ವಿವಾದ, ಹೋರಾಟದ ಮಿಶ್ರಣ: ಶೋಭಾ ಕರಂದ್ಲಾಜೆ ವ್ಯಕ್ತಿ ಚಿತ್ರ
Recommended Video

ಕರ್ನಾಟಕದಲ್ಲಿ ದಿಟ್ಟ ಮಹಿಳಾ ರಾಜಕಾರಣಿಗಳಿಲ್ಲ ಎಂಬ ಕೊರತೆಯನ್ನು ತುಂಬಿಸಿದವರಲ್ಲಿ ಶೋಭಾ ಕರಂದ್ಲಾಜೆ ಪ್ರಮುಖರು. ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಗುರುತರ ಜವಾಬ್ದಾರಿಯನ್ನು ಹೊತ್ತಿರುವ ಶೋಭಾ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದರೂ ಹೌದು. ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತ, ಒಂದಷ್ಟು ದೌರ್ಬಲ್ಯಗಳಿಗೂ ಹೆಸರಾದವರು ಅವರು.
ಕ್ರಾಂತಿಕಾರಿ ನಾಯಕಿಯಾಗಿ ಗುರುತಿಸಿಕೊಂಡ ಶೋಭಾ ಅವರು ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತೆಯಾಗಿ, ಇದೀಗ ಸಂಸದರಾಗಿ, ಮಾಜಿ ಸಚಿವರಾಗಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಬೆಳೆದುಬಂದ ಹಾದಿ ಸುದೀರ್ಘವಾದುದು. ಚಿಕ್ಕ ವಯಸ್ಸಿನಿಂದಲೂ ಅವರಲ್ಲಿದ್ದ ಹೋರಾಟದ ಮನಸ್ಥಿತಿಯೇ ಅವರು ಬಹುಬೇಗನೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುವುದಕ್ಕೆ ಸಹಾಯಕವಾಯಿತು.

ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೂ ಸಕ್ರಿಯವಾಗಿ ಗುರುತಿಸಿಕೊಂಡ ಶೋಭಾ ಕರಂದ್ಲಾಜೆಯವರ ಸಂಕ್ಷಿಪ್ತ ವ್ಯಕ್ತಿಚಿತ್ರ ಇಲ್ಲಿದೆ.
* 1966, ಅಕ್ಟೋಬರ್ 23 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಾರ್ವಾಕ ಎಂಬ ಪುಟ್ಟ ಗ್ರಾಮ.
* ತಂದೆ ಮೋನಪ್ಪ ಗೌಡ, ತಾಯಿ ಪೂವಕ್ಕ.
* ಎಳೆ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಒಡನಾಟ. ಪೂರ್ಣಾವಧಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಣೆ.
* ವಿದ್ಯಾರ್ಹತೆ: ಮಂಗಳೂರು ವಿಶ್ವವಿದ್ಯಾಲಯದಿಂದ ಮಾಸ್ಟರ್ ಆಫ್ ಸೋಶಿಯಲ್ ವರ್ಕ್ಸ್ ನಲ್ಲಿ ಸ್ನಾತಕೋತ್ತರ ಪದವಿ, ಮೈಸೂರು ವಿಶ್ವವಿದ್ಯಾಲಯದಿಂದ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.
* ಕುಮಾರಧಾರ ನದಿಗೆ ಆಣೆಕಟ್ಟುವುದನ್ನು ವಿರೋಧಿಸಿ, ಪಶ್ಚಿಮ ಘಟ್ಟದಲ್ಲಿ ಪರಿಸರಕ್ಕೆ ಹಾನಿಯಾಗುವಂಥ ಯೋಜನೆಗಳನ್ನು ವಿರೋಧಿಸಿ ಹೋರಾಟ. ಕಾಲೇಜು ಓದುವ ಸಮಯದಲ್ಲೇ ಹಲವು ಸಮಾಜ ಸುಧಾರಣಾ ಹೋರಾಟಗಳಲ್ಲಿ ಭಾಗಿ.
