ಚೆಂದದ ವಿನ್ಯಾಸದ ಮಾಸಪತ್ರಿಕೆ ವಿವೇಕಪ್ರಭ

ಪುಟ ವಿನ್ಯಾಸ ನನಗೆ ಸದಾ ಆಸಕ್ತಿಯ ವಿಷಯ. ಸುಧಾ-ಮಯೂರಗಳ ಸಾಹಿತ್ಯಿಕ ಮೌಲ್ಯದ ಜೊತೆಗೆ ಅದರ ಇಂದಿನ ವಿನ್ಯಾಸ ಆಕರ್ಷಕ. ದುರಂತವೆಂದರೆ, ಸಾಮಾನ್ಯವಾಗಿ ಧಾರ್ಮಿಕ ಪತ್ರಿಕೆಗಳಲ್ಲಿ ಲೇಔಟ್‌ಗೆ ಕನಿಷ್ಟ ಆದ್ಯತೆ. ಅಲ್ಲೇನಿದ್ದರೂ ಉದ್ದುದ್ದದ ಲೇಖನಗಳು, ಪುಟ ತುಂಬುವ ಸರ್ಕಸ್. ಅಂತವು ಎಂದು ಒಂದೆರಡನ್ನು ಹೆಸರಿಸುವುದು ಬೇಡ. ಆದರೆ ವಿವೇಕಪ್ರಭ' ಮಾತ್ರ ಅಕ್ಷರಶಃ ವಿಭಿನ್ನ.
ಮೈಸೂರಿನ ಶ್ರೀರಾಮಕೃಷ್ಣ ಆಶ್ರಮ[ಯಾದವಗಿರಿ, ಮೈಸೂರು -570 020]ದ ವಿವೇಕಪ್ರಭ ವಿಭಾಗ ಪ್ರಕಟಿಸುತ್ತಿರುವ ಈ ಮಾಸಿಕದಲ್ಲಿ ಮೊತ್ತಮೊದಲು ನನ್ನ ಗಮನ ಸೆಳೆದಿದ್ದು ಲೇಔಟ್. ಈಗ 10 ವಸಂತಗಳನ್ನು ಪೂರೈಸಿದ ಹೆಮ್ಮೆ ಇದಕ್ಕೆ. ಅದಕ್ಕೋ ಏನೋ, ಕಳೆದ ಎರಡು ಸಂಚಿಕೆಗಳಿಂದ ಪತ್ರಿಕೆಯ ಪ್ರತಿ ಪುಟವೂ ಬಣ್ಣ ಬಣ್ಣದಲ್ಲಿ ಪ್ರಕಟವಾಗುತ್ತಿದೆ.
ಇದೇ ಪತ್ರಿಕೆಯಲ್ಲಿ ಮೂಡಿದ ಮಾಹಿತಿಯಂತೆ, ಇದರ ವ್ಯವಸ್ಥಾಪಕ ಸಂಪಾದಕರು ಸ್ವಾಮಿ ನಿತ್ಯಸ್ಥಾನಂದರು. ರಾಮಕೃಷ್ಣ ಮಹಾಸಂಘದ ಏಕೈಕ ಮಾಸಪತ್ರಿಕೆ ಎಂಬ ಅಗ್ಗಳಿಕೆಯ ವಿವೇಕಪ್ರಭ'ದ ಸಂಪಾದಕೀಯ ಸಲಹಾ ಮಂಡಳಿಯಲ್ಲಿ ಗುರುಗಳಾದ ಡಾ.ನಿರಂಜನ ವಾನಳ್ಳಿಯವರೂ ಇದ್ದಾರೆ. 42 ಪುಟಗಳ ಪತ್ರಿಕೆಯ ಬಿಡಿ ಪ್ರತಿ ಬೆಲೆ 10 ರೂಪಾಯಿ. ವಾರ್ಷಿಕ ಚಂದಾ 100 ರೂ. ಮೂರು ವರ್ಷಕ್ಕೆ 250 ರೂ. 25 ವರ್ಷಕ್ಕೆ ಕೇವಲ ಒಂದೂವರೆ ಸಾವಿರ ರೂ. ಹೆಚ್ಚಿನ ಚಂದಾ ವಿವರಕ್ಕೆ 0821-2417444 ಅಥವಾ 2412424ನ್ನು ಸಂಪರ್ಕಿಸಬಹುದು.
ಇನ್ನೊಂದು ಹೇಳಲೇಬೇಕಾದ ಮಾಹಿತಿಯಿದೆ. ವಿವೇಕಪ್ರಭ ಉಳಿದ ಪತ್ರಿಕೆಗಳಂತೆ ಸಂಕೀರ್ಣ ವಾಕ್ಯಗಳ ಒಣ ಲೇಖನಗಳ ಮೂಲಕ ಧರ್ಮ, ವೇದಾಂತ, ಉಪನಿಷತ್ ಎನ್ನುತ್ತ ಬರೆಯುವುದಿಲ್ಲ. ತುಂಬಾ ಸರಳವಾಗಿ ಮತ್ತು ಅಷ್ಟೇ ಆಕರ್ಷಕ ನಿರೂಪಣೆಯಲ್ಲಿ ಲೇಖನಗಳಿರುತ್ತವೆ. ಮುಖ್ಯವಾಗಿ ರಾಮಕೃಷ್ಣ, ವಿವೇಕಾನಂದ, ಶ್ರೀಮಾತೆ ಕುರಿತಂತೆ ಘಟನೆಗಳನ್ನಾಧರಿಸಿದ ಬರಹಗಳು ಇರುವುದು ಚೆನ್ನ. ದೊಡ್ಡವರೇಕೆ ಸಣ್ಣ ಮಕ್ಕಳೂ ಕೂಡ ಓದುವಂತಿರುತ್ತವೆ. ಕಥೋಪದೇಶ, ವಿದ್ಯಾರ್ಥಿ ಪ್ರಭ ಮತ್ತು ಸಣ್ಣ ಪುಟ್ಟ ತುಣುಕುಗಳ ಮಾಹಿತಿ ಅಲ್ಲಲ್ಲಿ ಇರುವುದು ನಿಜಕ್ಕೂ ಚೆಂದ ಚೆಂದ.
ಮಾದರಿ ಪ್ರತಿ ಕಳಿಸಿಕೊಡುವರೋ ಇಲ್ಲವೋ ಗೊತ್ತಿಲ್ಲ. [email protected] ಮೂಲಕವೂ ತಾವು ವಿಚಾರಿಸಬಹುದು. ನಮ್ಮ ವೀಣಾ ಸ್ಮಾರಕ ಮಾವಿನಮನೆ ವಾಚನಾಲಯ'ಕ್ಕೆ ಉಚಿತವಾಗಿ ಕಳಿಸಿಕೊಡುತ್ತಿರುವುದಕ್ಕೆ ನಾನು ವಿವೇಕಪ್ರಭ ಬಳಗಕ್ಕೆ ಸದಾ ಕೃತಜ್ಞ.
ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : [email protected]
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications