495804monsoonಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆ ಸಂಭವ/news/2009/05/18/weather-forecast-heavy-rain-in-karnataka.htmlಬೆಂಗಳೂರು, ಮೇ 18 : ಕಳೆದೆರಡು ದಿನಗಳಿಂದ ಹುಯ್ಯುತ್ತಿರುವ ಮಳೆಗೆ ಬೆಂಗಳೂರಿನ ಚರಂಡಿಗಳು, ಅಗಿದ ರಸ್ತೆಗಳು, ರಸ್ತೆ ತಗ್ಗುಗಳು ತುಂಬಿ ತುಳುಕಾಡುತ್ತಿವೆ. ಜೋರು ಗಾಳಿ, ಬರೀ ಆರ್ಭಟದಿಂದ ಕೂಡಿ ಮಳೆಗೆ ರಾಜಧಾನಿಯ ಜನತೆ ಮೈಯೊಡ್ಡಿದ್ದಾರೆ.ಆಗಿದ್ದು ಬರೀ 16 ಮಿ.ಮೀ. ಮಳೆ. ಇಷ್ಟಕ್ಕೇ ರಸ್ತೆಗಳು ರಸ್ತೆಗೆ ಹರಿದುಬಂದ ಚರಂಡಿ ನೀರಿನಲ್ಲಿ ತೇಲಾಡುತ್ತಿದ್ದಂತೆ ಭಾಸವಾಗುತ್ತಿದೆ. ಗರಿಷ್ಠ ತಾಪಮಾನ 35ರಿಂದ 33 36736http://kannada.oneindia.com/img/2009/05/18-weather-forecast1.jpg495804monsoonಮರೆಯಾಗುತ್ತಿರುವ ಕರಾವಳಿಯ ಹುರಿಯಕ್ಕಿ ಲಾಡು/cj/vinayak-patagar/2009/0526-huriyakki-ladu-coastal-karnataka-recipe.htmlಕರಾವಳಿ ವಿಶೇಷ ತಿಂಡಿ ತಿನಸುಗಳಲ್ಲಿ ಹುರಿಯಕ್ಕಿ ಲಾಡು ಒಂದು. ಆಧುನಿಕತೆಯ ಸೋಗಿನಲ್ಲಿ ಸಾಂಪ್ರದಾಯಕವಾಗಿ ಪ್ರಮುಖ ಆಹಾರವಾಗಿ ಉಳಿದುಕೊಂಡಿರುವ ಕುಚ್ಚಿಗೆ ಅಕ್ಕಿಯಿಂದ ಮತ್ತು ತೆಳುವಾದ ಜೋನಿ ಬೆಲ್ಲದಿಂದ ತಯಾರಿಸಲ್ಪಡುವ ಲಾಡು ಇಂದಿನ ಥಳಕು ಬಳುಕಿನ ನಾಜೂಕಿನ ಬೇಕರಿ ತಿಂಡಿಗಳ ಭರಾಟೆಗಳ ಮಧ್ಯೆ ಅಪರೂಪವಾಗುತ್ತಿದೆ.* ವಿನಾಯಕ ಪಟಗಾರ್, ಬೆಟ್ಕುಳಿ, ಕುಮಟಾಮೊದಲ್ಲೆಲ್ಲಾ ಬೇಸಿಗೆ ರಜೆ ಮುಗಿಸಿ ದೂರದ ಊರುಗಳಿಗೆ ಹೋಗುವಾಗ ಡಬ್ಬಿ 36902http://kannada.oneindia.com/img/2009/05/26-huriyakki-ladu1.jpg495804monsoonಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ.../column/manikanth/2009/0608-sweet-memories-of-monsoon.htmlಮಳೆಗಾಲ ಶುರುವಾಗಿದೆ! ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ 37193http://kannada.oneindia.com/img/2009/06/08-children-rain1.jpg495804monsoonಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg495804monsoonಲಿಂಗನಮಕ್ಕಿಯಲ್ಲಿ ಬರ... ಅರ್ಧ ಕರ್ನಾಟಕ ಕತ್ತಲಲ್ಲಿ?/cj/pasha/2009/0630-monsoon-failure-linganamakki-dam-empty.htmlಶಿವಮೊಗ್ಗ, ಜೂ.30 : ಭಾರತದ ಹತ್ತು ಪ್ರಮುಖ ಅಣೆಕಟ್ಟುಗಳಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಲಿಂಗನಮಕ್ಕಿ ಅಣೆಕಟ್ಟು ಅರ್ಧ ಕರ್ನಾಟಕಕ್ಕೆ ಬೆಳಕು ನೀಡುವ ಅಣೆಕಟ್ಟು ಎಂದೇ ಕರೆಯಲ್ಪಡುತ್ತದೆ. ಆದರೆ, ಈ ಬಾರಿಯ ಮುಂಗಾರು ಕೈಕೊಟ್ಟಿದ್ದರಿಂದ ಲಿಂಗನಮಕ್ಕಿ ಅಣೆಕಟ್ಟು ನೀರಿಲ್ಲದೇ ಬಡಕಲಾಗಿದೆ.ಶರಾವತಿ ನದಿಗೆ ಕರ್ನಾಟಕ ಸರ್ಕಾರ 1964ರಲ್ಲಿ ನಿರ್ಮಿಸಿದ ಲಿಂಗನಮಕ್ಕಿ ಅಣೆಕಟ್ಟಿನ ವಿಸ್ತಾರ 2.4 37676http://kannada.oneindia.com/img/2009/06/30-linganamakki1.jpg38109mungaru maleಜಿಲೇಬಿ ; ಕಾಯ್ಕಿಣಿಯ ಹಿಂಗಾರು ಫಸಲು/literature/book/2008/1224-jayanth-kaikini-poem-collection-jilebi.htmlಬೆಂಗಳೂರು, ಡಿ. 