• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೆಟ್ರೋಲಿ ಕನ್ನಡ ಬೇಕು ಹಿಂದೀ ಬೇಡ, ಯಾಕಂದ್ರೆ...

By * ಆನಂದ್ ಜಿ, ಬನವಾಸಿ ಬಳಗ
|

ಬೆಂಗಳೂರಿನ ಮಾಯಾಲೋಕಕ್ಕೆ ಮೊನ್ನೆ ಹೊಸದಾಗಿ ಸೇರ್ಪಡೆಯಾದ ಮೆಟ್ರೋ ರೈಲು "ನಮ್ಮ ಮೆಟ್ರೋ", ಕನ್ನಡಿಗರೆಲ್ಲಾ ಹೆಮ್ಮೆ ಪಟ್ಟುಕೊಳ್ಳಲು ಕಾರಣವಾಗಿದೆ. ಮೊನ್ನೆ ಈ ರೈಲಿನಲ್ಲಿ ಪಯಣಿಸಿದವರ ಅನುಭವ ಕಂಡು ಕೇಳಿದಾಗ, ಮೆಟ್ರೋ ಆರಂಭ ಒಂದೆಡೆ ಸಂತಸಕ್ಕೆ ಕಾರಣವಾದರೂ ಮತ್ತೊಂದೆಡೆ ಅತಿ ಆತಂಕಕ್ಕೆ ಕಾರಣವಾಗಿದೆ ಎನ್ನಿಸಿತು. ಏನೀ ಆತಂಕ? ಯಾಕೀ ಆತಂಕ? ಬನ್ನಿ... ನೋಡ್ಮಾ...

ನಮ್ಮ ಆತಂಕಕ್ಕೆ ಕಾರಣವಾಗಿರೋದು ಬೆಂಗಳೂರಿನ ಮೆಟ್ರೋದಲ್ಲಿ ಪ್ರತಿಯೊಂದೂ ಮೂರು ಭಾಷೆಯಲ್ಲಿದೆ ಅನ್ನೋದು. ಇಲ್ಲಿನ ಸ್ಟೇಶನ್ ಹೆಸರುಗಳಿಂದ ಹಿಡಿದು ಮುಂದೆ ಬರುವ ನಿಲ್ದಾಣದ ಬಗ್ಗೆ ರೈಲಿನಲ್ಲಿ ಘೋಷಿಸುತ್ತಿರುವ ಘೋಷಣೆಯವರೆಗೆ ಎಲ್ಲವೂ ಕನ್ನಡ, ಹಿಂದೀ ಮತ್ತು ಇಂಗ್ಲಿಷ್ ಭಾಷೆಗಳಲ್ಲಿವೆ. ಕನ್ನಡದಲ್ಲಿಲ್ಲಾ ಅಂದ್ರೆ ಆತಂಕ ಆಗೋದು ಸರಿ, ಈಗ್ಯಾಕೆ ಆತಂಕ ಅಂತೀರಾ? ಆತಂಕ ಇದು ಹಿಂದೀಯಲ್ಲೂ ಇದೆ ಅನ್ನೋದಕ್ಕೆ ಗುರೂ!

ಕನ್ನಡ ಇಲ್ವಾ? ಇದ್ರೂ ಯಾಕೆ ಆಕ್ಷೇಪ? : ಹೌದಲ್ವಾ? ಇಂಥಾ ಪ್ರಶ್ನೆ ಸಾಮಾನ್ಯವಾಗಿ ಈ ಆತಂಕಕ್ಕೆ ಒಳಗಾದವರನ್ನು ಎದುರಾಗ್ತಾನೆ ಇರುತ್ತೆ. ಇಲ್ಲಿ ಆತಂಕ ಇರೋದು ಕನ್ನಡದವರಿಗೆ ಅನುಕೂಲ ಆಗ್ತಾ ಇದೆಯೋ ಇಲ್ಲವೋ ಅನ್ನೋಕಿಂತ, ಕನ್ನಡನಾಡಿನ ಒಂದೂರಿನ ಬಡಾವಣೆಗಳನ್ನು ಬೆಸೆಯಲು ಇರುವ ಸ್ಥಳೀಯ ಸಾರಿಗೆಯಲ್ಲಿ ಕನ್ನಡವಲ್ಲದ ಇನ್ನೊಂದು ಭಾಷೆ ಇದೆ ಅನ್ನೋದು.

ಅರೆರೆ, ಇಲ್ಲಿ ಕನ್ನಡಿಗರು ಮಾತ್ರಾ ಬರ್ತಾರಾ? ನಾವು ಸಂಕುಚಿತ ಮನಸ್ಸಿನವರಾಗಬಾರದು. ಹೊರಗಿಂದ ಬಂದವರಿಗೆ ಕೂಡಾ ಅನುಕೂಲವಾಗಬೇಕು ಅನ್ನೋ ಮಾತು ಕೇಳಿ ಬರುತ್ತೆ. ಸಹಜವೇ ಬಿಡಿ. ಹಾಗಾದಾಗ ನಾವು ಇಡೀ ಪ್ರಪಂಚದಲ್ಲಿ ಹೆಚ್ಚಿನ ಜನರು ಇವತ್ತು ಓದಲು ಕಲಿತಿರುವ ರೋಮನ್ ಲಿಪಿಯನ್ನು ಬಳಸಿದರಾಯ್ತು. ಇಂಗ್ಲಿಷ್ ಭಾಷೆ ಕನ್ನಡದ ಜೊತೆಯಲ್ಲಿ ಇರೋದನ್ನು ಹೇಗೋ ಒಪ್ಪಬಹುದು. ಆದರೆ ಹಿಂದೀಯನ್ನು? ಊಹೂಂ... ಒಪ್ಪಕ್ಕಾಗಲ್ಲಾ ಗುರೂ! ಒಪ್ಪಿದರೆ ನಾಳೆ ಕನ್ನಡಿಗರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಅದೆಂಗೆ?

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
It is a proud moment for all Bangaloreans as Namma Metro has started functioning. But, do we need Hindi in all places in metro? Asks Anand Joshi of Banavasi Balaga in Kannada blog Enguru. What is your opinion about thrust of Hindi language on Kannadigas in Bengaluru?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more