83806humorಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg83806humorಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg83806humorಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg83806humorಶರಶೈಯೆಯಲ್ಲಿ ಪವಡಿಸಿದ ಭೀಷ್ಮ ಪ್ರತಿಜ್ಞೆ/column/humor/2009/0102-i-just-broke-my-new-year-resolution-2009.htmlಹೊಸವರ್ಷ ಉದಯವಾಗುವ ವೇಳೆ ಅನೇಕ ಜನ, ಥರಹೇವಾರಿ ಪ್ರತಿಜ್ಞೆಗಳನ್ನು ಮಾಡುವುದು ರೂಢಿ. ತಪ್ಪೇನಿಲ್ಲ ಬಿಡಿ. ಎಷ್ಟೋ ಜನ 2009ಕ್ಕೆ ಹೊಸ ರೆಸಲ್ಯೂಷನ್ ಗಳನ್ನು ಕೈಗೊಂಡಿದ್ದನ್ನು ನೀವು ಕೇಳಿರಬಹುದು. ಆ ಭೀಷ್ಮ ಪ್ರತಿಜ್ಞೆಗಳು ಇಷ್ಟುಹೊತ್ತಿಗಾಗಲೇ ಶರಶೈಯೆಯಲ್ಲಿ ಅಂಗಾತ ಮಲಗಿದ್ದರೆ ಖಂಡಿತ ಆಶ್ಚರ್ಯವಿಲ್ಲ * ರೇಖಾ ಹೆಗಡೆ ಬಾಳೇಸರ, ಓಲ್ಡ್‌ಸ್ಮಾರ್; ಫ್ಲಾರಿಡಾನೋಡನೋಡುತ್ತ ನೂತನ ವರ್ಷ ಬಂದಿದೆ. ನಿನ್ನಿನ ದಿನಕ್ಕೂ, ಇಂದಿನದಕ್ಕೂ 33835http://kannada.oneindia.com/img/2009/01/02-new-year-resolutions1e.jpg83806humorತಿರುಪತಿ ತಿಮ್ಮಪ್ಪನೂ, ಉಡುಪಿಯ ಹೋಟೆಲೂ/column/humor/2009/0130-tirupathi-timmappa-and-udupi-hotel.htmlಶಂಕರಪುರಂನಲ್ಲಿರುವ ಬ್ರಾಹ್ಮಣರ ಕಾಫಿ ಬಾರ್ ಯಡಿಯೂರಪ್ಪನವರ ಭೇಟಿಯಿಂದಾಗಿ ಇವತ್ತು ಸುದ್ದಿ ಕೇಂದ್ರಕ್ಕೆ ಬಂದಿರಬಹುದು, ವಿಶ್ವೇಶ್ವರ ಭಟ್ ಅವರು ಬರೆದ ಎಂಟಿಆರ್ ಹೋಟೆಲಿನ ಇತಿಹಾಸ ಮತ್ತು ಪರಂಪರೆಯ ಬಗೆಗೆ ಕನ್ನಡಿಗರು ಬೆನ್ನು ತಟ್ಟಿಕೊಳ್ಳುತ್ತಿರಬಹುದು, ತಟ್ಟಿಕೊಳ್ಳಿರಿ ತಟ್ಟಿಕೊಳ್ಳಿರಿ. ಆದರೆ ಕನ್ನಡಿಗರೇ ಒಂದು ವಿಷಯ ತಿಳಿಯಿರಿ. ಐದಾರು ಶತಮಾನಗಳ ಹಿಂದೆಯೇ ನಮ್ಮಲ್ಲಿ ಉಡುಪಿ ಹೋಟೆಲುಗಳಿದ್ದವು, ಅಲ್ಲಿ ರುಚಿರುಚಿಯಾದ ಇಡ್ಲಿ ದೋಸೆಗಳು ಬಿಕರಿಯಾಗುತ್ತಿದ್ದವು. 34371http://kannada.oneindia.com/img/2009/01/30-balaji3.jpg469420satireಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg469420satireಇಂಥ ರಾಜಕಾರಣಿಗಳನ್ನು ಪಡೆದ ನಾವೇ ಧನ್ಯರು!/column/humor/2009/0413-honest-secular-polite-politicians-karnataka.htmlನಮ್ಮ ರಾಜಕಾರಣಿಗಳು ಪಾಪ ಏನೂ ಗಳಿಸಿರುವುದಿಲ್ಲ. ಇವರ ಹೆಂಡತಿ ಟೈಲರಿಂಗೋ ಮತ್ತೊಂದೋ ಕೆಲಸ ಮಾಡಿ ಒಂದು ಕೇಜಿ ಬಂಗಾರ, ಎರಡು ಕ್ವಿಂಟಲ್ ಬೆಳ್ಳಿ, ಮೂರು ಬಂಗಲೆ, ನಾಲ್ಕು ಕಾರು, ಐದು ಲಕ್ಷ ನಗದು, ಆರು ಕೋಟಿ ರೂ. ಶೇರ್ ಸರ್ಟಿಫಿಕೇಟು, ಏಳೆಕರೆ ತೋಟ, ಎಂಟು ಸೈಟು, ಒಂಭತ್ತು ಕಪಾಟುಭರ್ತಿ ಉಡುಪು ಮತ್ತು ಹತ್ತು ಜಾತಿನಾಯಿ ಮಾಡಿಕೊಂಡಿರುತ್ತಾರೆ, ಅಷ್ಟೆ.* 35908http://kannada.oneindia.com/img/2009/04/13-politician1.jpg469420satire'ಉಡುಗೊರೆ'ಯಾಗಿ ಬಂದ ಚಪ್ಪಲಿಗೆ ಮ್ಯೂಸಿಯಂ!/column/humor/2009/0421-museum-for-footwears-hurled-at-politicians.htmlಸುಬ್ಬು ಒಂದೇ ಸವನೆ ಬಾಲ ಸುಟ್ಟ ಬೆಕ್ಕಿನಂತೆ ಟೆರೇಸಿನ ಮೇಲೆ ಲುಂಗಿಯನ್ನು ಮೊಳಕಾಲಿನ ಮೇಲೆ ಏರಿಸಿಕೊಂಡು ಓಡಾಡುತ್ತಿದ್ದ. ನೇಸರ ಪಶ್ಚಿಮದಲ್ಲಿ ಮುಳುಗಿದ್ದರೂ ತಾಪ ಇಳಿಯದಿದ್ದರಿಂದ ಬನಿಯನನ್ನೂ ಬಿಸಾಕಿದ್ದ. ಏನೋ ಚಟಪಡಿಕೆ. ಒಮ್ಮೆ ಆಕಾಶ ಮಗದೊಮ್ಮೆ ರಸ್ತೆಯ ಮೇಲೆ ಕಣ್ಣಾಡಿಸುತ್ತಾ ಓಡಾಡುತ್ತಿದ್ದ. ಡಿಬ್ಬಿ ಸಾಹೇಬರ ದ್ವಿಚಕ್ರ ವಾಹನ ಮನೆ ಮುಂದೆ ನಿಲುಗಡೆಯಾಗುತ್ತಿದ್ದಂತೆ ಸುಬ್ರಾಯ್ ಭಟ್ಟನಿಗೆ ಒಂದು ಬಗೆಯ ನಿರಾಳ."ಯಾಕೋ 36103http://kannada.oneindia.com/img/2009/04/21-bush-footwear1.jpg469420satireಗಣಪತಿ ಬರೆದ ಮಹಾಪ್ರಬಂಧ/column/humor/2009/0822-phd-thesis-by-ganesha.htmlಓಂ ಶ್ರೀ ಗಣೇಶಾಯ ನಮಃ, ಓಂ ಶ್ರೀ ಗಣೇಶಾಯ ನಮಃ. ಯಾವುದೇ ಕೆಲಸವನ್ನು ಆರಂಭಿಸಬೇಕಾದರೆ ಮೊದಲು ಗಣಪತಿಗೆ "ಹಾಯ್" ಹೇಳಿ ಮುಂದುವರಿಯಬೇಕು. ಒಂದು ಸಲ "ಹಾಯ್" ಹೇಳಿದರೆ ಸಾಕು, ಆದರೆ ನಾನಿಲ್ಲಿ ಎರಡು ಸಲ ಹೇಳಿದ್ದೇನೆ. ಯಾಕೆಂದರೆ ಇದು ಗಣಪತಿಯ ಕುರಿತಾದ್ದೇ ಬರಹ.ಹರಿಕಥೆಯ ಪೇಳ್ವೆನು ಭಕ್ತರಿಗಿಂದುಹರಸುತನೆ ಹರಸುತನೆ ಓದುನೀನೂ ಚತುರ್ಥಿಯಂದುಇಲ್ಲಿಗೆ ಬಂದು.ಯಾವುದೇ ಹರಿಕಥೆಯಾಗಲೀ ಗಣಪತಿಯ ಪದ್ಯರೂಪಿ ಸ್ತುತಿಯೊಂದಿಗೆ 38790http://kannada.oneindia.com/img/2009/08/22-ganesha-mahabharata1.jpg469420satireಬಿಜೆಪಿ ಸರಕಾರದ ಯಶಸ್ಸಿಗೆ ಶಾಸ್ತ್ರಿ ಸೂತ್ರ!/column/humor/2009/0930-suttur-meet-political-satire-by-shastry.htmlಸೂತ್ರ ಹರಿದ ಗಾಳಿಪಟದಂತಾಗಿರುವ ಕರ್ನಾಟಕ ಸರ್ಕಾರದ ಯಶಸ್ಸಿಗೆ ನರೇಂದ್ರ ಮೋದಿಯವರು ಕೆಲವು ಸೂತ್ರಗಳನ್ನು ಉಪದೇಶಿಸಿದ್ದಾರೆ. ಪಾಪ, ಗುಜರಾತ್‌ನ ಮೋದಿಗೇನು ಗೊತ್ತು ಕರ್ನಾಟಕ ಸರ್ಕಾರದ ಯಶಸ್ಸಿನ ಸೂತ್ರ? ಕರ್ನಾಟಕದ ರಾಜಧಾನಿಯಲ್ಲೇ ವಾಸವಾಗಿರುವ ಅಪ್ರತಿಮ ರಾಜಕೀಯ ವಿಶ್ಲೇಷಕನಾದ ನಾನು ಹೇಳುತ್ತೇನೆ ಕೇಳಿ, ನಮ್ಮ ಬಿಜೆಪಿ ಸರ್ಕಾರವು ಯಶಸ್ಸು ಹೊಂದಲು ಅನುಸರಿಸಬೇಕಾದ ಸಪ್ತಸೂತ್ರ:* ಬೆಳೆದ ಬೆಳೆಗೆ ರೈತನಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. 39445http://kannada.oneindia.com/img/2009/09/30-bsy-yoga1.jpg453938anandarama shastriಇದೀಗ ತಾನೇ ಬಂದಂತಹ ನಗೆ ಸುದ್ದಿಗಳು/column/humor/2009/0401-humorous-political-news-bytes.htmlರಾಜಕೀಯದಲ್ಲಿ ಕಾಲು ಎಳೆಯುವುದು, ಕೆಸರೆರಚಾಟವಾಡುವುದು, ಕಟಕಿಯಾಡುವುದು ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿದಷ್ಟೇ ಸಹಜ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾವೂ ನಮ್ಮ ರಾಷ್ಟ್ರೀಯ ಪ್ರತಿನಿಧಿಗಳ ಕಾಲೆಳಿಯೋಣ, ಮಿತಿ ಮೀರದಂತೆ. ಇಲ್ಲಿವೆ ನೋಡಿ ಎಚ್. ಆನಂದರಾಮ ಶಾಸ್ತ್ರೀಯವರ ಹಾಸ್ಯಲೇಪಿತ ರಾಜಕೀಯ ಸುದ್ದಿ ಸ್ವಾರಸ್ಯಗಳು.ವರುಣ್‌ಗೆ ಒಂದು ವರ್ಷ ಶಿಕ್ಷೆವರುಣ್ ಗಾಂಧಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 35655http://kannada.oneindia.com/img/2009/04/01-anandram-shastri1.jpg453938anandarama shastriಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg453938anandarama shastriಸ್ವರ್ಗ-ನರಕದಲ್ಲಿ ಪತ್ರಿಕಾಗೋಷ್ಠಿ!/column/humor/2009/0409-press-conference-in-hell-and-heaven.htmlಸ್ವರ್ಗ ಮತ್ತು ನರಕಗಳೆರಡರಲ್ಲಿಯೂ ಏಕಕಾಲಕ್ಕೆ ವಿಶೇಷ ಘಟಕಗಳನ್ನು ತೆರೆಯಲು ಈಚೆಗಷ್ಟೇ ನಿರ್ಧರಿಸಲಾಯಿತು. ಭೂಲೋಕದ ಮಾನವರಿಗಾಗಿ ಆ ಘಟಕಗಳಾದ್ದರಿಂದ ಆ ಬಗ್ಗೆ ಎರಡೂ ಕಡೆ ಪತ್ರಿಕಾಗೋಷ್ಠಿ ಏರ್ಪಡಿಸಿ ಭೂಲೋಕದ ಪತ್ರಕರ್ತರನ್ನು ಆಹ್ವಾನಿಸಲಾಯಿತು. ಪತ್ರಕರ್ತರಿಗಾಗಿ ಉಭಯ ಕಡೆಗಳಿಗೂ ದೇವೇಂದ್ರನ ಕಚೇರಿಯು ವಿಶೇಷ ಸಾರಿಗೆ ವ್ಯವಸ್ಥೆ ಮಾಡಿತ್ತು. ಕ್ಯಾಮೆರಾ, ಮೊಬೈಲ್ ಫೋನ್, ಕಂಪ್ಯೂಟರ್, ಚಿತ್ರಗ್ರಾಹಕ ಯಂತ್ರಗಳು ಹಾಗೂ ಧ್ವನಿಮುದ್ರಕ ಯಂತ್ರಗಳನ್ನು ನಿಷೇಧಿಸಲಾಗಿತ್ತು. 35853http://kannada.oneindia.com/img/2009/04/09-anandram-shastri2.jpg453938anandarama shastriಇಂಥ ರಾಜಕಾರಣಿಗಳನ್ನು ಪಡೆದ ನಾವೇ ಧನ್ಯರು!/column/humor/2009/0413-honest-secular-polite-politicians-karnataka.htmlನಮ್ಮ ರಾಜಕಾರಣಿಗಳು ಪಾಪ ಏನೂ ಗಳಿಸಿರುವುದಿಲ್ಲ. ಇವರ ಹೆಂಡತಿ ಟೈಲರಿಂಗೋ ಮತ್ತೊಂದೋ ಕೆಲಸ ಮಾಡಿ ಒಂದು ಕೇಜಿ ಬಂಗಾರ, ಎರಡು ಕ್ವಿಂಟಲ್ ಬೆಳ್ಳಿ, ಮೂರು ಬಂಗಲೆ, ನಾಲ್ಕು ಕಾರು, ಐದು ಲಕ್ಷ ನಗದು, ಆರು ಕೋಟಿ ರೂ. ಶೇರ್ ಸರ್ಟಿಫಿಕೇಟು, ಏಳೆಕರೆ ತೋಟ, ಎಂಟು ಸೈಟು, ಒಂಭತ್ತು ಕಪಾಟುಭರ್ತಿ ಉಡುಪು ಮತ್ತು ಹತ್ತು ಜಾತಿನಾಯಿ ಮಾಡಿಕೊಂಡಿರುತ್ತಾರೆ, ಅಷ್ಟೆ.* 35908http://kannada.oneindia.com/img/2009/04/13-politician1.jpg453938anandarama shastriನಮ್ಮ ರಾಜಕಾರಣಿಗಳು ಎಂಥವರೆಂದರೆ.../news/2009/04/23/these-are-our-politicians.htmlಚುನಾವಣೆ ಬಂತೆಂದರೆ ಸಾಕು, 'ದಾಸನ ಮಾಡಿಕೊ ಎನ್ನ, ಸ್ವಾಮಿ, ಸಾಸಿರ ನಾಮದ ಪ್ರಿಯ ಮತದಾರ', ಎಂದು ಮತದಾರನನ್ನು ಪ್ರಾರ್ಥಿಸುವ ಇವರು ಚುನಾವಣೆ ಮುಗಿದ ಬೆನ್ನಿಗೇ, 'ನೀನ್ಯಾಕೋ ನಿನ್ನ ಹಂಗ್ಯಾಕೋ ನಿನ್ನ ವೋಟಿನ ಬಲವೊಂದ್ ಸಿಕ್ತಲ್ಲ, ಸಾಕೋ', ಎಂದು ಮತದಾರನಿಗೆ ಬೆನ್ನುಹಾಕಿ ತಮ್ಮ ದಂತಗೋಪುರಗಳೆಡೆಗೆ ಹೊರಟುಹೋಗುತ್ತಾರೆ.* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು ಅವನೊಬ್ಬ ವ್ಯಾಪಾರಿ. ಭಾರೀ ಶ್ರೀಮಂತ. ಆದರೂ 36157http://kannada.oneindia.com/img/2009/04/23-politician2.jpgnews"> ಇಂಥ ರಾಜಕಾರಣಿಗಳನ್ನು ಪಡೆದ ನಾವೇ ಧನ್ಯರು! | Honest, secular, polite politicians of Karnataka! - ಇಂಥ ರಾಜಕಾರಣಿಗಳನ್ನು ಪಡೆದ ನಾವೇ ಧನ್ಯರು! - Kannada Oneindia

ಇಂಥ ರಾಜಕಾರಣಿಗಳನ್ನು ಪಡೆದ ನಾವೇ ಧನ್ಯರು!

Honest, secular, polite politicians of Karnataka!
ನಮ್ಮ ರಾಜಕಾರಣಿಗಳು ಪಾಪ ಏನೂ ಗಳಿಸಿರುವುದಿಲ್ಲ. ಇವರ ಹೆಂಡತಿ ಟೈಲರಿಂಗೋ ಮತ್ತೊಂದೋ ಕೆಲಸ ಮಾಡಿ ಒಂದು ಕೇಜಿ ಬಂಗಾರ, ಎರಡು ಕ್ವಿಂಟಲ್ ಬೆಳ್ಳಿ, ಮೂರು ಬಂಗಲೆ, ನಾಲ್ಕು ಕಾರು, ಐದು ಲಕ್ಷ ನಗದು, ಆರು ಕೋಟಿ ರೂ. ಶೇರ್ ಸರ್ಟಿಫಿಕೇಟು, ಏಳೆಕರೆ ತೋಟ, ಎಂಟು ಸೈಟು, ಒಂಭತ್ತು ಕಪಾಟುಭರ್ತಿ ಉಡುಪು ಮತ್ತು ಹತ್ತು ಜಾತಿನಾಯಿ ಮಾಡಿಕೊಂಡಿರುತ್ತಾರೆ, ಅಷ್ಟೆ.

* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು

ಭಾರತದ ರಾಜಕಾರಣಿಗಳು ವಿಶ್ವದಲ್ಲೇ ಅತ್ಯಂತ ಶ್ರೇಷ್ಠರು. ರೂಢಿಯೊಳಗುತ್ತಮರು. 'ದಾಸನಂತಾಗುವೆನು ಧರೆಯೊಳಗೆ ನಾನು', ಎಂಬ ದಾಸವಾಣಿಯಂತೆ ನಡೆಯುವವರು ಇವರು. ಚುನಾವಣೆ ಎದುರಿರುವಾಗ ಇವರು ನಮ್ಮ ಮನೆಬಾಗಿಲಿಗೆ ಬಂದು ನಮ್ಮ ದಾಸಾನುದಾಸರಂತೆ ಕೈಮುಗಿದು, ಹಲ್ಲು ಕಿರಿದು, ಎಲ್ಲ ಸುಖ-ಕಷ್ಟ ವಿಚಾರಿಸಿ, 'ಇಲ್ಲಿರುವುದು ಸುಮ್ಮನೆ, ಅಲ್ಲಿ ಡೆಲ್ಲಿಯಲ್ಲಿರುವುದು ಪಾರ್ಲಿಮೆಂಟ್ ಎಂಬ ನಮ್ಮನೆ', ಎಂದು ನುಡಿದು, ಪೆಪ್ಪರಮಿಂಟ್ ತಿಂದವರಂತೆ ಜೊಲ್ಲು ಸುರಿಸುತ್ತ ಮುಂದಿನ ಮನೆಬಾಗಿಲಿಗೆ ಬಿಜಯಂಗೈಯುವವರು.

'ದಾಸನ ಮಾಡಿಕೊ ಎನ್ನ, ಸ್ವಾಮಿ, ಸಾಸಿರ ನಾಮದ ವೋಟರ್ ಪ್ರಭುವೆ', ಎನ್ನುವ ಇವರ ಆ ವಿನಯ.. ಆಹಾ! ಮತದಾರನ ಮನೆಯೇನಾದರೂ ಒಳಗಿನಿಂದ ಬೋಲ್ಟಿಸಲ್ಪಟ್ಟಿದ್ದರೆ ಆಗ ಈ ಜನಸೇವಕರು, 'ಪೂಜಿಸಲೆಂದೇ ಹೂನಗೆ ತಂದೆ, ದರುಶನ ಕೋರಿ ನಾ ನಿಂದೆ, ತೆರೆಯೋ ಬಾಗಿಲನು', ಎಂದು ಗಾರ್ದಭರಾಗದಲ್ಲಿ ಹಾಡಿ ಬಾಗಿಲು ತೆರೆಸಿ, ಪಾಂಪ್ಲೆಟ್ ನೀಡಿ, "ಕಾರ್ಯವಾಸಿ ಕತ್ತೆಕಾಲು ಹಿಡಿ ಎಂಬ ನಾಣ್ಣುಡಿಯಂತೆ ನಾವಿವತ್ತು ನಿಮ್ಮ ಕಾಲು ಹಿಡೀಲಿಕ್ಕೆ ಬಂದಿದ್ದೀವಿ, ನಮಗೇ ವೋಟ್ ಹಾಕಿ", ಎಂದು ಮುವ್ವತ್ತೆರಡೂ ಹಲ್ಲುಗಳನ್ನು (ಸದಾನಂದಗೌಡರಂತೆ) ಪ್ರದರ್ಶಿಸುತ್ತಾರೆ.

ಇವರ ಈ ವಿನಯ ಅಂಥಿಂಥದೇ? ಚಾಲಾ ಗೊಪ್ಪದಿ! 'ಭಕುತರ ಸೇವೆಯ ಕೊಡು ಕಂಡ್ಯ, ನಿನ್ನ ಭಕುತರ ಸಂಗವ ಕೊಡು ಕಂಡ್ಯ', ಎಂದು ಈ ದೈವಭಕ್ತಶಿಖಾಮಣಿಗಳು ಚುನಾವಣೆಯ ಸಂದರ್ಭದಲ್ಲಿ ಕಂಡಕಂಡ ದೇವರುದಿಂಡಿರಿಗೆಲ್ಲ ಮೊರೆಹೊಗುವ ಪರಿಯನ್ನೆಂತು ಬಣ್ಣಿಸಲಿ! 'ಕಂಡುಕಂಡು ನೀ ಎನ್ನ ಕೈಬಿಡುವರೇ ಪ್ರಭುವೆ, ಉಂಡು ಮಲಗದೆ ಅಂದು ಮತ ನೀಡು ಒಡೆಯಾ', ಎಂದು ಮತದಾರನನ್ನು ಇವರು ಬೇಡಿಕೊಳ್ಳುವ ಪರಿಯೂ ಅನನ್ಯ!

ನಮ್ಮೀ ರಾಜಕಾರಣಿಗಳು ಅತ್ಯಂತ ಪ್ರಾಮಾಣಿಕರು. ಸತ್ಯಸಂಧರು. ಸಿದ್ಧಾಂತಬದ್ಧರು. ನಿಷ್ಪೃಹರು. ಅತಿ ವಿಧೇಯರು. ಮತ್ತು ಜಾತ್ಯತೀತರು. ಇವರ ಚುನಾವಣಾ ಭಾಷಣಗಳೇ ನನ್ನ ಈ ಮಾತಿಗೆ ಸಾಕ್ಷಿ. ವಿರೋಧಿಗಳ ಟೀಕೆಯೇ ತುಂಬಿರುವ ತಮ್ಮ ಭಾಷಣದಲ್ಲಿ ಇವರು, ಒಂದುವೇಳೆ ತಾವು ಆರಿಸಿಬಂದರೆ ತಮ್ಮ ಕ್ಷೇತ್ರಕ್ಕೆ ಏನೇನು ಕೆಲಸಕಾರ್ಯಗಳನ್ನು ಮಾಡಲಿದ್ದೇವೆಂಬುದನ್ನು ಎಂದಿಗೂ ತಿಳಿಸುವುದಿಲ್ಲ. ಏಕೆಂದರೆ, ಆರಿಸಿಬಂದಮೇಲೆ ಇವರು ಕ್ಷೇತ್ರಕ್ಕಾಗಿ ಯಾವ ಕೆಲಸವನ್ನೂ ಮಾಡುವವರಲ್ಲ. ಅಂದಮೇಲೆ ಇವರದು ಅತ್ಯಂತ ಪ್ರಾಮಾಣಿಕ ಭಾಷಣವಲ್ಲವೆ? ಪ್ರತಿಯೊಂದು ಪಕ್ಷದವರೂ ತಮ್ಮ ವಿರೋಧಿಗಳ ಭ್ರಷ್ಟಾಚಾರವನ್ನೂ ಅನಾಚಾರವನ್ನೂ ಚುನಾವಣಾ ಭಾಷಣದಲ್ಲಿ ಬಣ್ಣಿಸುತ್ತಾರಷ್ಟೆ. ನಾವು ಎಲ್ಲರ ಭಾಷಣಗಳನ್ನೂ ಹಂಡ್ರೆಡ್ ಪರ್ಸೆಂಟ್ ನಂಬುತ್ತೇವೆ. ಎಲ್ಲರೂ ಸತ್ಯವನ್ನೇ ಹೇಳುತ್ತಿದ್ದಾರೆಂಬುದು ಇವರ ಹಾವ-ಭಾವ, ಉದ್ರೇಕ-ಉನ್ಮಾದ, ಕೋಪ-ತಾಪ ಮತ್ತು ಇವರು (ಭಾಷಣಗಳಲ್ಲಿ ಹಾಗೂ ಪತ್ರಿಕಾಗೋಷ್ಠಿಗಳಲ್ಲಿ) ಪ್ರದರ್ಶಿಸುವ ಕಾಗದ-ಪತ್ರ-ಪತ್ರಿಕೆಗಳು ಇವುಗಳಿಂದ ಗೊತ್ತಾಗುತ್ತದೆ.

ನಮ್ಮೀ ರಾಜಕಾರಣಿಗಳು ಸಿದ್ಧಾಂತಬದ್ಧರು. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಗಿಟ್ಟಿಸುವುದು, ಯೇನಕೇನ ಪ್ರಕಾರೇಣ ಗೆಲ್ಲುವುದು ಮತ್ತು ಗೆದ್ದಮೇಲೆ ಮಂತ್ರಿಗಿರಿ/ನಿಗಮ/ಮಂಡಳಿ ಯಾವುದಾದರೊಂದು ಕುರ್ಚಿಯಲ್ಲಿ ರಾರಾಜಿಸುವುದು ಈ ತ್ರಿವಿಧ (ಸ್ವಯಂ)ದಾಸೋಹವೇ ತಮ್ಮ ರಾಜಕೀಯ ಜೀವನದ ಪರಮಗುರಿಯೆಂಬುದು ಇವರ ಸಿದ್ಧಾಂತ. ಈ ಸಿದ್ಧಾಂತಪಾಲನೆಗಾಗಿಯೇ ಇವರು ದಿನಕ್ಕೆರಡುಬಾರಿ ಪಕ್ಷಾಂತರ ಮಾಡುವುದು. ಸಿದ್ಧಾಂತಪಾಲನೆಗಾಗಿ ಎಂಥ ಕಡುಕಷ್ಟ, ಪಾಪ!

