ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೇನಾಗಿ ನಿನ್ನ ಬಳಿ ಬರುವೆನೆಂಬ ಮಾತು ಒಪ್ಪಿ ಬೆಪ್ಪನಾದೆನೇ ಶಕುಂತಲಾ!

By ಸ ರಘುನಾಥ, ಕೋಲಾರ
|
Google Oneindia Kannada News

ಹೃದಯ ಪ್ರಿಯೆ ಶಕುಂತಲೇ,

ತವರಿನಲಿ ಹೇಗಿರುವೆ?

ಇಲ್ಲಿ ನಾನಿರುವೆ ಕೆಲಸಗಳ ನಡುವೆ ಸಿಗುವ ಬಿಡುವುಗಳಲ್ಲಿ ನಿನ್ನ ನೆನಪಿನಲ್ಲಿ. ನಾವೀಗ ನಿನ್ನಿಂದ ತಿಂಗಳಿನಷ್ಟು ದೂರದಲ್ಲಿದ್ದೇವೆ. ಈ ತಿಂಗಳೆಂದರೆ ಚಂದಿರ. ನೋಡಲು ಹತ್ತಿರ, ಯೋಚಿಸಿದರೆ ಎಷ್ಟೊಂದು ದೂರ! ನೀನು ನೆನಪಿನಲ್ಲಿರುವೆ ಹತ್ತಿರ.

ಅಗಲಿಕೆಯಲ್ಲಿ ಆ ಚಂದ್ರನಷ್ಟು ದೂರ. ಈ ಮಾತಿಗೆ ನೀನು ಮದುವೆಗೆ ಮುಂಚೆ ನಿಮ್ಮೂರು ನನಗೆ ಎಷ್ಟು ದೂರವಿತ್ತೋ ಈಗ ನಮ್ಮೂರು ನಿನಗೆ ಅಷ್ಟೇ ದೂರವೆಂದು ಹೇಳುತ್ತಿಯೆಂದು ಬಲ್ಲೆ. ಕೊಂಚ ಹುಬ್ಬಿಳಿಸಿ ನೋಡು. ಅಳತೆಯ ದೂರ ನೀನಂದಂತೆ ಸರಿ. ಈಗ ಹಾಗಲ್ಲ ಮನಸ್ಸಿಗೆ ನೀನು ಅತಿ ದೂರದಲ್ಲಿರುವೆ ಅನ್ನಿಸುವುದು. ಇದು ವಿರಹ ಮಾಸದ ಭಾವದೂರ ಶಕುಂತಲೆ.

ಶಕುಂತಲೇ, ನಿನ್ನ ಕಾಗದದ ಪದಪದ ವಿರಹ ತಾಪವನ್ನು ಹೆಚ್ಚಿಸುತ್ತಿದೆಶಕುಂತಲೇ, ನಿನ್ನ ಕಾಗದದ ಪದಪದ ವಿರಹ ತಾಪವನ್ನು ಹೆಚ್ಚಿಸುತ್ತಿದೆ

ಆಷಾಢವೆಂದು ನೀನು ಊರಿಗೆ ಹೋದೆ. ನನ್ನ ಹೊರತು ನೀನು ಹೋದುದು ಬಹು ದೂರವೆಂದು ಯಾರಿಗೂ ತಿಳಿದಿಲ್ಲ. ನನ್ನ ಅಗಲಿ ಹೋಗುವುದೆಂದಾಗ ನಿನ್ನ ಹೃದಯದ ಭಾರ ನನಗೆ ತಿಳಿದಿತ್ತು. ಹೊರಟ ಮೇಲೆ ತವರಿನ ಪ್ರೀತಿ ನಿನ್ನೆದೆಯಲ್ಲಿ ತುಳುಕಿ ನೀನು ಗೆಲುವಾಗಿದ್ದೆ. ಹೊರಡುವ ಹಾಗೂ ಹೊರಟ ಕಾಲದ ನಡುವಿನ ಕೆಲ ನಿಮಿಷಗಳಲ್ಲಿ, 'ವಸಂತ ರಾಜಾ, ಶ್ರಾವಣಕೆ ಜೇನಾಗಿ ನಿನ್ನ ಬಳಿ ಬರಲು ಈಗ ಹೋಗುವುದು ಬೇಡವೆ' ಎಂದು ರಮಿಸಿದಾಗ ಸರಿಯೆಂದು ತೋರಿತ್ತು.

Love letter series: Honey your love made me fool

ಅಂದು ರಾತ್ರಿ ಮಂಚ ಹೇಳಿತು, 'ಪೆದ್ದೇ ಜೇನಾಗಿ ಬರಲು ನಿನ್ನವಳಲ್ಲಿ ಎಲ್ಲಿ ಬತ್ತಿತ್ತು ಜೇನು? ಶಕುಂತಲೆಯ ಮಾತಿಗೆ ಮರುಳಾದಿಯಲ್ಲೋ ಗಂಡೆ.' ಹೊರಡುವ ಮೊದಲ ಮೂರು ದಿನಗಳಲ್ಲಿ ನಿನ್ನ ಒಂದೊಂದು ಪರಿಯ ಒಯ್ಯಾರದಲ್ಲಿ ಆಷಾಢದ ಸಂಚು ಹೀಗಿರುತ್ತದೆಂದು ಅರಿವಾಗಲಿಲ್ಲ. ಈಗ ಅರಿವಾಗುತ್ತಿದೆ. ಆದರೆ ಪ್ರಯೋಜನವಿಲ್ಲ.