24 : ಒಂದು ಜನಾಂಗದ ಜೀವ ಹಿಂಡಿದ ಮಧುರ ಕವಿ ಜಯಂತ ಕಾಯ್ಕಿಣಿ. ಕಳೆದೆರಡು ಮೂರು ಎರಡು ದಶಕಗಳಿಂದ  ಕವನ, ಪ್ರಬಂಧ, ಕಥೆ ಕಾದಂಬರಿ, ನಾಟಕಗಳನ್ನು ಬರೆಯುತ್ತ ಹೊಸಗನ್ನಡ ಓದುಗರಲ್ಲಿ ಬೆರಗು ಹುಟ್ಟಿಸಿದ ಲೇಖಕ ಅವರು. ಸ್ವಭಾವದಿಂದ ಏಕಾಂತವನ್ನು ತುಂಬ ಪ್ರೀತಿಸುವ ಕವಿ ಕಾಯ್ಕಿಣಿ ಇತ್ತೀಚೆಗೆ ಲೋಕಾಂತವಾಗುತ್ತಿರುವ ಬಗೆ ನಿಮಗೆ ಗೊತ್ತು. ಕನ್ನಡ ಹಾಡು 33686http://kannada.oneindia.com/img/2008/12/24-jayanth-kaikini1e.jpg38109mungaru maleಮಾಯವಾಗಿದೆ ಪ್ರೀತಂ ಗುಬ್ಬಿ ಮ್ಯಾಜಿಕ್ ಸ್ಪರ್ಶ/movies/review/2008/12/29-haage-summane-directed-by-preetham-gubbi.htmlಮುಂಗಾರು ಮಳೆಗೆ ಚಿತ್ರಕಥೆಗೆ ಮಾಂತ್ರಿಕ ಸ್ಪರ್ಶ ನೀಡಿದ್ದ ಪ್ರೀತಂ ಗುಬ್ಬಿ ನಿರ್ದೇಶಿಕ ಪ್ರಥಮ ಚಿತ್ರ 'ಹಾಗೆ ಸುಮ್ಮನೆ 'ಚಿತ್ರ ಕೆಲವರಿಗೆ ಇಷ್ಟವಾಗಿದ್ದರೆ, ವಿಪರೀತ ನಿರೀಕ್ಷೆ ಇಟ್ಟುಕೊಂಡು ಬಂದಿದ್ದ ಹಲವರಿಗೆ ಕಷ್ಟವಾಗುತ್ತಿದೆ. ಮುಂಗಾರು ಗುಂಗಿನಿಂದ ಪ್ರೀತಂ ಹೊರಬಂದಿಲ್ಲ. ತೀರಾ ಹೊಸತನ್ನು ನೀಡಲು ಹೋಗಿ ಮತ್ತೆ ಹಳತನ್ನೇ ಉಣಬಡಿಸಿದ್ದಾರೆ ಎನ್ನುವುದು ಸಿನಿ ಪಂಡಿತರ ಅಭಿಪ್ರಾಯ. ಎಂದಿನಂತೆ ಹೃದಯಕ್ಕೆ ಮುದ ನೀಡುವ 33757http://kannada.oneindia.com/img/2008/12/29-haage-summane1.jpg38109mungaru maleಯುವ ನಿರ್ದೇಶಕರುಗಳಿಗೆ ಒಂದು ಪತ್ರವು.../column/manikanth/2009/0103-open-letter-to-young-directors-kannada-movie.htmlಹಳೆಯ ಕಥೆ, ಬಡಕಲು ಹೀರೋ, ಕಡಿಮೆ ಬಟ್ಟೆಯ ಇಪ್ಪತ್ತೈದು ಕೇಜಿಯ ಹೀರೋಯಿನ್, ಮಧ್ಯೆ ಮಧ್ಯೆ ಲಾಂಗು-ಮಚ್ಚುಗಳ ಖಣಖಣ, ನಮ್ಮ ವಜ್ರಮುನಿಯ ಕಿರುಬೆರಳಿಗೂ ಸಾಟಿಯಾಗದಂಥ ವಿಲನ್ನು... ಇಂಥವರೇ ತುಂಬಿಕೊಂಡಿರೋ ನಿಮ್ಮ ಸಿನಿಮಾ ನೋಡೋಕೆ-ಜನಕ್ಕೇನಾದ್ರೂ ಹುಚ್ಚು ಹಿಡಿದಿದೆಯೇನ್ರಿ? ಮುಂಗಾರು ಮಳೆ ಸುರಿಸಲು ಬಂದು ಅರ್ಧದಾರಿಯಲ್ಲೇ ಆವಿಯಾಗಿ ಹೋದ ಯುವ ನಿರ್ದೇಶಕರಿಗೆ ಎರಡು ಕಿವಿಮಾತುಗಳು. ಆದರೆ ಇನ್ನೊಂದು ಮಾತು, ಈ ಕಿವಿಯಿಂದ 33855http://kannada.oneindia.com/img/2009/01/03-preetam-gubbi1e.jpg38109mungaru maleಗಣೇಶನ ಸದ್ಯದ ನಂಬರ್ ನಾಟ್ ರೀಚಬಲ್!/movies/hero/2009/01/06-golden-star-ganesh-mobile-is-not-reachable.html2006 ರ ಗಣೇಶ ಪ್ರೆಸ್ ಕಾನ್ಫರೆನ್ಸ್‌ನ ಸ್ಥಳ. ಗೋಷ್ಠಿ ಶುರುವಾಗಲು ಇನ್ನೂ ಹದಿನೈದು ನಿಮಿಷ ಬಾಕಿ ಇದೆ. 'ಮುಂಗಾರು ಮಳೆ"ಯ ವಾಸನೆ ಜೋರಾಗಿದ್ದ ಕಾಲ. ನಗುಮುಖ ಹೊತ್ತು ಎಲ್ಲರನ್ನೂ ಪರಿಚಯ ಮಾಡಿಕೊಂಡು, ಉಭಯಕುಶಲೋಪರಿ ವಿಚಾರಿಸಿ, ನಿಮ್ಮಿಂದಲೇ ಎತ್ತರಕ್ಕೆ ಬೆಳೆದದ್ದು ಹಾಗೆ ಹೀಗೆ ಅಂತೆಲ್ಲಾ ಹೇಳಿಕೊಳ್ಳುತ್ತಿದ್ದ ಕಾಮಿಡಿ ಟೈಮ್ ಹುಡುಗ. ಎಷ್ಟು ಪ್ರಶ್ನೆ ಕೇಳಿದರೂ ಬೇಸರವಿಲ್ಲ. ಎಲ್ಲಕ್ಕೂ ನಗುಮೊಗದ 33904http://kannada.oneindia.com/img/2009/01/06-ganesh3.jpg38109mungaru maleಕಿರುತೆರೆಯಲ್ಲಿ ಹಿಟ್ ಚಿತ್ರಗಳ ಸುಗ್ಗಿ/movies/tv/2009/01/12-hit-movies-screening-on-tv-channels-sankranthi.htmlಈ ಬಾರಿಯ ಮಕರಸಂಕ್ರಾಂತಿಯಂದು ( ಜನವರಿ 14, ಬುಧವಾರ) ಕನ್ನಡ ಸಿನಿರಸಿಕರಿಗೆ ಕಿರುತೆರೆಯಲ್ಲಿ ಸುಗ್ಗಿಯೋ ಸುಗ್ಗಿ. ಕನ್ನಡ ಟಿವಿ ಚಾನಲುಗಳು ಪೈಪೋಟಿಯಂತೆ ಹಿಟ್ ಚಿತ್ರಗಳನ್ನು ಅಂದು ಪ್ರಸಾರಮಾಡುತ್ತಿವೆ. ರಿಮೋಟ್ ಕೈಯಲ್ಲಿಟ್ಟುಕೊಳ್ಳಿರಿ, ನಿಮಗೆ ಯಾವುದು ಬೇಕೋ ಅದನ್ನು ಆರಿಸಿಕೊಂಡು ಕ್ಲಿಕ್ ಮಾಡಿ.1. ಸುವರ್ಣ ವಾಹಿನಿಚಿತ್ರ : ಮುಂಗಾರು ಮಳೆ ಸಮಯ: ಸಂಜೆ 4.00ಕ್ಕೆ2007 ರಲ್ಲಿ ಬಿಡುಗಡೆಯಾಗಿ, ಕನ್ನಡ ಚಿತ್ರರಂಗಲ್ಲಿ 34015http://kannada.oneindia.com/img/2009/01/12-ganesh2.jpg383832ar manikanthಯಾವ ತಿಂಗಳಲ್ಲಿ ಹುಟ್ಟಿದ ಮಗು ಹೇಗೆ?/column/manikanth/2009/0316-child-behaviour-psychology.htmlರಾಶಿಯ ಆಧಾರದ ಮೇಲೆ, ಜನ್ಮದಿನಾಂಕದ ಲೆಕ್ಕಾಚಾರದ ಮೇಲೆ ಮಕ್ಕಳ ಭವಿಷ್ಯ ತಿಳಿಯುವ ಪದ್ಧತಿ ಹಳೆಯದಾಯಿತು. ಇಲ್ಲಿರೋದು ಯಾವ್ಯಾವ ತಿಂಗಳಲ್ಲಿ ಹುಟ್ಟಿದ ಮಗುವಿನ ವರ್ತನೆ ಹೇಗಿರುತ್ತೆ ಎಂಬ ವಿವರಣೆ. ನಿಮ್ಮ ಮಗು ಕೂಡ ಇಲ್ಲಿರುವ ವಿವರಣೆಯ ಗುಣ ಹೊಂದಿರಬಹುದು; ಸುಮ್ನೆ ಗಮನಿಸಿ...* ಎಆರ್ ಮಣಿಕಾಂತ್ಜನವರಿ: ಹೇಳಿ ಕೇಳಿ ಇದು ಮೊದಲ ತಿಂಗಳು ತಾನೆ? ಇದೇ ಕಾರಣಕ್ಕೆ ಇರಬೇಕು: ಜನವರಿಯಲ್ಲಿ 35268http://kannada.oneindia.com/img/2009/03/16-child-cute1.jpg383832ar manikanthಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg383832ar manikanthಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ.../column/manikanth/2009/0608-sweet-memories-of-monsoon.htmlಮಳೆಗಾಲ ಶುರುವಾಗಿದೆ! ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ 37193http://kannada.oneindia.com/img/2009/06/08-children-rain1.jpg383832ar manikanthಬರವಣಿಗೆ ಮೂಲಕ ಭವಿಷ್ಯ ತಿಳಿಯಿರಿ! (ಭಾಗ 2)/column/manikanth/2009/0819-handwriting-speaks-about-personality-part2.html(ಹಿಂದಿನ ಪುಟದಿಂದ)ಒಂದು ಸಾಲು ಬರೆಯುವುದು, ನಂತರ ಅದನ್ನು ಹೊಡೆದು ಹಾಕುವುದು; ಒಂದು ಪದ ಬರೆಯುವುದು, ನಂತರ ಅದನ್ನೂ ಹೊಡೆದು ಹಾಕಿ ಬೇರೊಂದು ಪದ ಬರೆಯುವುದು-ಹೀಗೆ ಮಾಡುತ್ತಾರಲ್ಲ? ಆ ಜನ ಅಯ್ಯೋಪಾಪ' ಎಂಬ ವರ್ಗಕ್ಕೆ ಸೇರಿದವರು. ಹೇಗೆ ಬರೆದರೆ ಏನಾಗಿಬಿಡುತ್ತೋ ಎಂಬ ಭಯ ಅವರನ್ನು ಕಾಡುತ್ತಿರುತ್ತದೆ. ಹಾಗಾಗಿ ಅವರು, ಮಾಡಿದ ತಪ್ಪನ್ನು ತುಂಬ ಬೇಗ ಒಪ್ಪಿಕೊಂಡು ಬಿಡುತ್ತಾರೆ. ಅಷ್ಟೇ 38715http://kannada.oneindia.com/img/2009/08/19-pen6.jpg383832ar manikanthಬರವಣಿಗೆ ಮೂಲಕ ಭವಿಷ್ಯ ತಿಳಿಯಿರಿ!/column/manikanth/2009/0819-handwriting-speaks-about-personality.htmlನಮ್ಮ ಕೈಬರಹ, ಪತ್ರ ಬರೆಯುವ ಧಾಟಿ, ಅದರಲ್ಲಿ ಕಂಡು ಬರುವ ಶಿಸ್ತು, ಅಶಿಸ್ತು, ಅವಸರ, ಶ್ರದ್ಧೆ, ಅಕ್ಷರ ಬಳಕೆಯ ರೀತಿಯಿಂದಲೂ ಭವಿಷ್ಯ ಹೇಳಬಹುದು ಅಂದರೆ ನಂಬುತ್ತೀರಾ? ನಂಬುವವರ ಪಾಲಿಗಷ್ಟೇ ಇದು ನಿಜ. ಯಾವ ರೀತಿ ಬರೆಯುವವರ ವ್ಯಕ್ತಿತ್ವ ಹೇಗಿರುತ್ತದೆ ಎಂಬುದಕ್ಕೆ ಇಲ್ಲಿ ವಿವರಣೆಯಿದೆ. ಪತ್ರ ಬರೆಯುವ ಕಲೆ ನಶಿಸಿಹೋಗುತ್ತಿದೆ ಎಂಬುದನ್ನು ನಂಬಬಹುದಾದರೂ ನಮ್ಮ ವ್ಯಕ್ತಿತ್ವ ತಿಳಿದುಕೊಳ್ಳಲು ಪತ್ರ 38716http://kannada.oneindia.com/img/2009/08/19-handwriting1.jpgnews"> ಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ... | Monsoon | Rainy season | Mungaru Male | Sweet memories - ಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ... - Kannada Oneindia

ಮತ್ತೆ ಮಳೆ ಹುಯ್ಯುತ್ತಿದೆ, ಎಲ್ಲ ನೆನಪಾಗುತ್ತಿದೆ...

Hurrey! Its raining again!
ಮಳೆಗಾಲ ಶುರುವಾಗಿದೆ! ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ ಕಣ್ಮುಂದೆ ಬರುತ್ತದೆ ಮತ್ತು ಇದೆಲ್ಲಕ್ಕಿಂತ ಮುಖ್ಯವಾಗಿ ಮಳೆಗೆ ಸಂಬಂಧಿಸಿದಂತೆ, ಅಪ್ಪ-ಅಮ್ಮ, ತಾತ-ಅಜ್ಜಿಯವರು ಹೇಳಿದ್ದ ಚಂದಮಾಮ'ದ ಕಥೆಗಳಷ್ಟೇ ಮಜದಿಂದ ಕೂಡಿದ್ದ ಕಥೆಗಳು ನೆನಪಾಗುತ್ತಿವೆ. ಅಂಥ ಒಂದೆರಡು ಕತೆಗಳಿವೆ ಇಲ್ಲಿ; ಅವುಗಳನ್ನು ಈ ಹಿಂದೆ ಕೇಳಿರದಿದ್ದರೆ- ಈಗ ಓದಿ ಖುಷಿಪಡಿ. ಈಗಾಗಲೇ ಕೇಳಿದ್ದರೆ-ಬಾಲ್ಯವನ್ನು ಮತ್ತೆ ನೆನಪು ಮಾಡಿಕೊಂಡು ಇನ್ನಷ್ಟು ಖುಷಿಪಡಿ!

* ಎಆರ್ ಮಣಿಕಾಂತ್

ತುಂಬ ಸಂದರ್ಭದಲ್ಲಿ ಈಗಿನಂತೆಯೇ, ಹೊತ್ತು ಗೊತ್ತಿಲ್ಲದೆ ಮಳೆ ಬರುತ್ತಿತ್ತು. ಆಗೆಲ್ಲ ಅವ್ವ ನಡುಮನೆಯಲ್ಲಿ ಕುಳಿತು, ಅಲ್ಲಲ್ಲಿ ಮಳೆ ಸೋರುತ್ತಿದ್ದ ಜಾಗಕ್ಕೆ ಪಾತ್ರಗಳನ್ನಿಟ್ಟು ಹೇಳುತ್ತಿದ್ದಳು: ತುಂಬ ವರ್ಷಗಳ ಹಿಂದೆ ಆಕಾಶ, ತುಂಬ ಹತ್ತಿರದಲ್ಲೇ, ಅಂದರೆ ತೆಂಗಿನಮರದ ಎತ್ತರದಲ್ಲೇ ಇತ್ತಂತೆ. ಆ ದಿನಗಳಲ್ಲಿ ಮಳೆ ಬೇಕು ಅನ್ನಿಸಿದರೆ, ಜನ ದೊಡ್ಡದೊಂದು ಕೋಲು ತಯಾರಿಸಿ, ಅದನ್ನು ಮೋಡಕ್ಕೆ ಚುಚ್ಚಿ ಮಳೆ ಬರಿಸಿಕೊಳ್ತಾ ಇದ್ರಂತೆ! ಒಂದು ಸಂದರ್ಭದಲ್ಲಿ ಘಟವಾಣಿ ಹೆಂಗಸೊಬ್ಬಳು ಭತ್ತ ಕುಟ್ಟುತ್ತಿದ್ದಳಂತೆ. ಆ ಸಂದರ್ಭದಲ್ಲಿ ಒಮ್ಮೆ ಅವಳ ಒನಕೆ ಮೇಲಿಂದ ಮೇಲೆ ಮೋಡಕ್ಕೆ ತಾಕಿತಂತೆ. ಇದರಿಂದ ಸಿಟ್ಟಿಗೆದ್ದ ಆಕೆ- ನಿನ್ ಮನೆ ಹಾಳಾಗ. ಯಾಕೆ ಇಲ್ಲಿದ್ದೀಯ? ಹೋಗ್ಬಾರ್‍ದಾ ಮೇಲಕ್ಕೆ' ಅಂದಳಂತೆ! ತಕ್ಷಣವೇ ಮೋಡ- ಮುನಿಸಿಕೊಂಡು ಮೇಲೆ ಮೇಲೆ ಹೋಗ್ತಾನೇ ಇತ್ತಂತೆ. ಅದೇ ವೇಳೆಗೆ ಆ ದಾರಿಯಲ್ಲಿ ಬರುತ್ತಿದ್ದ ದಾಸಯ್ಯನೊಬ್ಬ- ಅಯ್ಯಯ್ಯೋ, ಒಬ್ಬನೇ ಹೋಗ್ತಾ ಇದೀಯಲ್ಲ? ನಿಂತ್ಕೊ ನಿಂತ್ಕೊ, ನಾನೂ ಬರ್‍ತೀನಿ ಜತೆಗೆ' ಅಂದನಂತೆ. ತಕ್ಷಣವೇ ಮೋಡ ಅಲ್ಲಿಯೇ ನಿಂತುಕೊಂಡಿತಂತೆ. ಅವತ್ತಿಂದ ಆಕಾಶ ಅದೇ ಎತ್ತರದಲ್ಲಿದೆ! ಇದು, ಅಮ್ಮಂದಿರು ಹೇಳುತ್ತಿದ್ದ ಕತೆ.

