98583code of conductಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg98583code of conductಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg98583code of conductಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg98583code of conductಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg98583code of conductನೀತಿ ಸಂಹಿತೆ ಉಲ್ಲಂಘನೆ: 58 ಪ್ರಕರಣ ದಾಖಲು/news/2009/03/30/violation-of-code-of-conduct-58-cases-filed.htmlಬೆಂಗಳೂರು, ಮಾ. 30 : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ರಾಜ್ಯದಲ್ಲಿ ಈವರೆಗೆ ವಿವಿಧ ರಾಜಕೀಯ ಪಕ್ಷಗಳಿಂದ ವಿರುದ್ಧ ಒಟ್ಟು 58 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಎಂ.ಎನ್. ವಿದ್ಯಾಶಂಕರ್ ಅವರು ತಿಳಿಸಿದ್ದಾರೆಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ವಿರುದ್ಧ 24, ಕಾಂಗ್ರೆಸ್ ವಿರುದ್ಧ 9, 35605http://kannada.oneindia.com/img/2009/03/30-vidyashankar1.jpg155736electionಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg155736electionಅಕ್ಕ ಇಬ್ಭಾಗ, ಓ ಅಮೆರಿಕನ್ನಡಿಗ!/nri/article/2009/0114-akka-splits-dissidents-announce-new-umbrella.htmlಬೆಂಗಳೂರು, ಜ. 14 : ಕಳೆದ ಕೆಲವು ತಿಂಗಳಿನಿಂದ ಆಂತರಿಕ ಬಿಕ್ಕಟ್ಟು ಮತ್ತು ತೀವ್ರತಮ ಭಿನ್ನಾಭಿಪ್ರಾಯಗಳ ಕುಲುಮೆಯಲ್ಲಿ ಬೇಯುತ್ತಿದ್ದ ಉತ್ತರ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) ಇಂದು ಒಡೆದು ಎರಡು ಹೋಳಾಗಿದೆ. ಸಂಸ್ಥೆಯು ಜನ್ಮತಾಳಿದಾಗಿನಿಂದ ಅಕ್ಕ ಚಟುವಟಿಕೆಗಳೊಂದಿಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಹಲವರು ಹಿರಿಯ ಕಾರ್ಯಕರ್ತರು ತಮ್ಮ ಸದ್ಯತ್ವಕ್ಕೆ ರಾಜೀನಾಮೆ ನೀಡುವುದರೊಂದಿಗೆ ಸಂಸ್ಥೆಯಲ್ಲಿದ್ದ ತಳಮಳ ಭುಗಿಲೆದ್ದಿದೆ.ಅಮೆರಿಕಾದ 34064http://kannada.oneindia.com/img/2009/01/14-suresh-krishnamurthy1.jpg155736electionಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg155736electionರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg155736electionರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ/nri/article/2009/0124-suresh-ramachandra-rejoinder-to-ramesh-gowda.htmlಪ್ರಿಯ ರಮೇಶ್,ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು 34271http://kannada.oneindia.com/img/2009/01/24-suresh1e.jpg453938anandarama shastriಇದೀಗ ತಾನೇ ಬಂದಂತಹ ನಗೆ ಸುದ್ದಿಗಳು/column/humor/2009/0401-humorous-political-news-bytes.htmlರಾಜಕೀಯದಲ್ಲಿ ಕಾಲು ಎಳೆಯುವುದು, ಕೆಸರೆರಚಾಟವಾಡುವುದು, ಕಟಕಿಯಾಡುವುದು ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿದಷ್ಟೇ ಸಹಜ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾವೂ ನಮ್ಮ ರಾಷ್ಟ್ರೀಯ ಪ್ರತಿನಿಧಿಗಳ ಕಾಲೆಳಿಯೋಣ, ಮಿತಿ ಮೀರದಂತೆ. ಇಲ್ಲಿವೆ ನೋಡಿ ಎಚ್. ಆನಂದರಾಮ ಶಾಸ್ತ್ರೀಯವರ ಹಾಸ್ಯಲೇಪಿತ ರಾಜಕೀಯ ಸುದ್ದಿ ಸ್ವಾರಸ್ಯಗಳು.ವರುಣ್‌ಗೆ ಒಂದು ವರ್ಷ ಶಿಕ್ಷೆವರುಣ್ ಗಾಂಧಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 35655http://kannada.oneindia.com/img/2009/04/01-anandram-shastri1.jpg453938anandarama shastriಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg453938anandarama shastriಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!/column/humor/2009/0409-press-conference-in-hell-and-heaven.htmlಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. 35853http://kannada.oneindia.com/img/2009/04/09-anandram-shastri2.jpg453938anandarama shastriಇಂಥ ರಾಜಕಾರಣಿಗಳನ್ನು ಪಡೆದ ನಾವೇ ಧನ್ಯರು!/column/humor/2009/0413-honest-secular-polite-politicians-karnataka.htmlನಮ್ಮ ರಾಜಕಾರಣಿಗಳು ಪಾಪ ಏನೂ ಗಳಿಸಿರುವುದಿಲ್ಲ. ಇವರ ಹೆಂಡತಿ ಟೈಲರಿಂಗೋ ಮತ್ತೊಂದೋ ಕೆಲಸ ಮಾಡಿ ಒಂದು ಕೇಜಿ ಬಂಗಾರ, ಎರಡು ಕ್ವಿಂಟಲ್ ಬೆಳ್ಳಿ, ಮೂರು ಬಂಗಲೆ, ನಾಲ್ಕು ಕಾರು, ಐದು ಲಕ್ಷ ನಗದು, ಆರು ಕೋಟಿ ರೂ. ಶೇರ್ ಸರ್ಟಿಫಿಕೇಟು, ಏಳೆಕರೆ ತೋಟ, ಎಂಟು ಸೈಟು, ಒಂಭತ್ತು ಕಪಾಟುಭರ್ತಿ ಉಡುಪು ಮತ್ತು ಹತ್ತು ಜಾತಿನಾಯಿ ಮಾಡಿಕೊಂಡಿರುತ್ತಾರೆ, ಅಷ್ಟೆ.* 35908http://kannada.oneindia.com/img/2009/04/13-politician1.jpg453938anandarama shastriನಮ್ಮ ರಾಜಕಾರಣಿಗಳು ಎಂಥವರೆಂದರೆ.../news/2009/04/23/these-are-our-politicians.htmlಚುನಾವಣೆ ಬಂತೆಂದರೆ ಸಾಕು, 'ದಾಸನ ಮಾಡಿಕೊ ಎನ್ನ, ಸ್ವಾಮಿ, ಸಾಸಿರ ನಾಮದ ಪ್ರಿಯ ಮತದಾರ', ಎಂದು ಮತದಾರನನ್ನು ಪ್ರಾರ್ಥಿಸುವ ಇವರು ಚುನಾವಣೆ ಮುಗಿದ ಬೆನ್ನಿಗೇ, 'ನೀನ್ಯಾಕೋ ನಿನ್ನ ಹಂಗ್ಯಾಕೋ ನಿನ್ನ ವೋಟಿನ ಬಲವೊಂದ್ ಸಿಕ್ತಲ್ಲ, ಸಾಕೋ', ಎಂದು ಮತದಾರನಿಗೆ ಬೆನ್ನುಹಾಕಿ ತಮ್ಮ ದಂತಗೋಪುರಗಳೆಡೆಗೆ ಹೊರಟುಹೋಗುತ್ತಾರೆ.* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು ಅವನೊಬ್ಬ ವ್ಯಾಪಾರಿ. ಭಾರೀ ಶ್ರೀಮಂತ. ಆದರೂ 36157http://kannada.oneindia.com/img/2009/04/23-politician2.jpgnews"> ಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ! | Hell-Heaven | Press Conference | Humor | Shastri - ಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ! - Kannada Oneindia

ಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!

H Anandarama Shastri, Bengaluru, Bengaluru
ಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. ಪತ್ರಕರ್ತರು ಖಾಲೀಹಾತ್ ಬರಬೇಕಿತ್ತು. ಪೆನ್ನು ಮತ್ತು ಹಾಳೆಗಳನ್ನು ಅಲ್ಲಿಯೇ ಒದಗಿಸುವ ವ್ಯವಸ್ಥೆಯಾಗಿತ್ತು. ದೃಶ್ಯಮಾಧ್ಯಮದವರೂ ಕೂಡ ಈ ನಿಯಮಕ್ಕೆ ಒಳಪಡಬೇಕಾಗಿತ್ತು. ಆ ಪೆನ್ನು-ಹಾಳೆಗಳೋ, ಭೂಲೋಕದಿಂದ ತರಿಸಿದವೇ ಆಗಿದ್ದವು!

ಸ್ವರ್ಗದ ಪತ್ರಿಕಾಗೋಷ್ಠಿಗೆ ಹೋಗಿಬರಲು ಪತ್ರಕರ್ತರ ನೂಕುನುಗ್ಗಲು. ನರಕಕ್ಕೆ ಹೋಗಿಬರಲು ಯಾರೂ ತಯಾರಿಲ್ಲ. ಕೊನೆಗೆ ಜ್ಯೂನಿಯರ್ ಪತ್ರಕರ್ತ-ಕರ್ತೆಯರನ್ನು ನರಕಕ್ಕೆ ಅಟ್ಟಲಾಯಿತು.

ನರಕದ ಪತ್ರಿಕಾಗೋಷ್ಠಿಯಲ್ಲಿ ಯಮನ ವಕ್ತಾರನು, ಭೂಲೋಕದ ರಾಜಕಾರಣಿಗಳಿಗಾಗಿಯೇ ಸ್ಥಾಪಿಸಲಾಗುವ ಸದರಿ ವಿಶೇಷ ಘಟಕದ ಬಗ್ಗೆ ಈ ರೀತಿ ವಿವರಿಸಿದನು:
'ರಾಜಕಾರಣಿಗಳು ತಾವು ಮಾಡಿದ ಪಾಪಗಳಿಗೆ ಭೂಲೋಕದಲ್ಲಿ ಯಾವುದೇ ಶಿಕ್ಷೆಯನ್ನು ಅನುಭವಿಸದೇ ಹಾಯಾಗಿ ಮಜಾಮಾಡಿಕೊಂಡಿದ್ದು ಕೊನೆಗೆ ನರಕಕ್ಕೆ ಬರುತ್ತರಾದ್ದರಿಂದ ನರಕದಲ್ಲಿ ಅವರಿಗೆ ನಾನಾ ಬಗೆಯ ಶಿಕ್ಷೆಗಳನ್ನು ಕೊಡುವ ಅವಶ್ಯಕತೆಯಿದೆ. ಭೂಲೋಕದಿಂದ ಬರುವ ರಾಜಕಾರಣಿಗಳ ಸಂಖ್ಯೆಯೂ ಬರಬರುತ್ತ ಏರತೊಡಗಿದೆ. ಆದ್ದರಿಂದ ಅವರಿಗಾಗಿಯೇ ವಿಶೇಷ ಘಟಕವನ್ನು ಸ್ಥಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಸಲದ ಭಾರತೀಯ ಯುಗಾದಿಯ ಮುನ್ನಾದಿನವಾದ ಅಮಾವಾಸ್ಯೆಯ ರಾತ್ರಿ ಹನ್ನೆರಡಕ್ಕೆ ಘಟಕದ ಉದ್ಘಾಟನೆ', ಎಂದು ನರಕದ ವಕ್ತಾರನು ಪತ್ರಕರ್ತರಿಗೆ ವಿವರಿಸಿದನು.

'ಭೂಲೋಕದಲ್ಲಿ ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದವರಿಗೆ ಇಲ್ಲಿ ಯಾವ ರೀತಿಯ ಶಿಕ್ಷೆಗಳನ್ನು ಕೊಡುತ್ತೀರಿ?' ಎಂದು ಇಂಗ್ಲಿಷ್ ದೃಶ್ಯಮಾಧ್ಯಮವೊಂದರ ಪ್ರತಿನಿಧಿ ಕೇಳಿದಳು. (ಅವಳ ಹೆಸರು ಬುರ್ಖಾ ದತ್.)

'ಚುನಾವಣಾ ನೀತಿಸಂಹಿತೆಯನ್ನು ಉಲ್ಲಂಘಿಸಿದ್ದವರಿಗೆ ಯಾವ ಶಿಕ್ಷೆಯನ್ನೂ ಇಲ್ಲಿ ನೀಡಲಾಗುವುದಿಲ್ಲ. ಏಕೆಂದರೆ ನೀತಿಸಂಹಿತೆ ಉಲ್ಲಂಘನೆಗಾಗಿ ಅವರೆಲ್ಲ ಭೂಲೋಕದಲ್ಲೇ ಚುನಾವಣಾ ಆಯೋಗದ ಕೈಲಿ ತಕ್ಕ ಶಿಕ್ಷೆ ಅನುಭವಿಸಿಯೇ ಬಂದಿರುತ್ತಾರೆ. ಆದ್ದರಿಂದ ಅದಕ್ಕಾಗಿ ಇಲ್ಲಿ ಪುನಃ ಶಿಕ್ಷೆ ಕೊಡುವ ಅಗತ್ಯವಿಲ್ಲ', ಎಂದು ನರಕದ ವಕ್ತಾರನು ಉತ್ತರಿದನು.

ಅತ್ತ ಸ್ವರ್ಗದ ಪತ್ರಿಕಾಗೋಷ್ಠಿಯಲ್ಲಿ ಸ್ವರ್ಗದ ವಕ್ತಾರನು ಹೇಳಿದ್ದಿಷ್ಟು:
'ಈ ಸಲದ ಭಾರತೀಯ ಯುಗಾದಿಯ ಆರಂಭದ ಶುಭಗಳಿಗೆಯಾದ ರಾತ್ರಿ ಹನ್ನೆರಡು ಗಂಟೆ, ಒಂದು ಸೆಕೆಂಡಿಗೆ ನಮ್ಮ ವಿಶೇಷ ಘಟಕದ ಉದ್ಘಾಟನೆ. ತಮ್ಮ ನ್ಯಾಯಬದ್ಧ ಬೇಡಿಕೆಗಳನ್ನು ಹಿಡಿದುಕೊಂಡು ಸರ್ಕಾರಿ ಕಚೇರಿಗಳಿಗೆ ಅಥವಾ/ಮತ್ತು ರಾಜಕಾರಣಿಗಳ ಬಳಿಗೆ ಓಡಾಡಿ ಓಡಾಡಿ ಓಡಾಡಿ ಬೇಸತ್ತು ಸತ್ತು ಇಲ್ಲಿಗೆ ಬರುವ ಬಡಪಾಯಿಗಳಿಗೆ ವಿಶೇಷ ಸುಖ-ಸೌಲತ್ತುಗಳನ್ನು ನೀಡುವ ಮೂಲಕ ನ್ಯಾಯ ದೊರಕಿಸಿಕೊಡಲಿಕ್ಕಾಗಿ ಈ ಘಟಕದ ಸ್ಥಾಪನೆ.'

ಆಗ ವರದಾ ನಾಯಕ್ ಎಂಬ ಟಿವಿ ಪತ್ರಕರ್ತೆ ಬಾಲಕಿಯು ಈ ರೀತಿ ಪ್ರಶ್ನೆ ಕೇಳಿದಳು: 'ಮುಖ್ಯಮಂತ್ರಿಗಳ ಜನತಾದರ್ಶನದ ಬಲೆಗೆ ಬಿದ್ದು ಒದ್ದಾಡಿದ ಮಿಕಗಳಿಗೇನಾದರೂ ವಿಶೇಷ ಸುಖ-ಸೌಲತ್ತುಗಳಿವೆಯೆ?'

ವಕ್ತಾರನ ಉತ್ತರ: 'ಖಂಡಿತ ಖಂಡಿತ. ಇಲ್ಲದಿದ್ದರೆ ಹೇಗೆ?'

ಮೇಲಿನ ಎರಡೂ ಪತ್ರಿಕಾಗೋಷ್ಠಿಗಳಿಗೆ (ಊಹ್ಞೂಂ, ಒಂದು ಮೇಲಿನ ಮತ್ತು ಇನ್ನೊಂದು ಕೆಳಗಿನ ಪತ್ರಿಕಾಗೋಷ್ಠಿಗೆ) ಹೋಗಿಬಂದ ಪತ್ರಕರ್ತರನ್ನು ಗುಳಿಗೆಪ್ಪನವರು ವಿಚಾರಿಸಿದಾಗ ಒಂದು ಆಶ್ಚರ್ಯಕರ ಸಂಗತಿ ಹೊರಬಿತ್ತು! ಸದಾಕಾಲ ಮೃಷ್ಟಾನ್ನಭೋಜನವನ್ನೇ ಉಂಡು ಉಂಡು ನಾಲಗೆ ಜಡ್ಡು ಹಿಡಿಸಿಕೊಂಡಿದ್ದ ಸ್ವರ್ಗದ ವ್ಯವಸ್ಥಾಪಕರು ಇದೇ ಅವಕಾಶವೆಂದು ಪತ್ರಿಕಾಗೋಷ್ಠಿಯಲ್ಲಿ ಸಖ್ಖತ್ ಖಾರದ ಅಡುಗೆ (ಅಂದರೆ ಎನ್.ವಿ. ಅಲ್ಲ) ಮಾಡಿಸಿದ್ದರಂತೆ! 'ಯಮ'ಖಾರವಂತೆ! ಅದೇವೇಳೆ ನರಕದಲ್ಲಿ, ಇದೇ ಚಾನ್ಸ್ ಎಂದು ಅಲ್ಲಿನ ವ್ಯವಸ್ಥಾಪಕರು ಬಗೆಬಗೆಯ ಭಕ್ಷ್ಯಭೋಜ್ಯಗಳ ಭೂರಿಭೋಜನದ ಏರ್ಪಾಟು ಮಾಡಿದ್ದರಂತೆ!

ಇನ್ನೊಂದು ವಿಷಯವೆಂದರೆ, ಬಹುಪಾಲು ನಟನಟಿಯರು, ಜನನಾಯಕರು, ರೂಪದರ್ಶಿಯರು ಇತ್ಯಾದಿಯವರೆಲ್ಲ ನರಕದಲ್ಲೇ ಇದ್ದರಂತೆ! ಪತ್ರಕರ್ತರಿಗೆ ಅವರನ್ನೆಲ್ಲ ಕಾಣುವ ಅವಕಾಶ ದೊರಕಿತಂತೆ. ಸ್ವರ್ಗದಲ್ಲೋ, ಅಪ್ಪಟ ಗಾಂಧಿವಾದಿಗಳು, ನಿಜಸನ್ಯಾಸಿಗಳು, ಮುಗ್ಧರು, ಭೂಲೋಕದಲ್ಲಿ ನಾನಾ ಬಗೆಯ ಶೋಷಣೆಗೊಳಗಾದವರು ಇಂಥವರೇ ತುಂಬಿದ್ದರಂತೆ. ಸ್ವರ್ಗಕ್ಕೆ ಹೋಗಿಬಂದ ಪತ್ರಕರ್ತರೀಗ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ!

ಮತ್ತೊಂದು ಹಾಸ್ಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+