* 1994 ರಲ್ಲಿ ಬಂಟ್ವಾಳ ವಿಧಾನಸಭೆಗೆ ಸ್ಪರ್ಧಿಸಿದ್ದ ಶಕುಂತಲಾ ಶೆಟ್ಟಿಯವರ ಒಡನಾಟದಿಂದ ರಾಜಕೀಯ ಪ್ರವೇಶ.
* 1997 ರಲ್ಲಿ ಉಡುಪಿ ಜಿಲ್ಲೆ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆ.
* 1997 ರಲ್ಲಿ ಬೆಂಗಳೂರು ಪ್ರವೇಶ.
* 1999 ರಲ್ಲಿ ಬಿ.ಎಸ್.ಯಡಿಯೂರಪ್ಪನವರ ಸಂಕಲ್ಪ ರಥಯಾತ್ರೆಯಲ್ಲಿ ಭಾಗಿ. ನಂತರ ಹಲವು ಹೋರಾಟ, ಪಾದಯಾತ್ರೆ, ಸತ್ಯಾಗ್ರಹ ನಡೆಸಿದ ಅನುಭವ.
* 2000 ನೇ ಇಸವಿಯಲ್ಲಿ ಬಿಜೆಪಿ ರಾಜ್ಯ ಕಾರ್ದರ್ಶಿಯಾಗಿ ಆಯ್ಕೆ.
* 2004 ರಲ್ಲಿ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆ.
* 2008 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕಿಯಾಗಿ ಆಯ್ಕೆ.
* ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕಾರ್ಯನಿರ್ವಹಣೆ.
* ಮೈಸೂರು ಜಿಲ್ಲಾ ಉಸ್ತುವಅರಿ ಸಚಿವರಾಗಿಯೂ ಕೆಲಸ ನಿರ್ವಹಿಸಿದ ಅನುಭವ
* 2009 ರಲ್ಲಿ ಕೆಲವು ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ.
* 2010 ರಲ್ಲಿ ಕರ್ನಾಟಕ ಸರ್ಕಾರದಲ್ಲಿ ಇಂಧನ ಸಚಿವೆಯಾಗಿ ಅಧಿಕಾರ ಸ್ವೀಕಾರ.
* 2012 ರಲ್ಲಿ ಬಿಜೆಪಿಯ ಕೆಲವು ನಾಯಕರೊಂದಿಗೆ ಭಿನ್ನಾಭಿಪ್ರಾಯ ಮೂಡಿ, ಬಿ ಎಸ್ ಯಡಿಯೂರಪ್ಪನವರು ಸ್ಥಾಪಿಸಿದ ಕರ್ನಾಟಕ ಜನತಾ ಪಕ್ಷ(ಕೆಜೆಪಿ)ಕ್ಕೆ ಸೇರ್ಪಡೆ.
* 2013 ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಬಿಜೆಪಿಯ ಸುರೇಶ್ ಕುಮಾರ್ ವಿರುದ್ಧ ಸೋಲು.
* 2013 ರಲ್ಲಿ ಬಿಜೆಪಿಯೊಂದಿಗೆ ಕೆಜೆಪಿ ವಿಲೀನ.
* 2014 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗರಿಷ್ಠ ಮತಗಳ ಅಂತರದಿಂದ ಗೆಲುವು.
* ಎತ್ತಿನ ಹೊಳೆ ಯೋಜನೆಯ ಹೋರಾಟದಿಂದಾಗಿ ರಾಷ್ಟ್ರಮಟ್ಟದಲ್ಲಿ ಹೆಸರಾದವರು ಶೋಭಾ ಕರಂದ್ಲಾಜೆ.
* ಇತ್ತೀಚೆಗೆ ಕರಾವಳಿಯಲ್ಲಿ ಶಾಂತಿ ಕದಡಿದ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಯ ಸಂದರ್ಭದಲ್ಲೂ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿ, ಕರ್ನಾಟಕದ ದಿಟ್ಟ ಮಹಿಳಾ ರಾಜಕಾರಣಿ ಎಂಬ ಖ್ಯಾತಿಗೆ ಪಾತ್ರರಾದವರು.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications