ಅಂತೆಕಂತೆಗಳ ಸಂತೆಯಲ್ಲಿ ತೇಲಿಬಂದ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು

Posted By:
Subscribe to Oneindia Kannada

   Karnataka Elections 2018 : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್

   ಬೆಂಗಳೂರು, ಏಪ್ರಿಲ್ 11: ಮಂಗಳವಾರ ಸಂಜೆ ವೇಳೆ ಎಐಸಿಸಿಯ ಹೆಸರಿನಲ್ಲಿ ಕಾಂಗ್ರೆಸ್‌ನ ಸುಮಾರು 131 ಅಭ್ಯರ್ಥಿಗಳ ಹೆಸರಿನ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು.

   ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಮಗ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ರಾಷ್ಟ್ರೀಯ ಮುಖಂಡರು ಅಂತಿಮಗೊಳಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

   ಸುಳ್ಳು ಅಭ್ಯರ್ಥಿಗಳ ಪಟ್ಟಿಯನ್ನು ನಂಬಬೇಡಿ: ಸಿದ್ದರಾಮಯ್ಯ

   ಸುದ್ದಿ ವ್ಯಾಪಕ ಪ್ರಚಾರ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಯಾವುದೇ ಅಭ್ಯರ್ಥಿಗಳ ಹೆಸರನ್ನು ಇನ್ನೂ ಅಂತಿಮಗೊಳಿಸಿಲ್ಲ. ಅದು ಸುಳ್ಳುಪಟ್ಟಿ ಎಂದು ರಾತ್ರಿ ಟ್ವೀಟ್ ಮಾಡಿದ್ದರು.

   AICC said, the list of Candidates is Fake

   ನಮ್ಮಲ್ಲಿ ಗೊಂದಲಗಳನ್ನು ಸೃಷ್ಟಿಸುವ ಸಲುವಾಗಿಯೇ ಈ ರೀತಿ ಸುಳ್ಳು ಪಟ್ಟಿ ಹರಿಬಿಡಲಾಗಿದೆ. 'ಫೇಕ್ ನ್ಯೂಸ್' ಫ್ಯಾಕ್ಟರಿಯ ಉತ್ಪನ್ನಗಳನ್ನು ಉತ್ತೇಜಿಸಬೇಡಿ ಎಂದು ಸಿದ್ದರಾಮಯ್ಯ ಪರೋಕ್ಷವಾಗಿ ಬಿಜೆಪಿಯತ್ತ ಹರಿಹಾಯ್ದಿದ್ದರು.

   ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳು ಅಂತಿಮ

   ಇನ್ನೂ ಸಭೆಯೇ ಆಗಿಲ್ಲ!:
   ಅಭ್ಯರ್ಥಿಗಳ ಪಟ್ಟಿಯ ಗೊಂದಲಕ್ಕೆ ಸಂಬಂಧಿಸಿದಂತೆ ಎಐಸಿಸಿ ಕೂಡ ಟ್ವಿಟ್ಟರ್ ಸ್ಪಷ್ಟೀಕರಣ ನೀಡಿದ್ದು, ಅಂತೆಕಂತೆಗಳಿಗೆ ತೆರೆ ಎಳೆದಿದೆ.

   ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪಟ್ಟಿ ಇರುವ ಸುಳ್ಳು ಪತ್ರಿಕಾ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ.

   ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

   ಅದು ಸುಳ್ಳು ಪ್ರಕಟಣೆಯಾಗಿದ್ದು, ಎಐಸಿಸಿ ಯಾವುದೇ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

   ಸದ್ಯ ಸ್ಕ್ರೀನಿಂಗ್ ಕಮಿಟಿಯ ಮೀಟಿಂಗ್‌ಗಳು ನಡೆಯುತ್ತಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯ ಬಳಿಕವೇ ಪಟ್ಟಿ ಬಿಡುಗಡೆಯಾಗಲಿದೆ. ಇಲ್ಲಿಯವರೆಗೂ ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧ ಯಾವುದೇ ಸಿಇಸಿ ಸಭೆ ನಡೆದಿಲ್ಲ ಎಂದು ವಿವರಣೆ ನೀಡಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   AICC Clarified that the list of Congress candidates of karnataka assembly election which was circulated in social media yesterday was fake. Until now no CEC meeting has happened regarding karnataka election, it said.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