ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡ ನುಡಿ ವೈಜ್ಞಾನಿಕವಾಗಿ ಕಲಿಯಲು ಇಲ್ಲಿದೆ ಅವಕಾಶ

By Mahesh
|
Google Oneindia Kannada News

 Kannada Linguistic Training, Banavasi Balaga
ಬೆಂಗಳೂರು ಜೂ 15: ಕನ್ನಡ ನುಡಿಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡುವುದು ನಾಡಿನ ಏಳಿಗೆದೆ ಪೂರಕವಾಗಲಿದೆ ಎಂಬ ಉದ್ದೇಶದಿಂದ ಬನವಾಸಿ ಬಳಗವು ವಿಶೇಷವಾದ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದೆ.

ನುಡಿಯರಿಮೆ(ಭಾಷಾ ಜ್ಞಾನ)ಯ ಕ್ಷೇತ್ರದಲ್ಲಿ ದುಡಿಯುವವರಿಗೆ ಸರಿಯಾದ ದಾರಿತೋರಬಲ್ಲ ಹಿರಿಯರ ಮುಂದಾಳ್ತನದಲ್ಲಿ ತರಬೇತಿ ಶಿಬಿರಗಳನ್ನು ನಡೆಸುವ ಅವಶ್ಯಕತೆಯನ್ನು ಮನಗಂಡು ಈ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಬನವಾಸಿ ಬಳಗದವರು ಹೇಳಿದ್ದಾರೆ. ದೇಶ ವಿದೇಶಗಳಲ್ಲಿ ತಮ್ಮ ಅರಿಮೆಯಿಂದ ವಿಖ್ಯಾತರಾಗಿರುವ, ಕನ್ನಡನಾಡಿನ ಹಿರಿಯ ನುರಿತ ನುಡಿಯರಿಗರಾದ ಡಾ.ಡಿಎನ್ ಶಂಕರಬಟ್ಟರ ಮುಂದಾಳ್ತನದಲ್ಲಿ ನುಡಿಯರಿಮೆಯ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಈ ಶಿಬಿರವು ಆಗಸ್ಟ್ ತಿಂಗಳ ಮೊದಲವಾರದಲ್ಲಿ ಶುರುವಾಗಲಿದ್ದು, ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ನಾಲ್ಕು ಶಿಬಿರಗಳು ನಡೆಯಲಿವೆ. ಪ್ರತೀ ಶಿಬಿರದಲ್ಲೂ ಮೂರು ದಿನಗಳ ತರಬೇತಿ ಇರುತ್ತದೆ. ಇದರಲ್ಲಿ ನುಡಿಯರಿಮೆಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ, ನುಡಿಯರಿಮೆಯ ಅಧ್ಯಯನ ಕ್ಷೇತ್ರದಲ್ಲಿ ದುಡಿಯುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದವರನ್ನು ಸಂದರ್ಶಿಸಿ ತರಬೇತಿ ಶಿಬಿರಕ್ಕೆ ಸೇರಿಸಿಕೊಳ್ಳಲಾಗುತ್ತದೆ.

ನುಡಿಯರಿಮೆಯ ಕ್ಷೇತ್ರದಲ್ಲಿ, ಡಾ.ಡಿ ಎನ್ ಶಂಕರಬಟ್ ಅವರ ಮುಂದಾಳ್ತನದಲ್ಲಿ ಸಂಶೋಧನೆಗಳನ್ನು ಮಾಡ ಬಯಸುವವರು ತಮ್ಮ ವಿವರಗಳನ್ನು ನಮಗೆ ಕಳಿಸಬೇಕಾಗಿ ಕೋರಿಕೆ. ಈ ಬಾರಿಯ ತರಬೇತಿ ಶಿಬಿರವು ಬೆಂಗಳೂರಿನಿಂದಾಚೆ ತೀರ್ಥಹಳ್ಳಿಯಲ್ಲಿ ನಡೆಯಲಿದ್ದು ಬನವಾಸಿ ಬಳಗವೇ ಉಳಿದುಕೊಳ್ಳುವ, ಊಟ ತಿಂಡಿಯ ಏರ್ಪಾಟು ಮಾಡಲಿದೆ. ಇನ್ನುಳಿದ ವಿವರಗಳನ್ನು ಪಡೆದುಕೊಳ್ಳಲು, ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವಿಳಾಸ: [email protected]

English summary
Banavasi Balaga Bangalore has organized a Kannada Linguistic training a scientific way of learning the language. Dr Shankar bhat will head the training program to be held in Thirthahalli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X