ಕೇಂದ್ರ ಸಚಿವ ಅನಂತಕುಮಾರ್ ಪರಿಚಯ

Posted By: Gururaj
Subscribe to Oneindia Kannada

ಬಿಜೆಪಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ನಾಯಕರು ಕರ್ನಾಟಕದ ಎಚ್.ಎನ್.ಅನಂತಕುಮಾರ್. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದರಾದ ಇವರು, ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು.

ಜುಲೈ 22, 1959ರಂದು ಜನಿಸಿದ ಅನಂತಕುಮಾರ್ ಅವರ ತಂದೆ ನಾರಾಯಣ ಶಾಸ್ತ್ರಿ, ತಾಯಿ ಗಿರಿಜಾ ಶಾಸ್ತ್ರಿ. ಹುಬ್ಬಳ್ಳಿಯ ಕೆ.ಎಸ್.ಕಲಾ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ಪದವಿ, ಜೆ.ಎಸ್.ಎಸ್.ಎಸ್‌ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದಾರೆ.

Assembly Elections 2018 : BJP leader Ananth Kumar profile

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೂಲಕ ಸಾಮಾಜಿಕ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಎಬಿವಿಪಿ ರಾಜ್ಯ ಮತ್ತು ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಹೋರಾಡಿ ಜೈಲು ಶಿಕ್ಷೆಯನ್ನು ಅನುಭವಿಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

1987ರಲ್ಲಿ ಬಿಜೆಪಿ ಸೇರಿದರು, ಕರ್ನಾಟಕ ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದರು. 1995ರಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕವಾದರು. 1996ರಲ್ಲಿ ಮೊದಲ ಬಾರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಲೋಕಸಭೆ ಪ್ರವೇಶಿಸಿದರು.

Assembly Elections 2018 : BJP leader Ananth Kumar profile

1998ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ವಿಮಾನಯಾನ ಖಾತೆ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು. ಎನ್‌ಡಿಎ ಸರ್ಕಾರದಲ್ಲಿ ಪ್ರವಾಸೋದ್ಯಮ, ಕ್ರೀಡೆ ಮತ್ತು ಯುವಜನ ವ್ಯವಹಾರ, ಸಂಸ್ಕೃತಿ ಮತ್ತು ನಗರಾಭಿವೃದ್ಧಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ.

ದೇವನಹಳ್ಳಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗುವುದರಲ್ಲಿ ಅನಂತ್ ಕುಮಾರ್ ಅವರ ಶ್ರಮ ಹೆಚ್ಚಿದೆ. ವಿಮಾನಯಾನ ಖಾತೆ ಸಚಿವರಾಗಿದ್ದ ಸಮಯದಲ್ಲಿ ಅವರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಜೊತೆ ಒಡಂಬಡಿಕೆಗೆ ಸಹಿ ಮಾಡಿದರು.

ದೇಶ, ಭಾಷೆ ವಿಚಾರದಲ್ಲಿ ಅನಂತಕುಮಾರ್ ಅವರಿಗೆ ಅಪಾರವಾದ ಪ್ರೀತಿ ಇದೆ. ವಿಶ್ವಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡಿ ಪ್ರಥಮ ಕನ್ನಡಿಗ ಎಂಬ ಹೆಗ್ಗಳಿಕೆ ಇವರದ್ದು.

ಕರ್ನಾಟಕ ಬಿಜೆಪಿ ಮತ್ತು ರಾಷ್ಟ್ರೀಯ ನಾಯಕರ ನಡುವಿನ ಕೊಂಡಿಯಂತೆ ಕೆಲಸ ಮಾಡುತ್ತಾರೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಉಸ್ತುವಾರಿಯಲ್ಲಿ ಪಕ್ಷವನ್ನು ಗೆಲ್ಲಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Read all about minister for Chemicals and Fertilizers Ananth Kumar, Ananth Kumar in Kannada. In the perspective of Karnataka Assembly Elections 2018, we present the short biography and political journey of Ananth Kumar. He will play important role in Karnataka politics.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