ಇನ್‌ಸೈಟ್ ಇದ್ದರೆ ಒಳ್ಳೆಯದು!

ಸ್ಲಿಮ್ ಟ್ಯೂಬ್‌ಲೈಟ್, ಅಡುಗೆ ಎಣ್ಣೆ, ಬ್ಯಾಟರಿ ಸೆಲ್, ಟೂತ್‌ಪೇಸ್ಟ್, ಟಿವಿ, ಗೋಧಿ ಹಿಟ್ಟು... ಹೀಗೆ ಹಲವು ವಿಚಾರಗಳಲ್ಲಿ ಖರೀದಿಗೆ ಹೊರಟಾಗ ನಮ್ಮ ತಲೆಯಲ್ಲಿ ಒಂದು ಅನುಮಾನ ಮೂಡಬಹುದು. ಯಾವ ಕಂಪನಿಯ ತಯಾರಿಕೆ ಖರೀದಿಗೆ ಯೋಗ್ಯ? ಕಾನೂನು ಮಾನದಂಡಗಳನ್ನು ಇವು ಸರಿಯಾಗಿ ಪಾಲಿಸುತ್ತವೆಯೇ? ಬೆಲೆಗೆ ತಕ್ಕ ಮೌಲ್ಯ ದೊರಕುತ್ತದೆಯೇ? ಮಾರುಕಟ್ಟೆಯಲ್ಲಿ ಯಾವ ಯಾವ ಕಂಪನಿಯ ತಯಾರಿಕೆಗಳಿವೆ? ಗುಣಮಟ್ಟ ಹೇಗೆ? ಉಫ್, ಈ ಪ್ರಶ್ನೆಗಳಿಗೆಲ್ಲ ಉತ್ತರ ಎಲ್ಲಿ ಸಿಕ್ಕೀತು?
ಇಂಗ್ಲೀಷ್‌ನಲ್ಲೊಂದು ಗ್ರಾಹಕ ಪತ್ರಿಕೆಯಿದೆ. ಎರಡು ತಿಂಗಳಿಗೊಮ್ಮೆ ಪ್ರಕಟವಾಗುವ ಈ ಸುಂದರ ಪತ್ರಿಕೆಯ ಹೆಸರೇ 'ಇನ್‌ಸೈಟ್" ಅಹ್ಮದಾಬಾದ್‌ನ ಕನ್ಸ್ಯೂಮರ್ ಎಜುಕೇಷನ್ ಅಂಡ್ ರೀಸರ್ಚ್ ಸೊಸೈಟಿ (ಸಿಇಆರ್‌ಎಸ್) ರಾಷ್ಟ್ರದ ಪ್ರತಿಷ್ಠಿತ ಗ್ರಾಹಕ ಸಂಘಟನೆ. ಇದು ತನ್ನ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಪರೀಕ್ಷಾ ಕೇಂದ್ರದ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿಯೇ ವಿವಿಧ ಕಂಪನಿಗಳ ತಯಾರಿಕೆಗಳನ್ನು ಪರೀಕ್ಷಿಸಿದೆ, ಪರೀಕ್ಷಿಸುತ್ತಿದೆ. ಅದರ ಆಮೂಲಾಗ್ರ ವರದಿಯನ್ನು ಪ್ರತಿ ಇನ್‌ಸೈಟ್‌ನಲ್ಲಿ ಪ್ರಮುಖವಾಗಿ ಪ್ರಕಟಿಸಲಾಗುತ್ತದೆ. ತುಂಬಾ ಪಾರದರ್ಶಕವಾಗಿ, ಪ್ರಜಾತಂತ್ರೀಯವಾಗಿ ಪರೀಕ್ಷೆ ನಡೆಯುವುದರಿಂದ ಅವು ನಂಬಲರ್ಹ. ಮುಖ್ಯವಾಗಿ, ತಾನು ಕಂಡುಹಿಡಿದ ಮಾಹಿತಿಗಳನ್ನು ಚಂದವಾಗಿ, ಮನಸ್ಸಿಗೆ ನಾಟುವಂತೆ ಲೇಖನವಾಗಿಸುವುದು ಇನ್‌ಸೈಟ್‌ಗೆ ಗೊತ್ತು.
