಾತ ಜ್ಯೋತಿಷಿ ಕೆ.ಎಂ.ಸಿನ್ಹಾ ಅವರು ಕರ್ನಾಟಕ ಚುನಾವಣೆಯ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಹಿಂದೆ ಏನು ಹೇಳಿದ್ದರೋ ಅದನ್ನೇ ಪುನರಾವರ್ತಿಸಿದ್ದಾರೆ.

ಕರ್ನಾಟಕ ಚುನಾವಣೆಯ ಬಗ್ಗೆ ಭವಿಷ್ಯ ನುಡಿದಿರುವ ಜ್ಯೋತಿಷಿ ಕೆಎಂ ಸಿನ್ಹಾ ತಾನು ಎರಡು ರೀತಿಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷ ಆಡಳಿತವನ್ನು ಪಡೆಯಲಿದೆ ಎಂಬುವುದನ್ನು ಪರಿಶೀಲಿಸಿ ತಾನು ಈ ಭವಿಷ್ಯವನ್ನು ನುಡಿದಿರುವುದಾಗಿ ತಿಳಿಸಿದ್ದಾರೆ. ತಾನು ಸಂಖ್ಯಾಶಾಸ್ತ್ರದ ಪ್ರಕಾರವಾಗಿಯೂ ಕರ್ನಾಟಕದ ಮುಂದಿನ ಸಿಎಂ ಗದ್ದುಗೆಯನ್ನು ಯಾವ ಪಕ್ಷವನ್ನು ಪಡೆಯಲಿದೆ ಎಂದು ಅಂದಾಜು ಮಾಡಿದ್ದೇನೆ ಎಂದಿದ್ದಾರೆ.
ಯಾವ ಪಕ್ಷ ಅಧಿಕಾರ ಸ್ವೀಕಾರ ಮಾಡಲಿದೆ?
ಕುಂಡಲಿಯ ಆಧಾರದಲ್ಲಿ ನಾವು ನೋಡುವಾಗ ಎಲ್ಲ ಪಕ್ಷಗಳ ಕುಂಡಲಿಯನ್ನು ಅಧ್ಯಯನ ಮಾಡಬೇಕಾಗುತ್ತದೆ. ಮೇ 13ರಂದು ಗ್ರಹಗಳ ಸಂಚಾರದ ಆಧಾರದಲ್ಲಿ ತಾನು ಈ ಭವಿಷ್ಯವನ್ನು ಹೇಳುತ್ತಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ. ಜ್ಯೋತಿಷಿ ಕೆಎಂ ಸಿನ್ಹಾ ಪ್ರಕಾರ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರವನ್ನು ಸ್ವೀಕಾರ ಮಾಡಲಿದೆ.
ಜ್ಯೋತಿಷಿ ಕೆಎಂ ಸಿನ್ಹಾ ಪ್ರಕಾರ ಮುಂದಿನ ಸಿಎಂ ಯಾರು?
ಹಾಗೆಯೇ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಪ್ರಬಲ ಪಕ್ಷವಾಗಲಿದೆ. ಅಧಿಕಾರವನ್ನು ಸ್ವೀಕಾರ ಮಾಡಲಿದೆ. ಈ ಪಕ್ಷಕ್ಕೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ಹೇಳಿರುವ ಜ್ಯೋತಿಷಿ ಕೆಎಂ ಸಿನ್ಹಾ ಸಿದ್ಧರಾಮಯ್ಯರೇ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಮೇ 17-18ರಂದು ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
"ನಾನು ಬಿಜೆಪಿ ಬೆಂಬಲಿತ ವ್ಯಕ್ತಿ ಎಂದು ಹಲವಾರು ಬಾರಿ ಹೇಳುತ್ತಾರೆ. ಹಾಗೆಯೇ ಬಿಜೆಪಿಯಿಂದ ನನಗೆ ಹಣ ಸಿಗುತ್ತೆ, ಅದಕ್ಕೆ ಬಿಜೆಪಿ ಪರವಾಗಿ ಭವಿಷ್ಯವನ್ನು ಹೇಳುತ್ತೇನೆ ಎಂದು ಕೂಡಾ ಹಲವಾರು ಮಂದಿ ಕಾಮೆಂಟ್ ಮಾಡುತ್ತಾರೆ. ಆದರೆ ಸತ್ಯವನ್ನು ಎಂದಿಗೂ ಕೂಡಾ ಅಲ್ಲಗಳೆಯಲಾಗದು. ನಿಜವಾದ ಜ್ಯೋತಿಷಿ ಎಂದಿಗೂ ಕೂಡಾ ಸತ್ಯ ವಿಷಯವನ್ನು ಸ್ಪಷ್ಟವಾಗಿ ಹೇಳುತ್ತಾರೆ. ಆದ್ದರಿಂದಾಗಿ ನಾನು ಕರ್ನಾಟಕದಲ್ಲಿ ಕಾಂಗ್ರೆಸ್ ಬರುತ್ತದೆ ಎಂದು ಹೇಳುತ್ತೇನೆ," ಎಂದಿದ್ದಾರೆ.
ಕಾಂಗ್ರೆಸ್ ಕರ್ನಾಟಕದಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುವುದಾಗಿ ಹೇಳಿದ ಬಳಿಕ ಮತ್ತು ಸೀಟುಗಳ ಬದಲಾವಣೆಯ ಕಾರಣದಿಂದಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲ್ಲುವ ಕ್ಷೇತ್ರಗಳ ಲೆಕ್ಕಾಚಾರದಲ್ಲಿ ಕೊಂಚ ಏರಿಳಿತ ಕಾಣಬಹುದು ಎಂದು ನಾನು ಹೇಳಿದ್ದೆ. ಆದರೂ ಕೂಡಾ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಆಗುವ ಸಾಧ್ಯತೆ ಕಾಣುತ್ತಿಲ್ಲ. ಆದರೆ ಸಿದ್ಧರಾಮಯ್ಯರೇ ಸಿಎಂ ಆಗುತ್ತಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications