• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚೆಂದದ ವಿನ್ಯಾಸದ ಮಾಸಪತ್ರಿಕೆ ವಿವೇಕಪ್ರಭ

By * ಮಾ.ವೆಂ.ಸ. ಪ್ರಸಾದ್
|
ಕೆಲವರ್ಷಗಳ ಹಿಂದಿನ ಮಾತು. ನಾಗೇಶ್ ಹೆಗಡೆ ಪ್ರಜಾವಾಣಿಯ ಪುರವಣಿಗಳನ್ನು ನಿರ್ವಹಿಸುತ್ತಿದ್ದ ಕಾಲ. ನನಗಿದ್ದುದು ಫೋನ್ ಪರಿಚಯ ಮಾತ್ರ. ದೂರವಾಣಿಯಲ್ಲಿ, ಪುಟ್ಟ ಕಾರ್ಡ್‌ನಲ್ಲಿ ಅವರು ಒದಗಿಸುತ್ತಿದ್ದ ಪ್ರೋತ್ಸಾಹ ಅಪರಿಮಿತ. ಅವರ ನಿರ್ವಹಣೆಯ ಕರ್ನಾಟಕ ದರ್ಶನ'ದಲ್ಲಿ ನಮ್ಮ ಒಂದು ಲೇಖನ ಬಂತೆಂದರೆ ಅದು ಎಲ್ಲ ಪರೀಕ್ಷೆ ಪಾಸಾದಂತೆ! ಇಂತಹ ವೇಳೆಯ ಮಾತುಕತೆಯಲ್ಲಿ ಹೆಗಡೆಯವರಲ್ಲಿ ನಾನು ಸಹಸಂಪಾದಕನಾಗಿದ್ದ ಬಳಕೆ ತಿಳುವಳಿಕೆ'ಯ ಪ್ರಸ್ತಾಪ ಎಲ್ಲೋ ಬಂದಿರಬೇಕು. ಒಂದು ಪ್ರತಿ ಕಳಿಸಲು ಹೇಳಿದ್ದರು. ಅದರ ಕುರಿತಂತೆ ಅವರ ಎಂದಿನ ಚುಟುಕು ಪ್ರತಿಕ್ರಿಯೆಯೂ ಸಿಕ್ಕಿತ್ತು, "ಲೇಔಟ್ ಚೆನ್ನಾಗಿದೆ" ಎಂದಿದ್ದರು.

ಪುಟ ವಿನ್ಯಾಸ ನನಗೆ ಸದಾ ಆಸಕ್ತಿಯ ವಿಷಯ. ಸುಧಾ-ಮಯೂರಗಳ ಸಾಹಿತ್ಯಿಕ ಮೌಲ್ಯದ ಜೊತೆಗೆ ಅದರ ಇಂದಿನ ವಿನ್ಯಾಸ ಆಕರ್ಷಕ. ದುರಂತವೆಂದರೆ, ಸಾಮಾನ್ಯವಾಗಿ ಧಾರ್ಮಿಕ ಪತ್ರಿಕೆಗಳಲ್ಲಿ ಲೇಔಟ್‌ಗೆ ಕನಿಷ್ಟ ಆದ್ಯತೆ. ಅಲ್ಲೇನಿದ್ದರೂ ಉದ್ದುದ್ದದ ಲೇಖನಗಳು, ಪುಟ ತುಂಬುವ ಸರ್ಕಸ್. ಅಂತವು ಎಂದು ಒಂದೆರಡನ್ನು ಹೆಸರಿಸುವುದು ಬೇಡ. ಆದರೆ ವಿವೇಕಪ್ರಭ' ಮಾತ್ರ ಅಕ್ಷರಶಃ ವಿಭಿನ್ನ.

ಮೈಸೂರಿನ ಶ್ರೀರಾಮಕೃಷ್ಣ ಆಶ್ರಮ[ಯಾದವಗಿರಿ, ಮೈಸೂರು -570 020]ದ ವಿವೇಕಪ್ರಭ ವಿಭಾಗ ಪ್ರಕಟಿಸುತ್ತಿರುವ ಈ ಮಾಸಿಕದಲ್ಲಿ ಮೊತ್ತಮೊದಲು ನನ್ನ ಗಮನ ಸೆಳೆದಿದ್ದು ಲೇಔಟ್. ಈಗ 10 ವಸಂತಗಳನ್ನು ಪೂರೈಸಿದ ಹೆಮ್ಮೆ ಇದಕ್ಕೆ. ಅದಕ್ಕೋ ಏನೋ, ಕಳೆದ ಎರಡು ಸಂಚಿಕೆಗಳಿಂದ ಪತ್ರಿಕೆಯ ಪ್ರತಿ ಪುಟವೂ ಬಣ್ಣ ಬಣ್ಣದಲ್ಲಿ ಪ್ರಕಟವಾಗುತ್ತಿದೆ.

ಇದೇ ಪತ್ರಿಕೆಯಲ್ಲಿ ಮೂಡಿದ ಮಾಹಿತಿಯಂತೆ, ಇದರ ವ್ಯವಸ್ಥಾಪಕ ಸಂಪಾದಕರು ಸ್ವಾಮಿ ನಿತ್ಯಸ್ಥಾನಂದರು. ರಾಮಕೃಷ್ಣ ಮಹಾಸಂಘದ ಏಕೈಕ ಮಾಸಪತ್ರಿಕೆ ಎಂಬ ಅಗ್ಗಳಿಕೆಯ ವಿವೇಕಪ್ರಭ'ದ ಸಂಪಾದಕೀಯ ಸಲಹಾ ಮಂಡಳಿಯಲ್ಲಿ ಗುರುಗಳಾದ ಡಾ.ನಿರಂಜನ ವಾನಳ್ಳಿಯವರೂ ಇದ್ದಾರೆ. 42 ಪುಟಗಳ ಪತ್ರಿಕೆಯ ಬಿಡಿ ಪ್ರತಿ ಬೆಲೆ 10 ರೂಪಾಯಿ. ವಾರ್ಷಿಕ ಚಂದಾ 100 ರೂ. ಮೂರು ವರ್ಷಕ್ಕೆ 250 ರೂ. 25 ವರ್ಷಕ್ಕೆ ಕೇವಲ ಒಂದೂವರೆ ಸಾವಿರ ರೂ. ಹೆಚ್ಚಿನ ಚಂದಾ ವಿವರಕ್ಕೆ 0821-2417444 ಅಥವಾ 2412424ನ್ನು ಸಂಪರ್ಕಿಸಬಹುದು.

ಇನ್ನೊಂದು ಹೇಳಲೇಬೇಕಾದ ಮಾಹಿತಿಯಿದೆ. ವಿವೇಕಪ್ರಭ ಉಳಿದ ಪತ್ರಿಕೆಗಳಂತೆ ಸಂಕೀರ್ಣ ವಾಕ್ಯಗಳ ಒಣ ಲೇಖನಗಳ ಮೂಲಕ ಧರ್ಮ, ವೇದಾಂತ, ಉಪನಿಷತ್ ಎನ್ನುತ್ತ ಬರೆಯುವುದಿಲ್ಲ. ತುಂಬಾ ಸರಳವಾಗಿ ಮತ್ತು ಅಷ್ಟೇ ಆಕರ್ಷಕ ನಿರೂಪಣೆಯಲ್ಲಿ ಲೇಖನಗಳಿರುತ್ತವೆ. ಮುಖ್ಯವಾಗಿ ರಾಮಕೃಷ್ಣ, ವಿವೇಕಾನಂದ, ಶ್ರೀಮಾತೆ ಕುರಿತಂತೆ ಘಟನೆಗಳನ್ನಾಧರಿಸಿದ ಬರಹಗಳು ಇರುವುದು ಚೆನ್ನ. ದೊಡ್ಡವರೇಕೆ ಸಣ್ಣ ಮಕ್ಕಳೂ ಕೂಡ ಓದುವಂತಿರುತ್ತವೆ. ಕಥೋಪದೇಶ, ವಿದ್ಯಾರ್ಥಿ ಪ್ರಭ ಮತ್ತು ಸಣ್ಣ ಪುಟ್ಟ ತುಣುಕುಗಳ ಮಾಹಿತಿ ಅಲ್ಲಲ್ಲಿ ಇರುವುದು ನಿಜಕ್ಕೂ ಚೆಂದ ಚೆಂದ.

ಮಾದರಿ ಪ್ರತಿ ಕಳಿಸಿಕೊಡುವರೋ ಇಲ್ಲವೋ ಗೊತ್ತಿಲ್ಲ. kannada.vivekaprabha@gmail.com ಮೂಲಕವೂ ತಾವು ವಿಚಾರಿಸಬಹುದು. ನಮ್ಮ ವೀಣಾ ಸ್ಮಾರಕ ಮಾವಿನಮನೆ ವಾಚನಾಲಯ'ಕ್ಕೆ ಉಚಿತವಾಗಿ ಕಳಿಸಿಕೊಡುತ್ತಿರುವುದಕ್ಕೆ ನಾನು ವಿವೇಕಪ್ರಭ ಬಳಗಕ್ಕೆ ಸದಾ ಕೃತಜ್ಞ.

ಲೇಖಕರ ವಿಳಾಸ : ಮಾ.ವೆಂ.ಸ.ಪ್ರಸಾದ್, ಮಾವಿನಸರ, ಪೋಸ್ಟ್-ಎಡಜಿಗಳೇಮನೆ. ಸಾಗರ ತಾ. ಶಿವಮೊಗ್ಗ ಜಿ. 577401 ಫೋನ್-08183 236068, 98864 07592 ಇ ಮೇಲ್ : mavemsa@rediffmail.com

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X

Loksabha Results

PartyLWT
BJP+56298354
CONG+226789
OTH603999

Arunachal Pradesh

PartyLWT
BJP101626
CONG033
OTH5510

Sikkim

PartyLWT
SKM41014
SDF4610
OTH000

Odisha

PartyLWT
BJD1121113
BJP23023
OTH10010

Andhra Pradesh

PartyLWT
YSRCP38111149
TDP81725
OTH101

-
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more