ಡಿಬೇಟ್ : ಎಲ್ಲದಕ್ಕೂ ಕುಮಾರಸ್ವಾಮಿ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾ?

Recommended Video

      ಎಚ್ ಡಿ ಕುಮಾರಸ್ವಾಮಿ ಎಲ್ಲದಕ್ಕೂ ರಾಹುಲ್ ಗಾಂಧಿ ಪರ್ಮಿಷನ್ ತೊಗೋಬೇಕಾ?

      ಬೆಂಗಳೂರು, ಜೂನ್ 19 : 'ಕಾಂಗ್ರೆಸ್ ನಾಯಕರ ಬೆಂಬಲದ ಮುಲಾಜಿನಲ್ಲಿ ನಾನು ಸರ್ಕಾರವನ್ನು ರಚನೆ ಮಾಡಿದ್ದೇನೆ ಎನ್ನುವುದು ನನ್ನ ಮಾತು, ಇದು ನಿಜವೂ ಹೌದು' ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೆಲವು ದಿನಗಳ ಹಿಂದೆ ಹೇಳಿದ್ದ ಮಾತಿದು.

      ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಹೈಕಮಾಂಡ್ ಸಂಸ್ಕೃತಿಗೆ ತಡೆ ಬೀಳಲಿದೆ ಎಂಬುದು ಜನರ ನಿರೀಕ್ಷೆ ಆಗಿತ್ತು. ಆದರೆ, ಮುಖ್ಯಮಮಂತ್ರಿ ಕುಮಾರಸ್ವಾಮಿ ಪದೇ ಪದೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಯಾಗುವ ಬಗ್ಗೆ ಚರ್ಚೆಗಳು ಆರಂಭವಾಗಿವೆ.

      'ನನ್ನ ಮಾತಿನಿಂದ ನಾಡಿನ ಜನರಿಗೆ ಅಗೌರವ ತೋರಿಸಿದಂತೆ ಆಗುವುದಿಲ್ಲ. ಕಾಂಗ್ರೆಸ್‌ ಬೆಂಬಲದ ಮುಲಾಜು ನನಗಿದೆ. ಆದರೆ ಆ ಪಕ್ಷದ ಮುಲಾಜು ನನಗಿಲ್ಲ' ಎಂದು ಕುಮಾರಸ್ವಾಮಿ ಹೇಳಿದ್ದರು.

      Debates : Its necessary to take Rahul Gandhi permission for big decision

      ಕರ್ನಾಟಕದಲ್ಲ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದೆ. ರಾಜ್ಯದ ಕಾಂಗ್ರೆಸ್ ನಾಯಕರು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಹೈಕಮಾಂಡ್ ನಾಯಕರಿಂದ ಹಸಿರು ನಿಶಾನೆ ಪಡೆದುಕೊಳ್ಳುವುದು ಅನಿವಾರ್ಯ. ಆದರೆ, ಕುಮಾರಸ್ವಾಮಿ?

      ಎರಡು ದಿನಗಳ ಕಾಲ ದೆಹಲಿಯಲ್ಲಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಕಾರ್ಯಕ್ರಮಗಳು, ಬಜೆಟ್ ಮಂಡನೆ, ಕಾಂಗ್ರೆಸ್ ನಾಯಕರ ಸಹಕಾರ ಮುಂತಾದ ವಿಚಾರಗಳ ಬಗ್ಗೆ ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸಿದ್ದಾರೆ.

      ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ಭೇಟಿ ನೀಡಿದಾಗಲೆಲ್ಲ ರಾಹುಲ್ ಗಾಂಧಿ ಭೇಟಿಯಾಗಿ ಮಾತುಕತೆ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿದೆ. ಹಾಗಾದರೆ ಈ ಹೈಕಮಾಂಡ್ ಸಂಸ್ಕೃತಿ ಸರಿಯೇ?, ಪ್ರತಿ ವಿಚಾರಕ್ಕೂ ಅವರ ಒಪ್ಪಿಗೆ ಪಡೆಯುವುದು ಅಗತ್ಯವೇ? ಎಂದು ಚರ್ಚೆಗಳು ನಡೆಯುತ್ತಿವೆ.

      ಕುಮಾರಸ್ವಾಮಿ, ರಾಹುಲ್ ಗಾಂಧಿ ಭೇಟಿ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮಾಡಿ, ಆರೋಗ್ಯಕರವಾದ ಚರ್ಚೆ ನಡೆಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+