ಈ ಕಾಗದ ಬರೆಯುತ್ತಿರುವ ಸಮಯ ರಾತ್ರಿ ಹನ್ನೆರಡು ಗಂಟೆ. ಮನಸ್ಸಿನ ತುಂಬಾ 'ವಿರಹ ನೂರು ನೂರು ತರಹ' ಹಾಡು. ನನಗೆ ಮಾತ್ರ ಅದು ನೂರು ನೂರು ತರಹದ್ದಲ್ಲ. ಶಕುಂತಲೆ ಇಲ್ಲದ್ದು ಒಂದೇ. ನಂತರ ತಿಳಿಯಿತು ಶಕುಂತಲೇ ಇರದಿರುವುದರಲ್ಲೇ ಆ ನೂರು ನೂರು ತರಹದ್ದಾಗಿದೆ ಎಂದು.

ಆಕಾಶದ ನಕ್ಷತ್ರಗಳನ್ನೆಲ್ಲಾ ಬಾಚಿ ಸೆರಗಿನಲ್ಲಿ ಕಟ್ಟಿಕೊಂಡಂತೆ! ಆಕಾಶದ ನಕ್ಷತ್ರಗಳನ್ನೆಲ್ಲಾ ಬಾಚಿ ಸೆರಗಿನಲ್ಲಿ ಕಟ್ಟಿಕೊಂಡಂತೆ!

'ಬಂತದೋ ಶೃಂಗಾರ ಮಾಸ' ಹಾಡು ನಿದ್ದೆಯಿಂದೆಬ್ಬಿಸಿತು. ಕಳೆದು ಹೋಯಿತೇ ಆಷಾಢ ಮಾಸ? ಮಲಗಿದ್ದೆನೆ ಇಡೀ ತಿಂಗಳು? ರೈಲಿನ ಕೂಗು ಕೇಳಿಸಿತು. ಹೇಳಿದಂತೆ ಜೇನಾಗಿ ಬಂದು ಬಿಟ್ಟಳೇ ಶಕುಂತಲೆ? ಬರಮಾಡಿಕೊಳ್ಳಲು, ತೋಳುಗಳಲ್ಲಿ ತಬ್ಬಿ ತುಂಬಿಕೊಳ್ಳುವುದು ತಡವಾಯಿತೆ ಎಂದು, ನಿದ್ದೆಯನ್ನು ಹಾಳಾದ್ದು ಎಂದು ತೆಗಳಿ, ದಡಬಡಿಸಿ ಎದ್ದೆ. ಬೆಳಗಿನ ಜಾವ, ಕನಸು.

ನಿನ್ನ ಕೆಂದುಟಿಯ ನೆನಪು ತಂದ ಗಿಳಿ ಕೊಕ್ಕಿಗೆ ಮೆತ್ತಿದ ಬೆಳ್ಳನೆ ಹಾಲುನಿನ್ನ ಕೆಂದುಟಿಯ ನೆನಪು ತಂದ ಗಿಳಿ ಕೊಕ್ಕಿಗೆ ಮೆತ್ತಿದ ಬೆಳ್ಳನೆ ಹಾಲು

'ಬಂತದೋ ಶೃಂಗಾರ ಮಾಸ' ಮತ್ತೆ ಎದೆಗೆ ಬಂದಿತು ಹಾಡು. ನೆನಪಾಯಿತು 'ಜೇನಾಗಿ ಬರುವೆ' ಎಂದ ನಿನ್ನ ಮಾತು. ಆಷಾಢವನ್ನು ಜಪಿಸುತ್ತ, ನಿಂದಿಸುತ್ತ, ವಿರಹದಲಿ ಬೇಯುವುದಕ್ಕಿಂತ ನೀ ತವರಿಂದ ಹೊರಟ ಸುದ್ದಿಯ ಗೆಜ್ಜೆ ಕಾಲಿನ ನಾದಕ್ಕಾಗಿ ಕಾಯುವುದರಲ್ಲಿ ಸುಖವಿದೆ ಅನ್ನಿಸಿದಾಗ-

'ಬರುತಲಿದೆ ಶೃಂಗಾರ ಮಾಸ

ಮಂದಹಾಸ ತುಂಬಿ ಬರುವ

ಶಕುಂತಲೆಯ ಕರೆತರುತ

ಬರುತಲಿದೆ ಶೃಂಗಾರ ಮಾಸ'

ಎಂದು ಹಾಡು ಕಟ್ಟಿ ಹಾಡಿಕೊಂಡಾಗ, ಹಾಡಿಕೊಳ್ಳುವಾಗ ಸುಖಾನಂದ ಅನ್ನಿಸಿದರೂ 'ವಿರಹಮಾಸ'ದ ವಿರಹಿ ನಾನೆಂಬುದು ವಿರಹದ ಆಣೆ ನಿಜ ಶಂಕುತಲೆ.

English summary
Oneindia columnist Sa Raghunatha writes love letter series. Here Vasantha express his feeling while he is away from lover.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X