ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್!

ಬೆಂಗಳೂರು, ಆ: 13: ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿತ್ತು. ಇತಿಹಾಸದಲ್ಲಿಯೇ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಗೊಳಿಸಿ ಫಲಿತಾಂಶ ಪ್ರಕಟಿಸಲಾಗಿತ್ತು. ಆದರೆ 'ಕೋವಿಡ್ ಬ್ಯಾಚ್' ವಿದ್ಯಾರ್ಥಿಗಳು ಎಂಬ ಹಣೆಪಟ್ಟಿಯಿಂದ ಗುರುತಿಸಿಕೊಳ್ಳಲು ಇಚ್ಛಿಸದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದಾರೆ. ಜೊತೆಗೆ ಫಲಿತಾಂಶ ಒಪ್ಪಿಕೊಳ್ಳದ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗಿತ್ತು. ಹೀಗಾಗಿ ಮತ್ತೆ ಪಿಯುಸಿ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಹಿಂದೆ ಕೊಡುತ್ತಿದ್ದ ಗ್ರೇಡ್ ಪದ್ದತಿಯನ್ನು ಈ ಸಲ ಕೈಬಿಡಲಾಗಿತ್ತು. ಒಟ್ಟು 7 ಹಂತಗಳಲ್ಲಿ ಪರಿಶೀಲಿಸಿ ವಿದ್ಯಾರ್ಥಿಳಿಗೆ ಅಂಕ ನಿಗದಿ ಮಾಡಿ ಫಲಿತಾಂಶ ಕೊಡಲಾಗಿತ್ತು. ಆದರೆ ಆ ಫಲಿತಾಂಶದಿಂದ ತೃಪ್ತರಾಗದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಬಹುದು ಎಂದು ಆಗಿನ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದರು. ಅದರಂತೆ ಇದೀಗ ಮತ್ತೆ ಪಿಯುಸಿ ಪರೀಕ್ಷೆ ನಡೆಸಲಾಗುತ್ತಿದ್ದು, ಶುಕ್ರವಾರ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆಗಸ್ಟ್ ಹಾಗೂ ಸೆಪ್ಟಂಬರ್ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ದ್ವಿತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ!

ದ್ವಿತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ!

"ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆಯನ್ನು ಅತ್ಯಂತ ವ್ಯವಸ್ಥಿತ ಹಾಗೂ ದೋಷರಹಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಅಗತ್ಯ ಸಲಹೆ ಸೂಚನೆ ನೀಡಲಾಗಿದೆ" ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.


19-08-2021 ರಿಂದ 03-09-2021ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ. ಶುಕ್ರವಾರ ಈ ಬಗ್ಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ವಿಧಾನಸೌಧದ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಒಟ್ಟು 5,546 ಕಾಲೇಜುಗಳಿಂದ 18,414 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಪರೀಕ್ಷೆ ಬರೆಯಲು ಕೇಂದ್ರಗಳು ಸ್ಥಾಪನೆ!

ಪರೀಕ್ಷೆ ಬರೆಯಲು ಕೇಂದ್ರಗಳು ಸ್ಥಾಪನೆ!

ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 187 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೇಂದ್ರಗಳಲ್ಲಿ ಆಗಸ್ಟ್ 17ರ ಒಳಗೆ ಪೂರ್ವಸಿದ್ಧತೆ ಆಗಿರುವ ಬಗ್ಗೆ ಜಿಲ್ಲಾಧಿಕಾರಿಗಳು ಖಚಿತ ಮಾಡಿಕೊಳ್ಳಬೇಕೆಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚಿಸಿದ್ದಾರೆ. ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಮ್ ಪ್ರಕಾರ ಪರೀಕ್ಷೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.


ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಆರ್. ಉಮಾಶಂಕರ್, ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರಾದ ಸ್ನೇಹಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ವಿಡಿಯೋ ಸಂವಾದ ಮಾಡಿ ಸೂಚನೆ ಕೊಡಲಾಗಿದೆ.

ಫಲಿತಾಂಶ ಪ್ರಕಟವಾಗಿದ್ದರೂ ಮತ್ಯಾಕೆ ಪರೀಕ್ಷೆ?

ಈಗಾಗಲೇ ಇಲಾಖೆ ವಿದ್ಯಾರ್ಥಿಗಳಿಗೆ ಇಲಾಖೆ ಕೊಟ್ಟಿರುವ ಅಂಕಗಳು ತೃಪ್ತಿಯಾಗದಿದ್ದಲ್ಲಿ ಮತ್ತೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾತ್ತು. ಆಗ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡ ವಿದ್ಯಾರ್ಥಿಗಳು ಈಗ ಪರೀಕ್ಷೆ ಬರೆಯಲಿದ್ದಾರೆ. ಜೊತೆಗೆ ಈ ಪರೀಕ್ಷೆಯಲ್ಲಿ ಪಡೆಯುವ ಅಂಕಗಳೇ ಅಂತಿಮವಾಗಿದ್ದು, ಹಿಂದಿನ ಅಂಕಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ಇರುವುದಿಲ್ಲ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದ ಖಾಸಗಿ ವಿದ್ಯಾರ್ಥಿಗಳ ಅಂಕಗಳನ್ನು ನಿಗದಿ ಮಾಡಲು ಯಾವುದೇ ರೀತೀಯ ದಾಖಲೆಗಳು (ಪ್ರಥಮ ಪಿಯುಸಿ ಅಂಕಗಳು ಇತ್ಯಾದಿ) ಇರಲಿಲ್ಲ. ಹೀಗಾಗಿ ಅಂತಹ ವಿದ್ಯಾರ್ಥಿಗಳು ಈಗ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಖಾಸಗಿ ವಿದ್ಯಾರ್ಥಿಗಳಿಗೆ ಈಗಲೂ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ ಮುಂದಿನ ವರ್ಷ ಶುಲ್ಕ ರಹಿತವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಅಧಿಕೃತ ಆದೇಶ ಪ್ರಕಟಿಸಿದ ಶಿಕ್ಷಣ ಇಲಾಖೆ

ಅಧಿಕೃತ ಆದೇಶ ಪ್ರಕಟಿಸಿದ ಶಿಕ್ಷಣ ಇಲಾಖೆ

ಕೊರೊನಾವೈರಸ್ ಸೋಂಕಿನಿಂದಾಗಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿ, ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳು, ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆಗಳಿಗೆ ನಿಗದಿಪಡಿಸಿದ ಅಂಕಗಳು ಮತ್ತು ಕೃಪಾಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗಿತ್ತು.


ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳಲ್ಲಿ ಶೇಕಡಾ 45 ರಷ್ಟು, ಪಿಯುಸಿ ಮೊದಲ ವರ್ಷದಲ್ಲಿ ಪಡೆದ ಅಂಕಗಳಲ್ಲಿ ಶೇಕಡಾ 45 ರಷ್ಟು ಹಾಗೂ ದ್ವಿತೀಯ ಪಿಯುಸಿ ಶೈಕ್ಷಣಿಕ ಚಟುವಟಿಕೆ ಆಧರಿಸಿ ಕೊಡುವ ಶೇಕಡಾ 10ರಷ್ಟು ಅಂಕಗಳನ್ನು ಆಧರಿಸಿ ದ್ವಿತೀಯ ಪಿಯುಸಿ ಅಂಕಗಳನ್ನು ನಿರ್ಧಾರ ಮಾಡಲಾಗಿತ್ತು. ಆದರೆ ಈಗ ಪ್ರಕಟವಾಗಿರುವ ಫಲಿತಾಂಶ ತಿರಸ್ಕರಿಸಿರುವ ಹಾಗೂ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಖಾಸಗಿ ವಿದ್ಯಾರ್ಥಿಗಳಿಗೆ ಈಗ ಪರೀಕ್ಷೆ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+