Get Updates
Get notified of breaking news, exclusive insights, and must-see stories!

ಯಡಿಯೂರಪ್ನೋರು ಭಂಡ ಅಷ್ಟೇ ಅಲ್ಲ ಪ್ರಚಂಡ!

Hat off to BSYs fighting spirits
ನೋಡ್ರಣ್ಣಾ! ನಾವೇನು ಯಡ್ಯೂರಪ್ಪನೋರಿಗೆ ಯಾವ್ ಥರಾನೂ ನೆಂಟ್ರು ಪಂಟ್ರು ಅಲ್ಲಾ! ಅವರೇನಾರಾ ತೆಪ್ ಮಾಡುದ್ರೆ ಅವುರುನ್ನ ಒಪ್ಪಿಟ್ಟುಕೊಳ್ಳೋದೂ ಇಲ್ಲಾ! ಆ ಯಪ್ಪಾ ಮಾಡಿರಬಹುದಾದ ಭ್ರಷ್ಟಾಚಾರಾನೂ ಒಪ್ಕೊಳಾಕಿಲ್ಲ! ಆದ್ರೂ ಮುಕ್ಯಮಂತ್ರಿ ಸಾಹೇಬ್ರು ತಮ್ ಜುಟ್ಟು ಹಿಡ್ಯಕ್ ಮುಂದಾದ ಹೈಕಮಾಂಡಿನೋರುನ್ನಾ ಹಿಗ್ಗಾಮುಗ್ಗಾ ಬೆಚ್ಚಿ ಬೀಳ್ಸೋ ಹಾಂಗೆ ಪಟ್ಟು ಹಾಕ್ತಾ ಇರೋದುನ್ನಾ ಮೆಚ್ಚಿಕೊಳ್ದೇ ಇರಕ್ ಆಗತಿಲ್ಲಾ ಗುರುಗೋಳೇ!

ಹೈಕಮಾಂಡಿನೋರು ಸಾಮ್ರಾಟರಾ?

ಹೂಂ.. ಕಣ್ರಣ್ಣಾ... ಹಳೇಕಾಲದಲ್ಲಿ ಒಬ್ಬ ಸಾಮ್ರಾಟ ಇರೋನು... ಅವನ ಕೆಳಗೆ ಸಾಮಂತರು, ಅವ್ರು ಕೆಳ್ಗೆ ಮಾಂಡಲೀಕರು, ಅವ್ರು ಕೆಳ್ಗಡೆ ದಂಡನಾಯಕ್ರು.... ಹಿಂಗಿರೋದು ಗುಲಾಮಗಿರಿ ಚೈನು! ಬ್ರಿಟೀಶಿನೋರು ಬಿಟ್ಟು ಹೋಗಿ ಬರೀ ಅರವತ್ತು ವರ್ಸ ಆಗೈತೆ... ಸಾವರಾರು ವರ್ಶದ ಗುಲಾಮಗಿರಿ ಬುದ್ದಿ ಅಷ್ಟು ಸಲೀಸಾಗ್ ಹೋಗಿಬುಡ್ತದಾ?

ರಾಷ್ಟ್ರೀಯ ಪಕ್ಷಗಳು ಅನ್ನೋ ಸಾಮ್ರಾಟರ ಎದ್ರು ಕೈಕೊಟ್ಟುಕೊಂಡು, ಅವರು ಹೇಳೋರು ಸಾಮಂತರಾಗೋ ರಾಜ್ಯಗಳ ಶಾಕೆಗಳು... ಏನಾರಾ ಯೆತ್ವಾಸಾ ಕಾಣ್ತುದಾ ದಣೀ? ಇಂಥಾ ಯವಸ್ತೇನಾಗೆ ಐಕಮಾಂಡು ಕುಂತ್ಕಾ ಅಂದ್ರೆ ಕುಂತ್ಕೊಂಡು, ನಿಂತ್ಕೋ ಅಂದಾಗ ನಿಂತ್ಕಂಡು, ಮನಿಕ್ಕೋ ಅಂದಾಗ ಮನಿಕ್ಕೊಂಡು, ಎದ್ದೇಳ್ಲಾ ಅಂದಾಗ ಎದ್ದೋಗ್ದಲೇ...

"ಎಲಾ ಬಡ್ಡೆತವಾ... ಕೇಂದ್ರ ಅನ್ನೋದು ರಾಜ್ಯಗಳಿಂದ ಆಗಿರೋದು ಕಣ್ರುಲಾ" ಅನ್ನೋಂಗೆ ಕರ್ನಾಟಕದ ರಾಜಕಾರಣಾನಾ ನಾವೇ ನೋಡ್ಕೊಂತೀವಿ ಅಂತಾ ಯಡ್ಯೂರಪ್ಪನೋರು ಸಡ್ಡು ಹೊಡ್ದಿರೋದು ಮಸ್ತಾಗೈತೆ ಗುರೂ! ನೀ ಏನಂತೀಯಾ? ಯಡ್ಯೂರಪ್ಪನೋರು ಭಂಡ, ಪುಂಡ ಅನ್ನೋದೆಲ್ಲಾ ನಿಜಾನೋ ಸುಳ್ಳೋ ಪಕ್ಕಕ್ಕಿಟ್ಟು ಪ್ರಚಂಡಾ ಅನ್ನೋದ್ನಾ ಒಪ್ಕೊಬೇಕಾಯ್ತುದೆ ಅಲ್ವಾ? [ಕೃಪೆ : ಏನ್ ಗುರು?]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+