83806humorಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg83806humorಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg83806humorಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg83806humorಶರಶೈಯೆಯಲ್ಲಿ ಪವಡಿಸಿದ ಭೀಷ್ಮ ಪ್ರತಿಜ್ಞೆ/column/humor/2009/0102-i-just-broke-my-new-year-resolution-2009.htmlಹೊಸವರ್ಷ ಉದಯವಾಗುವ ವೇಳೆ ಅನೇಕ ಜನ, ಥರಹೇವಾರಿ ಪ್ರತಿಜ್ಞೆಗಳನ್ನು ಮಾಡುವುದು ರೂಢಿ. ತಪ್ಪೇನಿಲ್ಲ ಬಿಡಿ. ಎಷ್ಟೋ ಜನ 2009ಕ್ಕೆ ಹೊಸ ರೆಸಲ್ಯೂಷನ್ ಗಳನ್ನು ಕೈಗೊಂಡಿದ್ದನ್ನು ನೀವು ಕೇಳಿರಬಹುದು. ಆ ಭೀಷ್ಮ ಪ್ರತಿಜ್ಞೆಗಳು ಇಷ್ಟುಹೊತ್ತಿಗಾಗಲೇ ಶರಶೈಯೆಯಲ್ಲಿ ಅಂಗಾತ ಮಲಗಿದ್ದರೆ ಖಂಡಿತ ಆಶ್ಚರ್ಯವಿಲ್ಲ * ರೇಖಾ ಹೆಗಡೆ ಬಾಳೇಸರ, ಓಲ್ಡ್‌ಸ್ಮಾರ್; ಫ್ಲಾರಿಡಾನೋಡನೋಡುತ್ತ ನೂತನ ವರ್ಷ ಬಂದಿದೆ. ನಿನ್ನಿನ ದಿನಕ್ಕೂ, ಇಂದಿನದಕ್ಕೂ 33835http://kannada.oneindia.com/img/2009/01/02-new-year-resolutions1e.jpg83806humorತಿರುಪತಿ ತಿಮ್ಮಪ್ಪನೂ, ಉಡುಪಿಯ ಹೋಟೆಲೂ/column/humor/2009/0130-tirupathi-timmappa-and-udupi-hotel.htmlಶಂಕರಪುರಂನಲ್ಲಿರುವ ಬ್ರಾಹ್ಮಣರ ಕಾಫಿ ಬಾರ್ ಯಡಿಯೂರಪ್ಪನವರ ಭೇಟಿಯಿಂದಾಗಿ ಇವತ್ತು ಸುದ್ದಿ ಕೇಂದ್ರಕ್ಕೆ ಬಂದಿರಬಹುದು, ವಿಶ್ವೇಶ್ವರ ಭಟ್ ಅವರು ಬರೆದ ಎಂಟಿಆರ್ ಹೋಟೆಲಿನ ಇತಿಹಾಸ ಮತ್ತು ಪರಂಪರೆಯ ಬಗೆಗೆ ಕನ್ನಡಿಗರು ಬೆನ್ನು ತಟ್ಟಿಕೊಳ್ಳುತ್ತಿರಬಹುದು, ತಟ್ಟಿಕೊಳ್ಳಿರಿ ತಟ್ಟಿಕೊಳ್ಳಿರಿ. ಆದರೆ ಕನ್ನಡಿಗರೇ ಒಂದು ವಿಷಯ ತಿಳಿಯಿರಿ. ಐದಾರು ಶತಮಾನಗಳ ಹಿಂದೆಯೇ ನಮ್ಮಲ್ಲಿ ಉಡುಪಿ ಹೋಟೆಲುಗಳಿದ್ದವು, ಅಲ್ಲಿ ರುಚಿರುಚಿಯಾದ ಇಡ್ಲಿ ದೋಸೆಗಳು ಬಿಕರಿಯಾಗುತ್ತಿದ್ದವು. 34371http://kannada.oneindia.com/img/2009/01/30-balaji3.jpg111428laughterನಗೆಹಬ್ಬಕ್ಕಾಗಿ ಹಾಸ್ಯ ಲೇಖನಗಳಿಗೆ ಆಹ್ವಾನ/column/humor/2009/0330-humor-article-write-up-invitation.htmlದಿನನಿತ್ಯದ ಜಂಝಡಗಳನ್ನು ಬದಿಗಿಟ್ಟು ಮನಸು ಹಗುರಾಗಿಸುವಂಥ ದಿನ ಇನ್ನೊಂದೊರೆಡು ದಿನಗಳಲ್ಲಿ ಬರಲಿದೆ. ಏಪ್ರಿಲ್ 1ನ್ನು ಮೂರ್ಖರ ದಿನವನ್ನಾಚರಿಸುವ ಬದಲು 'ನಗೆಹಬ್ಬ'ವನ್ನಾಗಿ ಆಚರಿಸೋಣ. ಗಂಟಿಕ್ಕಿಕೊಂಡ ಹುಬ್ಬುಗಳನ್ನು ತಿಳಿಯಾಗಿಸೋಣ. ಹೊಟ್ಟೆಯಲ್ಲಿಯೇ ಹುದುಗಿಸಿಕೊಂಡ ನಗುವನ್ನು ಮುಖದಲ್ಲಿ ತರಿಸೋಣ.ಸ್ನೇಹಿತರೆ, ಇನ್ನೇಕೆ ತಡ, ಮನಸ್ಸು ಹುರಿಯಾಗಿಸಿಕೊಳ್ಳಿ, ಕಂಪ್ಯೂಟರಲ್ಲಿ ನಿಮ್ಮ ಬೆರಳುಗಳ, ಹಾಸ್ಯಪ್ರಜ್ಞೆಯ ಕರಾಮತ್ತನ್ನು ತೋರಿಸಿ. ಕೂಡಲೆ, ನಮಗೆ ನಿಮ್ಮ ಬರಹಗಳನ್ನು ರವಾನಿಸಿ. ಅದಕ್ಕೂ ಮುಂಚೆ 35578http://kannada.oneindia.com/img/2009/03/30-laugh1.jpg111428laughterಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg111428laughterಎಲ್ಲಾ ಚುಟುಕವೋ, ಪ್ರಭುವೇ, ಎಲ್ಲಾ ಚುಟುಕವೋ!