ಡಿಬೇಟ್ : ಎಸ್.ಎಂ.ಕೃಷ್ಣ ಕಾಂಗ್ರೆಸ್‌ಗೆ ಮರಳಬೇಕೆ?
ಬೆಂಗಳೂರು, ಏಪ್ರಿಲ್ 10 : ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಮಾತೃ ಪಕ್ಷಕ್ಕೆ ಮರಳಲಿದ್ದಾರೆ?. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳು ಬಾಕಿ ಉಳಿದಿರುವಾಗ ಈ ಸುದ್ದಿ ತೀವ್ರ ಸಂಚಲನ ಮೂಡಿಸಿದೆ.
2017ರ ಮಾರ್ಚ್‌ನಲ್ಲಿ ಎಸ್.ಎಂ.ಕೃಷ್ಣ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದ್ದರು. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯರಾಗಿಲ್ಲ. ಪಕ್ಷದ ಸಮಾವೇಶಗಳಲ್ಲಿಯೂ ಹೆಚ್ಚಾಗಿ ಕಾಣಿಸಿಕೊಂಡಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕರ್ನಾಟಕದ ಬಿಜೆಪಿ ನಾಯಕರು ಎಸ್.ಎಂ.ಕೃಷ್ಣ ಅವರನ್ನು ಕಡೆಗಣಿಸಿದ್ದಾರೆ ಎಂಬ ಆರೋಪವೂ ಇದೆ. ಇವುಗಳ ಮಧ್ಯೆ ಇಂದು ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ಎಸ್.ಎಂ.ಕೃಷ್ಣ ಅವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ ಎಂಬುದು ಸದ್ಯದ ಸುದ್ದಿ.
ಎಸ್.ಎಂ.ಕೃಷ್ಣ ಅವರಾಗಲಿ ಯಾವುದೇ ಕಾಂಗ್ರೆಸ್ ನಾಯಕರಾಗಲಿ ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಬಿಜೆಪಿ ನಾಯಕರು ಅವರನ್ನು ಕಡೆಗಣಿಸಿದ್ದಾರೆಯೇ?, ಅವರು ಕಾಂಗ್ರೆಸ್ ಪಕ್ಷಕ್ಕೆ ಮರಳಬೇಕೆ?. ಈ ಬಗ್ಗೆ ನಿಮ್ಮ ಅಭಿಪ್ರಾಯವನ್ನು ತಿಳಿಸಿ.












Click it and Unblock the Notifications