keyboard_backspace

ಕೋವಿಶೀಲ್ಡ್‌ ಪಡೆದರೂ 'ಲಸಿಕೆ ಪಡೆದಿಲ್ಲ' ಎಂದು ಪರಿಗಣನೆ: ಯುಕೆ ಸರ್ಕಾರಕ್ಕೆ ಭಾರತ ಎಚ್ಚರಿಕೆ

Google Oneindia Kannada News

ನವದೆಹಲಿ, ಸೆಪ್ಟೆಂಬರ್‌ 21: ಕೊರೊನಾ ವೈರಸ್‌ ಸೋಂಕು ವಿರುದ್ದ ಸಂಪೂರ್ಣ ಲಸಿಕೆಯನ್ನು ಪಡೆದವರಿಗೆ ಎಲ್ಲಾ ವಿಮಾನ ಪ್ರಯಾಣಿಕರಿಗೆ ನಿರ್ಬಂಧವನ್ನು ನವೆಂಬರ್‌ ತಿಂಗಳಿನಿಂದ ಸಡಿಲಿಕೆ ಮಾಡಲಾಗುವುದು ಎಂದು ಸೋಮವಾರ ಅಮೆರಿಕ ಘೋಷಣೆ ಮಾಡಿದೆ. ಸುಮಾರು 33 ದೇಶಗಳಿಗೆ ಈ ಪ್ರಯಾಣ ನಿರ್ಬಂಧವನ್ನು ಸಡಿಲಿಕೆ ಮಾಡಿದ್ದು, ಭಾರತವು ಈ 33 ದೇಶಗಳಲ್ಲಿ ಇದೆ. ಭಾರತ ನಿರ್ಮಿತ ಕೋವಿಶೀಲ್ಡ್‌ ಲಸಿಕೆ ಮಾತ್ರ ಯುಎಸ್‌ನ ಈ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಇದೆ. ಆದರೆ ಈ ನಡುವೆ ಯುಕೆ ಮಾತ್ರ ಕೋವಿಶೀಲ್ಡ್‌ ಲಸಿಕೆಯನ್ನು ಪಡೆದವರನ್ನು ಲಸಿಕೆಯೇ ಪಡೆಯವರು ಎಂದು ಪರಿಗಣಿಸಲಾಗುವುದು ಎಂದು ಹೇಳಿದೆ.

ಯುನೈಟೆಡ್‌ ಕಿಂಗ್‌ಡಮ್‌ನ ಕೊರೊನಾ ವೈರಸ್‌ ಸೋಂಕು ಹಿನ್ನೆಲೆ ಜಾರಿಗೆ ತರಲಾದ ಹೊಸ ಪ್ರಯಾಣ ಮಾರ್ಗಸೂಚಿಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಮಾರ್ಗಸೂಚಿಯ ಪ್ರಕಾರ ಭಾರತ ಸೇರಿದಂತೆ ಹಲವಾರು ರಾಷ್ಟ್ರಗಳ ಜನರು ಕೊರೊನಾ ವಿರುದ್ದ ಲಸಿಕೆ ಪಡೆಯದವರು ಎಂದು ಗುರುತಿಸಲಾಗುತ್ತದೆ. ಯಾರು ಆಸ್ಟ್ರಾಜೆನಿಕಾದ ಕೋವಿಶೀಲ್ಡ್‌ ಲಸಿಕೆಯನ್ನು ಪಡೆದಿದ್ದರೋ ಅವರನ್ನು ಕೋವಿಡ್‌ ವಿರುದ್ದ ಲಸಿಕೆ ಪಡೆಯದವರು ಎಂದು ಗುರುತಿಸಲಾಗುತ್ತದೆ. ಈ ಬೆನ್ನಲ್ಲೇ ವಿಶ್ವದ ದೊಡ್ಡಣ್ಣ ಅಮೆರಿಕ ತನ್ನ ಪ್ರಯಾಣ ನಿರ್ಬಂಧವನ್ನು ಸುಮಾರು 18 ತಿಂಗಳುಗಳ ಬಳಿಕ ಸಡಿಲಿಕೆ ಮಾಡಲಿದ್ದು, ಭಾರತದ ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಯುಎಸ್‌ಗೆ ತೆರಳಲು ಅನುಮೋದನೆ ನೀಡುತ್ತದೆ.

 'ವರ್ಣಭೇದ': ಯುಕೆ ಪ್ರಯಾಣ ಮಾರ್ಗಸೂಚಿಯ ವಿರುದ್ದ ಕಾಂಗ್ರೆಸ್‌ ಮುಖಂಡ ವಾಗ್ದಾಳಿ 'ವರ್ಣಭೇದ': ಯುಕೆ ಪ್ರಯಾಣ ಮಾರ್ಗಸೂಚಿಯ ವಿರುದ್ದ ಕಾಂಗ್ರೆಸ್‌ ಮುಖಂಡ ವಾಗ್ದಾಳಿ

ಈ ಎಲ್ಲಾ ಬೆಳವಣಿಯ ಹಿನ್ನೆಲೆ ಯುಕೆ ಸರ್ಕಾರವು ಕೋವಿಶೀಲ್ಡ್‌ ಅನ್ನು ಪರಿಗಣನೆಗೆ ತೆಗೆದುಕೊಳ್ಳದೆ ಇರುವುದು "ತಾರತಮ್ಯ" ಎಂದು ಭಾರತ ಸರ್ಕಾರವು ಸ್ಪಷ್ಟವಾಗಿ ಹೇಳಿದೆ. ಹಾಗೆಯೇ "ತಾರಮತ್ಯದ ವಿಚಾರದಲ್ಲಿ ಯುಕೆ ಸರ್ಕಾರವು ಯಾವುದೇ ಸರಿಯಾದ ನಿರ್ಧಾವನ್ನು ಕೈಗೊಳ್ಳದಿದ್ದರೆ, ಪರಸ್ಪರ ವಿರುದ್ದ ಕ್ರಮವನ್ನು ಕೈಗೊಳ್ಳುವ ಹಕ್ಕು ನಮಗೂ ಇದೆ," ಎಂದು ಭಾರತ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.

 ಯುಕೆಗೆ ಖಡಕ್‌ ವಾರ್ನಿಂಗ್‌ ನೀಡಿದ ಭಾರತ

ಯುಕೆಗೆ ಖಡಕ್‌ ವಾರ್ನಿಂಗ್‌ ನೀಡಿದ ಭಾರತ

ಈ ಬಗ್ಗೆ ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ಹರ್ಷ ವರ್ಧನ್‌ ಶ್ರಿಂಗ್ಲಾ ಮಾತನಾಡಿ, "ಈ ಕ್ರಮವು ಭಾರತದ ನಾಗರಿಕರ ಮೇಲೆ ಪರಿಣಾಮ ಬೀರಲಿದೆ. ಪರಸ್ಪರ ವಿರುದ್ದ ಕ್ರಮವನ್ನು ಕೈಗೊಳ್ಳುವ ಹಕ್ಕು ನಮಗೂ ಇದೆ," ಎಂದು ಎಚ್ಚರಿಕೆ ನೀಡಿದ್ದಾರೆ. "ಕೋವಿಶೀಲ್ಡ್‌ ಅನ್ನು ಪರಿಗಣನೆಗೆ ತೆಗೆದುಕೊಳ್ಳದೆ ಇರುವುದು ಯುಕೆ ಸರ್ಕಾರದ ತಾರತಮ್ಯ ನೀತಿ. ನೂತನ ಯುಕೆ ವಿದೇಶಾಂಗ ಕಾರ್ಯದರ್ಶಿಯ ಬಳಿ ಈ ವಿಚಾರವನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಬೇಕಾದ ಅಗ್ತಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಯುಕೆಯು ಭರವಸೆಯನ್ನು ನೀಡಿದೆ," ಎಂದು ನವದೆಹಲಿಯಲ್ಲಿ ಹರ್ಷ ವರ್ಧನ್‌ ಶ್ರಿಂಗ್ಲಾ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ತಿಳಿಸಿದ್ದಾರೆ.

ಸಂಪೂರ್ಣ ಕೋವಿಡ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ನಿರ್ಬಂಧ ಸಡಿಲಿಕೆ ಮಾಡಿದ ಯುಎಸ್‌ಸಂಪೂರ್ಣ ಕೋವಿಡ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ನಿರ್ಬಂಧ ಸಡಿಲಿಕೆ ಮಾಡಿದ ಯುಎಸ್‌

 ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿಯನ್ನು ಭೇಟಿಯಾಗಿದ್ದ ಎಸ್‌ ಜೈಶಂಕರ್‌

ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿಯನ್ನು ಭೇಟಿಯಾಗಿದ್ದ ಎಸ್‌ ಜೈಶಂಕರ್‌

ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಜೊತೆ ಮಾತುಕತೆ ನಡೆಸಿದ ಬಗ್ಗೆ ಟ್ವೀಟ್‌ ಮಾಡಿದ ಒಂದು ದಿನದ ನಂತರ ವಿದೇಶಾಂಗ ಕಾರ್ಯದರ್ಶಿ ಹರ್ಷ ವರ್ಧನ್‌ ಶ್ರಿಂಗ್ಲಾ ಪತ್ರಿಕಾಗೋಷ್ಠಿಯಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಉನ್ನತ ಮಟ್ಟದ 76 ನೇ ಅಧಿವೇಶನಕ್ಕಾಗಿ ವಿದೇಶಕ್ಕೆ ಹೋಗಿರುವ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌, ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಜೈಶಂಕರ್‌, "ಯುಕೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್‌ರನ್ನು ಭೇಟಿಯಾಗಿ ಸಂತೋಷವಾಯಿತು. ಮಾರ್ಗಸೂಚಿ 2030 ರ ಪ್ರಗತಿಯನ್ನು ಚರ್ಚಿಸಲಾಗಿದೆ. ವ್ಯಾಪಾರದ ನಿಟ್ಟಿನಲ್ಲಿ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್‌ರ ಕೊಡುಗೆಯನ್ನು ಶ್ಲಾಘಿಸಲಾಗಿದೆ. ಹಾಗೆಯೇ ಅಫ್ಘಾನಿಸ್ತಾನದ ವಿಚಾರ ಹಾಗೂ ಇಂಡೋ ಪೆಸಿಫಿಕ್ ವಿಚಾರದಲ್ಲಿ ಚರ್ಚೆ ಮಾಡಲಾಗಿದೆ. ಪರಸ್ಪರ ಹಿತಾಸಕ್ತಿಯಿಂದ ಕ್ವಾರಂಟೈನ್ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಲು ಒತ್ತಾಯಿಸಲಾಗಿದೆ," ಎಂದು ತಿಳಿಸಿದ್ದಾರೆ.

 ಯುಕೆ ಪ್ರಯಾಣ ಮಾರ್ಗಸೂಚಿಯ ವಿರುದ್ದ ಭಾರತದಲ್ಲಿ ಆಕ್ರೋಶ

ಯುಕೆ ಪ್ರಯಾಣ ಮಾರ್ಗಸೂಚಿಯ ವಿರುದ್ದ ಭಾರತದಲ್ಲಿ ಆಕ್ರೋಶ

ಯುನೈಟೆಡ್‌ ಕಿಂಗ್‌ಡಮ್‌ನ ಕೊರೊನಾ ವೈರಸ್‌ ಸೋಂಕು ಹಿನ್ನೆಲೆ ಜಾರಿಗೆ ತರಲಾದ ಹೊಸ ಪ್ರಯಾಣ ಮಾರ್ಗಸೂಚಿಯು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಯುಕೆಯು ಈ ನೂತನ ಪ್ರಯಾಣ ನಿರ್ಬಂಧವನ್ನು ಶುಕ್ರವಾರ ಘೋಷಣೆ ಮಾಡಿದ್ದು ಇದು ಅಕ್ಟೋಬರ್‌ 4 ರಿಂದ ಜಾರಿಗೆ ಬರಲಿದೆ. ಈ ನೀತಿಯ ಪ್ರಕಾರ ಯಾರು ಆಸ್ಟ್ರಾಜೆನಿಕಾದ ಕೋವಿಶೀಲ್ಡ್‌ ಲಸಿಕೆಯನ್ನು ಪಡೆದಿದ್ದರೋ ಅವರನ್ನು ಕೋವಿಡ್‌ ವಿರುದ್ದ ಲಸಿಕೆ ಪಡೆಯದವರು ಎಂದು ಗುರುತಿಸಲಾಗುತ್ತದೆ .ಎರಡು ಡೋಸ್‌ ಲಸಿಕೆ ಪಡೆದಿದ್ದರೂ ಕೂಡಾ ಈ ನಿಯಮ ಅನ್ವಯ ಆಗುತ್ತದೆ. ಯುಕೆಯ ಈ ನೂತನ ಪ್ರಯಾಣ ಮಾರ್ಗಸೂಚಿ ವಿಚಾರದಲ್ಲಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ವಾ‌ಗ್ದಾಳಿ ನಡೆಸಿದ್ದಾರೆ. ಈ ನೂತನ ಕೋವಿಡ್‌ ಹಿನ್ನೆಲೆಯ ಪ್ರಯಾಣ ಮಾರ್ಗಸೂಚಿಯು "ವರ್ಣಭೇದ ಮಾಡುವಂತದ್ದು ಆಗಿದೆ" ಹಾಗೂ "ಸಂಪೂರ್ಣವಾಗಿ ವಿಚಿತ್ರವಾದುದು" ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅಭಿಪ್ರಾಯಿಸಿದ್ದಾರೆ. "ಕೋವಿಶೀಲ್ಡ್‌ ಲಸಿಕೆಯನ್ನು ಮೂಲವಾಗಿ ಯುಕೆಯಲ್ಲಿಯೇ ಅಭಿವೃದ್ದಿ ಪಡಿಸಲಾಗಿದೆ. ಹಾಗೆಯೇ ಪುಣೆಯ ಸೀರಮ್‌ ಸಂಸ್ಥೆಯಲ್ಲಿ ಈ ಕೋವಿಶೀಲ್ಡ್‌ ಲಸಿಕೆಯ ಉತ್ಪಾದನೆ ಮಾಡಿ ಯುಕೆಗೂ ರಫ್ತು ಮಾಡಲಾಗಿದೆ. ಹೀಗಿರುವಾಗ ಈಗ ಯುಕೆಯೇ ಕೋವಿಶೀಲ್ಡ್‌ನ ಎರಡು ಡೋಸ್‌ ಲಸಿಕೆ ಹಾಕಿದರೂ ಕೂಡಾ ಅವರನ್ನು ಲಸಿಕೆ ಪಡೆಯದವರು ಎಂದು ಪರಿಗಣಿಸುವುದು ವಿಚಿತ್ರ. ಇದು ವರ್ಣಭೇದ ನೀತಿಯ ಮೇಲಿನ ಒಂದು ಭಾಗ," ಎಂದು ಹೇಳಿದ್ದಾರೆ.

 ಅಮೆರಿಕದಲ್ಲಿ ಪ್ರಯಾಣ ಮಾರ್ಗಸೂಚಿ ನವೆಂಬರ್‌ನಿಂದ ಸಡಿಲಿಕೆ

ಅಮೆರಿಕದಲ್ಲಿ ಪ್ರಯಾಣ ಮಾರ್ಗಸೂಚಿ ನವೆಂಬರ್‌ನಿಂದ ಸಡಿಲಿಕೆ

ಕೊರೊನಾ ವೈರಸ್‌ ಸೋಂಕು ವಿರುದ್ದ ಸಂಪೂರ್ಣ ಲಸಿಕೆಯನ್ನು ಪಡೆದವರಿಗೆ ಎಲ್ಲಾ ವಿಮಾನ ಪ್ರಯಾಣಿಕರಿಗೆ ನಿರ್ಬಂಧವನ್ನು ನವೆಂಬರ್‌ ತಿಂಗಳಿನಿಂದ ಸಡಿಲಿಕೆ ಮಾಡಲಾಗುವುದು ಎಂದು ಸೋಮವಾರ ಅಮೆರಿಕ ಘೋಷಣೆ ಮಾಡಿದೆ. ಪರೀಕ್ಷೆ ಮತ್ತು ಸಂಪರ್ಕ ಪತ್ತೆಹಚ್ಚುವಿಕೆಗೆಯ ಮೂಲಕ ಸಂಪೂರ್ಣ ಲಸಿಕೆ ಪಡೆದ ಜನರಿಗೆ ಅಮೆರಿಕ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಯುಎಸ್‌ ಅಧ್ಯಕ್ಷ ಜೋ ಬೈಡೆನ್‌ರ ಕೊರೊನಾವೈರಸ್ ಬಗೆಗಿನ ವಿಚಾರಗಳ ನಿರ್ವಾಹಕ ಜೆಫ್ರಿ ಜಿಯೆಂಟ್ಸ್‌ ವರದಿಗಾರರಿಗೆ ಈ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. "ಈ ಹೊಸ ಮಾರ್ಗಸೂಚಿಯು ನವೆಂಬರ್‌ನಿಂದ ಜಾರಿಗೆ ಬರಲಿದೆ," ಎಂದು ತಿಳಿಸಿದ್ದಾರೆ. ಹಾಗೆಯೇ ಭಾರತ ನಿರ್ಮಿತ ಕೋವಿಶೀಲ್ಡ್‌ ಲಸಿಕೆ ಮಾತ್ರ ಯುಎಸ್‌ನ ಈ ಅನುಮೋದಿತ ಲಸಿಕೆಗಳ ಪಟ್ಟಿಯಲ್ಲಿ ಇದೆ.

(ಒನ್‌ ಇಂಡಿಯಾ ಸುದ್ದಿ)

English summary
Covishield Only India-Made Vaccine Cleared For Travel To US For Now; India Government Warns UK.
Related News
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X