/column/humor/2009/0525-kannada-chutuka-anandarama-shastry.htmlದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಚುಟುಕು, 'ಮುಂದುವರಿದ'ವರ ಮನೆಗಳಲ್ಲಿ - ಆಮಂತ್ರಣ ಪತ್ರಿಕೆ ಸಹಿತ - ಮದುವೆ ಮುಂಜಿ ಚುಟುಕು, ಶ್ರಾದ್ಧವಂತೂ 'ಸಂಕಲ್ಪ ಶ್ರಾದ್ಧ'ವೆಂಬ ಹೆಸರಿನಲ್ಲಿ ಚುಟುಕೋ ಚುಟುಕು, ವಿದ್ಯೆ ಹೆಚ್ಚಾದಂತೆಲ್ಲ ಜನರ ನಡುವಿನ ಸಂಭಾಷಣೆ ಚುಟುಕು, ಪತ್ರ ವ್ಯವಹಾರ ಚುಟುಕು, ಪತ್ರಿಕೆಗಳಲ್ಲಿ ಸ್ಥಳಾಭಾವದಿಂದ ಲೇಖನಗಳೂ ಚುಟುಕು, ರಾಜ್, ಜಯ್, ವಿಷ್, ವಿನು, ಅನು, ಹೀಗೆ ಹೆಸರುಗಳೂ ಚುಟುಕು, 36877http://kannada.oneindia.com/img/2009/05/25-anandram-shastri2.jpg111428laughterಸಮಾನತೆಯ ಬೆಳಕು/festivals/diwali/2009/1016-good-bye-to-darkness-welcome-lights.htmlಕತ್ತಲೆ ಮಾಯೆ ಅಳಿಸಲು ಬಂದ ಜ್ಞಾನದ ಬೆಳಕುಅಜ್ಞಾನದಾಗರವ ತೊಳೆಯಲು ಬಂದ ಸುಜ್ಞಾನದ ಬೆಳಕುಮನಸ್ಸಿನ ಮೂಲೆಯ ಆವರಿಸಲು ಬಂದ ನೆಮ್ಮದಿಯ ಬೆಳಕುಶತಶತಮಾನದ ಬೆಳಕು, ಹೊಸಹೊಸ ಕನಸ ಹಚ್ಚಿದ ಬೆಳಕುಬಾನ ಬಯಲ ಸೀಮೆಯಲ್ಲಿ ಕುಣಿಯುವ ಬಣ್ಣಗಳ ಬೆಳಕುಬೇಧ ಭಾವ ಮಾಡದೇ ಚೆಲ್ಲುವ ಸಮಾನತೆಯ ಬೆಳಕುಮನೆಮಂದಿಗೆಲ್ಲ ನಗುವ ಹಂಚಲು ಬರುವ ಬೆಳಕುಊರೆಲ್ಲಾ ಬೆಳಗಲು ಮುಂದಾಗುವ ಆಕಾಶದ ಬೆಳಕುಕಹಿಯ ಸುಟ್ಟು , ಕಷ್ಟ 39730http://kannada.oneindia.com/img/2009/10/16-raghavendra-udupi1.jpg481364anandarama shastryಮತದಾರರಿಗೆ ಕೆಲವು ಪ್ರಶ್ನೆಗಳು/news/2009/04/28/few-questions-to-voters-in-karnataka.htmlಸಮಸ್ಯೆಗಳು ಎಲ್ಲಿಲ್ಲ? ರಾಜಕಾರಣಿಗಳು ನಮ್ಮ ಸಮಸ್ಯೆಗೆ ಸ್ಪಂದಿಸುತ್ತಿಲ್ಲವೆಂದು ವೋಟು ಹಾಕದೆ ಮನೇಲಿ ಕುಳಿತರೆ ಸಮಸ್ಯೆ ಉಲ್ಬಣವಾಗುತ್ತದೆಯೇ ಹೊರತು ಪರಿಹಾರವಾಗುವುದಿಲ್ಲ. ಮತ ಹಾಕದಿರುವುದೇ ದೊಡ್ಡ ಸಮಸ್ಯೆ. ಈ ಸಮಸ್ಯೆಗೆ ಪರಿಹಾರವಿರುವುದು ನಮ್ಮಲ್ಲಿಯೇ ಅಲ್ವೆ? ಇದಕ್ಕೆ ಪರಿಹಾರ ಕಂಡಕೊಂಡರೆ ತಾನೆ ಉಳಿದ ಸಮಸ್ಯೆಗಳು ಬಗೆಹರಿಯುವುದು? ಹಿಂದಿನಿಂದ ಬಂದು ಯಾರಾದರೂ ದಬ್ಬುವ ಮೊದಲೇ ವೋಟು ಹಾಕಿಬನ್ನಿ.* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರುರಾಜ್ಯದಲ್ಲಿ 36262http://kannada.oneindia.com/img/2009/04/28-anandram-shastri2.jpg481364anandarama shastryಮಾತಿನ ಭಾರಕ್ಕೆ ಕುಸಿದ ಬಿಜೆಪಿ!/news/2009/05/18/why-bjp-advani-failed-in-lok-sabha-election.htmlಪ್ರಧಾನಿಯಾಗುವ ಕನಸುಗಳನ್ನು ಕಟ್ಟಿಕೊಂಡಿದ್ದ ಲಾಲ್ ಕೃಷ್ಣ ಅಡ್ವಾಣಿಯವರ ಮುಂದಾಳತ್ವದಲ್ಲಿ ಭಾರತೀಯ ಜನತಾ ಪಕ್ಷ ವೋಟುಗಳನ್ನು ಗಿಟ್ಟಿಸುವಲ್ಲಿ ಮುಗ್ಗರಿಸಿದ್ದೆಲ್ಲಿ? ಕಾರಣಗಳು ಅನೇಕವಿದ್ದರೂ, ಮೂಲದಲ್ಲಿ ಎಡವಿದ್ದು ಮಾತುಗಾರಿಕೆಯಲ್ಲಿ. ಮಾತುಗಾರಿಕೆಯಲ್ಲಿ ಕೂಡ ಯುಪಿಎ ವೈಫಲ್ಯವನ್ನು ಬಿಂಬಿಸಲು ವಿಫಲವಾಗಿದೆ. ಮಾತು ಮನೆ ಕೆಡಿಸಿತು, ಕೋತಿ ವನ ಕೆಡಿಸಿತು ಎಂಬ ಗಾದೆ ಮಾತಿಗೆ ಬಿಜೆಪಿ ಕಿವಿಗೊಡಬೇಕು. ಮಾತಿಗಿಂತ ಕೃತಿಯೇ ಮೇಲು ಎಂಬುದನ್ನು ಬಿಜೆಪಿ ಈಗಲಾದರೂ 36730http://kannada.oneindia.com/img/2009/05/18-advani3.jpg481364anandarama shastryಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg481364anandarama shastryಎಲ್ಲಾ ಚುಟುಕವೋ, ಪ್ರಭುವೇ, ಎಲ್ಲಾ ಚುಟುಕವೋ!/column/humor/2009/0525-kannada-chutuka-anandarama-shastry.htmlದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಚುಟುಕು, 'ಮುಂದುವರಿದ'ವರ ಮನೆಗಳಲ್ಲಿ - ಆಮಂತ್ರಣ ಪತ್ರಿಕೆ ಸಹಿತ - ಮದುವೆ ಮುಂಜಿ ಚುಟುಕು, ಶ್ರಾದ್ಧವಂತೂ 'ಸಂಕಲ್ಪ ಶ್ರಾದ್ಧ'ವೆಂಬ ಹೆಸರಿನಲ್ಲಿ ಚುಟುಕೋ ಚುಟುಕು, ವಿದ್ಯೆ ಹೆಚ್ಚಾದಂತೆಲ್ಲ ಜನರ ನಡುವಿನ ಸಂಭಾಷಣೆ ಚುಟುಕು, ಪತ್ರ ವ್ಯವಹಾರ ಚುಟುಕು, ಪತ್ರಿಕೆಗಳಲ್ಲಿ ಸ್ಥಳಾಭಾವದಿಂದ ಲೇಖನಗಳೂ ಚುಟುಕು, ರಾಜ್, ಜಯ್, ವಿಷ್, ವಿನು, ಅನು, ಹೀಗೆ ಹೆಸರುಗಳೂ ಚುಟುಕು, 36877http://kannada.oneindia.com/img/2009/05/25-anandram-shastri2.jpg481364anandarama shastryಸರಬ್ಜಿತ್ ಗೆ ಕ್ಷಮಾದಾನ ಕೇಳಬೇಕೆ ಬೇಡವೆ?/response/2009/0629-letter-to-the-editor-bharat-sastry.html'ಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ' ಕುರಿತ ಆನಂದರಾಮ ಶಾಸ್ತ್ರಿ ಲೇಖನ ಓದಿದೆ. ನನ್ನ ಕೆಲವು ಅನಿಸಿಕೆಗಳನ್ನು ವಾಚಕರ ಜತೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ಶಾಸ್ತ್ರೀ ಅವರ ಲೇಖನದ ಆಶಯವನ್ನು ನಾನು ಅಲ್ಲಗಳೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಲೇಖನ ಯಾವುದೇ ನಿಖರ ಸಂದೇಶ ನೀಡುತ್ತಿಲ್ಲವಲ್ಲ ಎಂಬ ವಿಷಾದವಿದೆ.* ಭರತ್ ಶಾಸ್ತ್ರಿಸರಬ್ಜಿತ್ ಮತ್ತು ಅಫ್ಜಲ್ ಗುರು ಇಬ್ಬರ ಪ್ರಕರಣಗಳ 37641http://kannada.oneindia.com/img/2009/06/29-bharat-sastry1.jpgnews"> ಎಲ್ಲಾ ಚುಟುಕವೋ, ಪ್ರಭುವೇ, ಎಲ್ಲಾ ಚುಟುಕವೋ! | Chutuka | Humor | Kannada chutuka | Anandarama Shastry - ಎಲ್ಲಾ ಚುಟುಕವೋ, ಪ್ರಭುವೇ, ಎಲ್ಲಾ ಚುಟುಕವೋ! - Kannada Oneindia

ಎಲ್ಲಾ ಚುಟುಕವೋ, ಪ್ರಭುವೇ, ಎಲ್ಲಾ ಚುಟುಕವೋ!

H Anandarama Shastry, Bengaluru
ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಚುಟುಕು, 'ಮುಂದುವರಿದ'ವರ ಮನೆಗಳಲ್ಲಿ - ಆಮಂತ್ರಣ ಪತ್ರಿಕೆ ಸಹಿತ - ಮದುವೆ ಮುಂಜಿ ಚುಟುಕು, ಶ್ರಾದ್ಧವಂತೂ 'ಸಂಕಲ್ಪ ಶ್ರಾದ್ಧ'ವೆಂಬ ಹೆಸರಿನಲ್ಲಿ ಚುಟುಕೋ ಚುಟುಕು, ವಿದ್ಯೆ ಹೆಚ್ಚಾದಂತೆಲ್ಲ ಜನರ ನಡುವಿನ ಸಂಭಾಷಣೆ ಚುಟುಕು, ಪತ್ರ ವ್ಯವಹಾರ ಚುಟುಕು, ಪತ್ರಿಕೆಗಳಲ್ಲಿ ಸ್ಥಳಾಭಾವದಿಂದ ಲೇಖನಗಳೂ ಚುಟುಕು, ರಾಜ್, ಜಯ್, ವಿಷ್, ವಿನು, ಅನು, ಹೀಗೆ ಹೆಸರುಗಳೂ ಚುಟುಕು, ಇವರ ಉಡುಪುಗಳೂ ಚುಟುಕು!

* ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರು

ಆ ಕಾಲವೊಂದಿತ್ತು. ಮನೆಮಂದಿಯೆಲ್ಲ ಒಟ್ಟಿಗೆ ಕುಳಿತು ಹರಟುತ್ತ ಒಂದೊಂದೇ ಖಾದ್ಯವನ್ನು ಸವಿಯುತ್ತ ವಿಮರ್ಶಿಸುತ್ತ ನಿಧಾನವಾಗಿ ಸರಕು ಒಳಗಿಳಿಸುತ್ತಿದ್ದ ಭವ್ಯ ಭೋಜನದ ದಿವ್ಯ ಕಾಲ ಅದಾಗಿತ್ತು. ಈಗ ಗಡಿಬಿಡಿಯಲ್ಲಿ 'ಟೂ ಮಿನಿಟ್ಸ್ ನೂಡಲ್ಸ್' ನುಂಗಿ ಎದ್ದೇಳುವ ಕಾಲ ಬಂದಿದೆ. ಇನ್ನೂ ಅರ್ಜೆಂಟ್ ಇರುವವರು ಬ್ರೆಡ್ಡಿನ ತುಣುಕುಗಳನ್ನು ಬಸ್ಸಿನಲ್ಲೋ ತಮ್ಮ ಕಾರಿನಲ್ಲೋ ತಿಂದು ಮುಗಿಸಿ ಡ್ಯೂಟಿಗೆ ಹಾಜರಾಗುತ್ತಾರೆ. ಮಧ್ಯಾಹ್ನ ಕಚೇರಿಯ ಬಿಡುವಿನ ವೇಳೆಯಲ್ಲಿ ಕ್ಯಾರಿಯರ್ ತಂಗಳನ್ನು ಗಬಗಬನೆ ಮುಕ್ಕಿ ನೀರು ಕುಡಿಯುತ್ತಾರೆ. ಊಟ ಚುಟುಕಾಗಿದೆ. ಎರಡು ಹೊತ್ತಿನ ಊಟಕ್ಕಾಗಿ ಜೀವನವಿಡೀ ಕಷ್ಟಪಡುವ ನಾವು ಆ ಊಟವನ್ನು ಆನಂದಿಸುವಷ್ಟು ಸಮಯ ಹೊಂದಿಲ್ಲ.

ಹಿಂದೆಲ್ಲ ಗಂಡಸರು ಮನೆ ಜಗಲಿಯ ಮೇಲೋ ಊರ ಅರಳಿಕಟ್ಟೆಯ ಮೇಲೋ ಕುಳಿತು ಗಂಟೆಗಟ್ಟಲೆ ಹರಟುತ್ತಿದ್ದರು. ಹೆಂಗಸರು ದೇವಸ್ಥಾನದಲ್ಲೋ ತಂತಮ್ಮ ಮನೆಗಳ ತುಳಸಿಕಟ್ಟೆಗಳೆದುರೋ ಮುಖಾಮುಖಿಯಾಗಿ ಕೇರಿ ಸುದ್ದಿಯೆಲ್ಲ ಸುದೀರ್ಘವಾಗಿ ಮಾತಾಡುತ್ತಿದ್ದರು. ಈಗೇನಿದ್ದರೂ 'ಹಾಯ್, ಬಾಯ್, ಆರಾಮಾ? ಹ್ಞೂಂ, ಕೆಲ್ಸ ಆಯ್ತಾ, ಇನ್ನೂ ಇಲ್ಲ', ಇಷ್ಟೆ. ಹೆಚ್ಚೆಂದರೆ ದೂರವಾಣಿಯಲ್ಲಿ - ಅವರು ಹತ್ತಿರದಲ್ಲೇ ಇದ್ದರೂ - ಒಂದೆರಡು ಮಾತು, ಫಿನಿಷ್. ಕೆಲವರಿಗೆ ಅದಕ್ಕೂ ಸಮಯವಿಲ್ಲ ಅಥವಾ ಮನಸ್ಸಿಲ್ಲ, ಅವರದು ಬರೀ ಎಸ್‌ಎಂಎಸ್! ಮಾತು ಚುಟುಕಾಗಿದೆ. ಪಶುಪಕ್ಷಿಗಳಿಗಿಂತ ನಾವು ಭಿನ್ನವಾಗಿರುವುದೇ ನಮ್ಮ ನಡೆ'ನುಡಿ'ಯಿಂದಾಗಿ ಎಂಬ ಅರಿವಿದ್ದೂ ಸುಸೂತ್ರ ನಾಲ್ಕು ಮಾತಾಡುವಷ್ಟು ನಮಗಿಂದು ವ್ಯವಧಾನವಿಲ್ಲ ಅಥವಾ ಮನಸ್ಸಿಲ್ಲ.

ಚುಟುಕು-ಜೋಕು : ಕಾಳಿದಾಸನ ಮಹಾಕಾವ್ಯಗಳು ನಮಗೆ ಗೊತ್ತು. ಗೊತ್ತು ಅಂದರೆ, ಕನಿಷ್ಠ ಅವುಗಳ ಹೆಸರಾದರೂ ಗೊತ್ತು. ಅದೂ ಗೊತ್ತಿಲ್ಲದ ವಿದ್ಯಾವಂತರಿಗೆ ಕೊನೇಪಕ್ಷ ಕಾಳಿದಾಸ ಎಂಬ ಹೆಸರಾದರೂ ಗೊತ್ತು. ಇದೇರೀತಿ ಬಾಣನ ಬೃಹತ್ 'ಕಾದಂಬರಿ' ನಮಗೆ ಗೊತ್ತು. ಪಂಪನ ಮಹಾಭಾರತದಿಂದ ಮೊದಲ್ಗೊಂಡು ಕುವೆಂಪುರವರ 'ಶ್ರೀ ರಾಮಾಯಣ ದರ್ಶನಂ'ವರೆಗೆ ಅನೇಕಾನೇಕ ಮಹಮಹಾ ಮಹಾಕಾವ್ಯಗಳನ್ನು ನಮ್ಮ ಹಿರಿಯರು ಓದಿದ್ದಾರೆ, ನಾವು ಹೆಸರು ಕೇಳಿದ್ದೇವೆ. ಆದರೆ ಇಂದು ಕಥೆ, ಕಾವ್ಯ ಎಲ್ಲ ಚುಟುಕಾಗಿದೆ. ಕಾರ್ಡಿನಲ್ಲಿ ಕಥೆ, ಒಂದೇ ವಾಕ್ಯದ ಕಥೆ, ಅರ್ಧ ವಾಕ್ಯದ ಕಥೆ, ಇಂಥವು ಜನಪ್ರಿಯವಾಗತೊಡಗಿವೆ. ಪೂರ್ಣ ಪ್ರಮಾಣದ ಕವಿತೆಗಳಿಗಿಂತ ಚುಟುಕಗಳೇ ಮೆರೆಯತೊಡಗಿವೆ. 'ಚುಟುಕ ಕವಿ'ಗೋಷ್ಠಿಗಳಲ್ಲಿ ಚುಟುಕು ಕವಿಗಳು ಚುಟುಕಾಗಿ ಕುಟುಕುವುದು ಜನರಿಗೆ ಇಷ್ಟವಾಗತೊಡಗಿದೆ. ಸುದೀರ್ಘ ಲಲಿತ ಪ್ರಬಂಧವನ್ನಾಗಲೀ ಹಾಸ್ಯಬರಹವನ್ನಾಗಲೀ ಓದಲು ಯಾರಿಗೆ ಈಗ ಸಮಯವಿದೆ? ಸಮಯವಿದ್ದರೂ ಅಂಥ ಓದು ಯಾರಿಗೆ ಬೇಕಾಗಿದೆ? ನಗೆಹನಿಗಳನ್ನು ಓದಿ ನಕ್ಕು-ಬಿಡೋಣ, ಸಾಕು, ಹೀಗಾಗಿದೆ ನಮ್ಮ ಇಂದಿನ ಮನೋಭಾವ. ಅಂದು ನಾಡಿಗೇರ ಕೃಷ್ಣರಾಯರಾಗಲೀ ಬೀಚಿಯವರಾಗಲೀ ಮಾಡುತ್ತಿದ್ದಂಥ ಸುದೀರ್ಘ ಲಘುಭಾಷಣಗಳು ಇಂದು ನಮಗೆ ಬೇಕಿಲ್ಲ. ಅಭಿನವ ಬೀ'ಛಿ'ಗಳ ಚುಟುಕು-ಜೋಕುಗಳಿಗೆ ಬಿದ್ದುಬಿದ್ದು ನಕ್ಕು ಎದ್ದುನಡೆಯುವ ಜೋಕುಮಾರರು ನಾವಾಗಿದ್ದೇವೆ. ಕಿರಿ-ಕಿರಿ ಜೋಕು ನಮಗೆ ಸಾಕು. 'ಔರೇಕ್ ಜೋಕ್ ಮಾರೋ ಸಾಮೀ', ಎನ್ನುತ್ತೇವೆ, ಅವರು ಜೋಕು ಮಾರುತ್ತಾರೆ. ನಾವು (ಕೇಳಿದ್ದನ್ನೇ ಕೇಳಿ)ಕೊಂಡು - ನಗಾಡಿಕೊಂಡು - ಎದ್ದು ನಡೆಯುತ್ತೇವೆ.

ಸಾಹಿತ್ಯವೂ ಚುಟುಕು : ಜೋಕಿನ ವಿಷಯ ಬಿಡಿ. ಆಧ್ಯಾತ್ಮ, ಮನೋವಿಕಾಸ, ಜೀವನವಿಧಾನ, ಇಂಥ ಗಂಭೀರ ವಿಷಯಗಳೂ ನಮಗಿಂದು ಚುಟುಕಾಗಿಯೇ ತಿಳಿಸಲ್ಪಡಬೇಕು. ಮೂರುಮೂರು ಗಂಟೆಯ ಹರಿಕಥೆ, ಪ್ರವಚನ, ಉಪನ್ಯಾಸಗಳನ್ನು ಕೇಳಲು ನಮಗಿಂದು ವ್ಯವಧಾನವಿಲ್ಲ. ('ಎಲ್ಲೀ ಹರಿಕಥೆ ಹಚ್ಚಿದಿ, ಷಾರ್ಟಾಗಿ ಒದರು', ಅನ್ನುತ್ತೇವೆ.) ಮೂರು ನಿಮಿಷದಲ್ಲಿ ರೇಡಿಯೋದಲ್ಲಿ 'ಚಿಂತನ' ಮುಗಿದುಬಿಡಬೇಕು, ಐದು ನಿಮಿಷದಲ್ಲಿ ಟಿವಿಯಲ್ಲಿ ಉಪನ್ಯಾಸ ಶುಭಂ ಆಗಬೇಕು. ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲೂ ಗಹನಪ್ರಬಂಧವೊಂದು ಆರೇಳು ನಿಮಿಷಗಳೊಳಗೆ ಮಂಡನೆಯಾಗಿಬಿಡಬೇಕು. ಇಲ್ಲದಿದ್ದಲ್ಲಿ ಆರೇಳು ಮಂದಿಯನ್ನುಳಿದು ಇತರರೆಲ್ಲ, 'ಯಾರಿಗೆ ಬೇಕು ಈ ಬೈರಿಗೆ', ಎಂದು ಗೊಣಗುತ್ತ ಎದ್ದು ನಡೆದುಬಿಡುವರೆಂದು (ವೃಥಾ) ಭಯ ಸಂಘಟಕರಿಗೆ! ಒಟ್ಟಾರೆ, ಸಾಹಿತ್ಯವೂ ಇಂದು ಚುಟುಕಾಗಿರಬೇಕು. ಕ್ಷಣಹೊತ್ತಿನೊಳಗೇ ಆಣಿಮುತ್ತು ಉದುರಿಬಿಡಬೇಕು.

ಸಾಹಿತ್ಯ ಮಾತ್ರವಲ್ಲ, ಸಂಗೀತ, ನಾಟಕ, ಎಲ್ಲ ಅಷ್ಟೇ. ಅಹೋರಾತ್ರಿ ಶಾಸ್ತ್ರೀಯ ಸಂಗೀತ, ಬೆಳತನಕ ಯಕ್ಷಗಾನ-ಬಯಲಾಟ, ಅಂಥ ಕಾಲ ಹೋಯಿತು. ಈಗ - ಟಿವಿಯಲ್ಲಿ ನೋಡುವುದಿಲ್ಲವೆ, ಆ ರೀತಿ - ಅರ್ಧ, ಹೆಚ್ಚೆಂದರೆ ಒಂದು ಗಂಟೆಯೊಳಗೆ ಸಂಗೀತ, ಯಕ್ಷಗಾನ ಮುಗಿದುಬಿಡಬೇಕು. ಟಿವಿಯಲ್ಲಂತೂ ಒಮ್ಮೊಮ್ಮೆ ಮೂರೇ ನಿಮಿಷದಲ್ಲಿ ಒಂದು ಶಾಸ್ತ್ರೀಯ ಗಾಯನ ಪೂರೈಸಿಬಿಡಬೇಕು. ಝಲಕ್ ಆದರೂ ಸರಿಯೇ. (ಅಶಾಸ್ತ್ರೀಯವಾದರೂ ಚಿಂತೆಯಿಲ್ಲ!) ಚುಟುಕಾಗಿ ಮುಗಿದುಬಿಡುವುದು ಮುಖ್ಯ.

'ಟಿವಿ ಧಾರಾವಾಹಿ ಮಾತ್ರ ಚುಟುಕಾಗಿಲ್ಲ, ಅದೆಂದಿದ್ದರೂ ಮೆಗಾ ಮಗಾ', ಅನ್ನುವಿರಾ? ಇಲ್ಲೇ ನೀವು ಎಡವಿದ್ದು. ಮೇಲ್ನೋಟಕ್ಕೇನೋ ಅದು ಮೆಗಾ ಅನ್ನಿಸುತ್ತದೆ, ಆದರೆ ಸೂಕ್ಷ್ಮವಾಗಿ ಗಮನಿಸಿದಾಗ ಟಿವಿ ಧಾರಾವಾಹಿಗಿಂತ ಚುಟುಕು ಇನ್ನೊಂದಿಲ್ಲ ಎಂಬ ಸತ್ಯದ ಅರಿವಾಗುತ್ತದೆ. ಪ್ರತಿ ಎಪಿಸೋಡೂ ಕೇವಲ ಅರ್ಧಗಂಟೆ; ಅದರಲ್ಲಿ ಜಾಹಿರಾತು ಕಳೆದರೆ ಉಳಿಯುವುದು ಹದಿನೈದೇ ನಿಮಿಷ; ಅದರಲ್ಲಿ ಐದು ನಿಮಿಷ ಟೈಟಲ್, ಶೀರ್ಷಿಕೆ ಗೀತೆ, ಇದುವರೆಗಿನ ಕಥೆ, ಇತ್ಯಾದಿ; ಉಳಿದ ಹತ್ತು ನಿಮಿಷದಲ್ಲಿ ಅರ್ಧಪಾಲು ಅವಧಿ ಮಾತಿಲ್ಲದ ಕ್ಲೋಸಪ್ ಷಾಟುಗಳು; ಇದೆಲ್ಲ ಜಾತಾ, ಕಥೆಗೆ ಮೀಸಲಾದ ಸಮಯ (ವಾರದಲ್ಲಿ) ಕೇವಲ ಐದೇ ನಿಮಿಷ! ಇದು ಚುಟುಕಲ್ಲದೆ ಮತ್ತೇನು? ಇಷ್ಟಾಗಿ, ಒಂದು ವರ್ಷವಿಡೀ ಓಡಿದ (ಕುಂಟಿದ) ಧಾರಾವಾಹಿಯ ಕಥೆಯನ್ನು ಚುಟುಕಾಗಿ ಒಂದೇ ವಾಕ್ಯದಲ್ಲಿ ಹೇಳಿಬಿಡಬಹುದಲ್ಲವೆ?

ಪಾಠ-ಆಟ : ಶಾಲಾ ಕಾಲೇಜುಗಳ ಪರೀಕ್ಷಾ ಉತ್ತರಗಳೂ ಚುಟುಕಾಗತೊಡಗಿವೆ. ನಾವು ಚಿಕ್ಕವರಿದ್ದಾಗ ಅಡಿಷನಲ್ ಷೀಟುಗಟ್ಟಲೆ ಬರೆಬರೆದು ಲಗತ್ತಿಸುತ್ತಿದ್ದೆವು. ಇದೀಗ ನ್ಯೂ ಟೈಪ್. ಪ್ರಶ್ನೆಪತ್ರಿಕೆಯಲ್ಲೇ ಉತ್ತರ ಟಿಕ್ ಮಾಡಿ ವಾಪಸ್ ಕೊಟ್ಟರಾಯಿತು. ಏಕ್‌ದಂ ಚುಟುಕು. ಕಾಲೇಜು ವಿದ್ಯಾರ್ಥಿಗಳಿಗಂತೂ ಪುಸ್ತಕಗಳೂ ಚುಟುಕು. ತೆಳುವಾದ ಒಂದು ನೋಟ್‌ಬುಕ್ಕನ್ನು ಕೈಯಲ್ಲಿ ತೂಗಾಡಿಸಿಕೊಂಡು ಹೋದರೆ ಸಾಕು, ಇಡೀ ದಿನದ ಕಾಲೇಜು ಪಾಠ ಅಟೆಂಡ್ ಮಾಡಬಹುದು. ಅಂಥ ಎರಡು ನೋಟ್‌ಬುಕ್ ಇದ್ದರೆ ಸಾಕು, ಇಡೀ ವರ್ಷ ತಳ್ಳಬಹುದು! ಪ್ರೈಮರಿ ಶಾಲೆಗಳ ಪುಸ್ತಕಗಳ ಹೊರೆಯನ್ನೂ ಚುಟುಕುಗೊಳಿಸುವ ಚಿಂತನೆ ತೀವ್ರವಾಗಿ ನಡೆದಿದೆ.

ಪಾಠವಷ್ಟೇ ಅಲ್ಲ, ಆಟವೂ ಚುಟುಕಾಗಿದೆ. ಐದು ದಿನಗಳ ಕ್ರಿಕೆಟ್ ಪಂದ್ಯ ಇತ್ತು. ಮೂರು ದಿನಕ್ಕಿಳಿಯಿತು. ಒಂದು ದಿನದ ಪಂದ್ಯ ಶುರುವಾಯಿತು. ಇದೀಗ ಟ್ವೆಂಟಿ20 ಭರಾಟೆ. ಮೂರೇ ಗಂಟೆಯಲ್ಲಿ ಪಂದ್ಯ ಖಲಾಸ್! ಮುಂದೆ, ಟೆನ್10, ಫೈವ್5, ಕೊನೆಗೆ 'ಏಕಾ ಏಕಿ' ಪಂದ್ಯ ಬಂದರೂ ಆಶ್ಚರ್ಯವಿಲ್ಲ. ಕಚೇರಿ ಕೆಲಸದ ಮಧ್ಯೆ ಎದ್ದುಹೋಗಿ ಸಿಗರೇಟ್ ಸೇದಿಬರುವಂತೆ ಒನ್1 ಪಂದ್ಯ ನೋಡಿಬಿಟ್ಟು ಬರಬಹುದು! ಚುಟುಕಿನ ಪರಾಕಾಷ್ಠೆಯಲ್ಲವೆ ಇದು?

ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರ ಚುಟುಕು, 'ಮುಂದುವರಿದ'ವರ ಮನೆಗಳಲ್ಲಿ - ಆಮಂತ್ರಣ ಪತ್ರಿಕೆ ಸಹಿತ - ಮದುವೆ ಮುಂಜಿ ಚುಟುಕು, ಶ್ರಾದ್ಧವಂತೂ 'ಸಂಕಲ್ಪ ಶ್ರಾದ್ಧ'ವೆಂಬ ಹೆಸರಿನಲ್ಲಿ ಚುಟುಕೋ ಚುಟುಕು, ವಿದ್ಯೆ ಹೆಚ್ಚಾದಂತೆಲ್ಲ ಜನರ ನಡುವಿನ ಸಂಭಾಷಣೆ ಚುಟುಕು, ಪತ್ರ ವ್ಯವಹಾರ ಚುಟುಕು, ಪತ್ರಿಕೆಗಳಲ್ಲಿ ಸ್ಥಳಾಭಾವದಿಂದ ಲೇಖನಗಳೂ ಚುಟುಕು, ರಾಜ್, ಜಯ್, ವಿಷ್, ವಿನು, ಅನು, ಹೀಗೆ ಹೆಸರುಗಳೂ ಚುಟುಕು, ಇವರ ಉಡುಪುಗಳೂ ಚುಟುಕು.......ಎಲ್ಲಾ ಚುಟುಕವೋ, ಪ್ರಭುವೇ, ಎಲ್ಲಾ ಚುಟುಕವೋ!

ಚುಟುಕು ಅನಾದಿ :
ಹಾಗಂತ, ಈ ಚುಟುಕೆಂಬುದು ಇಂದಿನ ಧಾವಂತದಿಂದಾಗಿ ಹುಟ್ಟಿರುವ ಕೂಸೆಂದು ವಿಶ್ಲೇಷಿಸುವುದೂ ತಪ್ಪಾಗುತ್ತದೆ. ಮಹಾಭಾರತವನ್ನು ರಚಿಸಿದ ವ್ಯಾಸಮಹರ್ಷಿಗಳೇ, 'ಪರೋಪಕಾರಂ ಪುಣ್ಯಾಯ, ಪಾಪಾಯ ಪರಪೀಡನಂ', ಎಂದು ಮಹಾಭಾರತದ ಸಾರವನ್ನು ಚುಟುಕಾಗಿ ಎರಡೇ ಮಾತಿನಲ್ಲಿ ಹೇಳಿಬಿಟ್ಟಿದ್ದಾರೆ. 'ಈ ಎರಡು ಮಾತುಗಳೇ ಹದಿನೆಂಟೂ ಪುರಾಣಗಳ ಸಾರಾಂಶ (ಅಷ್ಟಾದಶ ಪುರಾಣೇಷು ವ್ಯಾಸಸ್ಯ ವಚನದ್ವಯಂ)', ಎಂದು ತೀರ್ಮಾನಿಸುವ ಮೂಲಕ ನಮ್ಮ ಹಿರಿಯರು ಅಷ್ಟಾದಶ ಪುರಾಣಗಳಿಗೂ ಚುಟುಕು ರೂಪವನ್ನು ಬಲು ಹಿಂದೆಯೇ ಕೊಟ್ಟುಬಿಟ್ಟಿದ್ದಾರೆ. ರಾಮಾಯಣದಂಥ ರಾಮಾಯಣವನ್ನು ಕೂಡ ನಮ್ಮ ಹಿರಿಯರು ಚುಟುಕಾಗಿ, 'ಪೂರ್ವಂ ರಾಮ ತಪೋವನಾತ್ ಗಮನಂ, ಹತ್ವಾ ಮೃಗಂ ಕಾಂಚನಂ. ವೈದೇಹಿ ಹರಣಂ. ಜಟಾಯು ಮರಣಂ, ಸುಗ್ರೀವ ಸಂಭಾಷಣಂ, ವಾಲೀ ನಿಗ್ರಹಂ, ಸಮುದ್ರ ತರಣಂ, ಲಂಕಾಪುರೀ ದಹನಂ, ಪಶ್ಚಾತ್ ರಾವಣ ಕುಂಭಕರ್ಣ ಹನನಂ, ಏತತ್ ಹಿ ರಾಮಾಯಣಂ', ಎಂದು ಸಾರಿಬಿಟ್ಟಿದ್ದಾರೆ. ಇನ್ನೂ ಅಗ್ದಿ ಚುಟುಕುಪ್ರಿಯರು ಇದನ್ನು, 'ಶ್ರೀರಾಮ ಜನನಂ, ಸೀತಾಪಹರಣಂ, ರಾವಣ ಹನನಂ, ಏತತ್ ರಾಮಾಯಣಂ', ಎಂದು ಇನ್ನಷ್ಟು ಮೊಟಕುಗೊಳಿಸಿದ್ದಾರೆ! 'ಶ್ಲೋಕಾರ್ಧೇನ ಪ್ರವಕ್ಷ್ಯಾಮಿ ಯದುಕ್ತಂ ಗ್ರಂಥಕೋಟಿಭಿಃ, ಬ್ರಹ್ಮಂ ಸತ್ಯಂ ಜಗನ್ಮಿಥ್ಯಂ ಜೀವೋ ಬ್ರಹ್ಮಸ್ಯ ನಾಪರಃ', ಎಂದು ಸಾರುವ ಮೂಲಕ ಆದಿಶಂಕರರು ಕೋಟಿ ಗ್ರಂಥಗಳ ಸಾರವನ್ನು ಚುಟುಕಾಗಿ ಕೇವಲ ಅರ್ಧ ಶ್ಲೋಕದಲ್ಲಿ ಹೇಳಲು ಯತ್ನಿಸಿದ್ದಾರೆ. ಇದನ್ನೆಲ್ಲ ಗಮನಿಸಿ ನಾನೀಗ ಚುಟುಕಾಗಿ ಹೇಳುವುದಿಷ್ಟೆ: 'ಚುಟುಕು-ಚುಟುಕ ಇದು ಅನಾದಿ ಸಂಗತಿ; ಸನಾತನವಾದದ್ದು; ಇಂದು ಇದಕ್ಕೆ ಡಿಮಾಂಡ್ ಅತಿ; ಅಷ್ಟೆ'.

ಈ ಬ್ರಹ್ಮಾಂಡದಲ್ಲಿ ನಾವೆಲ್ಲ ಒಂದು ತಟಕು. ಅನಂತ ಕಾಲದೆದುರು ನಮ್ಮ ಜೀವಿತಾವಧಿಯೇ ಒಂದು ಚುಟುಕು. ಆದ್ದರಿಂದ, ಚುಟುಕಿಗೆ ಜೈ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+