ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಬೇಟ್ : ಜೆಡಿಎಸ್, ಕಾಂಗ್ರೆಸ್‌ ಮೈತ್ರಿ ಬಗ್ಗೆ ನಿಮ್ಮ ಅಭಿಪ್ರಾಯವೇನು

|
Google Oneindia Kannada News

ಬೆಂಗಳೂರು, ಫೆಬ್ರವರಿ 27 : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾದಂತೆ ಹೊಸ ರಾಜಕೀಯ ಬೆಳವಣಿಗೆ ನಡೆದಿದೆ. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಆಹ್ವಾನ ನೀಡಿದೆ.

ಕರ್ನಾಟಕ ವಿಧಾನಸಭೆಯಿಂದ 4 ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮಾರ್ಚ್ 23ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲ ಪಡೆದು ಉದ್ಯಮಿ ಬಿ.ಎಂ.ಫಾರೂಕ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿ ಕಳಿಸಲು ಜೆಡಿಎಸ್ ಸಿದ್ಧತೆ ನಡೆಸುತ್ತಿದೆ.

ಜೆಡಿಎಸ್ ಪಕ್ಷಕ್ಕೆ ಮೈತ್ರಿ ಹೊಸದೇನಲ್ಲ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಹಂಚಿಕೊಂಡು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದೆ.

Debate : JDS, Congress alliance in Rajya Sabha polls

ರಾಜ್ಯಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ಆಹ್ವಾನ ನೀಡಿದೆ. ಚೆಂಡು ಈಗ ಕಾಂಗ್ರೆಸ್ ಅಂಗಳದಲ್ಲಿದ್ದು, ಅಂತಿಮ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ.

ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಸೇರಿ ಸರ್ಕಾರವನ್ನು ರಚನೆ ಮಾಡಿತ್ತು. ಆದರೆ, ಈ ರಾಜ್ಯಸಭೆ ಚುನಾವಣೆ ಮೈತ್ರಿ ವಿಧಾನಸಭೆ ಚುನಾವಣೆಯಲ್ಲಿಯೂ ಮುಂದುವರೆಯುತ್ತದೆಯೇ?. ಈ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ...

ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಜೆಡಿಎಸ್‌ನಿಂದ ಆಹ್ವಾನ! ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಜೆಡಿಎಸ್‌ನಿಂದ ಆಹ್ವಾನ!

English summary
The Janata Dal (Secular) invites Congress party for the alliance in Rajya Sabha polls scheduled on March 23, Election will be held to elect 4 members form Karnataka assembly. What is your view about development You can put your opinion here in comment box.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X