ಈಗ ತೆಂಗಿನ ಮರದ ಎತ್ತರದಲ್ಲೇ ಆಕಾಶವಿತ್ತು ಎಂಬುದನ್ನು ನೆನಪು ಮಾಡಿಕೊಂಡರೆ- ಬೆರಗೂ, ಭಯವೂ, ವಿಸ್ಮಯವೂ ಒಮ್ಮೆಗೇ ಆಗುತ್ತದೆ. ಆದರೆ, ಬಾಲ್ಯದಲ್ಲಿ ಹಾಗೆಂದೂ ಅನ್ನಿಸಲೇ ಇಲ್ಲ! ಹೀಗೆ, ಅಮ್ಮನ ಕಥೆ ಸಾಗುತ್ತಿದ್ದ ಸಂದರ್ಭದಲ್ಲೇ ಗೋಡೆ, ಕಿಟಕಿ, ಮಾಳಿಗೆಯ ಕಿಂಡಿಯ ಮಧ್ಯೆ ಫಳಫಳಿಸುವ ಮಿಂಚು ಕಾಣಿಸುತ್ತಿತ್ತು. ಹಿಂದೆಯೇ ಭೂಮಂಡಲವೇ ನಡುಗಿ ಹೋಗಬೇಕು- ಅಂಥ ದೊಂದು ಭಾರೀ ಸದ್ದಿನ ಸಿಡಿಲು ಮೊರೆಯುತ್ತಿತ್ತು. ಆಗ ಅಮ್ಮ ಹೇಳುತ್ತಿದ್ದಳು: ಅರ್ಜುನ ಬಾಣ ಬಿಡ್ತಾ ಇದಾನೆ. ಆ ಬಾಣದ ಸದ್ದೇ ಈ ಸಿಡಿಲು. ಅವನು ಬಾಣ ಬಿಡಲು ಎದ್ದು ನಿಂತ ತಕ್ಷಣ ಅವನ ತಾಯಿ ಕುಂತಿ ದೇವಿ- ಹೆಂಗಸರು, ಮಕ್ಕಳು ಇರ್‍ತಾರೆ ಮಗೂ. ದೊಡ್ಡ ಸದ್ದು ಮಾಡದಂಥ ಬಾಣ ಬಿಡು' ಎಂದು ಬುದ್ಧಿಮಾತು ಹೇಳ್ತಾಳೆ. ಆದ್ರೂ ಅರ್ಜುನ ಕೇಳೋದಿಲ್ಲ. ಅವನು ಬಿಲ್ಲಿನ ದಾರವನ್ನು ಎಳೀತಾನಲ್ಲ? ಆಗ ಉಂಟಾಗುವ ಸದ್ದೇ ಗುಡುಗು. ಬಾಣ ಬಿಡ್ತಾನೆ ನೋಡಿ- ಅದು ಸಿಡಿಲು!' (ಈಗ ಯೋಚಿಸಿದರೆ- ಅಂಥ ಬಿರುಮಳೆಯ ಮಧ್ಯೆಯೇ ಬಾಣ ಬಿಡುವ ಹೀಗೆ ಬಾಣ ಬಿಟ್ಟು ಮರವನ್ನೋ, ಮನುಷ್ಯನನ್ನೋ ಸುಡುವ ಅರ್ಜೆಂಟು ಅರ್ಜುನನಿಗಾದರೂ ಏನಿತ್ತು ಅನಿಸುತ್ತದೆ.)

ಸಿಡಿಲಿನ ಕಥೆ ಹೇಳುತ್ತಲೇ ತಕ್ಷಣವೇ ಕುಡುಗೋಲನ್ನೋ, ಕತ್ತಿಯನ್ನೋ ಬಾಗಿಲಿನ ಮುಂದೆ ಎಸೆಯುವಂತೆ ಹೇಳುತ್ತಿದ್ದಳು ಅಮ್ಮ. ಅದು ಸಿಡಿಲಿನಿಂದ ಮನೆಯನ್ನು ಸಂರಕ್ಷಿಸಿಕೊಳ್ಳಲು ಇದ್ದ ಉಪಾಯ. ಮಕ್ಕಳು ತಕ್ಷಣವೇ ಮನೆಯ ಮುಂದೊಂದು, ಹಿಂದೊಂದು ಕುಡುಗೋಲನ್ನು ಎಸೆದು ಬಂದು, ಕಬ್ಬಿಣದ ವಸ್ತುವಿಗೆ ಸಿಡಿಲು ಹೊಡೆಯಲ್ಲ ಅನ್ನೋದು ನಿಜವೇನಮ್ಮ ಎಂದು ಮತ್ತೆ ಮತ್ತೆ ಅನುಮಾನದಿಂದ ಕೇಳಿದರೆ- ಶ್ರವಣ ಬೆಳಗೊಳದಲ್ಲಿ ಗೊಮ್ಮಟೇಶ್ವರನಿಗೆ ಸಿಡಿಲು ಹೊಡೆಯದಿರಲಿ ಎಂದು ನೆತ್ತಿಯ ಮೇಲೆ ಸಲಾಕೆ ಹೊಡೆದಿದ್ದಾರೆ ಗೊತ್ತಾ?' ಅನ್ನುತ್ತಿದ್ದಳು ಅಮ್ಮ!

ಮಳೆಗಾಲದ ಇನ್ನೊಂದು ಮಧುರ ನೆನಪೆಂದರೆ-ಕಪ್ಪೆಗಳ ವಟರ್‌ವಟರ್ ಸದ್ದು! ಮಳೆ ಹನಿಯುವ ಕ್ಷಣದವರೆಗೂ ಕಣ್ಣಿಗೆ ಬೀಳದಿದ್ದ ಕಪ್ಪೆಗಳು, ಮಳೆ ಬಿದ್ದ ಅರ್ಧಗಂಟೆಯೊಳಗೆ ಮನೆಯ ಆಚೀಚೆಯಿದ್ದ ಹೊಂಡಗಳಲ್ಲಿ ತುಂಬಿಕೊಂಡು ಭಜನೆ' ಆರಂಭಿಸುತ್ತಿದ್ದವು! ಅದಕ್ಕೆ ಹಿನ್ನೆಲೆಯಾಗಿಯೂ ಒಂದು ಕತೆ ಇರುತ್ತಿತ್ತು. ಅದು ಹೀಗೆ: ಒಂದೆರಡಲ್ಲ, ಮೂರು ತಿಂಗಳಿಗೂ ಹೆಚ್ಚು ಅವಯ ಬೇಸಿಗೆಯ ಬಿಸಿಲಿಂದ ಕಂಗಾಲಾದ ಕಪ್ಪೆಗಳು ಮೇಲಿಂದ ಮೇಲೆ ಮಳೆಗಾಗಿ ಪ್ರಾರ್ಥಿಸುತ್ತವಂತೆ. ಕಡೆಗೊಮ್ಮೆ ಮಳೆಬಿದ್ದು ಹೊಂಡಗಳೆಲ್ಲ ತುಂಬಿಕೊಂಡಾಗ ಅದರೊಳಗೆ ಖುಷಿಯಿಂದ ಈಜು ಹೊಡೆದು, ಮುಗಿಲಿಂದ ಬಿದ್ದ ಹೊಸನೀರು ಕುಡಿದು, ಕಡೆಗೊಮ್ಮೆ ಮಳೆರಾಯನನ್ನು ಸ್ತುತಿಸಲು ಅಹೋರಾತ್ರಿ ಸಂಗೀತ ಕಾರ್ಯಕ್ರಮ' ನಡೆಸುತ್ತವಂತೆ! ಅದರ ಪರಿಣಾಮವೇ ಇಡೀ ರಾತ್ರಿ ವಟರ್ ವಟರ್!

* * *
ಒಮ್ಮೊಮ್ಮೆ ಏನಾಗುತ್ತಿತ್ತೆಂದರೆ, ಬೆಳ್ಳಂಬೆಳಗಿನಿಂದಲೇ ಸೋನೆ ಮಳೆ ಶುರುವಾಗುತ್ತಿತ್ತು. ಅದರ ಮಧ್ಯೆಯೇ ಶಾಲೆ ತಲುಪಿಕೊಂಡರೆ- ಮಳೆಯ ಕಾರಣಕ್ಕೆ ದೂರದ ಊರಿಂದ ಬರುತ್ತಿದ್ದ ಶಿಕ್ಷಕರೇ ಚಕ್ಕರ್' ಹೊಡೆದಿರುತ್ತಿದ್ದರು. ಇನ್ನು ಕೆಲವೊಂದು ಸಂದರ್ಭಗಳಲ್ಲಿ ಮೇಸ್ಟ್ರು ಬರುವುದು ಬರೀ ಅರ್ಧಗಂಟೆ ತಡವಾದರೆ, ಓಹ್ ಮೇಸ್ಟ್ರು ಬರುವುದಿಲ್ಲ ಎಂದು ಅಂದಾಜು ಮಾಡಿಕೊಂಡು ಹುಡುಗರೇ ಮನೆಗೆ ಪೇರಿ ಕೀಳುತ್ತಿದ್ದರು! ಹಾಗೆ ಮನೆಗೆ ಹೋಗುವ ಹಾದಿಯಲ್ಲೇ ಆಗಷ್ಟೇ ಹರಿದು ಬರುತ್ತಿದ್ದ ಮಳೆ ನೀರಿನಲ್ಲಿ ಎಕ್ಸ್‌ರ್‌ಸೈಜ್ ಹಾಳೆಯಿಂದ ಮಾಡಿದ ಕಾಗದದ ದೋಣಿ ಮಾಡಿ ತೇಲಿ ಬಿಟ್ಟು; ಮಳೆ ನೀರಿನ ಕೊಚ್ಚೆಯಲ್ಲಿ ಬೇಕೆಂದೇ ಕಾಲು ಮುಳುಗಿಸಿ, ಆ ಸಂದರ್ಭದಲ್ಲೇ ಮೈಮೇಲೆ ಕೆಸರು ಹಾರಿಸಿದ ಸಹಪಾಠಿಯ ಮೇಲೆ ಮನೆಯಲ್ಲಿ ಒಮ್ಮೆ, ಶಾಲೆಯಲ್ಲಿ ಮತ್ತೊಮ್ಮೆ ಚಾಡಿ ಹೇಳಿ, ಅದೇ ಕಾರಣಕ್ಕೆ ಗೆಳೆಯ/ಗೆಳತಿಯೊಂದಿಗೆ ಕೋಳಿ ಜಗಳವನ್ನೂ ಆಡಿ... ಹೌದಲ್ಲವಾ? ದಶಕಗಳ ಹಿಂದೆ, ಶಾಲೆಗೆ ಹೋಗುತ್ತಿದ್ದ ಯಾರೊಬ್ಬರ ಬಳಿಯೂ ಛತ್ರಿ ಇರುತ್ತಿರಲಿಲ್ಲ. ಹಾಗಾಗಿ ಮಳೆ ಬಂದ ತಕ್ಷಣ ಎಲ್ಲರೂ ಪುಸ್ತಕಗಳನ್ನೇ ತಲೆಯ ಮೇಲಿಟ್ಟುಕೊಂಡು ಮನೆಯ ಕಡೆಗೆ ಅಥವಾ ಶಾಲೆಯ ಕಡೆಗೆ ಪೇರಿ ಕೀಳುತ್ತಿದ್ದರು. ಒಂದು ವೇಳೆ ಬಿರುಮಳೆಯ ಕಾರಣದಿಂದ ಪುಸ್ತಕವೆಲ್ಲ ತೊಯ್ದು ತೊಪ್ಪೆಯಾದರೂ ಅಂಥ ಸಂಕಟವೇನೂ ಯಾರಿಗೂ ಆಗುತ್ತಿರಲಿಲ್ಲ. ಮಕ್ಕಳು ಮನೆ ತಲುಪಿದ ಮರುಗಳಿಗೆಯೇ ರಪರಪನೆ ಸದ್ದು ಮಾಡುತ್ತಾ ಆಲಿಕಲ್ಲು ಬಿದ್ದರೆ, ಅದ್ಯಾವ ಮಾಯದಲ್ಲೋ ಬೀದಿಗೆ ಹೋಗಿ ಐದಾರು ಆಲಿಕಲ್ಲು ತಂದು- ಬೇಗ ಆಆಆಆ ....' ಅನ್ನು. ಆಲಿಕಲ್ಲು ನುಂಗು. ಇದು ತಿಂದ್ರೆ ಹಲ್ಲುಗಟ್ಟಿಯಾಗ್ತವೆ ಅನ್ನುತ್ತಿದ್ದಳು ಅವ್ವ.

ಹೀಗೆ ಮಳೆ ಬಂದ ಸಂದರ್ಭದಲ್ಲಿ ಒಂಟಿಯಾಗಿ ಹಳ್ಳವನ್ನೂ ದಾಟಬೇಕಾಗಿ ಬಂದರೆ, ತಕ್ಷಣವೇ - ಅಲ್ಲಿ ದೆವ್ವಗಳಿವೆಯಂತೆ' ಎಂದು ಯಾರೋ, ಎಂದೋ ಹೇಳಿದ್ದ ಮಾತು ನೆನಪಾಗುತ್ತಿತ್ತು. ಮರುಕ್ಷಣವೇ ಆ ಮಳೆಯ ಮಧ್ಯೆಯೂ ಮೈ ಬೆವರುತ್ತಿತ್ತು. ತಕ್ಷಣ ಮನೆದೇವರ ಹೆಸರನ್ನು ಜಪಿಸುತ್ತ ಜೈ ಹನುಮಾನ್, ಜೈರಾಮ್, ಜೈ ಚಾಮುಂಡೇ ಶ್ವರಿ... ಎಂದೆಲ್ಲ ಹೇಳಿಕೊಂಡರೂ ದೆವ್ವ'ದ ಭಯ ಹೋಗುತ್ತಲೇ ಇರಲಿಲ್ಲ! ಮತ್ತೆ ಕೆಲವೊಂದು ಸಂದರ್ಭಗಳಲ್ಲಿ ಸ್ಕೂಲಿಂದ ಬಂದು ಮೇಯಲು ಹೋಗಿರುತ್ತಿದ್ದ ಜಾನುವಾರುಗಳನ್ನು ಮನೆಗೆ ಹೊಡೆದುಕೊಂಡು ಬರಲು ಹೋದರೆ, ಆ ವೇಳೆಗೇ ಮಳೆ ಬಂದು ಬಿಡುತ್ತಿತ್ತು. ಮಳೆಗೆ ಬೆದರಿ ಕುರಿ, ಮೇಕೆ, ದನಗಳು ಮನೆಯ ಕಡೆಗೆ ಪೇರಿ ಕಿತ್ತರೆ, ಎಮ್ಮೆಗಳು ಸೀದಾ ಹೋಗಿ ಕೆರೆಯ ನೀರೊಳಗೆ ಮಲಗಿಬಿಡುತ್ತಿದ್ದವು! ಕೆರೆಯ ಈಚೆ ದಡದಿಂದ ಅದೆಷ್ಟೇ ಗದರಿಸಿದರೂ, ಅದೆಷ್ಟೇ ಕಲ್ಲು ಹೊಡೆದರೂ ಅವು ಏಳುತ್ತಲೇ ಇರಲಿಲ್ಲ!

ಇನ್ನು ಕೆಲ ಬಾರಿ ಆ ಭೋರ್ಗರೆವ ಮಳೆಯ ಮಧ್ಯೆ ಕೂಡ ಎಮ್ಮೆಗಳು ಹೆಜ್ಜೆಯ ಮೇಲೆ ಹೆಜ್ಜೆ ಇಡುತ್ತಾ ಅತೀ ನಿಧಾನವಾಗಿ ನಡೆಯುತ್ತಿದ್ದವು. ಕಡೆಗೂ ಅವುಗಳೊಂದಿಗೆ ಮನೆ ತಲುಪುವ ವೇಳೆಗೆ ಮಳೆಗೆ ರಕ್ಷಣೆ ಕೊಡಲೆಂದು ಬಯ್ದಿರುತ್ತಿದ್ದ ಗೋಣಿ ಚೀಲದಿಂದ ಮಳೆ ನೀರು, ಧಾರೆಯಾಗಿ ಬೀಳುತ್ತಿತ್ತು. ಮಳೆಯಲ್ಲಿ ನೆಂದು ಪಜ್ಜಿಯಾಗಿ ಮನೆ ತಲುಪಿದ ಮಕ್ಕಳನ್ನು ಅಮ್ಮಂದಿರು ಒಳಗೆ ಕರೆದುಕೊಂಡು ಸೆರಗಿನಿಂದ ತಲೆಯೊರಸಿ, ಒಲೆ ಮುಂದೆ ಕೂರಿಸಿ- ಇಲ್ಲೇ ಸ್ವಲ್ಪ ಹೊತ್ತು ಇರು. ಮೈ ಬಿಸಿಯಾಗ್ಲಿ' ಎನ್ನುತ್ತಿದ್ದರು. ನಂತರ, ಸರಭರನೆ ಹೊರಗೆ ಬಂದು, ಒಮ್ಮೆ ಎರಡೂ ಕೈಗಳಿಂದ ಲಟಿಕೆ ಮುರಿದು- ಅದ್ಯಾವ ದಯ್ಯದ ಮಳೆಯೋ, ಇದರ ಮನೆ ಹಾಳಾಗ (?!) ನನ್ನ ಮಗು ಪೂರ್ತಿ ನೆಂದು ಹೋದ್ರೂ ಬಿಡಲಿಲ್ವಲ್ಲ? ಇದಕ್ಕೇನು ಕೇಡುಗಾಲವೋ ಕಾಣೆ' ಎಂದು ಬೈಯುತ್ತಿದ್ದರು! ಒಂದು ವೇಳೆ ಮಳೇಲಿ ನೆಂದ ಕಾರಣಕ್ಕೆ ಜ್ವರವೋ, ತಲೆನೋವೋ ಬಂದರೆ- ಹಣೆ, ಕಿವಿಯ ಸಂದು, ಕುತ್ತಿಗೆಯ ಸುತ್ತಲೂ ಅಮೃತಾಂಜನ ತಿಕ್ಕಿ, ಕೌದಿ ಹೊದಿಸಿ ಬೆಚ್ಚಗೆ ಮಲಗಿಸುತ್ತಿದ್ದರು. ಮಧ್ಯೆ ಮಧ್ಯೆ ಹಣೆ ಮುಟ್ಟಿ ಪರೀಕ್ಷಿಸುತ್ತಾ- ಈಗ ಪರವಾಗಿಲ್ಲ. ಜ್ವರ ಬಿಟ್ಟಿದೆ, ತಲೆನೋವೂ ಹೋಗಿದೆ' ಎಂದು ತಮಗೆ ತಾವೇ ಹೇಳಿಕೊಂಡು ಹಣೆಗೊಂದು ಮುತ್ತಿಡುತ್ತಿದ್ದರು.

ಮಳೆ ಅಂದಾಕ್ಷಣ ಎಲ್ಲರ ಕಣ್ಮುಂದೆಯೂ ಹಾಗೇ ಸುಮ್ಮನೆ' ಸುಳಿದು ಹೋಗುವ ಇನ್ನೊಂದು ಚಿತ್ರ- ಛತ್ರಿ ಹಿಡಿದು, ಆ ಮಳೆಯಲ್ಲೇ ಸಂಭ್ರಮದಿಂದ ನಡೆದು ಹೋಗುವ ಪ್ರೇಮಿಗಳದು. ರಸ್ತೆಯಲ್ಲಿ ಇಡೀ ಅರ್ಧಗಂಟೆ, ಅವನೊಂದಿಗೆ ಕೈ ಕೈ ಹಿಡಿದು, ಮೈಗೆ ಮೈ ತಾಗಿಸಿಕೊಂಡು, ಯಾವುದೋ ಹಳೆಯ ಹಾಡು ಗುನುಗುತ್ತಾ ಅಥವಾ ಅವನಿಗಷ್ಟೇ ಕೇಳಿಸುವಂತೆ ಪಿಸುಮಾತನಾಡುತ್ತಾ ನಡೆದುಹೋಗಬೇಕು. ಆಗೊಮ್ಮೆ ಈಗೊಮ್ಮೆ ಮೈತಾಗುವ ಅವನ ಬಿಸಿಯುಸಿರಿಂದ ಖುಷಿಯಾಗಬೇಕು. ಅವನ ಕಣ್ಣೊಳಗೆ ಇಣುಕಿ ನೋಡಿ, ಕಣ್ಣು ಹೊಡೆಯಬೇಕು, ಹೇಗಿದ್ರೂ ಸುತ್ತಮುತ್ತ ಯಾರೂ ಇರಲ್ಲವಲ್ಲ? ಅದೇ ನೆಪದಲ್ಲಿ ಅವನಿಗೊಂದು ಮುತ್ತಿಡಬೇಕು ಎಂಬ ಹಪಹಪಿ ಪ್ರೀತಿಯ ಹೊಳಗೆ ಬಿದ್ದ ಅಷ್ಟೂ ಹುಡುಗಿಯರಿಗಿರುತ್ತದೆ. (ಇಂಥದೇ ಭಾವ ಹುಡುಗರಿಗೂ ಇರುತ್ತದೆ!) ಹಾಗೆ, ಅಂದುಕೊಂಡ ಕನಸೆಲ್ಲ ನನಸಾಗುತ್ತಿದ್ದುದು ಮಳೆ ಬಂದ ಸಂದರ್ಭದಲ್ಲೇ! ಹೀಗೆ ಮಳೆ ಬಂದ ಸಂದರ್ಭದಲ್ಲಿ ಈ ಪ್ರೇಮಿಗಳ ಬಳಿ ಇರುತ್ತಿದ್ದುದು ಒಂದೇ ಛತ್ರಿ. ಒಂದಿಷ್ಟು ಏಕಾಂತ ಬೇಕೆಂದು ಮೊದಲೇ ಬಯಸಿದ್ದ ಇಬ್ಬರೂ ಕೈ ಕೈ ಹಿಡಿದುಕೊಂಡು ರಸ್ತೆಗಿಳಿದು, ತುಂಟಾಟಕ್ಕೆ, ಸಣ್ಣ ಜಗಳಕ್ಕೆ, ರವಷ್ಟು ಪೋಲಿತನಕ್ಕೆ ನಿಂತರೆಂದರೆ, ಅದನ್ನು ಕಂಡು ಮಳೆಯೆಂಬ ಮಳೆಯೂ ಬೆಚ್ಚಗಾಗುತ್ತಿತ್ತು. ಅವರು ಇನ್ನಷ್ಟು ಹೊತ್ತು ಜತೆ ಜತೆಗೇ ನಡೆಯಲಿ ಎಂಬ ಮಹದಾಸೆಯಿಂದ ಹನಿ ಸುರಿಸುತ್ತಿತ್ತು...

ಹೌದು. ಆಗೆಲ್ಲ ಮಳೆ ಶುರುವಾದರೆ ಸಾಕು, ಮಕ್ಕಳೆಲ್ಲ ರಾಗವಾಗಿ- ಹುಯ್ಯೋ ಹುಯ್ಯೋ ಮಳೆರಾಯ ಹೂವಿನ ತೋಟಕೆ ನೀರಿಲ್ಲ/ಬಾರೋ ಬಾರೋ ಮಳೆರಾಯ ಬಾಳೆಯ ಗಿಡಕೆ ನೀರಿಲ್ಲ' ಎಂದು ಹಾಡುತ್ತಿದ್ದರು. ಅಮ್ಮನ ಸೀರೆಯ ಸೆರಗೊಳಗೆ ಬೆಚ್ಚಗೆ ಮಲಗಿಕೊಂಡು ಇಡೀ ರಾತ್ರಿ ಸುರಿಯುತ್ತಿದ್ದ ಮಳೆ ಸದ್ದು ಕೇಳುತ್ತಿದ್ದರು. ಉಹುಂ, ಈಗ ಆ ಸಂಭ್ರಮವಿಲ್ಲ. ಹಳ್ಳಿಗಳ ಶಾಲೆಗಳಲ್ಲಿ ಈಗ ಹೆಚ್ಚಿನ ಮಕ್ಕಳಿಲ್ಲ. ಇರುವ ಮಕ್ಕಳನ್ನು ಕರೆದೊಯ್ಯಲು ಈಗ ಆಟೊಗಳಿವೆ. ಹಾಗಾಗಿ ಮಕ್ಕಳಿಗೆ ಮಳೆಯಲ್ಲಿ ನೆನೆವ ಸೌಭಾಗ್ಯವಿಲ್ಲ. ದೆವ್ವದ ಹೆದರಿಕೆಯಿಲ್ಲ. ಸಿಡಿಲಿನ ಕತೆ ಗೊತ್ತಿಲ್ಲ. ಹಳ್ಳಿಯ ಶಿಕ್ಷಕರೂ ಈಗ ರೈನ್‌ಕೋಟ್ ಧರಿಸಿ ಬೈಕ್‌ನಲ್ಲಿ ಬರುವುದರಿಂದ ಅವರು ಚಕ್ಕರ್ ಹೊಡೆವ ಸಂಭವವೂ ಇಲ್ಲ! ಮನೆಯ ಹಿಂಬದಿಯಿದ್ದ ಹೊಂಡ, ಊರಿನಾಚೆಗಿದ್ದ ಕೆರೆ ಏಕಕಾಲಕ್ಕೆ ಕಣ್ಮರೆಯಾಗಿರುವುದರಿಂದ ಕಪ್ಪೆಗಳ ಸಂಗೀತವೂ ಕೇಳಿಸುತ್ತಿಲ್ಲ.

ಇನ್ನು, ಬೆಂಗಳೂರಿನ ಮಳೆಗಾಲದ ಬಗ್ಗೆಯಂತೂ ಹೇಳುವುದೇ ಬೇಡ. ಇಲ್ಲಿ ಮಳೆ ಶುರುವಾದರೆ, ಮಕ್ಕಳಿರಲಿ, ದೊಡ್ಡವರಿಗೂ ಕೂಡ ಹೊರಗೆ ಹೋಗಲು ಭಯ. ಮಳೆ ನೀರಲ್ಲಿ ಸುಮ್ಮನೇ ಕಾಲಿಟ್ಟರೂ ಕೊಚ್ಚಿ ಹೋಗುವ ಭೀತಿ.... ಇದನ್ನೆಲ್ಲ ನೋಡಿದರೆ, ನಾವೆಲ್ಲ ಏನೋ ಬಹುಮುಖ್ಯವಾದುದನ್ನು ಕಳೆದುಕೊಂಡ ಸಂಕಟದ ಭಾವವೊಂದು ಮತ್ತೆ ಮತ್ತೆ ಕೈ ಜಗ್ಗಿದಂತಾಗುತ್ತದೆ; ಅಲ್ಲವೇ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+