ತಾಯ್ನುಡಿಯಲ್ಲಿನ ಮನರಂಜನೆ ಹಕ್ಕಿಗಾಗಿ ದನಿ ಎತ್ತಿ

ಇವೆಲ್ಲವೂ ಮಾರುಕಟ್ಟೆಯಲ್ಲಿ ಹೇಗೆ ತಮ್ಮನ್ನು ತಾವು ಜನರ ಮುಂದೆ ನಿಂತು ಪರೀಕ್ಷೆಗೆ ಒಡ್ಡಿಕೊಂಡು ಜನರ ಮೆಚ್ಚುಗೆಗೆ ಅಥವಾ ತಿರಸ್ಕಾರಕ್ಕೆ ಎದೆಯೊಡ್ಡುತ್ತಾವೋ ಅಂಥದ್ದೇ ಅವಕಾಶ ಡಬ್ ಆಗಿರೋ ಸಿನಿಮಾಗಳಿಗೂ ಇರಬೇಕು. ಇದೇ ಸರಿಯಾದ ಮಾರ್ಗ. ಹಾಗಾದ್ರೆ ಬ್ಲೂಫಿಲಂ ತೆಗೀಬೋದಾ ಅನ್ನೋ ಮೊಂಡುವಾದವೂ ಬರುತ್ತೆ! ಸ್ವಾಮೀ... 'ಅದು ಕಾನೂನು ಬಾಹಿರವಾಗಿದ್ದರೆ ತೆಗೆಯುವಂತಿಲ್ಲ! ಕಾನೂನು ಬಾಹಿರವಾಗಿಲ್ಲದಿದ್ದರೆ ತೆಗೆಯಬಹುದು’ ಎನ್ನುವುದು ಕಾನೂನಿನ ಪ್ರಾಥಮಿಕ ಜ್ಞಾನವಿರುವವರಿಗೆ ಅರ್ಥವಾಗೋ ವಿಷಯವಾಗಿದೆ. ಗ್ರಾಹಕನೇ ಬೇಕು ಬೇಡಾ ನಿರ್ಧಾರ ಮಾಡೋ ಅತಿದೊಡ್ಡ ವ್ಯಕ್ತಿ, ಶಕ್ತಿ. ಇದನ್ನು ಕೃತಕವಾಗಿ ನಿಷೇಧಗಳ ಮೂಲಕ ಕಟ್ಟಿ ಹಾಕೋದನ್ನು ಪ್ರಜಾಪ್ರಭುತ್ವವಾದಿಗಳು ಎಂದು ಹೇಳಿಕೊಳ್ಳುವವರೇ ಒಪ್ಪುವುದಾದರೆ ಸಾಮಾನ್ಯ ಜನರೂ ಸುಮ್ಮನಿರಲಾದೀತೇ?
ಈ ಪಿಟಿಶನ್ ಮೂಲಕ ದನಿ ಎತ್ತೋಣ!
ಮತದಾನವಲ್ಲದ ದಾರಿಯ ಮೂಲಕ ನಾವು ಎಚ್ಚೆತ್ತ ಗ್ರಾಹಕರು ಎನ್ನುವ ಸಂದೇಶವನ್ನು ನೀಡಲು... ನಮ್ಮ ಹಕ್ಕುಗಳನ್ನು ಇನ್ನು ದಮನಿಸಲಾಗದು ಎನ್ನುವುದನ್ನು ಸಾರಲು... ಎಲ್ಲಕ್ಕಿಂತಾ ಮುಖ್ಯವಾಗಿ ಸುವರ್ಣ/ ಸ್ಟಾರ್ ಸಮೂಹದವರಿಗೆ ಪ್ರೇಕ್ಷಕರಾದ ನಮ್ಮ ನಿಲುವು ತಿಳಿಸಲು, 'ಪಟ್ಟಭದ್ರರ ಬೆದರಿಕೆಗೆ ಬಾಗಬೇಡಿರೆಂದೂ ನಿಮ್ಮೊಂದಿಗೆ ನಾವಿದ್ದೇವೆಂದೂ’ ಸಾರಲು ಈ ಒಂದು ಮಿಂಬಲೆ ಮನವಿ("ಆನ್‍ಲೈನ್ ಪಿಟಿಶನ್")ಯನ್ನು ಸಮಾನ ಮನಸ್ಕರು ಆರಂಭಿಸಿದ್ದೇವೆ. ಜಾಗೃತ ಗ್ರಾಹಕರು ಎನ್ನುವ ಹೆಸರಿನಲ್ಲಿ ನಾವು ಇದನ್ನು ಮಿಂಬಲೆ ತಾಣದಲ್ಲಿ ಹಾಕಿದ್ದೇವೆ.
ದೂರದರ್ಶನ/ ಚಿತ್ರರಂಗದ ಕೆಲಸಂಘಟನೆಗಳ ಜನವಿರೋಧಿ ಹಾಗೂ ಸರ್ವಾಧಿಕಾರಿ ಧೋರಣೆಯನ್ನೂ ಖಂಡಿಸುತ್ತಾ, ನಮ್ಮ 'ತಾಯ್ನುಡಿಯಲ್ಲಿನ ಮನರಂಜನೆಯ ಹಕ್ಕಿ’ಗಾಗಿ ದನಿ ಎತ್ತೋಣ. ಈ ಮನವಿಗೆ ನೀವೂ ಸಹಿ ಹಾಕಿ, ನಿಮ್ಮ ಗೆಳೆಯರಿಗೂ ಸಹಿ ಹಾಕಲು ಹೇಳಿ. ಇದನ್ನು ಸಂಬಂಧಪಟ್ಟವರಿಗೆ ತಲುಪಿಸುವ ಕೆಲಸವನ್ನು ನಾವು ಮಾಡುತ್ತೇವೆ. ಕನ್ನಡ ಕನ್ನಡಿಗ ಕರ್ನಾಟಕಗಳ ಒಳಿತಿಗೆ ಡಬ್ಬಿಂಗ್ ಚಿತ್ರಗಳು ಪೂರಕವಲ್ಲವಾಗಬಲ್ಲುವೇ ಹೊರತು ಮಾರಕವಲ್ಲಾ ಎನ್ನುವ ದಿಟವೇ ಗೆಲ್ಲಲಿ. [ಸ್ನೇಹಸೇತು : ಏನ್ ಗುರು?]
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications