ಕಾಲಲ್ಲಿ ಬರೆದ ಚಿತ್ರಕ್ಕೆ ಲಕ್ಷ ಲಕ್ಷ!

ದುರಂತವೆಂದರೆ, ಹೆಚ್ಚಿನ ಸಂದರ್ಭದಲ್ಲಿ ಯಾವ ತಾಯ್ತಂದೆಯೂ ಆ ಅಂಗವಿಕಲ ಮಗುವಿನಲ್ಲಿ ಆತ್ಮವಿಶ್ವಾಸ ಬೆಳೆಸುವ ಗೋಜಿಗೇ ಹೋಗಿರುವುದಿಲ್ಲ. ಹುಟ್ಟಿನಿಂದಲೇ ಬರುವ ಅಂಗವೈಕಲ್ಯಗಳು ಹರಕೆ ಕಟ್ಟಿಕೊಂಡರೆ, ಅಥವಾ ಹೋಮ ಮಾಡಿಸಿದರೆ ಸರಿ ಹೋಗುವುದಿಲ್ಲ ಎಂಬ ಪ್ರಾಥಮಿಕ ಅರಿವು ಕೂಡ ಬಹಳ ಜನಕ್ಕೆ ಇರುವುದಿಲ್ಲ. ಪರಿಣಾಮ, ಅಂಗವಿಕಲ ಮಗು ಹುಟ್ಟಿದೆ ಎಂದು ಗೊತ್ತಾದ ನಂತರ -ದೇವರು, ಜಪ, ತಪ, ಪೂಜೆಯ ಕಡೆಗೇ ಹೆಚ್ಚಿನವರು ವಾಲಿಕೊಳ್ಳುತ್ತಾರೆ. ಬಂಧುಗಳು, ಗೆಳೆಯರ ಮುಂದೆ ತಮ್ಮ ಮಗುವಿನ ಅವಸ್ಥೆಯ ಕುರಿತು ಸಂಕಟದಿಂದ ಮಾತಾಡುತ್ತಾರೆ. ಹತ್ತು ಮಂದಿಯ ಅನುಕಂಪ ಬಯಸುತ್ತಾರೆ. ನಂತರ, ಕೈ-ಕಾಲು ಇಲ್ಲದ ಮಕ್ಕಳಿಂದ ಏನೂ ಮಾಡಲು ಸಾಧ್ಯವಾಗುವುದಿಲ್ಲ ಎಂದು ತಾವೇ ಹೇಳಿಕೊಳ್ಳುತ್ತಾರೆ. ಆ ಮಗುವನ್ನು ಬಂಧುಗಳಿಂದ, ಗೆಳೆಯರಿಂದ, ಪರಿಚಿತರಿಂದ ಹಾಗೂ ಶಿಕ್ಷಣದಿಂದ ದೂರವೇ ಉಳಿಸುತ್ತಾರೆ!
ಮತ್ತು, ಹೀಗೆ ಮಾಡುವ ಮೂಲಕ ನನ್ನಿಂದ ಯಾವ ಸಾಧನೆಯೂ ಸಾಧ್ಯವಿಲ್ಲ ಎಂಬ ಭಾವನೆ ಅಂಗವಿಕಲ ಮಗುವಿಗೂ ಬಂದುಬಿಡುವಂತೆ ಮಾಡಿಬಿಡುತ್ತಾರೆ! ಪರಿಣಾಮ ಏನಾಗುತ್ತದೆ ಅಂದರೆ- ಅದೆಷ್ಟೋ ಅಂಗವಿಕಲ ಮಕ್ಕಳ ಸುಪ್ತ ಪ್ರತಿಭೆಯ ಪರಿಚಯ ಹೊರಜಗತ್ತಿಗೆ ಆಗುವುದೇ ಇಲ್ಲ! ಅಥವಾ ಒಂದು ವೇಳೆ ಒಂದು ರಾಜ್ಯವೇ ಮೆಚ್ಚುವಂಥ ಸಾಧನೆಯನ್ನು ಅಂಗವಿಕಲನೊಬ್ಬ ಮಾಡಿದರೂ ಅದನ್ನು ತುಂಬ ಸಂಭ್ರಮದಿಂದ ಒಪ್ಪುವಂಥ ಮನಸುಗಳು ನಮ್ಮ ಮಧ್ಯೆಯೂ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಈ ಕಾರಣದಿಂದಲೇ ಹುಟ್ಟು ಅಂಧನಾಗಿದ್ದರೂ ಭರತನಾಟ್ಯದ ದೊರೆ ಅನ್ನಿಸಿಕೊಂಡಿರುವ ಬುಸೇಗೌಡ, ಎರಡೂ ಕಾಲಿಲ್ಲದೆಯೂ ಮಹತ್ವದ್ದನ್ನು ಸಾಧಿಸಿರುವ ನಾಗನರೇಶ್ ಮುಂತಾದವರ ಬಗ್ಗೆ ನೂರು ಮಂದಿಯಲ್ಲಿ ವಿಚಾರಿಸಿದರೂ ಎರಡು ಪುಟಗಳ ಮಾಹಿತಿ ಸಿಗುವುದಿಲ್ಲ.
ಯಾರು ಏನೇ ಹೇಳಲಿ; ಈ ವಿಷಯದಲ್ಲಿ ವಿದೇಶಿಯರು ಅದರಲ್ಲೂ ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯದ ಜನರನ್ನು ನೋಡಿ ಕಲಿಯಬೇಕು. ಅಂಗವಿಕಲನೊಬ್ಬ ಮಹತ್ವದ ಸಾಧನೆಗೆ ತೊಡಗಿದ್ದಾನೆ ಎಂದು ಗೊತ್ತಾದರೆ ಸಾಕು, ಆ ದೇಶಗಳಲ್ಲಿ ಅವನ ಪರವಾಗಿ ಪ್ರಚಾರ ಮಾಡುವ ಜನ ಹುಟ್ಟಿಕೊಳ್ಳುತ್ತಾರೆ. ಅವನ ಚಿಕ್ಕದೊಂದು ಗೆಲುವನ್ನೂ ಮಹತ್ಸಾಧನೆ ಎಂದು ಬಣ್ಣಿಸಲು ಪತ್ರಿಕೆಗಳು ಪಣತೊಡುತ್ತವೆ. ವಿಕಲಾಂಗನೊಬ್ಬ ತನ್ನ ಅಂಗವೈಕಲ್ಯವನ್ನು ಮೆಟ್ಟಿ ನಿಂತದ್ದು ಹೇಗೆ? ಬದುಕಿನ ಹಾದಿನಲ್ಲಿ ಅವನಿಗೆ ಎದುರಾದ ಸಂಕಷ್ಟಗಳು ಎಂಥವು? ಈ ಹೋರಾಟದಲ್ಲಿ ಅವನ ಬೆನ್ನಿಗೆ ನಿಂತವರು ಯಾರು? ಎಂಬಿತ್ಯಾದಿ ವಿವರಗಳೆಲ್ಲ ಪತ್ರಿಕೆ ಹಾಗೂ ವೆಬ್‌ಸೈಟ್‌ಗಳಲ್ಲಿ ಮೇಲಿಂದ ಮೇಲೆ ಪ್ರಕಟವಾಗುತ್ತಲೇ ಇರುತ್ತವೆ.
ಪರಿಣಾಮ ಏನಾಗುತ್ತದೆ ಎಂದರೆ, ನಾನು ಅಂಗವಿಕಲ ಎಂಬ ಭಾವನೆ ಅಂಗವಿಕಲ ವ್ಯಕ್ತಿಗೆ ಬರುವುದೇ ಇಲ್ಲ. ಬದಲಿಗೆ, ನಾನು ವಿಶೇಷ ಸಾಧನೆ ಮಾಡಲಿಕ್ಕೆಂದೇ ಹುಟ್ಟಿದವನು. ನಾನು ಯಾರಿಗೇನು ಕಡಿಮೆ ಎಂಬ ಭಾವವೇ ಅಂಗವಿಕಲ ವ್ಯಕ್ತಿಗಳ ರಕ್ತದ ಕಣಕಣದಲ್ಲಿ ತುಂಬಿ ಹೋಗುತ್ತದೆ.
ಮುಂದೆ ಓದಿ : ಕಾಲಿಲ್ಲದ ಕಲಾವಿದನ ಚಿತ್ರಕಾವ್ಯಕ್ಕೆ ನಮಸ್ಕಾರ »
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications