• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಂದ್ರನಲ್ಲಿಗೇ ಹೋಗಿ ತಣಿವಷ್ಟು ಬೆಳದಿಂಗಳ ಹಾಲು ಕುಡಿದು ಬರುವ

By ಸ ರಘುನಾಥ, ಕೋಲಾರ
|

ನನ್ನ ಮನಕೊಳದ ಹಂಸ ವಸಂತ,

ಬಾಳ ಗೆಳೆಯನೇ ಪೂರ್ಣ ಚಂದ್ರನೆ, ತಾಳಲಾರೆನೋ ಈ ವಿರಹ ವೇದನೆ ಎಂದು ಮನಸ್ಸು ಆಲಾಪಿಸುತ್ತಿರುವಾಗ ನಿನ್ನ ಕಾಗದ ಕೈ ಸೇರಿತು. ಅದರಲ್ಲಿನ ಒಕ್ಕಣೆ ತಿಳಿದಿದ್ದರೂ ಓದುವಾಗ ಇದೇ ಮೊದಲು ತಿಳಿಯುತ್ತಿರುವಂತೆ ಸಂಭ್ರಮಿಸುತ್ತ ಓದಿದೆ. ನೀಲಳಲ್ಲೂ ಇದೇ ಸಂಭ್ರಮ. ಒಂದೇ ಚಪ್ಪರದಡಿ ಎರಡು ಜೋಡಿಯ ಮದುವೆ! ಅವಳೀಗ ಅವಳದೇ ಕನಸಿನ ಲೋಕದಲ್ಲಿ.

ವಸಂತ ಮನಸಲ್ಲಿ ಏನೋ ಹಗುರ ಭಾವ. ಆಕಾಶದ ನಕ್ಷತ್ರಗಳನ್ನೆಲ್ಲಾ ಬಾಚಿ ಸೆರಗಿನಲ್ಲಿ ಕಟ್ಟಿಕೊಂಡಂತೆ. ಮುಡಿದ ಮಲ್ಲಿಗೆ ಗಮಲು ಮೊದಲ ಸಲ ಗಾಳಿಗೆ ಮುನಿದು ನನ್ನನ್ನೇ ಅಪ್ಪಿ ಹಿಡಿದಂತೆ. ಆ ಅಪ್ಪುಗೆ ನಿನ್ನದೇ ಆಗಿರುವಂತೆ. ವಸಂತ ಕರೆಯುತಿದೆ ಕನಸು, ಕುಣಿಯುತಿದೆ ಮನಸು.

ಚಂದ್ರನಲ್ಲಿಗೇ ಹೋಗಿ ತಣಿವಷ್ಟು ಬೆಳದಿಂಗಳ ಹಾಲು ಕುಡಿದು ಬರುವ

ಒಂದರ ಹಿಂದೆ ಸಾಲು ಗಟ್ಟಿ ಬರುತ್ತಿರುವ ಹಾಡು. ಯಾವುದನ್ನೂ ಪೂರ್ಣವಾಗಿ ಹಾಡಿಕೊಳ್ಳಲಾಗದ ಸ್ಥಿತಿ. ಪಲ್ಲವಿ ಬಂದರೆ ಚರಣದವರೆಗೆ ಕಾಯಲಾಗದು. ಚರಣ ನೆನಪಾದರೆ ಪಲ್ಲವಿಯನ್ನು ನೆನಪಿಸಿಕೊಳ್ಳಲು ಸಮಯವಿರದು. ಏಕೆ ಹೀಗೆಂಬ ಪ್ರಶ್ನೆಯೂ ಇಣುಕದು. ಸಂಭ್ರಮವೆಂದರೆ ಹೀಗೆಯೇನೊ? ನನಗೆ ಇಂಥ ಸಂಭ್ರಮ ತೀರಾ ಹೊಸತು ವಸಂತ.

ಹಾಲಧಾರೆಯಲ್ಲಿ ಮಿಂದು ಬಂದೆಯೋ, ಬಾಯಾರಿದೆಯೆ ಎಂದು ನೀನು ಬೊಗಸೆಯೊಡ್ಡಿ ಬೆಳದಿಂಗಳನು ತುಂಬಿ ನನಗೆ ಕುಡಿಸಿದೆ. ಜನ್ಮ ಜನ್ಮಗಳಿಂದ ಬಾಯಾರಿ ಇದ್ದವಳಂತೆ ನಾನು ಗಟಗಟ ಕುಡಿದೆ. ನಾನು ದಣಿದಿದ್ದೇನೆ ಶಕುಂತಲೆ ನನಗೆ ಕುಡಿಸುವೆಯಾ ಎಂದು ನೀನು ಕೇಳಿದ್ದೇ ತಡ ನನ್ನ ಬೊಗಸೆಯಲ್ಲಿ ಬೆಳದಿಂಗಳ ತುಂಬಿ ನಿನಗೆ ಕುಡಿಸಿದೆ. ನೀನು ಕುಡಿಯುತ್ತಲೇ ಇದ್ದೆ. ನನ್ನ ಬೊಗಸೆ ಬರಿದಾಗದು, ನಿನ್ನ ದಾಹ ತೀರದು. ಎಷ್ಟು ಹೊತ್ತೋ ಹೀಗೆ.....

Love letter: We will go to moon, come back after drinking milk

ನಿನಗಾಗಿ ತಂದಿರುವೆ ಬಿಳಿಗುದುರೆ ಏರು. ಚಂದ್ರನಲ್ಲಿಗೇ ಹೋಗಿ ತಣಿವಷ್ಟು ಬೆಳದಿಂಗಳ ಹಾಲು ಕುಡಿದು ಬರುವ ಎಂದು ಮುಂದೆ ಕೂರಿಸಿಕೊಂಡು ನೀನು ನೆಗೆಸಿದೆ ಬಾನಿಗೆ. ಚಂದರನ ತಲುಪುವ ಮೊದಲು ಚುಕ್ಕಿಗಳ ತೋಟ ಹಾದು ಹೋಗುವಾಗ ಏನು ಆನಂದ, ಏನು ಸೋಜಿಗ!

ಯಾರೋ ಶ್ವೇತಕನ್ಯೆಯರು ಎದುರು ಬಂದರು. ಅವರಲ್ಲೊಬ್ಬಳು ನಿನ್ನನ್ನು ತಡೆದು, ರಾಜಕುವರನೋ ನೀನು, ಇವಳು ಒಲಿದ ರಾಜಕನ್ಯೆಯೋ? ವಿಹಾರಕ್ಕೆ ಬಂದಿರೋ ಎಂದು ಕೇಳಿದರೆ, ಇನ್ನೊಬ್ಬಳು, ರಾಜಕುಮಾರನ ವೇಷದ ಮಾಂತ್ರಿಕನೋ, ರಾಜಕುಮಾರಿಯ ಅಪಹರಿಸಿ ಬಚ್ಚಿಡಲು ಹೊರಟವನೋ ಎಂದು ಕೇಳಿದಳು. ನೀನು ಮುಗುಳು ನಗೆ ಬೀರಿದೆ.

ಅವರರಲ್ಲೊಬ್ಬಳು, ಹಾಯಿ ಹಲಾ, ಚೆಲುವ ಚತುರ ಮಾರರೂಪಿ ನರನೇ ಇವನು ಎಂದಳು. ಈ ಮಾತಿಗೆ ನಾನು ಹೆಮ್ಮೆಯಲಿ ಉಬ್ಬಿಹೋದೆ. ಒಬ್ಬಳು ತನ್ನ ದಿವ್ಯ ದೃಷ್ಟಿಯಿಂದ ತಿಳಿದು, ಹಲಾ ಇವರು ಚಂದಿರನ ಅತಿಥಿಗಳೇ ಎಂದಳು. ಅವರು ಹಲಾ ಹಲಾ ಎಂದು ಕಿಲಕಿಲಿಸುತ್ತ ಮಾಯವಾದರು.

ವಸಂತ ನೀನು ಕುದುರೆ ಸವಾರಿಯ ದಿಕ್ಕು ಬದಲಿಸಿದೆ. ಸುಣ್ಣ ಕಲೆಸಿದ ನೀರು ಚೆಲ್ಲಿದಂತೆ ಇರುವ ಈ ಲೋಕವೇನು ಚೆನ್ನವಿದೆ. ಕೆಳಗೆ ನೋಡೆಂದೆ. ಮೊದಲಿಗೆ ಕಂಡಿದ್ದು ನಮ್ಮೂರು. ನೀಲ ಜಗುಲಿಯಲಿ ಕುಳಿತು ಕನಸು ಕಾಣುತ್ತಿದ್ದಳು. ಅಪ್ಪನ ಗೊರಕೆ ಕೇಳಿಸುತ್ತಿತ್ತು. ಅಮ್ಮ ಮಗ್ಗುಲಾಗಿ ಮಲಗಿ ಎನ್ನುತ್ತಿದ್ದಳು. ನಿಮ್ಮೂರು ಕಂಡಿತು. ಜೋಳದ ತೋಟ, ತಾವರೆ ಕೊಳ. ಕೆಂಚಪ್ಪ ಅವನ ಮನೆಯಂಗಳದಲ್ಲಿ ಮಲಗಿ ಕಚ್ಚಿದ ಸೊಳ್ಳೆಗೆ ಟಪ್ಪೆಂದು ಬಡಿಯುತಿದ್ದ.

ಪೂರ್ಣದರ್ಶನದ ಭಾಗ್ಯ ಕೊಟ್ಟ ನನ್ನೊಲವ ಶಕುಂತಲೆಗೆ ಪ್ರೀತಿ ತುಂಬಿದ ಪತ್ರ

ನಾನು ತಾವರೆ ಕೊಳದ ಬಳಿಗೆ ಹೋಗೋಣ ಎಂದೆ. ನೀನು ಕಾಲಿನ ಹಿಮ್ಮಡಿಯಿಂದ ಕುದುರೆಯ ಪಕ್ಕೆ ಹೆಟ್ಟಿದೆ. ಅದು ನೇರ ಕೊಳದ ದಂಡೆಗೆ ಬಂದು ಮಾಯವಾಯಿತು. ನಾವು ಕೊಳದಲ್ಲಿ ಹೊರಳಾಡಿದೆವು. ನೀನು ತಾವರೆ ಹೂ ಕಿತ್ತು ಮುಡಿಸಿದೆ. ಮಲ್ಲಿಗೆ ನಾನು ಬೇಡವಾದನೆ ಎಂದಿತು. ನೀನು ಒಂದು ಮೊಗ್ಗು ತಂದು ಮುಡಿಸಿದಾಗ, ಕನಕಾಂಬರ ಇದು ಮೋಸ ಎಂದಿತು. ಅದನ್ನೂ ತಂದು ಮುಡಿಸಿದೆ.

ಕೊಳದ ನೀರು ಚಳಿ ಹುಟ್ಟಿಸಿತು. ನಾನು ಗಡಗಡ ನಡುಗಿದೆ. ಹಲ್ಲುಗಳು ಕಟಕಟ ಶಬ್ದ ಮಾಡಿದವು. ನಾನು ಚಳಿ ನೀಗುತ್ತೇನೆಂದು ನೀನು ಕಾವಲಿನ ಮಂಚಕೆ ಹತ್ತಿಸಿ ನನ್ನನ್ನು ಅಪ್ಪಿ ಮಲಗಿದೆ.

ಅಮ್ಮ ತುಳಸಿಕಟ್ಟೆಗೆ ಪ್ರದಕ್ಷಿಣೆ ಹಾಕುತ್ತ 'ತುಳಸೀ ಮಾತೆ ಸ್ವೀಕರಿಸು ಪೂಜೆ, ನೀಡು ಸೌಭಾಗ್ಯ ಬಾಳಿಗೆ' ಎಂದು ಹಾಡುತ್ತಿದ್ದ ಸ್ವರ ಕೇಳಿ ಎಚ್ಚರವಾಯಿತು. ಆದರೆ ಹಾಸಿಗೆ ಬಿಟ್ಟೇಳಬೇಕು ಅನ್ನಿಸಲಿಲ್ಲ. ಕನಸನ್ನೇ ನೆನೆಯುತ್ತ ಮಲಗಿದೆ.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Love letter series of Oneindia Kannada columnist Sa Raghunatha continued here. Shakuntala writes letter to Vasantha.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X

Loksabha Results

PartyLWT
BJP+56298354
CONG+226789
OTH603999

Arunachal Pradesh

PartyLWT
BJP101626
CONG033
OTH5510

Sikkim

PartyLWT
SKM41014
SDF4610
OTH000

Odisha

PartyLWT
BJD1121113
BJP23023
OTH10010

Andhra Pradesh

PartyLWT
YSRCP38111149
TDP81725
OTH101

-
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more