ಇನ್ನು, ಇವರ ನಿಷ್ಪೃಹ ಮನೋಭಾವನ್ನು ನಾನೆಂತು ಬಣ್ಣಿಸಲಿ? ಅದೆಷ್ಟು ನಿಷ್ಪೃಹರಾಗಿ, ಅರ್ಥಾತ್ ನಿಸ್ವಾರ್ಥದಿಂದ ಇವರು ಜನಸೇವೆ ಮಾಡುತ್ತಾರೆಂದರೆ, ಯಾವ ವಿಶೇಷ ಆಸ್ತಿಪಾಸ್ತಿಗಳನ್ನೂ ಇವರು ಗಳಿಸಿರುವುದಿಲ್ಲ. ಇವರ ಪೈಕಿ ಎಷ್ಟೋ ಮಂದಿಗೆ ಮನೆಯೂ ಇರುವುದಿಲ್ಲ, ವಾಹನವೂ ಇರುವುದಿಲ್ಲ! ಏನೋ, ಇವರ ಹೆಂಡತಿ ಟೈಲರಿಂಗ್ ಕೆಲಸ ಮಾಡಿ ಒಂದು ಕೇಜಿ ಬಂಗಾರ, ಎರಡು ಕ್ವಿಂಟಲ್ ಬೆಳ್ಳಿ, ಮೂರು ಬಂಗಲೆ, ನಾಲ್ಕು ಕಾರು, ಐದು ಲಕ್ಷ ನಗದು, ಆರು ಕೋಟಿ ರೂ. ಶೇರ್ ಸರ್ಟಿಫಿಕೇಟು, ಏಳೆಕರೆ ತೋಟ, ಎಂಟು ಸೈಟು, ಒಂಭತ್ತು ಕಪಾಟುಭರ್ತಿ ಉಡುಪು ಮತ್ತು ಹತ್ತು ಜಾತಿನಾಯಿ ಮಾಡಿಕೊಂಡಿರುತ್ತಾರೆ, ಅಷ್ಟೆ. ಗಂಡಂದಿರನ್ನು ಈ ಹೆಂಡತಿಯರೇ ಸಾಕುತ್ತಾರೆ.

ಇನ್ನು, ಈ ಜನಸೇವಕರ ವಿಧೇಯತೆಯೆಂದರೆ ಅಂಥಿಂಥದೇ? ಹೈಕಮಾಂಡು ತನ್ನ ಕಾಲಲ್ಲಿ ತೋರಿಸಿದ್ದನ್ನು ಇವರು 'ಕೈ'ಯಲ್ಲಿ ಎತ್ತಿಕೊಂಡು ತಲೆಯಮೇಲೆ ಇಟ್ಟುಕೊಳ್ಳುತ್ತಾರೆ. ಇಂಥ ವಿಧೇಯತೆಯು ವಿಶ್ವದ ಇನ್ನಾವ ರಾಷ್ಟ್ರದ ರಾಜಕಾರಣಿಗಳಲ್ಲೂ ಇಲ್ಲ ಬಿಡಿ. 76ರ ದೇವೇಗೌಡರಾಗಿರಲಿ, 82ರ ಅಡ್ವಾಣಿಯಾಗಿರಲಿ, 83ರ ಬಾಳ್ ಠಾಕ್ರೆ ಆಗಿರಲಿ, 85ರ ಕರುಣಾನಿಧಿ ಆಗಿರಲಿ, 95ರ ಜ್ಯೋತಿ ಬಸು ಆಗಿರಲಿ, ಸೋನಿಯಾ, ರಾಹುಲ್,....ಕೊನೆಗೆ ಎಂಟು ವರ್ಷದ ರೈಹನ್ ವಡ್ರಾ ಅಥವಾ ಆರು ವರ್ಷದ ಮಿರಯಾ ವಡ್ರಾನೇ ಆಗಿರಲಿ, ಹೈಕಮಾಂಡ್ ಎಂದರೆ ಹೈಯೇ. ಪಕ್ಷದ ಎಲ್ಲರೂ ಆ ಹೈಕಮಾಂಡ್‌ನಡಿ ಲೋ! ವೆರಿ ಲೋ!! ವೆರಿ ವೆರಿ ಲೋ!!! ಎಂಥ ವಿಧೇಯತೆ!

ನಮ್ಮೀ ರಾಜಕಾರಣಿಗಳ ಜಾತ್ಯತೀತ ಮನೋಭಾವವಂತೂ ಇಡೀ ವಿಶ್ವಕ್ಕೇ ಮಾದರಿ. ಹಿಂದು, ಮುಸ್ಲಿಂ, ಕ್ರೈಸ್ತ, ಸಿಖ್, ಜೈನ, ಬೌದ್ಧ ಎಂಬ ಭೇದಭಾವವಿಲ್ಲದೆ ಚುನಾವಣೆಯ ಸಂದರ್ಭದಲ್ಲಿ ಎಲ್ಲ ಮತೀಯರ ದೇಗುಲ-ಪ್ರಾರ್ಥನಾಸ್ಥಳಗಳಿಗೂ (ಆಯಾ ಉಡುಪುಗಳಲ್ಲಿ) ಭೇಟಿಯಿತ್ತು, ಕೈಮುಗಿದು-ಅಡ್ಡಬಿದ್ದು ಕೃತಾರ್ಥರಾಗುವ ಇವರ ಮತಾತೀತ ಭಕ್ತಿಭಾವವಾಗಲೀ, ಎಲ್ಲ ಜಾತಿ-ಮತಗಳವರ ಮನೆಬಾಗಿಲಿಗೂ ಹೋಗಿ ಹಲ್ಕಿರಿದು ಮತ ಅಂಗಲಾಚುವ ಇವರ ಜಾತ್ಯತೀತ ಮನೋಭಾವವಾಗಲೀ ವರ್ಣನಾತೀತ.

'ಹನುಮನ ಮತವೇ ಹರಿಮತವೋ. ಹರಿಯ ಮತವೆ ಹನುಮನ ಮತವೊ', ಎಂಬ ದಾಸವಾಣಿಯೊಲ್ ಇವರು, 'ಪ್ರಜೆಗಳ ಮತವೇ ನಮ್ ಹಿತವೋ. ನಮ್ಮ ಮತದಾಟ ಪ್ಲಾನ್‌ಯುತವೊ', ಎಂದು ಮಸಾಲ್ದೋಸವಾಣಿಯಂ ಹರಿಬಿಡುವರು. ಚುನಾವಣೆಯಾದಮೇಲೆ, 'ನೀನ್ಯಾಕೋ ನಿನ್ನ ಹಂಗ್ಯಾಕೋ', ಅನ್ನುವ (ಪುರಂದರದಾಸಸಮಾನ) ಧುರಂಧರರಿವರು! ಇವರಲ್ಲಿ ಕೆಲವರು 'ಧರ್ಮವೆ ಜಯವೆಂಬ ದಿವ್ಯಮಂತ್ರ'ವನ್ನು ಜಪಿಸಿದರೆ, ಉಳಿದವರು 'ಜಯವೆ ಧರ್ಮವೆಂಬ ದಿವ್ಯಮಂತ್ರ'ವನ್ನು ಜಪಿಸುವವರು.

'ಮಣ್ಣಿಂದ ಕಾಯ ಮಣ್ಣಿಂದ', ಎನ್ನುತ್ತ, ಮಣ್ಣನ್ನು ಗಳಿಸಲೆಂದೇ ಎಲೆಕ್ಷನ್ನಿಗೆ ನಿಲ್ಲುವ 'ಮಣ್ಣಿನ ಮಕ್ಕಳು' ಇವರು. 'ನೆಚ್ಚದಿರೀ ಭಾಗ್ಯ ಯಾರಿಗೂ ಸ್ಥಿರವಲ್ಲ', ಎಂಬ ದಾಸವಾಣಿಯ ಮರ್ಮವನ್ನರಿತೇ ಇವರು ಆದಷ್ಟು ಬೇಗನೆ 'ಅಷ್ಟೈಶ್ವರ್ಯಭಾಗ್ಯ'ಶಾಲಿಗಳಾಗಲು ಹೊರಟವರು. 'ಹರಿಕೊಟ್ಟ ಕಾಲಕ್ಕೆ ಉಣಲಿಲ್ಲ', ಎಂಬಂತಾಗಬಾರದೆಂದು ಇವರು ನರ-ಹರಿ ಕೊಡುವುದನ್ನೆಲ್ಲ ಉಣ್ಣುತ್ತ ಕೂರುವವರು. 'ಊಟಕ್ಕೆ ಬಂದೆವು ನಾವು, ನಿಮ್ಮ ಆಟಪಾಠವ ಬಿಟ್ಟು ನಮಗೆ ನೀಡ್ರಯ್ಯಾ', ಎಂದು ಕೇಳಿ ನೀಡಿಸಿಕೊಂಡು ಉಣ್ಣುವವರು.

ಇಂಥ ಪ್ರಾಮಾಣಿಕ, ಸತ್ಯಸಂಧ, ಸಿದ್ಧಾಂತಬದ್ಧ, ನಿಷ್ಪೃಹ, ದೈವಭಕ್ತ, ಅತಿ ವಿಧೇಯ ಮತ್ತು ಜಾತ್ಯತೀತ ರಾಜಕಾರಣಿಗಳನ್ನು ಹೊಂದಿರುವ ಭಾರತೀಯರಾದ ನಾವೇ ಧನ್ಯರು. ಇಂಥ ಶ್ರೇಷ್ಠರೂ ರೂಢಿಯೊಳಗುತ್ತಮರೂ ಆದ ರಾಜಕಾರಣಿಗಳ ಬಗ್ಗೆ, ಇವರನ್ನು ಆರಿಸಿ ಕಳಿಸುವ ಮತದಾರ ಬಾಂಧವರ ಬಗ್ಗೆ ಮತ್ತು ಇವರ ಅದ್ಭುತ ಆಳ್ವಿಕೆಗೆ ಒಳಪಟ್ಟಿರುವ ಈ ನಾಡಿನ ಬಗ್ಗೆ ಬರೆಯಲು ಇನ್ನು ನನ್ನಲ್ಲಿ ಪದಗಳೇ ಇಲ್ಲ! ಲೇಖನಸನ್ಯಾಸ ಸ್ವೀಕರಿಸಿ ಕಾಡಿಗೆ ಹೋಗಿ ಕಂದಮೂಲ ತಿಂದುಕೊಂಡಿರುವುದೇ ನನಗಿನ್ನು ಸೂಕ್ತವೆನ್ನಿಸುತ್ತದೆ. ಅಂತೆಯೇ ಮಾಡುತ್ತೇನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+