ಇಷ್ಟೇ ಅಲ್ಲ, ಕಾನೂನು ಸಲಹೆ, ತೆರಿಗೆ ಮಾಹಿತಿ, ಅನಾರೋಗ್ಯಕರ ತಯಾರಿಕೆಗಳು, ಬಳಕೆದಾರರ ಸಂಬಂಧೀ ಕಾಯ್ದೆಗಳು.. ಮಾಹಿತಿ ಹೇರಳ. ಸ್ವಲ್ಪ ಪ್ರಮಾಣದ ಇಂಗ್ಲೀಷ್ ಗೊತ್ತಿದ್ದವನಿಗೂ ಪತ್ರಿಕೆ ಗಿಟ್ಟುತ್ತದೆ, ಈಗ ನಾನಿಲ್ಲವೇ? ಅದರ ಬಿಡಿ ಪ್ರತಿ ಬೆಲೆ 40 ರೂ. ಮಾರಾಟದಲ್ಲಿ ಬಿಡಿ ಪ್ರತಿ ಸಿಕ್ಕದು. ವಾರ್ಷಿಕ ಚಂದಾ 180 ರೂ. ಅದೇ ಮೂರು, ಐದು ವರ್ಷಗಳಿಗೆ ಆದರೆ ರಿಯಾಯಿತಿ ದರವಿದೆ. ಅನುಕ್ರಮವಾಗಿ ಅದು 450, 700 ರೂ. ಚಂದಾ ಕಳಿಸುವುದಾದರೆ.
ನೆನಪಿರಲಿ, ಪತ್ರಿಕೆಯ ಉದ್ದೇಶ ಗ್ರಾಹಕ ಜಾಗೃತಿಯೇ ವಿನಃ ವ್ಯಾವಹಾರಿಕ ಲಾಭವಲ್ಲ. ಆದರೂ ಪತ್ರಿಕೆ ಬೇಡ, ಮಾಹಿತಿಯಷ್ಟೇ ಬೇಕು ಎನ್ನುವವರು. ವೆಬ್‌ಸೈಟ್‌ನಲ್ಲಿ ಇಣುಕಬಹುದು. ಸಿಇಆರ್ ಸಿ ಗಳ ಬಗೆಗೆ ಲೇಖನಗಳು ನಿಮಗೆ ಗೂಗಲ್ ಹುಡುಕಾಟದಲ್ಲಿ ಸಿಗುತ್ತವೆ.
ಕೊನೆಮಾತು :ಮಿತ್ರ ಜಿತು ಈಗ 'ತನಗೆ ಬರುತ್ತಿರುವ ಕೆಲವು ವಿಶಿಷ್ಠ ಪತ್ರಿಕೆಗಳನ್ನು ನನಗೆ ಕೊಡುವುದಾಗಿ ತಿಳಿಸಿದ್ದಾನೆ. ನಿಮ್ಮಂತ ಇತರ ಸ್ನೇಹಿತರಲ್ಲೂ ನಾನು ಕೇಳುವುದಿಷ್ಟೇ, ನಿಮಗೆ ಉತ್ತಮ ಎನ್ನಿಸಿದ ಪತ್ರಿಕೆಯ ಸ್ಯಾಂಪಲ್ ಪ್ರತಿಯನ್ನು ನನ್ನ ವಿಳಾಸಕ್ಕೆ ಕಳಿಸಿಕೊಡಿ. ನನಗೂ ಮೆಚ್ಚುಗೆಯಾದರೆ ಈ ಅಂಕಣದಲ್ಲಿ ಬಳಸಿಕೊಳ್ಳುವೆ. ಅಷ್ಟಕ್ಕೂ ನನಗೆ ಲಭ್ಯವಿರುವ ಅಪರೂಪದ ಪತ್ರಿಕೆಗಳು ಕೆಲವೊಂದು ಮಾತ್ರ. ಉಳಿದವಕ್ಕೆ ಸಲ್ಲಬೇಕಾದ ಸಮ್ಮಾನ ತಪ್ಪಿಹೋದೀತು. ಕಳಿಸಿಕೊಡುವಿರಾ?
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications