38243manikanthಅಮ್ಮ ಹೇಳಿದ ಎಂಟು ಸುಳ್ಳುಗಳು/column/manikanth/2008/0918-eight-lies-of-my-mothers.htmlಸೂಚನೆ : ಈ ಸುಳ್ಳುಗಳನ್ನು ಓದುವುದಕ್ಕೆ ಶುರುಮಾಡುವ ಮುನ್ನ ಕರವಸ್ತ್ರವನ್ನು ಕೈಯಲ್ಲಿಟ್ಟುಕೊಂಡಿದ್ದರೆ ಕ್ಷೇಮ. ಯಾಕೆಂದರೆ, ಇದು ತಾಯಿಯ ಪ್ರೀತಿ ಮತ್ತು ತ್ಯಾಗವನ್ನು ಕಂಡುಂಡು ಕಡುಬಡತನದಲ್ಲಿ ಬೆಳೆದ ಕನ್ನಡ ಮಕ್ಕಳಿಗೆ ಮಾತ್ರ. ಸಿರಿ ಉಕ್ಕಿ ಮದ ಹೊಕ್ಕಿದವರಿಗಿಲ್ಲ. ಅಂಕಣಕಾರ : ಎ.ಆರ್. ಮಣಿಕಾಂತ್ ತುಂಬಾ ದೂರ ಅಲ್ಲ ಸಾರ್, ಇಲ್ಲೇ, ಬೆಂಗಳೂರು ತುಮಕೂರಿನ ಮಧ್ಯೆ ನೆಲಮಂಗಲ 765http://kannada.oneindia.com/img/2009/10/24-manikanth1.jpg38243manikanthಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38243manikanthಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg38243manikanthಪ್ರೀತಿಯ ತಂದೆಗೆ ಮಗಳ ಪತ್ರ.../column/manikanth/2009/0109-letter-from-daughter-to-beloved-father.htmlಮಕ್ಕಳು ಜೀವನದಲ್ಲಿ ಎಡವದಿರಲೆಂದು ಮುದ್ದು ಮಾಡಿ ಬೆಳೆಸಿದ ಅಪ್ಪ ಅಮ್ಮಂದಿರು ಹೇಗೆ ಅಪೇಕ್ಷಿಸುತ್ತಾರೋ, ಅರಿವಿದ್ದೋ, ಅರಿವಿಲ್ಲದೆಯೋ ಎಡವಿ ಬಿದ್ದಾಗ ಮಕ್ಕಳು ಕೂಡ ಪ್ರೀತಿಯ ಅಪ್ಪ ಮತ್ತು ಅಮ್ಮ ತಮ್ಮ ಕಿರುಬೆರಳು ಹಿಡಿದು ಎಬ್ಬಿಸುತ್ತಾರೆಂದು ಅಪೇಕ್ಷಿಸುತ್ತವೆ. ಸೋತಾಗ ಕೈಹಿಡಿದು ಎಬ್ಬಿಸಿ, ಗೆದ್ದಾಗ ಬೆನ್ನುತಟ್ಟಿ ಪ್ರೋತ್ಸಾಹಿಸುವುದು ಪ್ರತಿ ಪಾಲಕರ ಕರ್ತವ್ಯ.* ಎ.ಆರ್. ಮಣಿಕಾಂತ್ಮಗಳ ವರ್ತನೆ ಯಾಕೋ ಸರಿಯಾಗಿಲ್ಲ. ಇಂಥದೊಂದು ಅನುಮಾನ 33978http://kannada.oneindia.com/img/2009/01/09-daughter-father-love1.jpg38243manikanthಬೇಡ ಬಿಟಿ ಬದನೆ, ಶ್ರೀರಾಮುಲು ಅವರಿಗೆ ನಿವೇದನೆ/column/manikanth/2009/0128-bt-brinjal-how-safe-is-gm-crop.htmlಜೈವಿಕ ತಂತ್ರಜ್ಞಾನ ಬಳಸಿ ಬೆಳೆಯಲಾಗುವ ಆಹಾರದ ವಿರುದ್ಧ ಇಡೀ ದೇಶದಲ್ಲೇ ಹುಯಿಲೆದ್ದಿದೆ. ಕುಲಾಂತರಿ ಆಹಾರ ತಯಾರಿಗೆ, ಸಂಶೋಧನೆಗೆ ನಾನು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವರು ಕೂಡ ಘೋಷಿಸಿದ್ದಾರೆ. ರಾಜ್ಯದ ಆರೋಗ್ಯ ಸಚಿವರಾದ ಶ್ರೀರಾಮುಲು ಮಾತ್ರ ಬಾಯಿಗೆ ಬಿರಡೆ ಹಾಕಿ ಕುಳಿತಿದ್ದಾರೆ. ಸಾವಯವ ಕೃಷಿಗೆ ಉತ್ತೇಜನ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಜೈವಿಕ ತಂತ್ರಜ್ಞಾನದ ಬಳಕೆ 34337http://kannada.oneindia.com/img/2009/01/28-bt-brinjal1.jpg124249ubhaya kushalopariಅಮ್ಮ ಹೇಳಿದ ಎಂಟು ಸುಳ್ಳುಗಳು/column/manikanth/2008/0918-eight-lies-of-my-mothers.htmlಸೂಚನೆ : ಈ ಸುಳ್ಳುಗಳನ್ನು ಓದುವುದಕ್ಕೆ ಶುರುಮಾಡುವ ಮುನ್ನ ಕರವಸ್ತ್ರವನ್ನು ಕೈಯಲ್ಲಿಟ್ಟುಕೊಂಡಿದ್ದರೆ ಕ್ಷೇಮ. ಯಾಕೆಂದರೆ, ಇದು ತಾಯಿಯ ಪ್ರೀತಿ ಮತ್ತು ತ್ಯಾಗವನ್ನು ಕಂಡುಂಡು ಕಡುಬಡತನದಲ್ಲಿ ಬೆಳೆದ ಕನ್ನಡ ಮಕ್ಕಳಿಗೆ ಮಾತ್ರ. ಸಿರಿ ಉಕ್ಕಿ ಮದ ಹೊಕ್ಕಿದವರಿಗಿಲ್ಲ. ಅಂಕಣಕಾರ : ಎ.ಆರ್. ಮಣಿಕಾಂತ್ ತುಂಬಾ ದೂರ ಅಲ್ಲ ಸಾರ್, ಇಲ್ಲೇ, ಬೆಂಗಳೂರು ತುಮಕೂರಿನ ಮಧ್ಯೆ ನೆಲಮಂಗಲ 765http://kannada.oneindia.com/img/2009/10/24-manikanth1.jpg124249ubhaya kushalopariಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg124249ubhaya kushalopariಪ್ರೀತಿಯ ತಂದೆಗೆ ಮಗಳ ಪತ್ರ.../column/manikanth/2009/0109-letter-from-daughter-to-beloved-father.htmlಮಕ್ಕಳು ಜೀವನದಲ್ಲಿ ಎಡವದಿರಲೆಂದು ಮುದ್ದು ಮಾಡಿ ಬೆಳೆಸಿದ ಅಪ್ಪ ಅಮ್ಮಂದಿರು ಹೇಗೆ ಅಪೇಕ್ಷಿಸುತ್ತಾರೋ, ಅರಿವಿದ್ದೋ, ಅರಿವಿಲ್ಲದೆಯೋ ಎಡವಿ ಬಿದ್ದಾಗ ಮಕ್ಕಳು ಕೂಡ ಪ್ರೀತಿಯ ಅಪ್ಪ ಮತ್ತು ಅಮ್ಮ ತಮ್ಮ ಕಿರುಬೆರಳು ಹಿಡಿದು ಎಬ್ಬಿಸುತ್ತಾರೆಂದು ಅಪೇಕ್ಷಿಸುತ್ತವೆ. ಸೋತಾಗ ಕೈಹಿಡಿದು ಎಬ್ಬಿಸಿ, ಗೆದ್ದಾಗ ಬೆನ್ನುತಟ್ಟಿ ಪ್ರೋತ್ಸಾಹಿಸುವುದು ಪ್ರತಿ ಪಾಲಕರ ಕರ್ತವ್ಯ.* ಎ.ಆರ್. ಮಣಿಕಾಂತ್ಮಗಳ ವರ್ತನೆ ಯಾಕೋ ಸರಿಯಾಗಿಲ್ಲ. ಇಂಥದೊಂದು ಅನುಮಾನ 33978http://kannada.oneindia.com/img/2009/01/09-daughter-father-love1.jpg124249ubhaya kushalopariಜಿಯಾಂಗ್-ಕ್ವಿನ್‌ರ ಅಮರ ಪ್ರೇಮದ ಕತೆ/column/manikanth/2009/0205-a-chinese-immoral-love-story.htmlಹತ್ತು ವರ್ಷ ದೊಡ್ಡವಳಾದ ಪ್ರಿಯತಮೆ ಬೆಟ್ಟ ಇಳಿಯಲು ಅನುವಾಗಲೆಂದು ಸಾವಿರಾರು ಮೆಟ್ಟಿಲುಗಳನ್ನು ಕಡಿದು ಎಲ್ಲ ವೈರುದ್ಧ್ಯಗಳನ್ನು ಮೆಟ್ಟಿನಿಂತ ಸಾಹಸಿಯ ಕಥೆಯಿದು. ಸಮಾಜದಿಂದ ದೂರವೇ ಉಳಿದು ಅರ್ಧ ಶತಮಾನ ಕಾಡಿನ ಗುಹೆಯಲ್ಲೇ ಪ್ರೇಮ ಜೀವನ ನಡೆಸಿದ ಅಮರ ಪ್ರೇಮಿಗಳ ಕಥಾನಕವಿದು. ಈ ಪ್ರೇಮಕ್ಕೆ ಸಾಕ್ಷಿಯಾಗಿ ಕಥಾನಾಯಕಿ ಇಂದಿಗೂ ಚೀನಾದಲ್ಲಿ ಜೀವಂತವಿದ್ದಾಳೆ. ಆಕೆಗೊಂದು ಪ್ರೇಮೋನ್ನಮಃ.* ಎಆರ್ ಮಣಿಕಾಂತ್ಪ್ರೀತಿಸಿದವಳಿಗಾಗಿ ಹೆತ್ತವರನ್ನು ತೊರೆದವರಿದ್ದಾರೆ. 34496http://kannada.oneindia.com/img/2009/02/05-guo-jiang-qu1.jpg124249ubhaya kushalopariಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg211598deathಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg211598deathಬೆಚ್ಚಿ ಬೀಳಿಸುತ್ತಿರುವಜಾಕ್ಸನ್ ಶವಪರೀಕ್ಷೆ ವರದಿ/movies/hollywood/2009/06/30-michael-jackson-accident-murder-or-suicide.htmlಪಾಪ್ ಮಾಂತ್ರಿಕ ಮೈಕೆಲ್ ಜಾಕ್ಸನ್ ಶವ ಪರೀಕ್ಷೆಯ ವರದಿ ಬೆಚ್ಚಿ ಬೀಳಿಸುವ ಅಂಶಗಳನ್ನು ಹೊರಹಾಕಿದೆ. ಸಾವಿಗೂ ಮುನ್ನ ಜಾಕ್ಸನ್ ಅಕ್ಷರಶಃ ಅಸ್ಥಿಪಂಜರವಾಗಿದ್ದರು. ಮುರಿದ ಪಕ್ಕೆಲುಬುಗಳು, ಸುಕ್ಕುಗಟ್ಟಿದ ಚರ್ಮ, ಮೂಗೇಟುಗಳಿಂದ ಅವರ ದೇಹ ಜರ್ಜರಿತವಾಗಿತ್ತು. ಉದರದಲ್ಲಿ ಬರೀ ಮಾತ್ರೆಗಳಿದ್ದವು ಎಂಬ ವರದಿಯನ್ನು ಬ್ರಿಟನ್ನಿನ ಸನ್ ನಿಯತಕಾಯಿಕೆ ಬಹಿರಂಗಪಡಿಸಿದೆ.ಜಾಕ್ಸನ್ ರಭುಜಗಳು, ನಿತಂಬಗಳು ಚುಚ್ಚಿದ ಗಾಯಗಳಿಂದ ಕೂಡಿತ್ತು. ಅವರಿಗೆ ನೋವು ನಿವಾರಕ 37663http://kannada.oneindia.com/img/2009/06/30-mj2.jpg211598deathಸಾವು, ಕರೆಯದೇ ಬರುವ ಅತಿಥಿ/column/manikanth/2009/0909-death-the-only-guest-comes-without-notice.htmlಅದೊಂದು ಶನಿ, ಅದಕ್ಕೊಂದು ಶಿಸ್ತಿಲ್ಲ. ನಿಯತ್ತಿಲ್ಲ. ಕರುಣೆಯಿಲ್ಲ. ದಯೆ-ದಾಕ್ಷಿಣ್ಯವಿಲ್ಲ. ಬಡವ-ಬಲ್ಲಿದರೆಂಬ ಬೇಧವಿಲ್ಲ. ಖದೀಮರನ್ನು ಕಂಡರೆ ಹೆದರಿಕೆಯಿಲ್ಲ. ಮಕ್ಕಳನ್ನು ಕಂಡರೆ ವಿಶೇಷ ಪ್ರೀತಿಯೂ ಇಲ್ಲ. ರೋಗಿಗಳ ಮೇಲೆ ಅದಕ್ಕೆ ಅನುಕಂಪವಿಲ್ಲ. ನಿರ್ಗತಿಕರ ಬಗ್ಗೆ ವಿಶೇಷ ಒಲವೂ ಇಲ್ಲ. ಶ್ರೀಮಂತರೊಂದಿಗೆ ಅದು ಚೌಕಾಸಿಗೆ ನಿಲ್ಲುವುದಿಲ್ಲ. ಪಾಪ, ಬಡವ ಎಂದು ಬಿಟ್ಟು ಹೋಗುವುದೂ ಇಲ್ಲ. ಮನುಷ್ಯರ ಕಥೆ ಹಾಗಿರಲಿ, ಮೂಕ ಪ್ರಾಣಿಗಳ 39090http://kannada.oneindia.com/img/2009/09/09-death2.jpg211598deathಮಕ್ಕಳ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸೋಣ/cj/vinayak-patagar/2009/1114-help-these-children-fight-against-death.htmlಹತ್ತಿರದಲ್ಲಿರುವ ಎಚ್ಐವಿ/ಏಡ್ಸ್ ಬಗ್ಗೆ ಕೆಲಸ ಮಾಡುತ್ತಿರುವ ಸಂಸ್ಥೆಗೆ ಹೋಗಿ ಕಷ್ಟದಲ್ಲಿರುವ ಸೋಂಕಿತ ಮಕ್ಕಳ ಬಗ್ಗೆ ತಿಳಿದುಕೊಳ್ಳಿ. ಯಾವುದಾರು ಒಂದು ಮಗುವಿನ ಪ್ರತಿ ತಿಂಗಳ ಆಹಾರದ ಆಥವಾ ಔಷಧಿಯ ಖರ್ಚನ್ನು ನೇರವಾಗಿ ಮಗುವಿಗೆ ತಲಪುವಂತೆ ನೋಡಿಕೊಳ್ಳಿ. ಮುಗ್ದ ಮಕ್ಕಳ ಮುಖದಲ್ಲಿ ನಗುವನ್ನು ಮೂಡಿಸಿದ ತೃಪ್ತಿ ನಿಮ್ಮದಾಗುತ್ತೆ.* ವಿನಾಯಕ ಪಟಗಾರ, ಬೆಟ್ಕುಳಿ, ಕುಮಟಾಪ್ರತಿ ವರ್ಷದಂತೆ ಮಕ್ಕಳ ದಿನಾಚರಣೆ ಬಂದಿದೆ. ಕಳೆದೆರಡು 40220http://kannada.oneindia.com/img/2009/11/14-child-hiv-help1.jpg211598deathಸಾವನ್ನು ಗೆದ್ದ ಟ್ಯೂಶನ್ ಮಾಸ್ಟರ್ ಬನ್ಸಾಲ್/column/manikanth/2009/1118-success-story-tution-teacher-vk-bansal.htmlದೇಹದ ಅರ್ಧ ಭಾಗವೇ ಸ್ವಾಧೀನದಲ್ಲಿಲ್ಲ ಎಂದು ಗೊತ್ತಾದ ನಂತರವೂ ಅಪಾರ ಜೀವನೋತ್ಸಾಹದಿಂದ ಬದುಕುತ್ತಿರುವ; ಸಾವು ಮಗ್ಗುಲಲ್ಲೇ ನಿಂತಿದೆ ಎಂದು ಗೊತ್ತಾದ ನಂತರವೂ ಇನ್ನೂ 20 ವರ್ಷ ಬದುಕ್ತೀನಿ ನೋಡ್ತಾ ಇರಿ ಎಂದು ಆತ್ಮವಿಶ್ವಾಸದಿಂದ ಹೇಳುತ್ತಿರುವ ಬನ್ಸಾಲ್- ಚಿಕ್ಕ ಪುಟ್ಟ ಸೋಲಿಂದ ಹತಾಶರಾಗಿ ಗೋಳಾಡುವ ಎಲ್ಲರಿಗೂ ಮಾದರಿ. ಅಲ್ಲವೇ?* ಎಆರ್ ಮಣಿಕಾಂತ್ಇಲ್ಲಿ ಹೇಳಲು ಹೊರಟಿರುವುದು ಒಬ್ಬ ಮಹಾನ್ ಸಾಧಕನ 40292http://kannada.oneindia.com/img/2009/11/18-bansal-tution-master1.jpgnews"> ಅಂದ ಹಾಗೆ, ನಿಮ್ಮ ಅಪ್ಪ-ಅಮ್ಮ ಹೇಗಿದ್ದಾರೆ? | Take good care of your parents please - ಅಂದ ಹಾಗೆ, ನಿಮ್ಮ ಅಪ್ಪ-ಅಮ್ಮ ಹೇಗಿದ್ದಾರೆ? - Kannada Oneindia

ಅಂದ ಹಾಗೆ, ನಿಮ್ಮ ಅಪ್ಪ-ಅಮ್ಮ ಹೇಗಿದ್ದಾರೆ?

ಒಂದೂರಿನಲ್ಲಿ ಒಬ್ಬ ರಾಜನಿದ್ದ. ಅಂದ ಮೇಲೆ ಕೇಳಬೇಕೆ? ಐಶ್ವರ್ಯಲಕ್ಷ್ಮಿ ಅವನ ಮುಂದೆ ಕಾಲು ಮುರಿದುಕೊಂಡು ಬಿದ್ದಿದ್ದಳು. ಈ ರಾಜನಿಗೆ ಒಬ್ಬರಲ್ಲ, ಇಬ್ಬರಲ್ಲ, ನಾಲ್ವರು ಹೆಂಡತಿಯರಿದ್ದರು. ರಾಜನಿಗೆ ಸಹಜವಾಗಿಯೇ ನಾಲ್ಕನೇ ಹೆಂಡತಿಯ ಮೇಲೆ ದೊಡ್ಡ ಮೋಹ. ಆಕೆಯನ್ನು ಸಂತೋಷಪಡಿಸಲೆಂದೇ ಆತ ಬದುಕುತ್ತಿದ್ದ. ತನ್ನ ನಾಡಿಗೆ ಯಾವುದೇ ಹೊಸ ಆಭರಣ ಬರಲಿ, ಅದನ್ನು ಕಿರಿಯ ರಾಣಿಗೆ ಕಾಣಿಕೆಯಾಗಿ ಕೊಟ್ಟು, ತಗೋ, ಇದೆಲ್ಲಾ ನಿನಗೆ' ಅನ್ನುತ್ತಿದ್ದ. ಒಂದೇ ಮಾತಿನಲ್ಲಿ ಹೇಳಿಬಿಡುವುದಾದರೆ, ಕಿರಿಯ ರಾಣಿಯ ಸಂತೋಷಕ್ಕಾಗಿ ಏನು ಬೇಕಾದರೂ ಮಾಡಲು ಈ ರಾಜ ಭೂಪಾಲ ಸಿದ್ಧನಿದ್ದ.

ಮೂರನೇ ಹೆಂಡತಿ ಇದ್ದಳಲ್ಲ. ಅವಳ ಮೇಲೂ ರಾಜನಿಗೆ ಮೋಹವಿತ್ತು. ಆಕೆಯದು ಎಲ್ಲರ ಕಣ್ಣು ಕುಕ್ಕುವಂಥ ವ್ಯಕ್ತಿತ್ವ. ರಾಜ ಆಕೆಯನ್ನು ಸದಾ ಜತೆಗೇ ಇರಿಸಿಕೊಳ್ಳುತ್ತಿದ್ದ. ನೆರೆಹೊರೆಯ ರಾಜರು, ಬಂಧುಗಳು ಬಂದಾಗ, ಮೂರನೇ ರಾಣಿಯನ್ನು ಅವರಿಗೆ ತಪ್ಪದೇ ತೋರಿಸುತ್ತಿದ್ದ. ಅವಳು ಜತೆಗಿರುವುದೇ ನನ್ನ ಸೌಭಾಗ್ಯ. ದಿನಗಳು ಉರುಳಿದಂತೆಲ್ಲಾ ಇವಳ ಖ್ಯಾತಿ ಹೆಚ್ಚಬೇಕೇ ವಿನಃ ಕಡಿಮೆಯಾಗಬಾರದು ಎಂಬುದು ರಾಜನ ಆಸೆಯಾಗಿತ್ತು. ಇಷ್ಟಾದರೂ, ರಾಜನಿಗೆ ಒಳಗೊಳಗೇ ಹೆದರಿಕೆಯಿತ್ತು; ಈ ಮೂರನೇ ರಾಣಿ ಛಕ್ಕನೆ ಮನಸು ಬದಲಾಯಿಸಿ ಬಂಧುಗಳ ಅಥವಾ ನೆರೆಹೊರೆಯ ರಾಜರಿಗೆ ಒಲಿದುಬಿಟ್ಟರೆ ಗತಿಯೇನು ಎಂಬುದೇ ಅವನ ಹೆದರಿಕೆಗೆ ಮುಖ್ಯ ಕಾರಣವಾಗಿತ್ತು.

ಎರಡನೇ ಹೆಂಡತಿ ಇದ್ದಳಲ್ಲ, ಅವಳ ವಿಷಯವಾಗಿ ರಾಜನಿಗೆ ದೊಡ್ಡ ನಂಬಿಕೆ. ಎಲ್ಲ ರಹಸ್ಯವನ್ನೂ ಅವಳೊಂದಿಗೆ ಸಮಸ್ಯೆಗಳು ಎದುರಾದಾಗ ಆಕೆಯ ಸಲಹೆ ಕೇಳುತ್ತಿದ್ದ. ಆಕೆಯಾದರೂ ಅಷ್ಟೆ. ರಾಜನ ಮೇಲೆ ಅಪಾರ ಪ್ರೀತಿ, ಕರುಣೆ ಹೊಂದಿದ್ದಳು ಅಥವಾ ಹಾಗೆ ತೋರಿಸಿಕೊಳ್ಳುತ್ತಿದ್ದಳು!

ಇನ್ನು, ಮೊದಲ ಹೆಂಡತಿಯನ್ನು ಕಂಡರೆ ರಾಜನಿಗೆ ಏನೋ ತಾತ್ಸಾರ. ಆಕೆ ಇರುವುದೇ ದಂಡ ಎಂಬುದು ಅವನ ಭಾವನೆಯಾಗಿತ್ತು. ಎಷ್ಟೋ ಸಂದರ್ಭದಲ್ಲಿ ಅದನ್ನು ಬಾಯಿಬಿಟ್ಟು ಹೇಳಿಯೂ ಬಿಟ್ಟಿದ್ದ. ಅಂಥ ಮಾತುಗಳಿಂದ ನೋವಾದರೂ ಆಕೆ ತೋರಿಸಿಕೊಂಡಿರಲಿಲ್ಲ. ಬದಲಿಗೆ, ಗಂಡನ ತಿರಸ್ಕಾರದ ನಂತರವೂ ಆತನನ್ನು ತೀವ್ರವಾಗಿ ಇಷ್ಟಪಡುತ್ತಿದ್ದಳು. ಆಕೆ ತನ್ನ ಬಗ್ಗೆ ಹೆಚ್ಚು ಕೇರ್ ತೆಗೆದುಕೊಂಡಾಗಲೆಲ್ಲ ಇವನಿಗೆ ಒಂಥರಾ ಕಿರಿಕಿರಿಯಾಗುತ್ತಿತ್ತು.

ಕಾಲಚಕ್ರ ಉರುಳಿತು. ಈ ರಾಜ ದಿಢೀರ್ ಕಾಯಿಲೆ ಬಿದ್ದ. ಎಷ್ಟೆಲ್ಲ ಔಷಧ ಸೇವಿಸಿ, ಚಿಕಿತ್ಸೆ ಪಡೆದರೂ ಕಾಯಿಲೆ ಗುಣವಾಗಲಿಲ್ಲ. ಬದಲಿಗೆ ಹೆಚ್ಚುತ್ತಲೇ ಹೋಯಿತು. ಓಹ್, ಈ ರೋಗ ಎಂದೆಂದೂ ವಾಸಿಯಾಗುವುದಿಲ್ಲ. ನನ್ನ ಕಡೆಗಾಲ ಸಮೀಪಿಸಿದೆ ಎಂದು ರಾಜನಿಗೂ ಖಚಿತವಾಗಿ ಗೊತ್ತಾಯಿತು. ತಕ್ಷಣ ಅವನಿಗೆ ನಾಲ್ವರು ಹೆಂಡತಿಯರ ನೆನಪಾಯಿತು. ಬದುಕಿಡೀ ಜತೆಯಾಗಿಯೇ ಇದ್ದವರನ್ನು ಸಾವಿನ ಸಂದರ್ಭದಲ್ಲೂ ಜತೆಗೆ ಬನ್ನಿ ಎಂದು ಕರೆವ ಆಸೆಯಾಯಿತು. ಆತ ತಕ್ಷಣ ನಾಲ್ಕನೇ ಹೆಂಡತಿಯನ್ನು ಕರೆದು ಹೇಳಿದ: ನೋಡು ಚಿನ್ನಾ, ಇಷ್ಟು ವರ್ಷ ನಿನ್ನ ಸಂತೋಷಕ್ಕೆ ಅಂತಾನೇ ಬದುಕಿದೆ. ನಿನ್ನ ನಗುವೇ ನನ್ನ ಸೌಭಾಗ್ಯ ಎಂದುಕೊಂಡೆ. ಆದರೆ, ಈಗ ನನ್ನ ಕಡೆಗಾಲ ಬಂದೇ ಬಿಟ್ಟಿದೆ. ಒಂಟಿಯಾಗಿ ಸಾಯಲು ವಿಪರೀತ ಭಯ. ಪ್ಲೀಸ್, ಸಾವಿನಲ್ಲೂ ನನ್ನೊಂದಿಗೆ ಬರುವೆಯಾ...?

ಮಾತು ಕೇಳಿ ಕಿರಿಯ ಹೆಂಡತಿ ಛೀ' ಎಂದಳು. ಎಂಥ ಅಪಶಕುನದ ಮಾತು ರೀ ನಿಮ್ದು? ನೀವು ಸತ್ತರೆ ಅದು ನಿಮ್ಮ ಕರ್ಮ. ಸತ್ತಾಗ ನಾನೂ ನಿಮ್ಮೊಂದಿಗೆ ಬರಬೇಕು ಅನ್ನೋದು ಯಾವ ನ್ಯಾಯ? ನಾನಂತೂ ಬರಲಾರೆ. ನಿಮಗೆ ದೊಡ್ಡ ನಮಸ್ಕಾರ' ಎಂದು ಹೇಳಿ ಸರಭರನೆ ಹೋಗಿಯೇ ಬಿಟ್ಟಳು. ರಾಜನಿಗೆ ಬೀಸಿ ಹೊಡೆದಂತಾಯಿತು. ಬಿ.ಪಿ. ದಿಢೀರ್ ಹೆಚ್ಚಿತು. ಆದರೂ ಹೇಗೋ ತನ್ನನ್ನು ತಾನೇ ಕಂಟ್ರೋಲ್ ಮಾಡಿಕೊಂಡ. ಆಗಲೇ ಆತನಿಗೆ ಮೂರನೇ ಹೆಂಡತಿ ನೆನಪಾದಳು. ಪ್ರತಿ ಪ್ರವಾಸದ ಸಂದರ್ಭದಲ್ಲೂ ಜತೆಗೇ ಬರುತ್ತಿದ್ದ ಆಕೆ ಈ ಕಡೆಯ ಯಾತ್ರೆಯಲ್ಲೂ ಬಂದೇ ಬರ್‍ತಾಳೆ ಎಂದು ನಂಬಿ ಆಕೆಯನ್ನು ಕರೆದ. ತನ್ನ ಪರಿಸ್ಥಿತಿ ವಿವರಿಸಿ- ಈ ಕಡೆಯ ಯಾತ್ರೆಯಲ್ಲೂ ಜತೆಗೆ ಬರ್‍ತೀಯ ತಾನೆ' ಎಂದು ಕೇಳಿದ.

ಛೆ, ಛೆ, ನಾನ್ಯಾಕೆ ಹಾಗೆ ಮಾಡ್ಲಿ? ಆಯಸ್ಸು ಮುಗೀತಾ ಬಂದಿರೋದು ನಿಮ್ದು. ಕ್ಷಮಿಸಿ, ನಿಮ್ಮೊಂದಿಗೆ ನಾನು ಬರಲಾರೆ. ನಿಮ್ಮ ನಿಧನಾನಂತರ ನಾನು ಬೇರೆಯವರೊಂದಿಗೆ ಬದುಕ್ತೇನೆ..'. ಎಂದಳಾಕೆ.

ಈ ಮಾತು ಕೇಳಿದ ರಾಜನಿಗೆ ಈಟಿಯಿಂದ ನೇರ ಹೃದಯವನ್ನೇ ಮೀಟಿದಂತಾಯಿತು. ಕೆಲ ಸಮಯದ ನಂತರ ಚೇತರಿಸಿಕೊಂಡು ಎರಡನೇ ಹೆಂಡತಿಯನ್ನು ಕರೆದು ಹೀಗೆಂದ: ರಾಣೀ, ಈವರೆಗಿನ ಬದುಕಿನಲ್ಲಿ ಕಷ್ಟ-ಸುಖದ ಸಂದರ್ಭಗಳಲ್ಲಿ ನೀನಿದ್ದೆ. ತುಂಬ ಸಮಸ್ಯೆಗಳಿಗೆ ಪರಿಹಾರ ಹೇಳಿದೆ. ಈಗ ನಾನು ಒಂಟಿಯಾಗಿ ಸಾಯಲು ಇಷ್ಟಪಡಲಾರೆ. ಈ ಸಮಸ್ಯೆಗೆ ಒಂದು ಪರಿಹಾರ ಹೇಳು...'

ರಾಣಿ ಉದಾಸೀನದಿಂದ ಹೀಗೆಂದಳು: ಪ್ರಭೂ, ಈವರೆಗೆ ಅದೆಷ್ಟೋ ಸಮಸ್ಯೆಗಳಿಗೆ ಪರಿಹಾರ ಹೇಳಿದೆ ನಿಜ. ಆದರೆ ಈಗ ನಿಮಗೆ ಯಾವ ಸಲಹೆಯನ್ನೂ ನೀಡಲಾರೆ. ಇನ್ಮೇಲೆ ನನ್ನ ದಾರಿ ನನಗೆ, ನಿಮ್ಮ ದಾರಿ ನಿಮಗೆ...' ಇಷ್ಟು ಹೇಳಿ ಎರಡನೇ ಹೆಂಡತಿಯೂ ಹೋಗಿಬಿಟ್ಟಳು. ಆಗ ರಾಜನಿಗೆ ವಿಪರೀತ ನೋವಾಯಿತು. ತನ್ನ ಸ್ಥಿತಿಗಾಗಿ ಆತ ಬಿಕ್ಕಿ ಬಿಕ್ಕಿ ಅಳಲು ಆರಂಭಿಸಿದ. ಎರಡು ನಿಮಿಷ ಅತ್ತಿರಬೇಕು, ಅಷ್ಟರಲ್ಲಿ ಬಾಗಿಲ ಹಿಂದೆ ಯಾವುದೋ ನೆರಳು ಸರಿದಾಡಿದಂತಾಯಿತು. ರಾಜ ಕುತೂಹಲದಿಂದ ಅತ್ತ ನೋಡಿದರೆ-ಅಲ್ಲಿ ಮೊದಲ ಹೆಂಡತಿ ನಿಂತಿದ್ದಳು. ಆಕೆಯ ಕಂಗಳಲ್ಲಿ ದುಗುಡವಿತ್ತು. ಈ ರಾಜ ಬೆಪ್ಪು ಬೆಪ್ಪಾಗಿ ನೋಡುತ್ತಿದ್ದಾಗ ಆಕೆಯೇ ಹೇಳಿದಳು: ರಾಜಾ, ಹೆದರಬೇಡ. ಸಾವಿನ ಮನೆಗೆ ನೀನು ಒಂಟಿಯಾಗಿ ಹೋಗಲು ನಾನು ಬಿಡಲಾರೆ. ನಿನ್ನೊಂದಿಗೆ ನಾನೂ ಇರ್‍ತೀನಿ. ಸಾವಿನ ನಂತರವೂ ಒಂದು ವೇಳೆ ಬದುಕಿದೆ ಅನ್ನುವುದಾದರೆ ಅಲ್ಲಿ ಕೂಡ ನಿನ್ನನ್ನು ಪ್ರೀತಿಯಿಂದ ನೋಡ್ಕೋತೀನಿ...' ಈ ಮಾತು ಕೇಳಿ ರಾಜನಿಗೆ ವಿಪರೀತ ಪಾಪಪ್ರಜ್ಞೆ ಕಾಡಿತು. ಆತ ಮೊದಲ ಹೆಂಡತಿಯ ಕೈ ಹಿಡಿದು ಕಣ್ಣಿಗೊತ್ತಿಕೊಂಡ. ಹಿಂದೆಯೇ ಸಂತೋಷದಿಂದ ಅಳಲಾರಂಭಿಸಿದ...

***
ಕಥೆ ಮುಗೀತಾ ಎಂದು ಪ್ರಶ್ನೆ ಕೇಳಬೇಡಿ. ಈಗ ಹುಷಾರಾಗಿ ಕೇಳಿಸಿಕೊಳ್ಳಿ: ನಾನು-ನೀವು ಎಲ್ಲರೂ ರಾಜನ ಪಾತ್ರಧಾರಿಗಳೇ! ಸ್ವಾರಸ್ಯವೆಂದರೆ, ನಮಗೂ ನಾಲ್ವರು ಹೆಂಡತಿಯರಿದ್ದಾರೆ!! ನಾಲ್ಕನೆಯ, ಅತ್ಯಂತ ಮುದ್ದಿನ ಹೆಂಡತಿ ಯಾರು ಗೊತ್ತೆ? ನಮ್ಮ ದೇಹ! ಅದರ ಮೇಲೆ ನಮಗೆ ಇನ್ನಿಲ್ಲದ ವ್ಯಾಮೋಹ. ಅದಕ್ಕೆ ಪನ್ನೀರು ಚಿಮುಕಿಸುವುದೇನು? ಬಗೆಬಗೆಯ ಸೋಪು, ಪೌಡರ್ ಹಾಕಿ ಘಂ ಅನಿಸುವುದೇನು? ಹೊಸ ಬಟ್ಟೆ, ಆಭರಣ ಧರಿಸಿ ಸಂಭ್ರಮ ಪಡುವಾಗಿನ ನಮ್ಮ ಗತ್ತೇನು, ವಾಹ್, ವಾಹ್... ಆದರೆ, ನಾವು ಇಷ್ಟೆಲ್ಲಾ ಪ್ರೀತಿಸುವ, ಇಷ್ಟಪಡುವ ನಮ್ಮ ದೇಹ, ಉಸಿರು ನಿಂತೊಡನೆಯೇ ನಮ್ಮಿಂದ ದೂರವಾಗಿಬಿಡುತ್ತದೆ!

ಹೌದು ತಾನೆ? ನಮ್ಮ ಬದುಕಿನ ವೈಭವದ ದಿನಗಳಲ್ಲಿ ಅಧಿಕಾರ, ಅಂತಸ್ತು ಮತ್ತು ಸಂಪಾದನೆಯನ್ನು ಎಲ್ಲರಿಗೂ ಹೆಮ್ಮೆಯಿಂದ ತೋರಿಸಿಕೊಂಡು ಓಡಾಡಿರುತ್ತೇವೆ. ಸಂಪಾದನೆ ಎಂಬುದು ಸತ್ತ ನಂತರವೂ ಜೊತೆಯಾಗಿರುತ್ತದೆ ಎಂಬ ಭ್ರಮೆ ನಮ್ಮದು. ಆದರೆ, ನಾವು ಜೀವ ಬಿಟ್ಟ ಮರುಕ್ಷಣದಿಂದಲೇ ನಿಮ್ಮ ಅಧಿಕಾರ, ಹಣ, ಆಸ್ತಿ, ಸಂಪಾದನೆ ಇನ್ನಾರದೋ ಪಾಲಾಗುತ್ತದೆ. ಹೌದು. ನಮ್ಮ ಇದು ಮೂರನೇ ಹೆಂಡತಿ!

ಎರಡನೇ ಹೆಂಡತಿ ಬೇರೆ ಯಾರೂ ಅಲ್ಲ-ನಮ್ಮ ಗೆಳೆಯ, ಗೆಳತಿಯರು! ನಾವು ಗೆಲುವಿನ ಹಾದಿಯಲ್ಲಿದ್ದ ಸಂದರ್ಭಗಳಲ್ಲಿ ಎಲ್ಲ ಸಂಗತಿಗಳನ್ನೂ ಅವರೊಂದಿಗೆ ಹೇಳಿಕೊಂಡಿರುತ್ತೇವೆ. ಸಲಹೆ ಕೇಳಿರುತ್ತೇವೆ, ಅದರಂತೆಯೇ ನಡೆದುಕೊಂಡಿರುತ್ತೇವೆ. ಆದರೂ, ನಾವು ಸತ್ತು ಹೋಗುವುದು ಗ್ಯಾರಂಟಿ ಅನ್ನಿಸಿದಾಗ ಯಾರೂ ನೆರವಿಗೆ ಬರುವುದಿಲ್ಲ. ಬದಲಿಗೆ, ದೂರದಲ್ಲಿ ನಿಂತೇ ಟಾಟಾ ಮಾಡಿಬಿಡುತ್ತಾರೆ!

ಪ್ರಿಯ ಓದುಗಾ, ಇಷ್ಟು ಓದಿದ ನಂತರ-ಆ ಮೊದಲನೆ ಹೆಂಡತಿ ಯಾರೆಂದು ತಿಳಿಯುವ ಕುತೂಹಲವೇ? ಕೇಳು: ಅದು ಇನ್ಯಾರೂ ಅಲ್ಲ- ನಮ್ಮ ಪೋಷಕರು, ತಾಯ್ತಂದೆಯರು! ಯಾಕೆ ಹಾಗೆ ಮಾಡ್ತೀವಿ? ಗೊತ್ತಿಲ್ಲ. ಆದರೆ, ನಾವೆಲ್ಲರೂ ನಮ್ಮ ತಾಯ್ತಂದೆಯರನ್ನು ತಾತ್ಸಾರದಿಂದ ನೋಡ್ತೀವಿ. ಅವರು ನಮ್ಮ ಬದುಕಿಗೆ ಭಾರವಾದವರು ಅಂದುಕೊಳ್ತೀವಿ. ಅವರು ನಮ್ಮ ಜತೆಗೆ ಇರುವುದೇ ಬೇಡ ಎಂದು ಎಷ್ಟೋ ಬಾರಿ ಅಂದುಕೊಳ್ತೀವಿ. ಅದನ್ನು ನಾಚಿಕೆಯಿಲ್ಲದೇ ಅವರೆದುರು ನಿಂತು ಹೇಳಿಯೂಬಿಡ್ತೀವಿ!

ಆದರೆ, ಅಂಥ ಹೇಳಿಕೆಗಳಿಂದ ಮರ್ಮಾಘಾತವಾದರೂ ನಮ್ಮ ತಾಯ್ತಂದೆಯರು ಮುನಿಯುವುದಿಲ್ಲ. ಬದಲಾಗಿ, ಸದಾ ನಮ್ಮ ಒಳಿತನ್ನೇ ಬಯಸುತ್ತಾರೆ. ಆಕಸ್ಮಾತ್ ನಾವು ಕಾಯಲೆ ಬಿದ್ದರೆ ಶುಶ್ರೂಷೆಗೆ ನಿಲ್ಲುತ್ತಾರೆ. ನಮ್ಮ ಒಳ್ಳೆಯದಕ್ಕೆಂದೇ ಪೂಜೆ ಮಾಡಿಸುತ್ತಾರೆ. ಹರಕೆ ಕಟ್ಟಿಕೊಳ್ಳುತ್ತಾರೆ. ಎಲ್ಲ ಪ್ರಯತ್ನಗಳ ನಂತರವೂ ನಾವು ಸತ್ತೇ ಹೋದರೆ, ಆಗಲೂ ತೀವ್ರ ಶೋಕದಿಂದ ಹಿಂದೆಯೇ ಬರುತ್ತಾರೆ. ಕೆಲವರಂತೂ ಮಕ್ಕಳ ಅಗಲಿಕೆ ಸಹಿಸದೆ ತಾವೂ ಸತ್ತು ಹೋಗುತ್ತಾರೆ! ಅದರರ್ಥ ಇಷ್ಟೆ: ಈ ಕಥೆಯಲ್ಲಿನ ರಾಜನಿಗೆ ಬಂದ ದುರ್ಗತಿ ನಿಮಗೆ ಬರಬಾರದು ಅನ್ನುವುದಾದರೆ ಪ್ಲೀಸ್, ಮನೆಯಲ್ಲಿರುವ ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ...ಅಂದ ಹಾಗೆ, ನಿಮ್ಮ ಅಪ್ಪ-ಅಮ್ಮ ಹೇಗಿದ್ದಾರೆ?

(ಓದುಗರ ಗಮನಕ್ಕೆ : ಇದು ಇಂಟರ್ನೆಟ್ಟಿನಿಂದ ಹೆಕ್ಕಿದ ಕಥೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+