ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

"ಬೆಂಗಳೂರು ಹಬ್ಬ" ಅಂತ ಹೆಸ್ರಿಡಕ್ಕೆ ಇವ್ರಿಗೆ ಯಾರ್ ಬಿಟ್ರು?

By Staff
|
Google Oneindia Kannada News


ಬೆಂಗಳೂರಿನಲ್ಲಿ ಡಿಸೆಂಬರ್ 2ರಿಂದ ಹತ್ತು ದಿನಗಳ "ಬೆಂಗಳೂರು ಹಬ್ಬ" ಶುರು ಆಗಿದೆ. ಈ ಬಾರಿಯ ಹಬ್ಬದಲ್ಲಿ ಕನ್ನಡ-ಇಂಗ್ಲೀಷು ಎರಡರಲ್ಲೂ ಹಬ್ಬದ ಹೆಸರಿನಲ್ಲಿ ಬೆಂಗಳೂರು ಅಂತ್ಲೇ ಹೆಸರು ಉಪ್ಯೋಗ್ಸಿರೋದು ಖುಶಿ ಏನೋ ತಂದಿದೆ, ಆದ್ರೆ ಈ ಹಬ್ಬದಲ್ಲಿ ಬರೀ ಕನ್ನಡೇತರರ ಕಲಾವಿದರ ದರ್ಬಾರು ನೋಡಿದರೆ ಉರಿಯತ್ತೆ ಗುರು! ಈ ವಿಷಯದ ಬಗ್ಗೆ ಹೆಸರಾಂತ ಕೊಳಲುವಾದಕ ಪ್ರವೀಣ್ ಗೋಡ್ಖಿಂಡಿ ಅವರ ಅನುಭವದ ಪ್ರಕಾರ :

ಬಾಂಬೆ ಹಬ್ಬದ ಕಲಾವಿದರ ಪಟ್ಟಿ ಒಮ್ಮೆ ತೆಗೆದು ನೋಡಿ. ನಿಮಗೆ ಮಹಾರಾಷ್ಟ್ರದ ಹೊರಗಿನವರ ಒಬ್ಬರ ಹೆಸರೂ ಸಿಗೋದಿಲ್ಲ! ಸ್ಥಳೀಯ ಕಲಾವಿದರ ಕಡೆಗಣಿಕೆ ಆಗುತ್ತಿರುವುದು ಇಲ್ಲಿ (ಕರ್ನಾಟಕದಲ್ಲಿ) ಮಾತ್ರ.

ಅಲ್ಲ - ಈ ರೋಗ ಕರ್ನಾಟಕದಲ್ಲಿ ಮಾತ್ರ ಯಾಕೆ ಗುರು? ಇನ್ನೇನೂ ಇಲ್ಲ, ಕನ್ನಡಿಗರ ವಿಶ್ವಮಾನವತ್ವಕ್ಕೆ ಇದೂ ಒಂದು ಬಹುಮಾನ, ಅಷ್ಟೇ. 1962ರಲ್ಲಿ ಬೆಂಗಳೂರಿನ ರಾಮೋತ್ಸವಗಳಲ್ಲಿ ಎಂ.ಎಸ್.ಸುಬ್ಬುಲಕ್ಷ್ಮಿಯಂಥಾ ಹೊರಗಿನೋರಿಗೇ ಮಣೆ ಹಾಕಲಾಗಿ ಕನ್ನಡದ ಕಲಾವಿದರಿಗೆ ಅವಕಾಶ ಸಿಗದೆ ಇದ್ದಾಗ ಅ.ನ.ಕೃ. ಅವರು ಕನ್ನಡೇತರರಿಗೆ ಕಲಿಸಿದ ಪಾಠ ಇವತ್ತು ಇನ್ನೊಂದ್ಸತಿ ಕಲಿಸಬೇಕಾದ ಪರಿಸ್ಥಿತಿ ಬಂದಿದೆ ಗುರು! ಸ್ಥಳೀಯ ಕಲಾವಿದರಿಗೆ ಸ್ಥಾನ ಇಲ್ಲದೇ ಇರೋ ಹಬ್ಬ ಕಟ್ಕೊಂಡ್ ನಮಗೇನು? ಈ ನಾಡಿನ ಸಂಸ್ಕೃತಿಯನ್ನ ಬಿಂಬಿಸದೇ ಹೋದ್ರೆ ಇಂಥಾ ಕಾರ್ಯಕ್ರಮಗಳಿಗೆ ಬೆಂಗಳೂರಿನ ಹೆಸರು ಇಡಕ್ಕೆ ಬಿಡೋದೇ ತಪ್ಪು!

ಕನ್ನಡ ಸಂಸ್ಕೃತಿ ಬಿಂಬಿಸದ ಹಬ್ಬ "ಬೆಂಗಳೂರು ಹಬ್ಬ" ಅಲ್ಲ

ಅಷ್ಟೇ ಅಲ್ಲ, ಕನ್ನಡದ ಸಂಸ್ಕೃತಿ ಬಿಂಬಿಸದ ಈ ಕನ್ನಡೇತರರ ಹಾವಳಿಗೆ "ಬೆಂಗಳೂರು ಹಬ್ಬ" ಅನ್ನೋ ಹೆಸರು ಇಡೋ ಹಕ್ಕನ್ನೇ ಕಿತ್ತುಕೊಳ್ಳಬೇಕು. ಕರ್ಕೊಳ್ಳಿ ಇನ್ನೇನಾದ್ರೂ ಹೆಸರಿಟ್ಟು, ಬೇಡ ಅನ್ನಲ್ಲ. ಆದ್ರೆ "ಬೆಂಗಳೂರು ಹಬ್ಬ" ಅನ್ನೋದಾದ್ರೆ ಈ ಹಬ್ಬದಲ್ಲಿ ಕನ್ನಡದ ಕಲಾವಿದರದೇ ಮೇಲುಗೈ ಇರಬೇಕು. ನಮ್ಮ ಜಾನಪದದೋರು, ನಮ್ಮ ಸಂಪ್ರದಾಯದ ಹಾಡುಗರು, ನಮ್ಮ ಭಾವಗೀತೆಯೋರು, ನಮ್ಮ ಲಾವಣಿಯೋರು, ನಮ್ಮ ಹೊಸ ಕಲಾವಿದರು - ಇವೆರಿಗೆಲ್ಲ ಬೆಂಗಳೂರು ಹಬ್ಬದಲ್ಲಲ್ಲದೆ ಏನಾದ್ರೂ ಚೆನ್ನೈ ಹಬ್ಬದಲ್ಲೋ ಅಥವಾ ಮುಂಬೈ ಹಬ್ಬದಲ್ಲೋ ಅವಕಾಶ ಸಿಗತ್ತಾ? ಖಂಡಿತ ಇಲ್ಲ!

ಕನ್ನಡಿಗರು ಮುನ್ನುಗ್ಗಿ ಈ ಹೆಸರು ತಮ್ಮದಾಗಿಸಿಕೊಳ್ಳಬೇಕು, ಇಂಥಾ ಹಬ್ಬಗಳ್ನ ನಡೆಸಿ ಕನ್ನಡ ಸಂಸ್ಕೃತಿಯನ್ನ ಇಡೀ ಪ್ರಪಂಚದ ಮುಂದೆ ಇಡಬೇಕು, ದುಡ್ಡೂ ಮಾಡ್ಕೋಬೇಕು. ಇಲ್ಲದೇ ಹೋದ್ರೆ ಇವತ್ತು ಕನ್ನಡದಲ್ಲಿ ಹೆಸರಾದ್ರೂ ಬರೀತಿದಾರೆ, ನಾಳೆ ಅದೂ ಹೋಗಿ ಹಿಂದೀಲೋ ತಮಿಳಲ್ಲೋ ತೆಲುಗಲ್ಲೋ ಇಂಗ್ಲೀಷಲ್ಲೋ ಬರೆಯಕ್ಕೆ ಶುರು ಮಾಡ್ತಾರೆ, ಈಗ ಕಾಟಾಚಾರಕ್ಕೆ ಕನ್ನಡಕ್ಕೆ ಕೊಡ್ತಿರೋ ಸ್ಥಾನಾನೂ ಕಿತ್ತಾಕ್ತಾರೆ. ಆಗ ಕನ್ನಡದ ಕಲಾವಿದರು ಬೀದೀಲಿ "ಅಮ್ಮಾ! ತಾಯಿ!" ಅಂತ ನಾಕಾಣಿ-ಎಂಟಾಣಿ ಏಣುಸ್ಕೊಂಡಿರಬೇಕಾಗತ್ತೆ, ಅಷ್ಟೆ!

(ಸ್ನೇಹ ಸೇತು: ಏನ್ಗುರು?)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X