ಬಿಜೆಪಿ ಮಣಿಸಲು ದ್ವೇಷ ಮರೆತ ಲಕ್ಷ್ಮಿ ಹೆಬ್ಬಾಳ್ಕರ್-ಸತೀಶ್ ಜಾರಕಿಹೊಳಿ
Recommended Video

ಬೆಳಗಾವಿ, ಮಾರ್ಚ್ 27: ಹಾವು-ಮುಂಗುಸಿಯಂತೆ ವೈರತ್ವ ಸಾಧಿಸುತ್ತಿದ್ದ ಬೆಳಗಾವಿ ಕಾಂಗ್ರೆಸ್ ಮುಖಂಡರಾದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ ಅವರು ಇಂದು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಆಶ್ಚರ್ಯ ಹುಟ್ಟಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಲೋಕಸಭೆ ಚುನಾವಣೆ ಸಂಬಂಧ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ವೇದಿಕೆ ಹಂಚಿಕೊಂಡರು ಈ ಇಬ್ಬರು ಮುಖಂಡರು. ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಅಂಗಡಿ ಅವರಿಗೆ ಸೋಲುಣಿಸಲು ಈ ಇಬ್ಬರೂ ನಾಯಕರು ಒಟ್ಟಾಗಿದ್ದಾರೆ.
ಸುರೇಶ್ ಅಂಗಡಿ ಅವರು ಈಗಾಗಲೇ ಮೂರು ಬಾರಿ ಗೆಲುವು ಸಾಧಿಸಿದ್ದು, ನಾಲ್ಕನೇ ಬಾರಿ ಗೆಲ್ಲುವ ಯೋಚನೆಯಲ್ಲಿದ್ದಾರೆ. ಆದರೆ ಇವರ ಗೆಲುವು ತಡೆಯಲು ಜಿಲ್ಲೆಯ ಕಾಂಗ್ರೆಸ್ ಮುಖಂಡರು ತಮ್ಮ ಹಳೆಯ ವೈಷಮ್ಯಗಳನ್ನು ಮರೆತು ಒಂದಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ, ಅವರು ಪಕ್ಷದಲ್ಲೇ ಇದ್ದಾರೆ, ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಕಳೆದ ವರ್ಷಾಂತ್ಯದಲ್ಲಿ ಪಿಎಲ್‌ಡಿ ಬ್ಯಾಂಕ್ ವಿಷಯದಲ್ಲಿ ಜಗಳವಾದ ನಂತರ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಬಿರುಕು ಜಗಜ್ಜಾಹೀರಾಗಿತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸತೀಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಯನ್ನೂ ಮಾಡಿದ್ದರು.












Click it and Unblock the Notifications