ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಬೇಟ್ : ಒಬ್ಬರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದು ಸರಿಯೇ?

|
Google Oneindia Kannada News

Recommended Video

Karnataka Elections 2018 : ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದು ಸರೀನಾ? | Oneindia Kannada

ಬೆಂಗಳೂರು, ಏಪ್ರಿಲ್ 12 : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ಏರುತ್ತಿದೆ. ಕೆಲವು ನಾಯಕರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರ : ಕುರುಬರ ಮತ ಗೆದ್ದವನೇ ಬಾಸ್!ಚಾಮುಂಡೇಶ್ವರಿ ಕ್ಷೇತ್ರ : ಕುರುಬರ ಮತ ಗೆದ್ದವನೇ ಬಾಸ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಚಾಮುಂಡೇಶ್ವರಿ ಮತ್ತು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಬಾದಾಮಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ?ಬಾದಾಮಿಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ?

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಸಹ ಎರಡೂ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದಾರೆ. ಸ್ವ ಕ್ಷೇತ್ರ ಕೊರಟಗೆರೆ ಮತ್ತು ಬೆಂಗಳೂರಿ ಪುಲಿಕೇಶಿ ನಗರ ಕ್ಷೇತ್ರದಿಂದಲೂ ಅವರು ಸ್ಪರ್ಧಿಸಲು ಬಯಸಿದ್ದಾರೆ. ಆದರೆ, ಪಕ್ಷ ಹೈಕಮಾಂಡ್ ಇನ್ನೂ ಸ್ಪರ್ಧೆಗೆ ಒಪ್ಪಿಗೆ ನೀಡಿಲ್ಲ.

siddaramaiah

ಒಬ್ಬರು ನಾಯಕರು ಎರಡು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಬಹುದು. ಆದರೆ, ಎರಡೂ ಕ್ಷೇತ್ರದಲ್ಲಿ ಜಯಗಳಿಸಿದರೆ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕು. ಇದರಿಂದಾಗಿ ಆ ಕ್ಷೇತ್ರಕ್ಕೆ ಮತ್ತೆ ಉಪ ಚುನಾವಣೆ ನಡೆಯಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ದೇವೇಗೌಡರು!ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ದೇವೇಗೌಡರು!

ರಾಜಕೀಯ ನಾಯಕರು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದರಿಂದ ಜನರ ತೆರಿಗೆ ಹಣ ಪೋಲಾಗುತ್ತದೆ. ಒಂದು ಕ್ಷೇತ್ರಕ್ಕೆ ಉಪ ಚುನಾವಣೆ ನಡೆದರೆ ಅದರ ವೆಚ್ಚವನ್ನು ಅಭ್ಯರ್ಥಿಗಳು ಭರಿಸುವುದಿಲ್ಲ. ಸರ್ಕಾರದ ಖಜಾನೆಯಿಂದಲೇ ಹಣ ಖರ್ಚು ಮಾಡಬೇಕು.

ವಿವಿಧ ರಾಜಕೀಯ ನಾಯಕರ ಈ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು? ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ...

English summary
Chief Minister Siddaramaiah and JD(S) state president H.D.Kumaraswamy will contest for Karnataka assembly elections 2018 from two assembly constituencies. What is your view on this decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X