ಡಬ್ಬಿಂಗ್ ಮಾರಕವಲ್ಲ ಪೂರಕ, ಸತ್ಯಮೇವ ಜಯತೆ!

ಜನರ ಅನಿಸಿಕೆ ಮತ್ತು ಚಿತ್ರರಂಗದ ನಿಲುವು!
ನಮ್ಮ ನಾಡಲ್ಲಿ ಚಿತ್ರರಂಗದವರು (ಚಿತ್ರರಂಗದವರೆಂದರೆ ಚಲನಚಿತ್ರ ಮತ್ತು ದೂರದರ್ಶನಗಳ ಮಂದಿ) ಹೇಗೆ ಸಂಘ-ಸಂಸ್ಥೆಗಳನ್ನು ಕಟ್ಟಿಕೊಂಡಿರುವರೋ ಹಾಗೆ ಜನಸಾಮಾನ್ಯರಿಗೆ ಅಂಥಾ ವೇದಿಕೆಯಿಲ್ಲ ಎನ್ನುವುದು ವಾಸ್ತವ. ಹಾಗಾಗಿ ಜನರು ತಮಗೆ ಸಿಗುವ ಫೇಸ್‍ಬುಕ್ಕು, ಟ್ವಿಟ್ಟರ್, ಪತ್ರಿಕೆಗಳ ವಾಚಕರ ಪತ್ರಗಳ ಮೂಲಕ, ಅಲ್ಲಿ ಇಲ್ಲಿ ಮಿಂಬಲೆತಾಣಗಳಲ್ಲಿ ಚರ್ಚೆಗಳಲ್ಲಿ, ಅದರ ಮತದಾನದಲ್ಲಿ ತಮ್ಮ ಅಭಿಪ್ರಾಯ ಹೇಳಬಲ್ಲರು ಅಷ್ಟೆ. ಇನ್ನು ಚಿತ್ರರಂಗದ ಒಳಗಿನ ಅದೆಷ್ಟೊ ಜನರು, ಖಾಸಗಿಯಾಗಿ ಡಬ್ಬಿಂಗ್ ಪರವಾಗಿ ಮಾತನ್ನಾಡಿದರೂ ಬಹಿಷ್ಕಾರ/ ಪ್ರತಿಭಟನೆಗಳ ಭಯದಿಂದ ಸಾರ್ವಜನಿಕವಾಗಿ ಈ ಬಗ್ಗೆ ದನಿಯೆತ್ತಲಾರರು!
ಇಂಥಾ ಸನ್ನಿವೇಶ ನಮ್ಮ ನಾಡಲ್ಲಿದ್ದು ಕನ್ನಡ ಚಿತ್ರರಂಗದೋರು ತಮ್ಮ ಸಂಘಟನೆಗಳನ್ನೇ ಬಂಡವಾಳ ಮಾಡಿಕೊಂಡು ಕಾನೂನುಬಾಹಿರವಾಗಿ ನಿಷೇಧವನ್ನು ಸಮರ್ಥಿಸುತ್ತಾ ಹೇಳೋ ಮಾತುಗಳು ಮಜವಾಗಿದೆ. ನಮ್ಮ ನಾಯಕರೊಬ್ಬರು ಜನರೆನ್ನುವ ನಿಜವಾದ "ಅಭಿಮಾನಿ ದೇವರು"ಗಳನ್ನು "ಫೂಲುಗಳು" ಎನ್ನುತ್ತಿದ್ದರೆ, ಗಣ್ಯ ನಿರ್ದೇಶಕರೊಬ್ಬರು "ಡಬ್ಬಿಂಗ್ ಬೇಕೆನ್ನೋರು ಲಾಭಬಡುಕ ಕನ್ನಡ ದ್ರೋಹಿಗಳು" ಅಂತಾರೆ. "ಡಬ್ಬಿಂಗ್ ಮಾಡ್ಲಿ, ಅದೆಂಗೆ ಪ್ರಸಾರ ಮಾಡ್ತಾರೋ ನೋಡೇ ಬುಡ್ತೀವಿ" ಅಂದವರು ಮತ್ತೊಬ್ಬ ನಟಿಮಣಿ.
ಒಟ್ನಲ್ಲಿ ಡಬ್ಬಿಂಗ್ ಎನ್ನುವ 'ನುಡಿ ಉಳಿಸೋ ಅಸ್ತ್ರ’ವನ್ನು, ಸ್ಪರ್ಧೆ ಎದುರಿಸಲಾಗದ ಕೆಲಮಂದಿ ಹಿಂದೆಂದೋ ಆಗಿದ್ದ ನಿಷೇಧವನ್ನು ಮುಂದುವರೆಸಲು ಮಾಡಿರೋ ತಂತ್ರಗಳ ಸಾಲಿಗೆ ಈಗ ಇದಕ್ಕೆ "ಪ್ರಜಾಪ್ರಭುತ್ವ" ಎನ್ನುವ ನುಣುಪುಲೇಪ ಹಚ್ಚಲು ತೊಡಗಿದ್ದಾರೆ. ಇರಲಿ, ಇವರು ಯಾರಿಗೂ ಕೂಡಾ ತಾವು "ಜನಸಾಮಾನ್ಯರ ತಮ್ಮ ತಾಯ್ನುಡಿಯಲ್ಲಿ ಮನರಂಜನೆ ಪಡೆದುಕೊಳ್ಳುವ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದೇವೆ" ಮತ್ತು ಅದು ಪಾಪ ಎನ್ನುವ ಪ್ರಜ್ಞೆಯೂ ಇಲ್ಲಾ. ಎಷ್ಟೆಂದರೂ ತಾವು ಉಳಿದರೆ ಸಾಕು, ನಾಡು ಹಾಳಾದರೇನು? ನಾಡಿನ ಜನಕ್ಕೆ ಅನ್ಯಾಯವಾದರೇನು? ಅಲ್ವಾ ಅನ್ನೋ ಮನಸ್ಥಿತಿ ಇವರದ್ದಿರುವಂತಿದೆ. ವಿಶ್ವಸಂಸ್ಥೆಯೂ ಕೂಡಾ ಡಬ್ಬಿಂಗ್ ಎನ್ನುವುದನ್ನು ಒಂದು ಭಾಷಿಕರಿಗೆ ತಮ್ಮ ಭಾಷೆಯನ್ನುಳಿಸಿಕೊಳ್ಳಲು ಇರುವ ಅಸ್ತ್ರವೆಂದೇ ಪರಿಗಣಿಸಿರುವ ಹಿನ್ನೆಲೆಯಲ್ಲಿ ನೋಡಿದರೆ ಚಿತ್ರರಂಗದ ಕೆಲಮಂದಿ ತಮ್ಮ ಸ್ವಹಿತಾಸಕ್ತಿಯ ಕಾರಣದಿಂದ, ಕಾನೂನುಬಾಹಿರವಾಗಿರುವ ಒಂದು ನಿಷೇಧವನ್ನು ಉಳಿಸಿಕೊಳ್ಳಲು ಶ್ರಮಿಸುವುದಕ್ಕೆ "ಪ್ರಜಾಪ್ರಭುತ್ವ"ದ ಮುಸುಕು ಹಾಕೋದು, "ಕನ್ನಡಪ್ರೇಮ"ದ ನೆಪ ಹೇಳೋದೂ ಹಾಸ್ಯಾಸ್ಪದವೇ ಆಗಿದೆ!
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications