ಡಿಬೇಟ್ : ಲಿಂಗಾಯತ ಧರ್ಮದ ವಿಚಾರದಲ್ಲಿ ಲಾಭ ಯಾರಿಗೆ?

ಬೆಂಗಳೂರು, ಮಾರ್ಚ್ 20 : ಬಸವತತ್ವವನ್ನು ನಂಬುವವರಿಗೆ ಮಾತ್ರ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ಸಿಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈ ಮೂಲಕ ಹಲವಾರು ದಿನಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ತಾರ್ಕಿಕ ಅಂತ್ಯ ಹಾಡುವ ಕೆಲಸವನ್ನು ಸರ್ಕಾರ ಮಾಡಿದೆ.

ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿದೆ. ರಾಜ್ಯಾದ್ಯಂತ ಸರ್ಕಾರದ ನಿರ್ಧಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ವಿಧಾನಸಭೆ ಚುನಾವಣೆ ಎದುರಾಗಿರುವುದರಿಂದ ಯಾವ ಪಕ್ಷಕ್ಕೆ ಹೆಚ್ಚು ಲಾಭ ವಾಗುತ್ತದೆ? ಎಂದು ಚರ್ಚೆಗಳು ನಡೆಯುತ್ತಿವೆ.

'ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ ಪ್ರತ್ಯೇಕ ಅಲ್ಪ ಸಂಖ್ಯಾತ ಧರ್ಮದ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರೆ ಸಂತಸವಾಗುತ್ತಿತ್ತು. ಆದರೆ, ಬಸವತತ್ವ ಒಪ್ಪಿತ ಎಂಬ ಅಂಶ ಸೇರಿಸಿರುವುದು ಸರಿಯಲ್ಲ. ಬಸವಣ್ಣನ ತತ್ವಗಳನ್ನು ಒಪ್ಪುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ' ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

Debate : Karnataka govt gives separate religion status to Lingayat

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡಲು ಸರ್ಕಾರ ಶಿಫಾರಸು ಮಾಡಲು ಒಪ್ಪಿಕೊಂಡಿರುವುದು ಸರಿಯೇ?. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು?. ಕಮೆಂಟ್ ಮೂಲಕ ತಿಳಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+