ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಬೇಟ್ : ವರುಣಾದಿಂದ ಬಿಜೆಪಿ ಅಭ್ಯರ್ಥಿ ಯಾರಾಗಬೇಕು?

|
Google Oneindia Kannada News

ಬೆಂಗಳೂರು, ಏಪ್ರಿಲ್ 24 : 2018ರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಮಧ್ಯಾಹ್ನ 3 ಗಂಟೆ ತನಕ ಅವಕಾಶವಿದೆ. ಆದರೆ, ಮೈಸೂರಿನ ವರುಣಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮಗೊಂಡಿಲ್ಲ.

ಬಿ.ವೈ.ವಿಜಯೇಂದ್ರ ಅವರು ವರುಣಾದಿಂದ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಂಜನಗೂಡಿನಲ್ಲಿ ಸೋಮವಾರ ಘೋಷಣೆ ಮಾಡಿದ್ದರು. ನಂತರ ಹೈಡ್ರಾಮ ನಡೆಯುತ್ತಿದ್ದು, ಇನ್ನೂ ಅಂತಿಮ ನಿರ್ಧಾರ ಪ್ರಕಟಗೊಂಡಿಲ್ಲ.

ಮಹತ್ವದ ಬದಲಾವಣೆ : ವರುಣಾದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ ಇಲ್ಲಮಹತ್ವದ ಬದಲಾವಣೆ : ವರುಣಾದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ ಇಲ್ಲ

Karnataka elections : Debate, Who is BJP candidate in Varuna constituency

ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಎರಡು ತಿಂಗಳಿನಿಂದ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದರು. ಸೋಮವಾರ ಅವರು ನಾಮಪತ್ರ ಸಲ್ಲಿಸಬೇಕಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಯಡಿಯೂರಪ್ಪ ಘೋಷಣೆ ಮಾಡಿದರು.

ಆ ಒಂದು ಕರೆಯಿಂದಾಗಿ ಬಿಎಸ್‌ವೈ ಪುತ್ರ ವಿಜಯೇಂದ್ರಗೆ ಕೈ ತಪ್ಪಿತು ಟಿಕೆಟ್‌!ಆ ಒಂದು ಕರೆಯಿಂದಾಗಿ ಬಿಎಸ್‌ವೈ ಪುತ್ರ ವಿಜಯೇಂದ್ರಗೆ ಕೈ ತಪ್ಪಿತು ಟಿಕೆಟ್‌!

ಮೈಸೂರಿನಲ್ಲಿಯೇ ಬಿ.ಎಸ್.ಯಡಿಯೂರಪ್ಪ ವಾಸ್ತವ್ಯ ಹೂಡಿದ್ದು, ವರುಣಾ ಕ್ಷೇತ್ರದ ಟಿಕೆಟ್ ವಿಚಾರ ಹೈಕಮಾಂಡ್ ಮಟ್ಟಕ್ಕೆ ತಲುಪಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರರಾವ್, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಅವರು ಮೈಸೂರಿಗೆ ಆಗಮಿಸಿ ಯಡಿಯೂರಪ್ಪ ಜೊತೆ ಸಭೆ ನಡೆಸುತ್ತಿದ್ದಾರೆ.

ಮೈಸೂರು, ಚಾಮರಾಜನಗರ ಜಿಲ್ಲೆಗಳ ಬಿಜೆಪಿ ಅಭ್ಯರ್ಥಿಗಳು, ನೂರಾರು ಕಾರ್ಯಕರ್ತರು ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಅಭ್ಯರ್ಥಿ ಯಾರಾಗಬೇಕು? ಎಂಬ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆ.

ವರುಣಾ ಕ್ಷೇತ್ರದ ಅಭ್ಯರ್ಥಿಯಾರಾಬೇಕು? ಏಕೆ? ಎಂದು ನೀವು ನಿಮ್ಮ ಅಭಿಪ್ರಾಯವನ್ನು ತಿಳಿಸಿ, ಈ ವಿಚಾರದ ಬಗ್ಗೆ ನೀವು ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಬಾಕ್ಸ್‌ನಲ್ಲಿ ಹಾಕಿ...

English summary
Karnataka BJP president B.S.Yeddyurappa son B.Y.Vijayendra will not contest for Karnataka assembly elections 2018 form Varuna assembly constituency, Mysuru. What is your views on this issue?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X