keyboard_backspace

Explained: ಭಾರತದಲ್ಲಿ 18 ವರ್ಷದೊಳಗಿನವರಿಗೆ ನೀಡುವ ಕೊವಿಡ್-19 ಲಸಿಕೆಗಳು ಯಾವುವು?

Google Oneindia Kannada News

ನವದೆಹಲಿ, ಅಕ್ಟೋಬರ್ 13: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಕೊವಿಡ್-19 ಸೋಂಕಿನಿಂದ ರಕ್ಷಿಸುವುದಕ್ಕೆ ಲಸಿಕೆಯನ್ನು ಸಂಶೋಧಿಸಲಾಗುತ್ತಿದೆ. 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವುದರ ಬಗ್ಗೆ ವೈದ್ಯಕೀಯ ಪ್ರಯೋಗಗಳನ್ನು ನಡೆಸಲಾಗುತ್ತಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸೆಪ್ಟೆಂಬರ್‌ನಲ್ಲಿ 18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್‌ನ ಹಂತ -2 ಮತ್ತು ಹಂತ -3 ಪ್ರಯೋಗಗಳನ್ನು ಪೂರ್ಣಗೊಳಿಸಿದೆ. ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯನ್ನು 2-18 ವಯೋಮಾನದ ಮಕ್ಕಳ ಮೇಲೆ ತುರ್ತು ಬಳಕೆಗೆ ಕೊವಿಡ್-19 ತಜ್ಞರ ಸಮಿತಿ ಅನುಮೋದನೆಗೆ ಶಿಫಾರಸ್ಸು ಮಾಡಿದೆ.

ಅಕ್ಟೋಬರ್ ತಿಂಗಳ ಆರಂಭದಲ್ಲಿ ವೈದ್ಯಕೀಯ ಪ್ರಯೋಗಗಳ ಫಲಿತಾಂಶದ ದತ್ತಾಂಶವನ್ನು ಕಂಪನಿಯು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ಗೆ ಸಲ್ಲಿಸಿದ್ದು, ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಸಿಕ್ಕಿದೆ. ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಅನ್ನು ನೀಡುವುದಕ್ಕೆ ಶಿಫಾರಸ್ಸು ಮಾಡಿದ್ದು, ಮೊದಲ ಡೋಸ್ ಮತ್ತು ಎರಡನೇ ಡೋಸ್ ನಡುವೆ 20 ದಿನಗಳ ಅಂತರವಿರಬೇಕು ಎಂದು ಸೂಚಿಸಲಾಗಿದೆ.

ಭಾರತದಲ್ಲಿ 2-18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮೋದನೆ ಭಾರತದಲ್ಲಿ 2-18 ವರ್ಷದ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮೋದನೆ

ದೇಶದಲ್ಲಿ ಭಾರತ್ ಬಯೋಟೆಕ್ ಸಂಸ್ಥೆ ಜೊತೆಗೆ ಇತರೆ ಮೂರು ಕಂಪನಿಗಳು ಮಕ್ಕಳಿಗೆ ಕೊರೊನಾವೈರಸ್ ಲಸಿಕೆಯನ್ನು ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಪ್ರಯೋಗಗಳನ್ನು ನಡೆಸುತ್ತಿವೆ. 18 ವರ್ಷದೊಳಗಿನ ಮಕ್ಕಳ ಮೇಲೆ ವೈದ್ಯಕೀಯ ಪ್ರಯೋಗ ಮತ್ತು ಸಂಶೋಧನೆ ನಡೆಸುತ್ತಿರುವ ಕಂಪನಿಗಳು ಯಾವುದು? 18 ವರ್ಷದೊಳಗಿನ ಮಕ್ಕಳ ಮೇಲೆ ತುರ್ತು ಬಳಕೆಗೆ ಅನುಮೋದನೆ ಪಡೆದಿರುವ ಲಸಿಕೆಗಳು ಯಾವವು ಎಂಬುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

ಮಕ್ಕಳಿಗಾಗಿ ZvCoV-D ಲಸಿಕೆ ಪ್ರಯೋಗ

ಮಕ್ಕಳಿಗಾಗಿ ZvCoV-D ಲಸಿಕೆ ಪ್ರಯೋಗ

ದೇಶದಲ್ಲಿ 12 ವರ್ಷದಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಪ್ರಯೋಗಗಳಿಗೆ ಅನುಗುಣವಾಗಿ ತುರ್ತು ಬಳಕೆಗೆ ಜೈಡಸ್ ಕ್ಯಾಡಿಲಾ ಸಂಸ್ಥೆಯ ZvCoV-D ಲಸಿಕೆಗೆ ಅನುಮೋದನೆ ನೀಡಲಾಗಿದೆ. ಆದಾಗ್ಯೂ, ಈ ಲಸಿಕೆಯು ವಿತರಣೆಯ ಭಾಗವಾಗಿ ಸೇರ್ಪಡೆಯಾಗಿಲ್ಲ. ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಮತ್ತು ಸೂಜಿ ರಹಿತ ZyCoV-D ಔಷಧವು ಇಯುಎ ನಿಯಂತ್ರಕದಿಂದ ಅನುಮೋದನೆ ಪಡೆದಿದೆ. ಇದು ದೇಶದಲ್ಲಿ 12-18 ವರ್ಷ ವಯಸ್ಸಿನವರಲ್ಲಿ ನೀಡಲಾದ ಮೊದಲ ಲಸಿಕೆಯಾಗಿದೆ.

2-18 ವಯೋಮಾನದವರಿಗೆ ಕೊವ್ಯಾಕ್ಸಿನ್ ಲಸಿಕೆ

2-18 ವಯೋಮಾನದವರಿಗೆ ಕೊವ್ಯಾಕ್ಸಿನ್ ಲಸಿಕೆ

ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯನ್ನು 2 ರಿಂದ 18 ವಯೋಮಾನದ ಮಕ್ಕಳ ಮೇಲೆ ತುರ್ತು ಬಳಕೆಗೆ ಶಿಫಾರಸ್ಸು ಮಾಡಲಾಗಿದೆ. ದೇಶದಲ್ಲಿ ಈಗಾಗಲೇ ಈ ಕೊವ್ಯಾಕ್ಸಿನ್ ಲಸಿಕೆಯನ್ನು 18 ವರ್ಷದ ಮೇಲ್ಪಟ್ಟವರಿಗೆ ವಿತರಿಸಲು ಅನುಮೋದನೆ ನೀಡಲಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಮತ್ತು ಎರಡನೇ ಡೋಸ್ ಲಸಿಕೆ ನಡುವೆ 30 ದಿನಗಳ ಅಂತರವನ್ನು ನಿಗದಿಪಡಿಸಲಾಗಿದೆ. ಅದೇ ರೀತಿ 2 ರಿಂದ 18 ವರ್ಷದ ಮಕ್ಕಳಿಗೆ ನೀಡುವ ಎರಡು ಡೋಸ್ ಲಸಿಕೆ ನಡುವೆ 20 ದಿನಗಳ ಅಂತರವನ್ನು ನಿಗದಿಪಡಿಸಲಾಗಿದೆ.

5 ರಿಂದ 18 ವಯೋಮಾನದವರಿಗೆ Corbevax ಲಸಿಕೆ

5 ರಿಂದ 18 ವಯೋಮಾನದವರಿಗೆ Corbevax ಲಸಿಕೆ

ಬಯೋಲಾಜಿಕಲ್-ಇ ಸಂಸ್ಥೆಯ Corbevax ಲಸಿಕೆಯನ್ನು 5 ರಿಂದ 18 ವರ್ಷದ ಮಕ್ಕಳ ಮೇಲೆ ಪ್ರಯೋಗಿಸುವುದಕ್ಕೆ ಅನುಮೋದನೆ ನೀಡಲಾಗಿದೆ. ಈ ಲಸಿಕೆಯನ್ನು ಜೈವಿಕ ತಂತ್ರಜ್ಞಾನ ಇಲಾಖೆ ಮತ್ತು ಅದರ ಪಿಎಸ್‌ಯು ಬಯೋಟೆಕ್ನಾಲಜಿ ಇಂಡಸ್ಟ್ರಿ ರಿಸರ್ಚ್ ಅಸಿಸ್ಟೆಂಟ್ ಕೌನ್ಸಿಲ್ (ಬಿಐಆರ್‌ಎಸಿ) ಬೆಂಬಲದೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಪೂರ್ವಭಾವಿಯಾಗಿ 3 ಹಂತಗಳಲ್ಲಿ ವೈದ್ಯಕೀಯ ಪ್ರಯೋಗ ಮತ್ತು ಅಧ್ಯಯನಗಳನ್ನು ನಡೆಸಲಾಗಿದೆ.

2 ರಿಂದ 18 ವರ್ಷದವರಿಗೆ ಕೊವೊವ್ಯಾಕ್ಸ್ ಲಸಿಕೆ ವಿತರಣೆ

2 ರಿಂದ 18 ವರ್ಷದವರಿಗೆ ಕೊವೊವ್ಯಾಕ್ಸ್ ಲಸಿಕೆ ವಿತರಣೆ

ಪುಣೆ ಮೂಲದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಕೊವೊವ್ಯಾಕ್ಸ್ ಲಸಿಕೆಯು 2 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ತುರ್ತು ಬಳಕೆಗೆ ಸಂಬಂಧಿಸಿದಂತೆ ವೈದ್ಯಕೀಯ ಪ್ರಯೋಗಗಳನ್ನು ಪೂರ್ಣಗೊಳಿಸಿದೆ. ಇದು ಭಾರತದಲ್ಲಿ ಮಕ್ಕಳಿಗಾಗಿ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ತಂದ ನೊವೊವಾಕ್ಸ್ ಲಸಿಕೆಯ ಭಾರತೀಯ ಆವೃತ್ತಿಯಾಗಿದೆ. ಮುಂದಿನ ವರ್ಷದ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಕೊವೊವ್ಯಾಕ್ಸ್ ಲಸಿಕೆಗೆ ಅಧಿಕೃತ ಅನುಮೋದನೆ ಸಿಗುತ್ತದೆ ಎಂದು ಕಂಪನಿಯ ಮುಖ್ಯಸ್ಥ ಆದರ್ ಪೂನವಲಾ ಹೇಳಿದ್ದಾರೆ.

ಭಾರತದಲ್ಲಿ ಅನುಮೋದನೆ ಪಡೆದ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ ಅನುಮೋದನೆ ಪಡೆದ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಲಾಗಿದೆ.

English summary
Coronavirus vaccine for children: How Many Companies Doing Medical Testing And Got Approval.
Related News
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X